ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣ (PSI scam) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ 11 ಆರೋಪಿಗಳಿಗೆ, ಲೋಕಾಯುಕ್ತ ವಿಶೇಷ ನ್ಯಾಯಾಲಯ ಷರತ್ತುಬದ್ದ ಜಾಮೀನು ನೀಡಿದೆ.
ಜಾಮೀನು ಪಡೆದ ಆರೋಪಿಗಳಲ್ಲಿ 9 ಅಭ್ಯರ್ಥಿಗಳು ಹಾಗೂ ಇಬ್ಬರು ಮಧ್ಯವರ್ತಿಗಳಾಗಿದ್ದಾರೆ. ಆರೋಪಿಗಳಾದ ಮಮ್ತೇಶ್ ಗೌಡ, ದಿಲೀಪ್, ಸೋಮಶೇರ್, ಜಾಗೃತ್, ರಚನಾ ಸೇರಿದಂತೆ 11 ಮಂದಿಗೆ ಜಾಮೀನು ಮಂಜೂರಾಗಿದೆ.
ಆರೋಪಿಗಳ ವಿರುದ್ಧ ಸಿಐಡಿ ಅಧಿಕಾರಿಗಳು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ, ವಂಚನೆ ಪ್ರಕರಣದ ಅಡಿಯಲ್ಲಿ ಪ್ರಕರಣ ದಾಖಲಿಸಿದರು. ಅದಲ್ಲದೆ ಆರೋಪಿಗಳ ವಿರುದ್ಧ ತನಿಖೆ ಮುಗಿದಿದ್ದು, ದೋಷಾರೋಪ ಪಟ್ಟಿಯನ್ನೂ ಸಲ್ಲಿಸಲಾಗಿದೆ.
ಇನ್ನು ಆರೋಪಿಗಳ ವಿರುದ್ಧ ದಾಖಲಾಗಿರುವ ಕೆಲವು ಕಾಯ್ದೆಗಳು ಆರೋಪಿಗಳಿಗೆ ಅನ್ವಯ ಆಗುವುದಿಲ್ಲ. ಅದರಲ್ಲಿ ಆರೋಪಿಗಳು ಸರ್ಕಾರಿ ಅಧಿಕಾರಿಗಳು ಆಗದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಬರುವುದಿಲ್ಲ. ಜೈಲಿನಲ್ಲಿ ಬಂಧಿಯಾಗಿದ್ದರೆ ಅವರ ಭವಿಷ್ಯಕ್ಕೆ ಧಕ್ಕೆಯಾಗಬಹುದು ಎಂದು ಆರೋಪಿಗಳ ಪರ ಹಿರಿಯ ವಕೀಲ ಶ್ಯಾಮ್ ಸುಂದರ್ ವಾದ ಮಂಡಿಸಿದರು. ಜಾಮೀನು ನೀಡುವಂತೆ ಮನವಿ ಮಾಡಿದ ಹಿನ್ನೆಲೆ ವಕೀಲರ ಮನವಿ ಪುರಸ್ಕರಿಸಿದ ನ್ಯಾಯಾಲಯ ಆರೋಪಿಗಳಿಗೆ ಬಾಂಡ್ ಶ್ಯೂರಿಟಿ ಸೇರಿದಂತೆ ಕೆಲ ಷರತ್ತುಗಳನ್ನು ವಿಧಿಸಿ, ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ | Winter Health Care | ಚಳಿಗಾಲದಲ್ಲಿ ತಣ್ಣೀರು ಸ್ನಾನ ಹೃದಯಾಘಾತಕ್ಕೆ ಕಾರಣ ಆಗಬಹುದು; ಹೇಗೆ?