ಬೆಂಗಳೂರು: ರದ್ದುಪಡಿಸಿರುವ ಪಿಎಸ್ಐ ನೇಮಕಾತಿ ಅಕ್ರಮ (PSI Scam) ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವ ಬಗ್ಗೆ ಶೀಘ್ರದಲ್ಲಿಯೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ನಗರದ ನಿವಾಸದಲ್ಲಿ ಬುಧವಾರ ಪಿಎಸ್‌ಐ ಅಭ್ಯರ್ಥಿಗಳ ಮನವಿ ಆಲಿಸಿ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದು, ಇದು ಮುಗಿದ ನಂತರ ಮರು ಪರೀಕ್ಷೆ ನಡೆಸುವ ಬಗ್ಗೆ ನಿರ್ಧರಿಸಿ ಪ್ರಕಟಿಸಲಾಗುವುದು ಎಂದರು.
ಈ ಹಿಂದಿನ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರದ 56000 ಅಭ್ಯರ್ಥಿಗಳು ಮರು ಪರೀಕ್ಷೆ ತೆಗೆದುಕೊಳ್ಳಲು ಅರ್ಹತೆ ಹೊಂದಿದ್ದು, ಈ ಬಗ್ಗೆ ಯಾವುದೇ ಆತಂಕ ಬೇಡ. ಮರು ಪರೀಕ್ಷೆ ನಡೆಸುವುದು ತಡವಾದರೆ, ವಯೋಮಿತಿ ಅರ್ಹತೆ ಕಳೆದುಕೊಳ್ಳುವ ಭಯ ಬೇಡ, ಪರೀಕ್ಷೆ ತಯಾರಿ ಮುಂದುವರಿಸಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ | PSI Scam | ಎಡಿಜಿಪಿ ಅಮೃತ್ ಪಾಲ್ ಆಪ್ತರ ಹೆಸರಲ್ಲಿ ಕೋಟಿ ಕೋಟಿ ಆಸ್ತಿ