ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ (PSI Scam) ಬಂಧನವಾಗಿ ಜಾಮೀನಿನ ಮೇಲೆ ಹೊರಬಂದಿದ್ದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ನಾಪತ್ತೆಯಾಗಿದ್ದಾನೆ. ಈತನಿಗಾಗಿ ಹುಡುಕಾಟ ನಡೆಸುತ್ತಿರುವ ಪೊಲೀಸರು, ಆರೋಪಿ ಕಂಡುಬಂದಲ್ಲಿ ಅಥವಾ ಮಾಹಿತಿ ತಿಳಿದುಬಂದಲ್ಲಿ ಪೊಲೀಸ್ ಇಲಾಖೆಗೆ ತಿಳಿಸಬೇಕು ಎಂದು ಸಾರ್ವಜನಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಕ್ಲಾಸ್-1 ಸಿವಿಲ್ ಕಂಟ್ರ್ಯಾಕ್ಟರ್ ಆರ್.ಡಿ.ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ವಿರುದ್ಧ ರಾಮಮೂರ್ತಿ ನಗರ ಹಾಗೂ ತುಮಕೂರಿನ ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಎರಡೂ ಪ್ರಕರಣಗಳಲ್ಲೂ ಆರೋಪಿಯ ಬಂಧನಕ್ಕೆ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಹಾಗೂ ತುಮಕೂರಿನ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ-II ಕೋರ್ಟ್ ಬಂಧನ ವಾರಂಟ್ ಹೊರಡಿಸಿತ್ತು. ಹೀಗಾಗಿ ಈತನ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ | Mangalore Drugs | ಇನ್ನಷ್ಟು ಆಸ್ಪತ್ರೆಗೆ ಹಬ್ಬಿದ ಡ್ರಗ್ಸ್ ಜಾಲ: ಇಬ್ಬರು ವೈದ್ಯರು, 7 ವೈದ್ಯ ವಿದ್ಯಾರ್ಥಿಗಳ ಬಂಧನ
ಆರೋಪಿ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಪೊಲೀಸ್ ಇಲಾಖೆಗೆ ತಿಳಿಸಲು ಪೊಲೀಸ್ ಅಧಿಕಾರಿಗಳು ಕೋರಿದ್ದಾರೆ. ಅಂಜುಮಾಲಾ ಟಿ ನಾಯಕ, ಪೊಲೀಸ್ ಉಪಾಧಿಕ್ಷಕರು, ಎಫ್‌ಐಯು ವಿಭಾಗ, ಸಿಐಡಿ, ಬೆಂಗಳೂರು, ಮೊಬೈಲ್ ನಂ.9008885599, ಕಚೇರಿ ದೂರವಾಣಿ ಸಂಖ್ಯೆ: 080- 22094521 ಮತ್ತು ಕೆ.ಟಿ.ರಮೇಶ್, ಪೊಲೀಸ್ ನಿರೀಕ್ಷಕರು, ಎಫ್‌ಐಯು ವಿಭಾಗ, ಸಿಐಡಿ, ಬೆಂಗಳೂರು: ಮೊಬೈಲ್ ನಂ.9964188636. ದೂರವಾಣಿ ಸಂಖ್ಯೆ: 080-22094521 ಅನ್ನು ಸಂಪರ್ಕಿಸಬಹುದು.