ರಾಮನಗರ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ತಂದೆ ಪುಟ್ಟಮಾದೇಗೌಡ (89) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನರಾದರು. ನಿವೃತ್ತ ಶಿಕ್ಷಕ ಪುಟ್ಟಮಾದೇಗೌಡ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆಮ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಮೃತ ಪುಟ್ಟಮಾದೇಗೌಡ ಅವರಿಗೆ ಸಿ.ಪಿ ಯೋಗೇಶ್ವರ್ ಸೇರಿ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಸಂಸ್ಕಾರವು ಸ್ವಗ್ರಾಮವಾದ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಸೋಮವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ | Karnataka Rain : ಮಳೆಗೆ ಮನೆ ಮುಳುಗಡೆಯಾದ ಸುದ್ದಿ ಕೇಳಿ ಮನೆ ಯಜಮಾನ ಹೃದಯಾಘಾತದಿಂದ ಸಾವು
ಸುದ್ದಿಗೋಷ್ಠಿ ನಡೆಸುವಾಗಲೇ ಎಚ್.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ; ಆಸ್ಪತ್ರೆಗೆ ದಾಖಲು
ಬೆಂಗಳೂರು: ಸುದ್ದಿಗೋಷ್ಠಿ ನಡೆಸುವಾಗಲೇ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಭಾನುವಾರ ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಿಂದ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರ ಮೂಗಿನಿಂದ ರಕ್ತಸ್ರಾವವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಎಚ್‌ಡಿಕೆ ಒರೆಸಿಕೊಂಡರು. ಅದರೂ ರಕ್ತಸ್ರಾವ ನಿಲ್ಲಲಿಲ್ಲ. ಮತ್ತೆ ಮೂಗಿನಿಂದ ರಕ್ತಸ್ರಾವ ಹೆಚ್ಚಾದ ಹಿನ್ನೆಲೆ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು. ಮೂಗಿನಿಂದ ರಕ್ತಸ್ರಾವ ಹಿನ್ನೆಲೆಯಲ್ಲಿ ಬಿಳಿ ಶರ್ಟ್ ರಕ್ತಮಯವಾಗಿದೆ.
ಈ ಬಗ್ಗೆ ಸಂಸದ ಡಾ.ಸಿ.ಎನ್.ಮಂಜುನಾಥ್ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರಿಗೆ ಎರಡನೇ ಬಾರಿ ಈ ರೀತಿ ಆಗುತ್ತಿದೆ. ರಕ್ತ ಹೆಪ್ಪುಗಟ್ಟಬಾರದು ಎಂದು ಥಿನ್ನರ್ ತೆಗೆದುಕೊಳ್ಳುತ್ತಿದ್ದರು. ಅವರಿಗೆ ಬಿಪಿ ನಾರ್ಮಲ್ ಇದೆ, ನಿತ್ಯ ಶುಗರ್ ಲೆವೆಲ್ ಚೆಕ್ ಮಾಡಿಕೊಳ್ಳುತ್ತಿದ್ದರು. ಪ್ರವಾಸ ಹೆಚ್ಚಾಗಿ ಓವರ್ ಹೀಟ್‌ನಿಂದ ರಕ್ತಸ್ರಾವ ಆಗಿರಬಹುದು ಎಂದು ತಿಳಿಸಿದ್ದಾರೆ.