PSI Scam | ಮೊಬೈಲ್‌ ಡೇಟಾ ಡಿಲೀಟ್‌ ಮಾಡಿರುವ ಅಮೃತ್‌ ಪಾಲ್‌: ಮತ್ತೆ 3 ದಿನ ಕಸ್ಟಡಿಗೆ - Vistara News

ಕರ್ನಾಟಕ

PSI Scam | ಮೊಬೈಲ್‌ ಡೇಟಾ ಡಿಲೀಟ್‌ ಮಾಡಿರುವ ಅಮೃತ್‌ ಪಾಲ್‌: ಮತ್ತೆ 3 ದಿನ ಕಸ್ಟಡಿಗೆ

ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿಯ ಹೊಣೆ ಹೊತ್ತಿದ್ದ ಎಡಿಜಿಪಿ ಅಮೃತ್‌ ಪಾಲ್‌ ಅವರನ್ನು ಸಿಐಡಿ ಅಧಿಕಾರಿಗಳು ಜುಲೈ 4ರಂದು ಬಂದಿಸಿದ್ದರು.

VISTARANEWS.COM


on

amrit paul
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ನೇಮಕ ಹಗರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್‌ ಪಾಲ್‌ ತಮ್ಮ ಮೇಲಿನ ಆರೋಪ ಸಾಬೀತಾಗಬಾರದು ಎಂದು ಮೊಬೈಲ್‌ ದತ್ತಾಂಶವನ್ನು ಅಳಿಸಿಹಾಕಿದ್ದಾರೆ. ಈ ವಿಚಾರವನ್ನು ಸ್ವತಃ ಸಿಐಡಿ, ಬುಧವಾರ ನ್ಯಾಯಾಲಯಕ್ಕೆ ತಿಳಿಸಿದೆ.

ಪಿಎಸ್‌ಐ ಹಗರಣದಲ್ಲಿ ಬಂಧಿತರಾದ ಅಮೃತ್‌ ಪಾಲ್‌ 10 ದಿನದ ವಿಚಾರಣೆ ಅವಧಿ ಬುಧವಾರ ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ಅವಧಿ ವಿಸ್ತರಣೆ ಮಾಡುವಂತೆ ಸಿಐಡಿ ವತಿಯಿಂದ ಮನವಿ ಮಾಡಲಾಯಿತು.

ಈ ಕುರಿತು ವಾದ ಮಂಡಿಸಿದ ಸಿಐಡಿ ಪರ ವಕೀಲರು, ಈಗಾಗಲೆ ಅಮೃತ್ ಪಾಲ್ ಮೊಬೈಲ್ ಜಪ್ತಿ ಮಾಡಲಾಗಿದೆ. ಆದರೆ ಹತ್ತು ದಿನಗಳಿಂದ ಪಾಸ್‌ವರ್ಡ್‌ ನೀಡಿರಲಿಲ್ಲ. ಇದೀಗ ಹತ್ತನೇ ದಿನ ಪಾಸ್‌ವರ್ಡ್‌ ನೀಡಿದ್ದಾರೆ. ಆದರೆ ಮೊಬೈಲ್‌ ಅನ್ನು ಅಮೃತ್‌ ಪಾಲ್‌ ಫಾರ್ಮ್ಯಾಟ್‌ ಮಾಡಿದ್ದಾರೆ. ಅದರಲ್ಲಿರುವ ಎಲ್ಲ ದತ್ತಾಂಶಗಳನ್ನೂ ಅಳಿಸಿಹಾಕಿದ್ದಾರೆ. ಈ ದತ್ತಾಂಶವನ್ನು ಪುನಃ ಪಡೆಯಬೇಕಿದೆ. ಈ ದತ್ತಾಂಶ ಮೊಬೈಲ್‌ನಲ್ಲಿ ಇಲ್ಲವಾದರೂ ಕ್ಲೌಡ್‌ನಲ್ಲಿ ಸೇವ್‌ ಆಗಿರುವ ಸಾಧ್ಯತೆ ಇರುತ್ತದೆ. ಅಲ್ಲಿಂದ ರಿಕವರಿ ಮಾಡಬೇಕಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | PSI Scam | ಅಧಿಕಾರಿಗಳ ಭಂಡತನಕ್ಕೆ ಪೆಟ್ಟು; ಎಡಿಜಿಪಿ ಅಮೃತ್‌ ಪಾಲ್‌ ಬಂಧನಕ್ಕೆ ಈ ಅಂಶಗಳು ಮುಳುವಾಯ್ತೇ?

ಈಗಾಗಲೆ ಬಂಧನವಾಗಿರುವ ಶಾಂತಕುಮಾರ್‌ ಅನೇಕ ವಿಚಾರಗಳನ್ನು ತಿಳಿಸಿದ್ದಾರೆ. ಅದರ ಕುರಿತೂ ಅಮೃತ್‌ ಪಾಲ್‌ ಅವರಿಂದ ಮಾಹಿತಿ ಪಡೆಯಬೇಕಿದೆ. ಹಾಗಾಗಿ ಇನ್ನು ಮೂರು ದಿನ ಅವಧಿ ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಅಮೃತ್‌ ಪಾಲ್‌ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಈ ಹಿಂದೆ ಕಸ್ಟಡಿಗೆ ಪಡೆಯುವ ಸಲುವಾಗಿ ನೀಡಿದ್ದ ಕಾರಣಗಳನ್ನೇ ಈ ಬಾರಿಯೂ ಸಿಐಡಿ ನೀಡುತ್ತಿದೆ. ಫೋನ್‌ ರಿಕವರಿಗೆ ಕಸ್ಟಡಿ ಬೇಕು ಎಂದು ಈ ಹಿಂದೆ ಹೇಳಿದ್ದರು. ಈಗ ನೋಡಿದರೆ ದತ್ತಾಂಶ ತೆಗೆಯಲು ಕಸ್ಟಡಿ ಬೇಕು ಎನ್ನುತ್ತಿದ್ದಾರೆ. ಅಮೃತ್‌ ಪಾಲ್‌ ಎಲ್ಲಿಯೂ ಓಡಿ ಹೋಗಿಲ್ಲ. ಹೀಗಿರುವಾಗ ಅವರನ್ನು ಏತಕ್ಕಾಗಿ ವಶಕ್ಕೆ ನೀಡಬೇಕು? ಎಂದು ಪ್ರಶ್ನಿಸಿದರು.

ತಮ್ಮ ವಾದ ಮುಂದುವರಿಸಿದ ಸಿಐಡಿ ಪರ ವಕೀಲರು, ಸೈಬರ್‌ ಅಪರಾಧದಂತೆ ಈ ಪ್ರಕರಣವನ್ನು ವಿಚಾರಣೆ ಮಾಡಬೇಕಿದೆ. ಇವರ ಸುಪರ್ದಿಯಲ್ಲಿದ್ದ ಒಎಂಆರ್‌ ಹಾಳೆಗಳು ಹೊರಕ್ಕೆ ಹೋಗಿದ್ದು ಹೇಗೆ? ಸ್ಟ್ರಾಂಗ್‌ ರೂಂ ಕೀ ಇವರ ಬಳಿಯೇ ಇದ್ದದ್ದು, ಅನುಮತಿಯಿಲ್ಲದೆ ಬೇರೆಯವರಿಗೆ ಸಿಕ್ಕಿದ್ದು ಹೇಗೆ? ಇದೆಲ್ಲ ವಿಚಾರದಲ್ಲೂ ತನಿಖೆ ನಡೆಸಬೇಕು. ಹೀಗಾಗಿ ಕಸ್ಟಡಿ ಅವಧಿ ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದರು.

ಸಿಐಡಿ ಪರ ವಕೀಲರ ವಾದವನ್ನು ಮನ್ನಿಸಿದ ನ್ಯಾಯಾಲಯ, ಮೂರು ದಿನ ಕಸ್ಟಡಿ ಅವಧಿಯನ್ನು ವಿಸ್ತರಣೆ ಮಾಡಿತು. ಕುಟುಂಬದವರನ್ನು ಭೇಟಿಯಾಗಲು ಪ್ರತಿದಿನ 30 ನಿಮಿಷ ಅವಕಾಶ, ಆನ್‌ಲೈನ್‌ ಮೂಲಕ ವೈದ್ಯರನ್ನು ಸಂಪರ್ಕಿಸಲು ಅವಕಾಶವನ್ನು ನೀಡಿತು.

ಇದನ್ನೂ ಓದಿ | PSI Scam | ಅಮೃತ್‌ ಪಾಲ್‌ ಡೈರಿ ಸೀಕ್ರೆಟ್‌: ರಾಜಕಾರಣಿಗಳು, ಅಧಿಕಾರಿಗಳಿಗೆ ನಡುಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಸುಳಿಗಾಳಿ ಪ್ರಭಾವ; ರಭಸ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಎಚ್ಚರಿಕೆ

Karnataka Weather Forecast : ಸುಳಿಗಾಳಿ ಪ್ರಭಾವದಿಂದಾಗಿ ಹಲವೆಡೆ ವ್ಯಾಪಕ ಮಳೆಯಾಗುವ (Rain News) ಸಾಧ್ಯತೆ ಇದೆ. ಕೆಲವೆಡೆ ರಭಸವಾಗಿ ಗಾಳಿ ಬೀಸಲಿದೆ. ಗುಡುಗು, ಮಿಂಚಿನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮಧ್ಯ‌ ಮಹಾರಾಷ್ಟ್ರದಿಂದ ಕರ್ನಾಟಕ ಸೇರಿ ಕೇರಳದವರೆಗೆ ಸುಳಿಗಾಳಿಯ ಚಲನೆಯಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿದೆ. ಇದರ ಪ್ರಭಾವದಿಂದಾಗಿ ಇನ್ನೆರಡು ದಿನಗಳು ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ (Rain News) ಇದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲೂ ಗುಡುಗುನೊಂದಿಗೆ ಮಳೆ ಸಾಧ್ಯತೆ ಇದೆ. ಉಡುಪಿ ಜಿಲ್ಲೆಯ ಶುಷ್ಕ ಹವಾಮಾನ ಇರಲಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣಹವೆ ಮೇಲುಗೈ ಸಾಧಿಸಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದೆಡೆ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Murder Case : ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

ಆರೆಂಜ್ ಮತ್ತು ಯೆಲ್ಲೋ ಅಲರ್ಟ್

ಕೆಲವೆಡೆ ಮಳೆ ನಡುವೆಯು ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ನೀಡಿದೆ. ಈ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಆಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಬುಧವಾರ ಬೆಳಗ್ಗೆವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಾಲ್ಕು ದಿನಗಳಿಗೆ ಹೀಟ್‌ ವೇವ್‌ ಅಲರ್ಟ್‌

ಮೊದಲ ದಿನ 24ರಂದು ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

25ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

26ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ತುಮಕೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

27ರಂದು ರಾಯಚೂರು,ವಿಜಯಪುರ, ಯಾದಗಿರಿ, ಕೊಪ್ಪಳ, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಗದಗ, ದಾವಣಗೆರೆ ತುಮಕೂರು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಮತ್ತು ಆರ್ದ್ರತೆ

ಏಪ್ರಿಲ್ 24 ರಿಂದ 27 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bengaluru Karaga: ಐತಿಹಾಸಿಕ ಬೆಂಗಳೂರು ಕರಗಕ್ಕೆ ಅದ್ಧೂರಿ ಚಾಲನೆ; ಉತ್ಸವ ವೀಕ್ಷಿಸಲು ಹರಿದು ಬಂದ ಜನಸಾಗರ

Bengaluru Karaga: ಬೆಂಗಳೂರಿನ ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ ರಥೋತ್ಸವ ಬಳಿಕ ರಾತ್ರಿ 2ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ ಚಾಲನೆ ನೀಡಲಾಯಿತು.

VISTARANEWS.COM


on

Bengaluru karaga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿಯಾಗಿ ಚಾಲನೆ ದೊರಕಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ ರಥೋತ್ಸವ ಬಳಿಕ ರಾತ್ರಿ 2ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bengaluru Karaga) ಚಾಲನೆ ನೀಡಲಾಯಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಸಾವಿರಾರು ಜನರು ಆಗಮಿಸಿದ್ದರು.

ಬೆಳಗ್ಗೆಯಿಂದಲ್ಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಗಿದೆ. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ಗಳಿಂದ ಕಂಗೊಳಿಸುತ್ತಿರುವಂತದ್ದವು. ಈ ಬಾರಿಯೂ ಮಸ್ತಾನ್ ಸಾಬ್ ದರ್ಗಾಗೆ ಕರಗ ಭೇಟಿ ನೀಡಲಿದೆ. ನಸುಕಿನ ಜಾವ 4 ಗಂಟೆ ಹೊತ್ತಿಗೆ ದರ್ಗಾಗೆ ಭೇಟಿ ನೀಡಲಿದೆ.

ಕರಗ ಮೆರವಣಿಗೆ ಮಾರ್ಗ

ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಲಿದೆ. ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಲಿದೆ.

ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಗಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ, ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್ ಪೇಟೆ ಮೂಲಕ ಬುಧವಾರ ಬೆಳಗ್ಗೆ 7 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಲಿದೆ. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

Continue Reading

ಬೆಂಗಳೂರು

Voters Pledge: ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಮತದಾನ ಪ್ರತಿಜ್ಞಾವಿಧಿ ಬೋಧನೆ

Voters Pledge: ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನ ಮಾಡುವಂತೆ ಕರ್ನಾಟಕ ರಾಜ್ಯ ಸಹಕಾರ ತರಬೇತಿ ಸಂಸ್ಥೆಯಲ್ಲಿ ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಲಾಗಿದೆ.

VISTARANEWS.COM


on

Voters' Pledge
Koo

ಬೆಂಗಳೂರು: ಲೋಕಸಭಾ ಚುನಾವಣೆ-2024ರಲ್ಲಿ ಪ್ರತಿಯೊಬ್ಬರೂ ಕಡ್ಡಾಯ ಮತದಾನ ಮಾಡುವಂತೆ, ಮತದಾನದ ಮಹತ್ವ ಮತ್ತು ಅದರ ಬಗ್ಗೆ ವ್ಯಾಪಕ ಪ್ರಚಾರ ಮಾಡುವಂತೆ ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಕರ್ನಾಟಕ ರಾಜ್ಯ ಸಹಕಾರ ತರಬೇತಿ ಸಂಸ್ಥೆಯಲ್ಲಿ ಸೋಮವಾರ ಪ್ರತಿಜ್ಞಾವಿಧಿ (Voters Pledge) ಬೋಧಿಸಲಾಯಿತು.

ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ಸದಸ್ಯರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವಂತೆ ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಲಕ್ಷ್ಮೀಪತಯ್ಯ ಅವರು ತಿಳಿಸಿದರು. ಇದೇ ವೇಳೆ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಬೇಕು ಎಂದು ಪ್ರತಿಜ್ಞಾವಿಧಿ ಬೋಧಿಸಿದರು.

ಇದನ್ನೂ ಓದಿ | Voter ID: ಮತದಾನಕ್ಕೆ ವೋಟರ್ ಐಡಿ ಇಲ್ಲದಿದ್ದರೆ ಚಿಂತೆ ಬೇಡ, ಈ ದಾಖಲೆಗಳು ಸಾಕು

Continue Reading

ರಾಮನಗರ

Lok Sabha Election 2024: ಕೇಂದ್ರ ಸರ್ಕಾರದಿಂದ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ: ಡಿ.ಕೆ. ಸುರೇಶ್

Lok Sabha Election 2024: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ.ಕೆ. ಸುರೇಶ್, ರಾಮನಗರದಲ್ಲಿ ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

VISTARANEWS.COM


on

DCM DK Shivakumar Election campaign for Bangalore Rural Lok Sabha Constituency Congress candidate DK Suresh In Ramanagara
Koo

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ.ಕೆ. ಸುರೇಶ್, ರಾಮನಗರದಲ್ಲಿ ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ (Lok Sabha Election 2024) ನಡೆಸಿದರು.

ರಾಮನಗರದಲ್ಲಿ ಮಂಗಳವಾರ ಅಪಾರ ಸಂಖ್ಯೆಯ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ನಡೆದ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಸಂಸದ ಡಿ.ಕೆ. ಸುರೇಶ್ ಪರ ಡಿಸಿಎಂ ಡಿ.ಕೆ. ಶಿವಕುಮಾರ್, ಭರ್ಜರಿ ಮತಬೇಟೆ ನಡೆಸಿದರು.

ಇದನ್ನೂ ಓದಿ: Lok Sabha Election 2024: ಬೆಂಗಳೂರಲ್ಲಿ ನಾಳೆಯಿಂದ ಏ.26ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ; ಮದ್ಯ ಮಾರಾಟವೂ ಬಂದ್‌

ಈ ವೇಳೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ.ಕೆ. ಸುರೇಶ್ ಮಾತನಾಡಿ, ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿದ್ದು, ಎಲ್ಲರಿಗೂ ಅನ್ಯಾಯ ಮಾಡಿದೆ. ಈ ವಿಚಾರವನ್ನು ರಾಜ್ಯ ಹಾಗೂ ದೇಶದ ಜನರ ಗಮನಕ್ಕೆ ತಂದಿದ್ದೇನೆ. ನಮ್ಮ ಮುಂದಿನ ಪೀಳಿಗೆಗಳು ರಾಜ್ಯದಲ್ಲೇ ಸ್ವಾಭಿಮಾನದಿಂದ ಬದುಕಬೇಕಾದರೆ ತೆರಿಗೆ ಹಕ್ಕನ್ನು ಪ್ರತಿಪಾದನೆ ಮಾಡಬೇಕು ಎಂದ ಅವರು, ನಮ್ಮ ಉದ್ಯೋಗಗಳು, ಅಭಿವೃದ್ಧಿ, ಅನುದಾನವು ಉತ್ತರ ಪ್ರದೇಶ, ಗುಜರಾತ್, ಬಿಹಾರದ ಪಾಲಾಗುತ್ತಿವೆ ಎಂದು ಆರೋಪಿಸಿದರು.

ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ನಿಮ್ಮ ಸೇವೆ ಮಾಡಿದ್ದೇನೆ. ಈ ಜಿಲ್ಲೆಯಲ್ಲಿ ಅಭಿವೃದ್ಧಿ ಪ್ರಾರಂಭವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಮನಗರ ಪಟ್ಟಣದ ಅಭಿವೃದ್ಧಿಗೆ 800 ಕೋಟಿಗೂ ಹೆಚ್ಚು ಅನುದಾನವನ್ನು ಮಂಜೂರು ಮಾಡಿದ್ದೇವೆ. ಈ ಭಾಗದಲ್ಲಿ ರಸ್ತೆ, ಒಳಚರಂಡಿ ದುಸ್ಥಿತಿಯಲ್ಲಿದ್ದು, ಇದೆಲ್ಲವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಮತ್ತೊಮ್ಮೆ ತಮಗೆ ಅವಕಾಶ ನೀಡಿ, ಹಸ್ತದ ಗುರುತಿಗೆ ಮತ ನೀಡಿ ಗೆಲ್ಲಿಸುವಂತೆ ಅವರು ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Money Guide: ಮನೆ ಪೂರ್ತಿಯಾಗುವ ಮುನ್ನವೇ ಸಾಲದ ಹಣ ಖರ್ಚಾಯ್ತೆ? ಚಿಂತೆ ಬೇಡ; ಟಾಪ್‌ ಅಪ್‌ ಲೋನ್‌ಗೆ ಅಪ್ಲೈ ಮಾಡಿ

ಈ ಸಂದರ್ಭದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
Karnataka Weather Forecast
ಮಳೆ9 mins ago

Karnataka Weather : ಸುಳಿಗಾಳಿ ಪ್ರಭಾವ; ರಭಸ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಎಚ್ಚರಿಕೆ

Benefits of Bamboo Shoots
ಆರೋಗ್ಯ39 mins ago

Benefits of Bamboo Shoots: ಮೂಳೆಗಳ ನೋವು, ಮಲಬದ್ಧತೆ ನಿವಾರಣೆಗೆ ಎಳೆಯ ಬಿದಿರು ಸೇವನೆ ಮದ್ದು

Dina Bhavishya
ಭವಿಷ್ಯ2 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Bengaluru karaga
ಕರ್ನಾಟಕ4 hours ago

Bengaluru Karaga: ಐತಿಹಾಸಿಕ ಬೆಂಗಳೂರು ಕರಗಕ್ಕೆ ಅದ್ಧೂರಿ ಚಾಲನೆ; ಉತ್ಸವ ವೀಕ್ಷಿಸಲು ಹರಿದು ಬಂದ ಜನಸಾಗರ

vistara Editorial ವಿಸ್ತಾರ ಸಂಪಾದಕೀಯ
ದೇಶ7 hours ago

ವಿಸ್ತಾರ ಸಂಪಾದಕೀಯ: ರಕ್ಷಣಾ ರಫ್ತು ಕ್ಷೇತ್ರದಲ್ಲಿ ಬೆಳವಣಿಗೆ ನಮ್ಮ ಹೆಗ್ಗಳಿಕೆ

IPL 2024
ಪ್ರಮುಖ ಸುದ್ದಿ7 hours ago

IPL 2024 : ಸ್ಟೊಯ್ನಿಸ್​​ ಶತಕ, ಚೆನ್ನೈ ವಿರುದ್ಧ 6 ವಿಕೆಟ್​ ಗೆಲವು ಸಾಧಿಸಿದ ಲಕ್ನೊ

Voters' Pledge
ಬೆಂಗಳೂರು7 hours ago

Voters Pledge: ಸಹಕಾರ ಸಂಘಗಳ ಕಾರ್ಯದರ್ಶಿಗಳು, ಸಿಬ್ಬಂದಿಗೆ ಮತದಾನ ಪ್ರತಿಜ್ಞಾವಿಧಿ ಬೋಧನೆ

Lok Sabha Election 2024
Lok Sabha Election 20247 hours ago

Lok Sabha Election 2024: ರಾಹುಲ್‌ ಗಾಂಧಿಯ ಡಿಎನ್‌ಎ ಪರೀಕ್ಷಿಸಬೇಕು; ವಿವಾದ ಹುಟ್ಟುಹಾಕಿದ ಶಾಸಕ ಅನ್ವರ್ ಹೇಳಿಕೆ

DCM DK Shivakumar Election campaign for Bangalore Rural Lok Sabha Constituency Congress candidate DK Suresh In Ramanagara
ರಾಮನಗರ8 hours ago

Lok Sabha Election 2024: ಕೇಂದ್ರ ಸರ್ಕಾರದಿಂದ ರಾಜ್ಯದ ಬಗ್ಗೆ ತಾರತಮ್ಯ ಧೋರಣೆ: ಡಿ.ಕೆ. ಸುರೇಶ್

Priyanka Gandhi
ಕರ್ನಾಟಕ8 hours ago

Priyanka Gandhi: ನಿರುದ್ಯೋಗಿಗಳಿಗೆ ಉದ್ಯೋಗ ನೀಡಿ ಮಂಗಳಸೂತ್ರ ಉಳಿಸೋದು ಗೊತ್ತಿಲ್ಲವೇ?; ಮೋದಿ ವಿರುದ್ಧ ಪ್ರಿಯಾಂಕ ಗಾಂಧಿ ವಾಗ್ದಾಳಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌