Site icon Vistara News

ಶಿವಗಂಗೆ ಪ್ರವಾಸಿ ಮಂದಿರದಲ್ಲಿ ಪಿಡಬ್ಲ್ಯೂಡಿ ಅಧಿಕಾರಿ ನೇಣಿಗೆ ಶರಣು; ವಿಜಯಪುರದಲ್ಲಿ ವ್ಯಕ್ತಿ ಆತ್ಮಹತ್ಯೆ

Suicide Case

ನೆಲಮಂಗಲ/ವಿಜಯಪುರ: ನೆಲಮಂಗಲದ ಶಿವಗಂಗೆಯ ಪ್ರವಾಸಿ ಮಂದಿರದಲ್ಲಿ ಪಿಡಬ್ಲ್ಯೂಡಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ನಿವಾಸಿ ಲಕ್ಷ್ಮೀನರಸಿಂಹಯ್ಯ (54) ಮೃತ ದುರ್ದೈವಿ.

ಕಚೇರಿಗೆ ಸಂಬಂಧಪಟ್ಟ ಕಡತವೊಂದು ಮಿಸ್ಸಿಂಗ್ ಆಗಿದ್ದು, ಇದರಿಂದ ಒತ್ತಡಕ್ಕೆ ಒಳಗಾಗಿ ಲಕ್ಷ್ಮೀನರಸಿಂಹಯ್ಯ ಅವರು ಪ್ರವಾಸಿ ಮಂದಿರದಲ್ಲಿ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ವೇಳೆ ಬಾಯಿಗೆ ಕರವಸ್ತ್ರವನ್ನು ತುರುಕಿಕೊಂಡಿದ್ದರು. ಸ್ಥಳಕ್ಕೆ ದಾಬಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಮರಕ್ಕೆ ನೇಣು ಬಿಗಿದುಕೊಂಡ ವ್ಯಕ್ತಿ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಾಡಗಿ ರಸ್ತೆಯಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವನ ಬಾಗೇವಾಡಿ ತಾಲೂಕಿನ ಯಾಳವಾರ ಗ್ರಾಮದ ಬಸವರಾಜ ಕೋಟಿ (36) ಆತ್ಮಹತ್ಯೆಗೆ ಶರಣಾದವರು.

ಇದನ್ನೂ ಓದಿ: Signature Forgery: ಬಿಎಂಟಿಸಿ ಎಂಡಿ ಸಹಿಯೇ ನಕಲು ಮಾಡಿದ ಅಧಿಕಾರಿಗಳು; ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ದೂರು

ಈ ಹಿಂದೆ ಕಾಳಸಂತೆಯಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಬಸವರಾಜ ನಷ್ಟ ಅನುಭವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Exit mobile version