Site icon Vistara News

Pulse of Karnataka: 224ರಲ್ಲಿ ಕಾಂಗ್ರೆಸ್‌-ಬಿಜೆಪಿಗೆ ಎಷ್ಟೆಷ್ಟು ಸ್ಥಾನ? 123 ಗುರಿಯಿಂದ JDS ಎಷ್ಟು ದೂರ? ಇಲ್ಲಿದೆ ಮತದಾರರ ನಾಡಿ ಮಿಡಿತ

#image_title

ಬೆಂಗಳೂರು: ಕರ್ನಾಟಕದಲ್ಲಿ ಇದೀಗ ಚುನಾವಣಾ ಪರ್ವಕಾಲ. ಸದ್ಯ ಜನರ ಒಲವು ಯಾವ ಪಕ್ಷದ ಕಡೆಗಿದೆ. ಯಾವ ಕ್ಷೇತ್ರದಲ್ಲಿ ಯಾರ ಹವಾ ಇದೆ.? ವಲಯವಾರು ಯಾವ ರಿಸಲ್ಟ್ ಬರಬಹುದು.? ಹೀಗೆ ಒಟ್ಟು 12 ಪ್ರಶ್ನೆಗಳನ್ನು ರಾಜ್ಯದ ಜನತೆಯ ಮುಂದಿಟ್ಟು ನಾಡಿಮಿಡಿತ ಅರಿಯೋ ಪ್ರಯತ್ನವನ್ನು ವಿಸ್ತಾರ ನ್ಯೂಸ್ ನಡೆಸಿದೆ. ಇದಕ್ಕಾಗಿ ವಿಸ್ತಾರ ನ್ಯೂಸ್, ರಾಜ್ಯದ ಪ್ರತಿಷ್ಟಿತ ಪೊಲಿಟಿಕಲ್ ಅನಾಲಿಸಿಸ್ ಸಂಸ್ಥೆಯಾದ ಅಖಾಡ ಜೊತೆಗೂಡಿ ರಾಜ್ಯದ ಮೂಲೆಮೂಲೆಗೆ ತೆರಳಿ ಸ್ಥಳೀಯರ ಪಲ್ಸ್ ಅರಿಯುವ ಕೆಲಸ ಮಾಡಿದೆ. ಇದುವೇ ಪಲ್ಸ್ ಆಫ್ ಕರ್ನಾಟಕ (Pulse of Karnataka).

ಪಲ್ಸ್ ಆಫ್ ಕರ್ನಾಟಕ ಸರ್ವೇಯಲ್ಲಿ ವಿಸ್ತಾರ ನ್ಯೂಸ್​ನ 300ಕ್ಕೂ ಹೆಚ್ಚು ಸಿಬ್ಬಂದಿಯ ಜೊತೆಗೆ ಅಖಾಡದ ಅತಿದೊಡ್ಡ ತಂಡ ಮನೆಮನೆ ಬಾಗಿಲಿಗೆ ತೆರಳಿ ಮಾಹಿತಿ ಸಂಗ್ರಹಿಸಿದೆ. ಉದ್ಯಮಿಗಳು, ಸರ್ಕಾರಿ ನೌಕರರು, ಮಹಿಳೆಯರು, ವಿದ್ಯಾರ್ಥಿಗಳು, ರೈತರು, ಬೀದಿ ಬದಿ ವ್ಯಾಪಾರಿಗಳು ಹೀಗೆ ಎಲ್ಲಾ ವರ್ಗ, ಸಮುದಾಯದ ಜನರನ್ನ ಮಾತನಾಡಿಸಿ ಸಮೀಕ್ಷೆ ನಡೆಸಲಾಗಿದೆ.

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ, ಕರಾವಳಿ-ಮಲೆನಾಡು, ಹಳೆ ಮೈಸೂರು ಹಾಗೂ ಬೆಂಗಳೂರು ಪ್ರದೇಶದ ಪ್ರತ್ಯೇಕ ಸಮೀಕ್ಷೆಗಳನ್ನು ಪ್ರಕಟಿಸಲಾಗಿದೆ. ಇದೀಗ ಸಮಗ್ರ ಕರ್ನಾಟಕದ ಸಮೀಕ್ಷೆಗಳನ್ನು ಪ್ರಸಾರ ಮಾಡಲಾಗುತ್ತಿದೆ.

ಹಳೆ ಮೈಸೂರು ಭಾಗದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ತೆಗೆದುಕೊಳ್ಳಲಾಗಿದೆ.

ಮಧ್ಯ ಕರ್ನಾಟಕ ಭಾಗದಲ್ಲಿ ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳನ್ನ ತೆಗೆದುಕೊಳ್ಳಲಾಗಿದೆ.

ಕರಾವಳಿ-ಕರ್ನಾಟಕ ಭಾಗದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಪರಿಗಣಿಸಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ಸಮೀಕ್ಷೆಯನ್ನು ಪ್ರಸ್ತುತಪಡಿಸಲಾಗುತ್ತಿದೆ. ಈ ಭಾಗದಲ್ಲಿ ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳನ್ನು ಒಳಗೊಂಡಿದೆ.

ಕಿತ್ತೂರು ಕರ್ನಾಟಕ ಭಾಗದ ಸಮೀಕ್ಷೆಯನ್ನು ಪ್ರಸ್ತುತಪಡಿಸಲಾಗುತ್ತಿದೆ. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಹುಬ್ಬಳ್ಳಿ-ಧಾರವಾಡ, ಗದಗ ಜಿಲ್ಲೆಗಳು ಈ ವ್ಯಾಪ್ತಿಗೆ ಒಳಗೊಂಡಿದೆ.

ಬೆಂಗಳೂರು ವಿಭಾಗ

ಸಮಗ್ರ ಕರ್ನಾಟಕ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಸಮಬಲದ ಹೋರಾಟ ನಡೆಸುತ್ತಿರುವುದು ಕಾಣುತ್ತಿದೆ. ಜೆಡಿಎಸ್‌ ಹೇಳಿಕೊಳ್ಳುವಂತೆ 123 ಸ್ಥಾನ ಗಳಿಸುವುದರಿಂದ ಬಹಳ ದೂರ ಇರುವುದು ಈಗಿನ ಸ್ಥಿತಿ. ಆದರೆ 27-30 ಸ್ಥಾನಗಳಲ್ಲಿ ಸಮಬಲದ ಹೋರಾಟ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಅಭ್ಯರ್ಥಿ ಘೋಷಣೆ, ಬಿರುಸಿನ ಪ್ರಚಾರ ನಡೆಯಲಿದೆ. ಈ ಹೆಚ್ಚಿನ ಸ್ಥಾನಗಳನ್ನು ಯಾರು ಪಡೆಯುತ್ತಾರೆ ಎನ್ನುವುದರ ಆಧಾರದಲ್ಲಿ ಕರ್ನಾಟಕದ ಮುಂದಿನ ಐದು ವರ್ಷದ ರಾಜಕಾರಣ ನಡೆಯಲಿದೆ.

40 % ಕಮಿಷ್‌ ಆರೋಪವನ್ನು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ಚುನಾವಣೆಯಲ್ಲಿ ಲಾಭವಾಗಿಸಿಕೊಳ್ಳಬಹುದು ಎಂಬ ಸಂಕೇತವನ್ನು ಮತದಾರರು ನೀಡಿದ್ದಾರೆ.

ರಾಜ್ಯದ ಎಲ್ಲ ರಾಜಕೀಯ ನಾಯಕರಲ್ಲೂ ಮಾಜಿ ಸಿದ್ದರಾಮಯ್ಯ ಇಂದಿಗೂ ಅತಿ ದೊಡ್ಡ ನಾಯಕರಾಗಿ ಹೊರಹೊಮ್ಮಿದ್ದಾರೆ. ಸಿಎಂ ಸ್ಥಾನದಿಂದ ಕೆಳಗಿಳಿದು ಐದು ವರ್ಷದ ನಂತರವೂ ಪ್ರಸಿದ್ಧಿ ಉಳಿಸಿಕೊಂಡಿದ್ದಾರೆ. ನಂತರದ ಸ್ಥಾನದಲ್ಲಿ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ, ಆನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇದ್ದಾರೆ. ಹಳೆ ಮೈಸೂರು ಹಾಗೂ ಮಧ್ಯ ಕರ್ನಾಟಕದಲ್ಲಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರಾದರೂ ಒಟ್ಟಾರೆ ಕರ್ನಾಟಕದಲ್ಲಿ ಇದೇ ಹಂತವನ್ನು ಕಾಯ್ದುಕೊಂಡಿಲ್ಲ.

Exit mobile version