ಬೆಂಗಳೂರು: ಕರ್ನಾಟಕದಲ್ಲಿ ಇದೀಗ ಚುನಾವಣಾ ಪರ್ವಕಾಲ. ಸದ್ಯ ಜನರ ಒಲವು ಯಾವ ಪಕ್ಷದ ಕಡೆಗಿದೆ. ಯಾವ ಕ್ಷೇತ್ರದಲ್ಲಿ ಯಾರ ಹವಾ ಇದೆ.? ವಲಯವಾರು ಯಾವ ರಿಸಲ್ಟ್ ಬರಬಹುದು.? ಹೀಗೆ ಒಟ್ಟು 12 ಪ್ರಶ್ನೆಗಳನ್ನು ರಾಜ್ಯದ ಜನತೆಯ ಮುಂದಿಟ್ಟು ನಾಡಿಮಿಡಿತ ಅರಿಯೋ ಪ್ರಯತ್ನವನ್ನು ವಿಸ್ತಾರ ನ್ಯೂಸ್ ನಡೆಸಿದೆ. ಮಾರ್ಚ್ ಮೊದಲ ವಾರದಲ್ಲಿ ಪ್ರಕಟವಾಗಿದ್ದ ಪಲ್ಸ್ ಆಫ್ ಕರ್ನಾಟಕ ಸಮೀಕ್ಷೆಯ ನಂತರ ಇದೀಗ ಎರಡನೇ ಆವೃತ್ತಿ ಸಮೀಕ್ಷೆ ನಡೆದಿದೆ.
ಇದಕ್ಕಾಗಿ ವಿಸ್ತಾರ ನ್ಯೂಸ್, ರಾಜ್ಯದ ಪ್ರತಿಷ್ಟಿತ ಪೊಲಿಟಿಕಲ್ ಅನಾಲಿಸಿಸ್ ಸಂಸ್ಥೆಯಾದ ಅಖಾಡ ಜತೆಗೂಡಿ ರಾಜ್ಯದ ಮೂಲೆಮೂಲೆಗೆ ತೆರಳಿ ಸ್ಥಳೀಯರ ಪಲ್ಸ್ ಅರಿಯುವ ಕೆಲಸ ಮಾಡಿದೆ. ಇದುವೇ ಪಲ್ಸ್ ಆಫ್ ಕರ್ನಾಟಕ.
ಪಲ್ಸ್ ಆಫ್ ಕರ್ನಾಟಕ ಸರ್ವೇಯಲ್ಲಿ ವಿಸ್ತಾರ ನ್ಯೂಸ್ನ 300ಕ್ಕೂ ಹೆಚ್ಚು ಸಿಬ್ಬಂದಿಯ ಜೊತೆಗೆ ಅಖಾಡದ ಅತಿದೊಡ್ಡ ತಂಡ ಮನೆಮನೆ ಬಾಗಿಲಿಗೆ ತೆರಳಿ ಮಾಹಿತಿ ಸಂಗ್ರಹಿಸಿದೆ. ಉದ್ಯಮಿಗಳು, ಸರ್ಕಾರಿ ನೌಕರರು, ಮಹಿಳೆಯರು, ವಿದ್ಯಾರ್ಥಿಗಳು, ರೈತರು, ಬೀದಿ ಬದಿ ವ್ಯಾಪಾರಿಗಳು ಹೀಗೆ ಎಲ್ಲಾ ವರ್ಗ, ಸಮುದಾಯದ ಜನರನ್ನ ಮಾತನಾಡಿಸಿ ಸಮೀಕ್ಷೆ ನಡೆಸಲಾಗಿದೆ.
ಮೊದಲ ಹಂತದಲ್ಲಿ ಹಳೆ ಮೈಸೂರು ಭಾಗದ ಜನರ ಪಲ್ಸ್ ಹೇಗಿದೆ ಎನ್ನುವುದನ್ನು ಪ್ರಸ್ತುತಪಡಿಸುತ್ತಿದ್ದೇವೆ. ಹಳೆ ಮೈಸೂರು ಭಾಗದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡಿದೆ.
ಇದನ್ನೂ ಓದಿ: Pulse of Karnataka 2: ಹಳೆ ಮೈಸೂರು ವಲಯ: JDS ಭದ್ರಕೋಟೆಯಲ್ಲಿ ಸಿದ್ದರಾಮಯ್ಯ ಆಗುವರೇ ಕಿಂಗ್?