ಬೆಂಗಳೂರು: ನಗರದ ನಾಯಂಡಳ್ಳಿ ಜಂಕ್ಷನ್‌ನಿಂದ ಬನ್ನೇರುಘಟ್ಟ ರಸ್ತೆವರೆಗಿನ ೧೨ ಕಿ.ಮೀ. ಉದ್ದದ ವರ್ತುಲ ರಸ್ತೆಗೆ ಮಂಗಳವಾರ (ಫೆ. ೭) ಕರ್ನಾಟಕ ರತ್ನ ಪುನೀತ್ ರಾಜಕುಮಾರ್ (Puneeth Rajkumar) ಅವರ ಹೆಸರನ್ನು ನಾಮಕರಣ ಮಾಡಲಾಗುತ್ತಿದೆ. ರಸ್ತೆ ಉದ್ಘಾಟನೆ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಪುನೀತ್ ರಾಜಕುಮಾರ್ ಅವರ ಫೋಟೊ ಇಲ್ಲವಾಗಿದ್ದು, ರಾಜಕೀಯಕ್ಕೆ ಅಪ್ಪು ಹೆಸರು ಬಳಕೆಯಾಯ್ತು ಎಂದು ಸೋಷಿಯಲ್ ಮೀಡಿಯಾದಲ್ಲಿ ಬ್ಯಾನರ್ ಫೋಟೊ ವೈರಲ್ ಆಗುತ್ತಿದೆ. ಮಂಗಳವಾರ ಫೆ.7ರಂದು ಪದ್ಮನಾಭನಗರದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುನೀತ್ ರಾಜ್ ಕುಮಾರ್ ರಸ್ತೆ ನಾಮಕರಣಕ್ಕೆ ಚಾಲನೆ ನೀಡಲಿದ್ದಾರೆ.
ಬ್ಯಾನರ್‌ನಲ್ಲಿ ರಾಜಕೀಯ ನಾಯಕರು ಮಾತ್ರ ರಾರಾಜಿಸುತ್ತಿದ್ದು, ಅಪ್ಪು ಫೋಟೊ ಬ್ಯಾನರ್‌ನಲ್ಲಿ ಇಲ್ಲವಾಗಿದೆ. ಅಪ್ಪು ಹೆಸರು ರಾಜಕೀಯಕ್ಕೆ ಬಳಕೆಯಾಗುತ್ತಿದೆ ಎಂದು ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪೋಸ್ಟ್‌ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಸಚಿವ ಆರ್. ಅಶೋಕ್ ಹೇಳಿದ್ದೇನು?
ಕಂದಾಯ ಸಚಿವ ಆರ್. ಅಶೋಕ್ ಮಾತನಾಡಿ ʻʻಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬೆಂಗಳೂರಿನ ಇತಿಹಾಸದಲ್ಲಿಯೇ ಇಷ್ಟು ಉದ್ದದ ರಸ್ತೆಗೆ ನಟರೊಬ್ಬರ ಹೆಸರನ್ನು ನಾಮಕರಣ ಮಾಡುತ್ತಿರುವುದು ಇದೇ ಮೊದಲಾಗಿದೆ. ಈ ರಸ್ತೆಗೆ ಪುನೀತ್ ಹೆಸರನ್ನು ನಾಮಕರಣ ಮಾಡಲಿರುವ ಸಿಎಂ ಬೊಮ್ಮಾಯಿ ಅವರು ಅಲ್ಲಿರುವ ಪಾರ್ಕ್ ಅನ್ನು ಸಹ ಉದ್ಘಾಟನೆ ಮಾಡಲಿದ್ದಾರೆʼʼ ಎಂದು ತಿಳಿಸಿದರು.
ಇದನ್ನೂ ಓದಿ: Puneeth Rajkumar: ನಾಯಂಡಳ್ಳಿ-ಬನ್ನೇರುಘಟ್ಟ ರಸ್ತೆಗೆ ಪುನೀತ್ ಹೆಸರು; ಫೆ.7ಕ್ಕೆ ನಾಮಕರಣ: ಇದು ಅತಿ ಉದ್ದದ ರಸ್ತೆ!
ಇದನ್ನೂ ಓದಿ: Puneeth Rajkumar Statue: ಬಳ್ಳಾರಿಯಲ್ಲಿ 23 ಅಡಿ ಎತ್ತರದ ಅಪ್ಪು ಪುತ್ಥಳಿ ಅನಾವರಣ; ಭಾವುಕರಾದ ಅಶ್ವಿನಿ ಪುನೀತ್ ರಾಜಕುಮಾರ್
ಸಂಜೆ ಆರು ಗಂಟೆಗೆ ಪದ್ಮನಾಭನಗರದ ಅಟಲ್ ಬಿಹಾರಿ ವಾಜಪೇಯಿ ಮೈದಾನದಲ್ಲಿ ರಸ್ತೆ ನಾಮಕರಣ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಸೇರಿದಂತೆ ಅವರ ಕುಟುಂಬದವರು ಉಪಸ್ಥಿತರಿರಲಿದ್ದಾರೆ. ಚಿತ್ರರಂಗದ ಹಿನ್ನಲೆ ಗಾಯಕರು ಬರಲಿದ್ದಾರೆ. ವಿಜಯ್ ಪ್ರಕಾಶ್, ರಘು ದೀಕ್ಷಿತ್, ಸಾಧು ಕೋಕಿಲ ಸೇರಿದಂತೆ 17 ಪ್ರತಿಷ್ಠಿತ ಗಾಯಕರು ಭಾಗಿಯಾಗಲಿದ್ದಾರೆ.ಕಾರ್ಯಕ್ರಮಕ್ಕೆ ಎಲ್ಲರಿಗೂ ಮುಕ್ತ ಅವಕಾಶವಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.ಎಂದು ತಿಳಿಸಿದರು.