Site icon Vistara News

Koti chennaya : ಪುತ್ತೂರು ಸರ್ಕಾರಿ ಬಸ್‌ ನಿಲ್ದಾಣಕ್ಕೆ ತುಳುನಾಡಿನ ಅವಳಿ ವೀರರಾದ ಕೋಟಿ-ಚೆನ್ನಯರ ಹೆಸರು

puttur bus stand

#image_title

ಪುತ್ತೂರು: ತುಳುನಾಡಿನ ಅವಳಿ ವೀರರಾದ ಕೋಟಿ-ಚೆನ್ನಯರ (Koti chennaya) ಹೆಸರನ್ನು ಪುತ್ತೂರಿನ ಬಸ್‌ ನಿಲ್ದಾಣಕ್ಕೆ ಇಡುವ ಮೂಲಕ ಅವರ ಹೆಸರನ್ನು ಮುಂದಿನ ಪೀಳಿಗೆಗೆ ನೆನಪಿಸುವ ಕೆಲಸ ಮಾಡಲಾಗಿದೆ. ಸರ್ಕಾರವು ಅವಳಿ ವೀರರ ನಾಮಕರಣ ಮಾಡಿ ಅವರಿಗೆ ಮಾನ್ಯತೆಯನ್ನು ನೀಡುವ ಕಾರ್ಯ ಮಾಡಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು. ಕೋಟಿ -ಚೆನ್ನಯರ ಹೆಸರನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ಇಡಬೇಕು ಎಂಬ ಬೇಡಿಕೆಯೂ ದೊಡ್ಡ ಮಟ್ಟದಲ್ಲಿದೆ.

ಅವರು ಭಾನುವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದದ ಪುತ್ತೂರು ಬಸ್ಸು ನಿಲ್ದಾಣಕ್ಕೆ `ಕೋಟಿ ಚೆನ್ನಯ’ ಬಸ್‌ ನಿಲ್ದಾಣ ನಾಮಕರಣ ಸಮಾರಂಭದಲ್ಲಿ ನಾಮಫಲಕವನ್ನು ಉದ್ಘಾಟಿಸಿ ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪುತ್ತೂರಿನಲ್ಲಿ ಕಳೆದ 10 ವರ್ಷಗಳ ಹಿಂದೆ ನೂತನ ಬಸ್ಸು ನಿಲ್ದಾಣವನ್ನು ರೂ.33 ಕೋಟಿ ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಾಗಿತ್ತು. ಬಳಿಕದ ದಿನಗಳಲ್ಲಿ ಆಧ್ಯಾತ್ಮಿಕ ಪುರುಷರಾದ ಕೋಟಿ ಚೆನ್ನಯರ ಹೆಸರನ್ನು ಬಸ್‌ ನಿಲ್ದಾಣಕ್ಕೆ ನಾಮಕರಣ ಮಾಡುವ ಬಗ್ಗೆ ನಗರಸಭೆಯಿಂದ ನಿರ್ಣಯ ಅಂಗೀಕರಿಸಲಾಗಿತ್ತು.

ಪುತ್ತೂರಿನ ಪಡುಮಲೆಯಲ್ಲಿ ಹುಟ್ಟಿದ ಅವಳಿ ವೀರರು ಆಗಿನ ಅವಿಭಜಿತ ಪುತ್ತೂರಿನ ಎಣ್ಮೂರಿನಲ್ಲಿ ಮರಣ ಹೊಂದಿದ್ದರು. ಅವರ ಸಾಧನೆಯನ್ನು ಅರಿಯಲು ಹಾಗೂ ಅವರನ್ನು ನೆನಪಿಸಿಕೊಳ್ಳಲು ಈ ಬಸ್‌ ನಿಲ್ದಾಣದ ನಾಮಕರಣವು ಪೂರಕವಾಗಿದೆ ಎಂದರು.

ಥೀಮ್‌ ಪಾರ್ಕ್‌ ಸ್ಥಾಪನೆ ಚಿಂತನೆ

ಕೋಟ ಚೆನ್ನಯರು ಒಂದು ಜಾತಿಗೆ ಸೀಮಿತರಾದವರಲ್ಲ. ಅವರು ಹಿಂದೂ ಧರ್ಮದ ಎಲ್ಲರ ಆರಾಧಕರು. ಸರ್ಕಾರವು ಕೋಟಿ ಚೆನ್ನಯರ ಆರಾಧಕರ ಜೊತೆಗಿದೆ ಎಂಬುದಕ್ಕೆ ಕೋಟಿ ಚೆನ್ನಯ ನಾಮಕರಣ ಪೂರಕವಾಗಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಪುತ್ತೂರಿನಲ್ಲಿ ಕೋಟಿ ಚೆನ್ನಯ ಥೀಮ್ ಪಾರ್ಕ್ ನಿರ್ಮಾಣದ ಬಗ್ಗೆಯೂ ಯೋಜನೆ ರೂಪಿಸಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗುವುದು. ಕೋಟಿ ಚೆನ್ನಯರ 264 ಗರಡಿಗಳಿಗೂ ಜಾಗ ಮಂಜೂರು ಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಮಠಂದೂರು ತಿಳಿಸಿದರು.

ಇದನ್ನೂ ಓದಿ Urigowda Nanjegowda : ಉರಿ ಗೌಡ, ನಂಜೇಗೌಡ ಮತ್ತೆ ಪ್ರತ್ಯಕ್ಷ; ಬಿಜೆಪಿ ಕಾರ್ಯಕ್ರಮದ ಪ್ರವೇಶ ದ್ವಾರದಲ್ಲೇ ಫಿಕ್ಸ್‌!

Exit mobile version