Site icon Vistara News

Puneeth Rajkumar: ಪೋಸ್ಟರ್‌ಗೆ ಸೀಮಿತವಾಯಿತು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ ಸ್ಫೂರ್ತಿ ದಿನ

puneeth rajkumar inspiration day

#image_title

ಬೆಂಗಳೂರು: ಚಲನಚಿತ್ರಗಳಲ್ಲಿ ಸಾಮಾಜಿಕ ಸಂದೇಶಗಳ ಮೂಲಕ ಹಾಗೂ ನಿಜ ಜೀವನದಲ್ಲಿ ಸಾಮಾಜಿಕ ಕಾರ್ಯಗಳ ಮೂಲಕ ಯುವಕರಿಗೆ ಸ್ಫೂರ್ತಿಯಾಗಿದ್ದವರು ಕರ್ನಾಟಕ ರತ್ನ ಪುನೀತ್‌ ರಾಜಕುಮಾರ್‌(Puneeth Rajkumar). ಅವರ ಜನ್ಮದಿನವನ್ನು ಸ್ಫೂರ್ತಿ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಕಳೆದ ವರ್ಷ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು.

ಪುನೀತ್‌ ರಾಜಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರದಾನ ಮಾಡಿ ಗೌರವಿಸಲಾಯಿತು. ಅವರ ಕಾರ್ಯಗಳು ಯುವಕರಿಗೆ ಸ್ಫೂರ್ತಿ ಎಂದು ತಿಳಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಸ್ಫೂರ್ತಿ ದಿನವನ್ನಾಗಿ ಆಚರಿಸಬೇಕು ಎಂದು ತಿಳಿಸಿದ್ದರು.

ಇದೀಗ ಚುನಾವಣೆಗಳು ಹತ್ತಿರವಾಗಿದ್ದು, ಯಾವುದೇ ಕಾರ್ಯಕ್ರಮಗಳನ್ನು ನಡೆಸಲು ಸರ್ಕಾರದಲ್ಲಿ ಆಸಕ್ತಿ ಉಳಿದಿಲ್ಲ. ಇನ್ನು ಕೇವಲ ಏಳೆಂಟು ದಿನದಲ್ಲೆ ಚುನಾವಣೆ ನೀತಿ ಸಂಹಿತೆ ಘೋಷಣೆ ಆಗಲಿದೆ. ನಂತರ ಟಿಕೆಟ್‌ ಘೊಷಣೆ ಪ್ರಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನು ನಡೆಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಾಗಲಿ, ಯುವಜನ ಸಬಲೀಕರಣ ಇಲಾಖೆಗಾಗಲಿ ಸಿಎಂ ಸೂಚನೆ ನೀಡಿಲ್ಲ.

ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಶುಕ್ರವಾರ ಶಿವಮೊಗ್ಗ ಪ್ರವಾಸದಲ್ಲಿದ್ದಾರೆ. ಅವರ ಸಾಮಾಜಿಕ ಜಾಲತಾಣದಲ್ಲಿ ಪುನೀತ್‌ ರಾಜಕುಮಾರ್‌ ಜನ್ಮದಿನದಂದು ಶುಭಾಶಯ ಕೋರಿದ್ದಾರೆ. “ಅತಿ ಚಿಕ್ಕ ವಯಸ್ಸಿನಲ್ಲಿಯೇ ಅಗಾಧವಾದ ಸಾಧನೆಗೈದು, ಎಲ್ಲರಿಗೂ ಮಾದರಿಯಾಗಿರುವ ಪ್ರೀತಿಯ ಅಪ್ಪು, ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಜನ್ಮಸ್ಮರಣೆಯಂದು ಗೌರವಪೂರ್ವಕ ನಮನಗಳು. ಅಪ್ಪು ಸದಾ ಅಜರಾಮರ” ಎಂದಿದ್ದಾರೆ.

ಶುಭಾಶಯ ಕೋರುವ ಪೋಸ್ಟರ್‌ನಲ್ಲಿ ಸ್ಫೂರ್ತಿ ದಿನ ಎಂದು ನಮೂದಿಸಲಾಗಿದೆ. ಅದನ್ನು ಹೊರತುಪಡಿಸಿ ಸ್ಫೂರ್ತಿ ದಿನಕ್ಕೆ ಯಾವುದೇ ಕಾರ್ಯಕ್ರಮಗಳು ನಡೆದಿಲ್ಲ.

ಇದನ್ನೂ ಓದಿ: Puneeth Rajkumar: ಅಪ್ಪು ಸಮಾಧಿ ದರ್ಶನಕ್ಕೆ ಬಂದ 80ರ ವೃದ್ಧ, 19 ದಿನಗಳ ನವಜಾತ ಶಿಶು ಜತೆ ಬಂದ ತಾಯಿ!

Exit mobile version