ಬೆಂಗಳೂರು: ಕನಿಷ್ಠ ಹಾಜರಾತಿಯಿಂದ (Attendance Shortage) ದ್ವಿತೀಯ ಪಿಯು ಪರೀಕ್ಷೆಯಿಂದ (Second Puc Exam) ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್‌ವೊಂದಿದೆ. ಹಾಜರಾತಿ ಕೊರತೆಯಿಂದ ಪರೀಕ್ಷೆಗೆ ಹಾಜರಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶವನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಲ್ಪಿಸಿದೆ. ಮೇ 23ರಿಂದ ಪ್ರಾರಂಭವಾಗುವ ಪೂರಕ ಪರೀಕ್ಷೆಗೆ (Puc Supplementary Exams 2023) ವಿದ್ಯಾರ್ಥಿಗಳು ಖಾಸಗಿ ಅಭ್ಯರ್ಥಿಗಳಾಗಿ ಪರೀಕ್ಷೆಯನ್ನು ಬರೆಯಬಹುದಾಗಿದೆ.
ಕಳೆದ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 75% ರಷ್ಟು ಹಾಜರಾತಿ ಇರಬೇಕು. ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಆಗದ ವಿದ್ಯಾರ್ಥಿಗಳು, ಮೇ/ಜೂನ್-2023ರ ಪೂರಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಲು ಅವಕಾಶ ಕಲ್ಪಿಸಿ ಆದೇಶವನ್ನು ಹೊರಡಿಸಿದೆ.
ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ವಂಚಿತರಾಗಿದ್ದ ಕಲಾ ವಿಭಾಗದ 7,985 ವಿದ್ಯಾರ್ಥಿಗಳು ಮತ್ತು ವಾಣಿಜ್ಯ ವಿಭಾಗದ 4,400 ವಿದ್ಯಾರ್ಥಿಗಳು ಒಟ್ಟಾರೆಯಾಗಿ 12,385 ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಆದೇಶಿಸಿದೆ. ಮೇ/ಜೂನ್ ನಡೆಯಲಿರುವ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಲು ಅವಕಾಶ ಕಲ್ಪಿಸಿದೆ. ಅರ್ಹ ವಿದ್ಯಾರ್ಥಿಗಳು ಮೇ 20ರೊಳಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.
ಇದನ್ನೂ ಓದಿ: Vijayanagara News: ಲೋಪದೋಷ ಆಗದಂತೆ ಸಿಇಟಿ ಪರೀಕ್ಷೆ ನಡೆಸಿ: ವಿಜಯನಗರ ಜಿಲ್ಲಾಧಿಕಾರಿ ವೆಂಕಟೇಶ್
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಹೀಗಿದೆ
ಮೇ 23- ಕನ್ನಡ, ಅರೇಬಿಕ್
ಮೇ 24- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
ಮೇ 25 – ಇಂಗ್ಲಿಷ್ (ಮಧ್ಯಾಹ್ನ- ಐಟಿ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್)
ಮೇ 26- ಸಮಾಜಶಾಸ್ತ್ರ , ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 27- ಇತಿಹಾಸ, ಸಂಖ್ಯಾಶಾಸ್ತ್ರ,
ಮೇ 29- ಹಿಂದಿ (ಮಧ್ಯಾಹ್ನ-ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್),
ಮೇ 30- ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತ ಶಾಸ್ತ್ರ
ಮೇ 31- ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ಜೂ.1- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
ಜೂ.2- ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
ಜೂ.3- ಅರ್ಥಶಾಸ್ತ್ರ, ಜೀವಶಾಸ್ತ್ರ
ರಾಜ್ಯದ ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ