ಬೆಂಗಳೂರು: ಕರ್ನಾಟಕದಲ್ಲಿ ಇದೀಗ ಚುನಾವಣಾ ಪರ್ವಕಾಲ. ಸದ್ಯ ಜನರ ಒಲವು ಯಾವ ಪಕ್ಷದ ಕಡೆಗಿದೆ. ಯಾವ ಕ್ಷೇತ್ರದಲ್ಲಿ ಯಾರ ಹವಾ ಇದೆ.? ವಲಯವಾರು ಯಾವ ರಿಸಲ್ಟ್ ಬರಬಹುದು.? ಹೀಗೆ ಒಟ್ಟು 12 ಪ್ರಶ್ನೆಗಳನ್ನು ರಾಜ್ಯದ ಜನತೆಯ ಮುಂದಿಟ್ಟು ನಾಡಿಮಿಡಿತ ಅರಿಯೋ ಪ್ರಯತ್ನವನ್ನು ವಿಸ್ತಾರ ನ್ಯೂಸ್ ನಡೆಸಿದೆ. ಇದಕ್ಕಾಗಿ ವಿಸ್ತಾರ ನ್ಯೂಸ್, ರಾಜ್ಯದ ಪ್ರತಿಷ್ಟಿತ ಪೊಲಿಟಿಕಲ್ ಅನಾಲಿಸಿಸ್ ಸಂಸ್ಥೆಯಾದ ಅಖಾಡ ಜೊತೆಗೂಡಿ ರಾಜ್ಯದ ಮೂಲೆಮೂಲೆಗೆ ತೆರಳಿ ಸ್ಥಳೀಯರ ಪಲ್ಸ್ ಅರಿಯುವ ಕೆಲಸ ಮಾಡಿದೆ. ಇದುವೇ ಪಲ್ಸ್ ಆಫ್ ಕರ್ನಾಟಕ (Pulse of Karnataka).
ಪಲ್ಸ್ ಆಫ್ ಕರ್ನಾಟಕ ಸರ್ವೇಯಲ್ಲಿ ವಿಸ್ತಾರ ನ್ಯೂಸ್ನ 300ಕ್ಕೂ ಹೆಚ್ಚು ಸಿಬ್ಬಂದಿಯ ಜೊತೆಗೆ ಅಖಾಡದ ಅತಿದೊಡ್ಡ ತಂಡ ಮನೆಮನೆ ಬಾಗಿಲಿಗೆ ತೆರಳಿ ಮಾಹಿತಿ ಸಂಗ್ರಹಿಸಿದೆ. ಉದ್ಯಮಿಗಳು, ಸರ್ಕಾರಿ ನೌಕರರು, ಮಹಿಳೆಯರು, ವಿದ್ಯಾರ್ಥಿಗಳು, ರೈತರು, ಬೀದಿ ಬದಿ ವ್ಯಾಪಾರಿಗಳು ಹೀಗೆ ಎಲ್ಲಾ ವರ್ಗ, ಸಮುದಾಯದ ಜನರನ್ನ ಮಾತನಾಡಿಸಿ ಸಮೀಕ್ಷೆ ನಡೆಸಲಾಗಿದೆ.
ಇದೀಗ ಕಿತ್ತೂರು ಕರ್ನಾಟಕ ಭಾಗದ ಸಮೀಕ್ಷೆಯನ್ನು ಪ್ರಸ್ತುತಪಡಿಸಲಾಗುತ್ತಿದೆ. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಹುಬ್ಬಳ್ಳಿ-ಧಾರವಾಡ, ಗದಗ ಜಿಲ್ಲೆಗಳು ಈ ವ್ಯಾಪ್ತಿಗೆ ಒಳಗೊಂಡಿದೆ.