ಶಿವಗಂಗೆ ಪ್ರವಾಸಿ ಮಂದಿರದಲ್ಲಿ ಪಿಡಬ್ಲ್ಯೂಡಿ ಅಧಿಕಾರಿ ನೇಣಿಗೆ ಶರಣು; ವಿಜಯಪುರದಲ್ಲಿ ವ್ಯಕ್ತಿ ಆತ್ಮಹತ್ಯೆ - Vistara News

ಕರ್ನಾಟಕ

ಶಿವಗಂಗೆ ಪ್ರವಾಸಿ ಮಂದಿರದಲ್ಲಿ ಪಿಡಬ್ಲ್ಯೂಡಿ ಅಧಿಕಾರಿ ನೇಣಿಗೆ ಶರಣು; ವಿಜಯಪುರದಲ್ಲಿ ವ್ಯಕ್ತಿ ಆತ್ಮಹತ್ಯೆ

ವಿಜಯಪುರದಲ್ಲಿ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿದ್ದರೆ, ನೆಲಮಂಗಲದ ಶಿವಗಂಗೆ ಪ್ರವಾಸಿ ಮಂದಿರದಲ್ಲಿ ಪಿಡಬ್ಲ್ಯೂಡಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

VISTARANEWS.COM


on

Suicide Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೆಲಮಂಗಲ/ವಿಜಯಪುರ: ನೆಲಮಂಗಲದ ಶಿವಗಂಗೆಯ ಪ್ರವಾಸಿ ಮಂದಿರದಲ್ಲಿ ಪಿಡಬ್ಲ್ಯೂಡಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ನಿವಾಸಿ ಲಕ್ಷ್ಮೀನರಸಿಂಹಯ್ಯ (54) ಮೃತ ದುರ್ದೈವಿ.

ಕಚೇರಿಗೆ ಸಂಬಂಧಪಟ್ಟ ಕಡತವೊಂದು ಮಿಸ್ಸಿಂಗ್ ಆಗಿದ್ದು, ಇದರಿಂದ ಒತ್ತಡಕ್ಕೆ ಒಳಗಾಗಿ ಲಕ್ಷ್ಮೀನರಸಿಂಹಯ್ಯ ಅವರು ಪ್ರವಾಸಿ ಮಂದಿರದಲ್ಲಿ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ವೇಳೆ ಬಾಯಿಗೆ ಕರವಸ್ತ್ರವನ್ನು ತುರುಕಿಕೊಂಡಿದ್ದರು. ಸ್ಥಳಕ್ಕೆ ದಾಬಸ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಮರಕ್ಕೆ ನೇಣು ಬಿಗಿದುಕೊಂಡ ವ್ಯಕ್ತಿ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಾಡಗಿ ರಸ್ತೆಯಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವನ ಬಾಗೇವಾಡಿ ತಾಲೂಕಿನ ಯಾಳವಾರ ಗ್ರಾಮದ ಬಸವರಾಜ ಕೋಟಿ (36) ಆತ್ಮಹತ್ಯೆಗೆ ಶರಣಾದವರು.

ಇದನ್ನೂ ಓದಿ: Signature Forgery: ಬಿಎಂಟಿಸಿ ಎಂಡಿ ಸಹಿಯೇ ನಕಲು ಮಾಡಿದ ಅಧಿಕಾರಿಗಳು; ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ದೂರು

ಈ ಹಿಂದೆ ಕಾಳಸಂತೆಯಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಬಸವರಾಜ ನಷ್ಟ ಅನುಭವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಹುಬ್ಬಳ್ಳಿಯಲ್ಲಿ ಇಬ್ಬರು ಎನ್‌ಐಎ ವಶಕ್ಕೆ

Rameshwaram Cafe Blast: ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಇಬ್ಬರು ಸಹೋದರರನ್ನುಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆ ನಡೆಸಲು ಇಬ್ಬರು ಆರೋಪಿಗಳನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ.

VISTARANEWS.COM


on

Rameshwaram Cafe Blast
Koo

ಹುಬ್ಬಳ್ಳಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ (Rameshwaram Cafe Blast) ಸಂಬಂಧ ನಗರದಲ್ಲಿ ಇಬ್ಬರು ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಂಗಳವಾರ ವಿಚಾರಣೆಗೆ ಗುರಿಪಡಿಸಿದ ನಂತರ ಇಬ್ಬರು ಸಹೋದರರನ್ನು ವಶಕ್ಕೆ ಪಡೆಯಲಾಗಿದೆ.

ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶೋಯಬ್ ಮಿರ್ಜಾ ಹಾಗೂ ಈತನ ಸಹೋದರ ಅಜೀಜ್ ಅಹಮದ್ ಮಿರ್ಜಾ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಇಬ್ಬರು ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ | Self Harming: ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಜೋಡಿ; ಅನೈತಿಕ ಸಂಬಂಧ ಶಂಕೆ

ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ; 11 ಶಂಕಿತ ಉಗ್ರರು ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ (Rameshwaram Cafe Blast) ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತನಿಖೆ ಚುರುಕುಗೊಳಿಸಿದ್ದು, ಮಂಗಳವಾರ ಕರ್ನಾಟಕ ಸೇರಿ 4 ರಾಜ್ಯಗಳ 11 ಸ್ಥಳಗಳಲ್ಲಿ ದಾಳಿ ನಡೆಸಿ, 11 ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಭಾಗಿಯಾಗಿರುವ ಇತರ ಸಂಚುಕೋರರನ್ನು ಪತ್ತೆ ಮಾಡಲು ರಾಷ್ಟ್ರೀಯ ತನಿಖಾ ದಳವು ನಾಲ್ಕು ರಾಜ್ಯಗಳ 11 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದೆ.

ಕರ್ನಾಟಕ, ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದ 11 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಇಂದು ಪತ್ತೆಯಾದ 11 ಮಂದಿ ಶಂಕಿತರಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ 2012ರ ಲಷ್ಕರ್–ಎ–ತಯ್ಬಾ (ಎಲ್‌ಇಟಿ) ಪಿತೂರಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ವ್ಯಕ್ತಿಗಳೂ ಸೇರಿದ್ದಾರೆ. ದಾಳಿ ವೇಳೆ ಡಿಜಿಟಲ್ ಪರಿಕರಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

Continue Reading

ಬೆಂಗಳೂರು

Hajj Pilgrimage: ಹಜ್ ಯಾತ್ರಿಗಳನ್ನು ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ; ಹಜ್ ಭವನ ನಿರ್ಮಾಣಕ್ಕೆ ಅನುದಾನ

Hajj Pilgrimage: ಬೆಂಗಳೂರಿನ ಹೆಗಡೆ ನಗರದ ಹಜ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಜ್ ಯಾತ್ರೆಗೆ ತೆರಳುತ್ತಿರುವವರಿಗೆ ಬೀಳ್ಕೊಡುಗೆ ನೀಡಿ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.

VISTARANEWS.COM


on

Hajj pilgrimage
Koo

ಬೆಂಗಳೂರು: ರಾಜ್ಯದಿಂದ ಹಜ್‌ ಯಾತ್ರೆಗೆ (Hajj Pilgrimage) ತೆರಳುತ್ತಿದ್ದ ಯಾತ್ರಿಗಳನ್ನು ಸಿಎಂ ಸಿದ್ದರಾಮಯ್ಯ ಅವರು ನಗರದಲ್ಲಿ ಮಂಗಳವಾರ ಬೀಳ್ಕೊಟ್ಟರು. ಹೆಗಡೆ ನಗರದ ಹಜ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಜ್ ಯಾತ್ರೆಗೆ ತೆರಳುತ್ತಿರುವವರಿಗೆ ಬೀಳ್ಕೊಡುಗೆ ನೀಡಿ ಸಿಎಂ ಶುಭ ಹಾರೈಸಿದರು.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 10,168 ಹಜ್ ಯಾತ್ರಿಗಳ ಪ್ರಯಾಣ ಸುಖಕರವಾಗಿರಲಿ ಎಂದು ಶುಭ ಕೋರಿದ್ದೇನೆ. ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ನೆಲಸಲಿ ಎಂದು ಪ್ರಾರ್ಥಿಸುವಂತೆ ತಿಳಿಸಿದ್ದೇನೆ. ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂದು ಹೇಳಿದಂತೆ ಹಿಂದು, ಮುಸ್ಲಿಂ, ಕ್ರಿಶ್ಚಿಯನ್, ಭೌದ್ಧ, ಸಿಖ್ ಧರ್ಮದವರೆಲ್ಲಾ ಒಂದು ತಾಯಿಯ ಮಕ್ಕಳಂತೆ ಇರಬೇಕು. ಅಂಥ ವಾತಾವರಣ ನಿರ್ಮಾಣವಾಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಶಕ್ತಿ ಬಂದು ಎಲ್ಲರೂ ಸಬಲರಾಗಬೇಕು. ಅದಕ್ಕೆ ಹಜ್ ಯಾತ್ರಿಗಳು ಪ್ರಾರ್ಥಿಸಲಿ ಎಂದರು ಹೇಳಿದರು.

ಪ್ರಸ್ತುತ ಆರ್ಥಿಕ ವರ್ಷದಲ್ಲಿ ದೇಶ ಹಾಗೂ ರಾಜ್ಯದಲ್ಲಿ ಉತ್ತಮ ಮಳೆಯಾಗಿ ಬೆಳೆ ಬರಲಿ, ನಾಡು ಸಮೃದ್ಧವಾಗಲಿ ಎಂದು ಪ್ರಾರ್ಥಿಸುವಂತೆ ಎಲ್ಲಾ ಯಾತ್ರಾರ್ಥಿಗಳಲ್ಲಿ ಮನವಿ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ

ಮಂಗಳೂರು ಮತ್ತು ಕಲಬುರ್ಗಿಯಲ್ಲಿ ಹಜ್ ಭವನ ನಿರ್ಮಾಣಕ್ಕಾಗಿ ಅನುದಾನ ಒದಗಿಸಲಾಗಿದೆ. ಕಲಬುರಗಿಯಲ್ಲಿ ಸ್ಥಳ ಸಿಗದೇ ವಿಳಂಬವಾಗಿದೆ. ಮಂಗಳೂರಿನಲ್ಲಿ ಸ್ಥಳ ಗುರುತಿಸಲಾಗಿದೆ. ನೀತಿ ಸಂಹಿತೆ ಮುಗಿದ ಮೇಲೆ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದೇ ಪ್ರತಿ ದಿನ ಹಜ್‌ಗೆ ತೆರಳುವವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸಚಿವ ಜಮೀರ್ ಅಹಮ್ಮದ್ ಅವರನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದರು.

ಇದನ್ನೂ ಓದಿ | CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

ಈ ವೇಳೆ ಸಚಿವರಾದ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಶಾಸಕರು, ಮುಖಂಡರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

Meta: ಮೆಟಾ ಸಂಸ್ಥೆಯಿಂದ ಮಂಗಳವಾರ ಬೆಂಗಳೂರು ನಗರದಲ್ಲಿ 1ಎಂ1ಬಿ ಸಹಯೋಗದಲ್ಲಿ ‘ಟಾಕಿಂಗ್ ಡಿಜಿಟಲ್ ಸುರಕ್ಷಾ ಫಾರ್ ಟೀನ್ಸ್’(ಹದಿಹರೆಯದವರಿಗೆ ಡಿಜಿಟಲ್ ಸುರಕ್ಷಾ) ಕಾರ್ಯಕ್ರಮ ಜರುಗಿತು. ಆನ್‌ಲೈನ್ ಸುರಕ್ಷತೆಗಾಗಿ ಮೆಟಾದ ವಿಧಾನಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸಲು ಮತ್ತು ಆನ್‌ಲೈನ್ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹದಿಹರೆಯದವರ ಯೋಗಕ್ಷೇಮವನ್ನು ಕಾಪಾಡುವಂತಹ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಈ ಪೋಷಕ- ಶಿಕ್ಷಕರ ಜಾಗೃತಿ ಕಾರ್ಯಕ್ರಮ ಜರುಗಿತು.

VISTARANEWS.COM


on

Talking Digital Safety for Teens programme by Meta in Bengaluru
Koo

ಬೆಂಗಳೂರು: ಯುವಜನರ ಯೋಗಕ್ಷೇಮದ ಕುರಿತು ಮೆಟಾ (Meta) ಸಂಸ್ಥೆಯಿಂದ ಮಂಗಳವಾರ ನಗರದಲ್ಲಿ 1ಎಂ1ಬಿ ಸಹಯೋಗದಲ್ಲಿ ‘ಟಾಕಿಂಗ್ ಡಿಜಿಟಲ್ ಸುರಕ್ಷಾ ಫಾರ್ ಟೀನ್ಸ್’ (ಹದಿಹರೆಯದವರಿಗೆ ಡಿಜಿಟಲ್ ಸುರಕ್ಷಾ) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಆನ್‌ಲೈನ್ ಸುರಕ್ಷತೆಗಾಗಿ ಮೆಟಾದ ವಿಧಾನಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸಲು ಮತ್ತು ಆನ್‌ಲೈನ್ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹದಿಹರೆಯದವರ ಯೋಗಕ್ಷೇಮವನ್ನು ಕಾಪಾಡುವಂತಹ ಉತ್ತಮ ಅಭ್ಯಾಸಗಳನ್ನು ಹಂಚಿಕೊಳ್ಳಲು ಈ ಪೋಷಕ- ಶಿಕ್ಷಕರ ಜಾಗೃತಿ ಕಾರ್ಯಕ್ರಮ ಜರುಗಿತು. ಮೆಟಾದ ಪ್ಲಾಟ್ ಫಾರ್ಮ್‌ಗಳನ್ನು ಒಳಗೊಂಡಂತೆ ಹದಿಹರೆಯದ ಮಕ್ಕಳ ಸ್ಮಾರ್ಟ್‌ಫೋನ್‌ ಮತ್ತು ಸಾಧನಗಳ ಬಳಕೆಯನ್ನು ಆತ್ಮವಿಶ್ವಾಸದಿಂದ ನಿರ್ವಹಣೆ ಮಾಡಲು ಸಾಧ್ಯವಾಗುವಂತೆ ಪೋಷಕರನ್ನು ಸಜ್ಜುಗೊಳಿಸುವ ಅನೇಕ ವಿಧಾನಗಳನ್ನು ಕಾರ್ಯಕ್ರಮದಲ್ಲಿ ಚರ್ಚಿಸಲಾಯಿತು.

ಇದನ್ನೂ ಓದಿ: Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

ಕಾರ್ಯಕ್ರಮದಲ್ಲಿ ಹದಿಹರೆಯದ ಮಕ್ಕಳ ಸಾಮಾಜಿಕ ಮಾಧ್ಯಮಗಳ ಬಳಕೆ ಮತ್ತು ಇತರ ಆನ್‌ಲೈನ್ ಟ್ರೆಂಡ್‌ಗಳ ಬಳಕೆ ಕುರಿತು ಪೋಷಕರು ಮತ್ತು ಶಿಕ್ಷಕರ ಒಳನೋಟಗಳನ್ನು ಈ ವೇಳೆ ಸಂಗ್ರಹಿಸಲಾಯಿತು. ಡಿಜಿಟಲ್ ಸುರಕ್ಷತಾ ಉಪಕ್ರಮಗಳ ಕುರಿತು ಹೆಚ್ಚು ತಿಳಿದುಕೊಳ್ಳಲು ಮತ್ತು ಅವರ ಹದಿಹರೆಯದ ಮಕ್ಕಳ ಸಾಮಾಜಿಕ ಜಾಲತಾಣಗಳ ಪ್ರಯಾಣದ ಅನುಭವಗಳ ಕುರಿತು ಚರ್ಚಿಸಲು ನಗರದ ಆಯ್ದ 10-15 ಶಾಲೆಗಳ ಆಯ್ದ ಶಿಕ್ಷಕರು ಮತ್ತು ಪೋಷಕರು ಪಾಲ್ಗೊಂಡಿದ್ದರು.

ಈ ವೇಳೆ ಇನ್‌ಸ್ಟಾಗ್ರಾಮ್‌ನ ಭಾರತದ ಸಾರ್ವಜನಿಕ ನೀತಿಯ ನಿರ್ದೇಶಕಿ ನತಾಶಾ ಜೋಗ್ ಮಾತನಾಡಿ, ನಮ್ಮ ಯುವ ಬಳಕೆದಾರರು ಆನ್‌ಲೈನ್‌ನಲ್ಲಿ ಅರ್ಥಪೂರ್ಣವಾಗಿ ಸಮಯವನ್ನು ಕಳೆಯುವುದರ ಜತೆಗೆ ವಿಶೇಷವಾಗಿ ಅವರು ಇಷ್ಟಪಡುವ ಎಲ್ಲಾ ಕೆಲಸಗಳನ್ನು ಮಾಡುತ್ತಲೇ ಸುರಕ್ಷಿತವಾಗಿರುವ ಅಗತ್ಯವನ್ನು ನಾವು ಗಮನಿಸಿದ್ದೇವೆ.

ಭಾರತದಾದ್ಯಂತ ಈ ಚರ್ಚಾ ಸರಣಿಯ ಮೂಲಕ ನಾವು ಶಿಕ್ಷಕರೊಂದಿಗೆ ಸಂವಹನ ನಡೆಸುತ್ತಲೇ, ಕುಟುಂಬದ ಆನ್‌ಲೈನ್ ಅಭ್ಯಾಸಗಳನ್ನು ನಿರ್ವಹಿಸಲು ಪೋಷಕರನ್ನು ಸಜ್ಜುಗೊಳಿಸುವ ದಾರಿಗಳನ್ನು ಹುಡುಕುತ್ತಿದ್ದೇವೆ. ಆ ಮೂಲಕ ಅವರ ಪಾಲಿಗೆ ಉತ್ತಮ ಎನಿಸುವ ರಕ್ಷಣಾ ವಿಧಾನ ಒದಗಿಸುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಬಳಕೆದಾರರ ಸುರಕ್ಷತಾ ಪರಿಸರ ವ್ಯವಸ್ಥೆಯನ್ನು ಬಲಪಡಿಸಲು ನಡೆಯುತ್ತಿರುವ ಪ್ರಯತ್ನಗಳ ಭಾಗವಾಗಿ ಮೆಟಾ ಕಳೆದ ವರ್ಷ ‘ಡಿಜಿಟಲ್ ಸುರಕ್ಷಾ ಶೃಂಗಸಭೆ’ ಅನ್ನು ನಡೆಸಿತ್ತು. ಆ ಮೂಲಕ ಯುವಜನತೆ ಮತ್ತು ಮಹಿಳೆಯರಿಗೆ ಸುರಕ್ಷಿತ ಮತ್ತು ಸಮತೋಲಿತ ಆನ್‌ಲೈನ್ ಅನುಭವವನ್ನು ಒದಗಿಸುವ ಪ್ರಯತ್ನ ಮಾಡಲಾಗಿತ್ತು. ಇದರ ಜತೆಗೆ ಮೆಟಾ, ಆನ್‌ಲೈನ್ ಸುರಕ್ಷತೆ ಮತ್ತು ಡಿಜಿಟಲ್ ಪೌರತ್ವ ಕುರಿತು ಮಾಹಿತಿ, ಜ್ಞಾನ ಮತ್ತು ಶಿಕ್ಷಣದ ಬಗ್ಗೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಸಬಲೀಕರಣಗೊಳಿಸಲು ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ (ಐಟಿಬಿಟಿ) ಇಲಾಖೆಯೊಂದಿಗೆ ಎರಡು ವರ್ಷಗಳ ಪಾಲುದಾರಿಕೆಯನ್ನು ಪ್ರಕಟಿಸಿದೆ.

ಕಳೆದ ಮೂರು ವರ್ಷಗಳಲ್ಲಿ, ಆನ್‌ಲೈನ್ ಸುರಕ್ಷತೆಯನ್ನು ಉತ್ತೇಜಿಸಲು ಮೆಟಾ 50ಕ್ಕೂ ಹೆಚ್ಚು ಸುರಕ್ಷತಾ ಪರಿಕರಗಳು ಮತ್ತು ಫೀಚರ್‌ಗಳನ್ನು ಬಿಡುಗಡೆ ಮಾಡಿದೆ. ಹದಿಹರೆಯದವರ ಸುರಕ್ಷತೆಗಾಗಿ ‘ನೈಟ್ ನಡ್ಜಸ್’ ಎಂಬ ಫೀಚರನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, ಇದು ತಡರಾತ್ರಿಯಲ್ಲಿ ಇನ್ ಸ್ಟಾಗ್ರಾಮ್ ಆಪ್ ಬಳಸುವಾಗ ಆ ಆಪ್ ಅನ್ನು ಷಟ್‌ಡೌನ್ ಮಾಡಲು ಬಳಕೆದಾರರಿಗೆ ಸೂಚಿಸುತ್ತದೆ. ಜತೆಗೆ ‘ಕ್ವೈಟ್ ಮೋಡ್’ ಫೀಚರ್ ಕೂಡ ಇದ್ದು, ಇದು ಹದಿಹರೆಯದ ಬಳಕೆದಾರರಿಗೆ ತಾವು ಆಪ್‌ನಲ್ಲಿ ಕಳೆಯುವ ಸಮಯದ ಮೇಲೆ ಮತ್ತು ಅವರು ಏನು ನೋಡುತ್ತಾರೆ ಎಂಬುದರ ಮೇಲೆ ಹೆಚ್ಚಿನ ನಿಯಂತ್ರಣವನ್ನು ಹೊಂದಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: Viral Video: ಇಂಗ್ಲೀಷ್‌ನಲ್ಲೂ ಮಾತಾಡುತ್ತೆ…ಮಿಮಿಕ್ರಿನೂ ಮಾಡುತ್ತೆ ಈ ಗಿಣಿ; ವಿಡಿಯೋ ನೋಡಿದ್ರೆ ಫಿದಾ ಆಗೋದು ಗ್ಯಾರಂಟಿ!

ಇದಲ್ಲದೆ, ಇನ್ಸ್ಟಾಗ್ರಾಮ್‌ನ ಪೇರೆಂಟಲ್ ಸೂಪರ್ ವಿಷನ್ ಫೀಚರ್ (ಪೋಷಕರ ಮೇಲ್ವಿಚಾರಣಾ ವೈಶಿಷ್ಟ್ಯ) ಮೂಲಕ ಪೋಷಕರು ತಮ್ಮ ಮಕ್ಕಳು ಫಾಲೋ ಮಾಡುವ ಖಾತೆಗಳು, ಅವರ ಮಕ್ಕಳನ್ನು ಫಾಲೋ ಮಾಡುವ ಖಾತೆಗಳನ್ನು ವೀಕ್ಷಿಸಬಹುದು ಮತ್ತು ಅವರ ಆನ್‌ಲೈನ್ ಬಳಕೆಯಲ್ಲಿ ತಮ್ಮನ್ನೂ ಹೆಚ್ಚು ತೊಡಗಿಸಿಕೊಳ್ಳಬಹುದು. ಮೆಟಾದ ‘ಫ್ಯಾಮಿಲಿ ಸೆಂಟರ್’ ಫೀಚರ್ ಪ್ಲಾಟ್‌ಫಾರ್ಮ್‌ಗಳನ್ನು ಸುರಕ್ಷಿತವಾಗಿ ಬಳಸುವುದು ಹೇಗೆ ಎಂಬ ಮಾಹಿತಿಯನ್ನು ಹುಡುಕಲು ಪೋಷಕರು ಮತ್ತು ಹದಿಹರೆಯದವರಿಗೆ ಸಹ ಮಾಹಿತಿ ಒದಗಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

Continue Reading

ವಿಜಯನಗರ

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

MLC Election: ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ಜೂನ್ 01ರ ಸಂಜೆ 06 ಗಂಟೆಯಿಂದ ಜೂ. 03ರ ಮಧ್ಯರಾತ್ರಿಯವರೆಗೆ ವಿಜಯನಗರ ಜಿಲ್ಲೆಯಾದ್ಯಂತ ಸಿಆರ್‌ಪಿಸಿ 1973ರ ಕಲಂ 144ರಡಿ ಹಾಗೂ ಇತರೆ ಜಾರಿಯಲ್ಲಿರುವ ಕಾನೂನು ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಕೆಲವು ಷರತ್ತುಗಳನ್ನು ವಿಧಿಸಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

VISTARANEWS.COM


on

MLC Election North East Graduates Constituency Election Prohibitory order imposed in Vijayanagar district from June 1
Koo

ಹೊಸಪೇಟೆ: ಕರ್ನಾಟಕ ಈಶಾನ್ಯ ಪದವೀಧರರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆಯನ್ನು (MLC Election) ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ಜೂನ್ 01ರ ಸಂಜೆ 06 ಗಂಟೆಯಿಂದ ಜೂ. 03ರ ಮಧ್ಯರಾತ್ರಿಯವರೆಗೆ ವಿಜಯನಗರ ಜಿಲ್ಲೆಯಾದ್ಯಂತ ಸಿಆರ್‌ಪಿಸಿ 1973ರ ಕಲಂ 144ರಡಿ ಹಾಗೂ ಇತರೆ ಜಾರಿಯಲ್ಲಿರುವ ಕಾನೂನು ಅನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಕೆಲವು ಷರತ್ತುಗಳನ್ನು ವಿಧಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ವಿಜಯನಗರ ಜಿಲ್ಲೆಯ ವ್ಯಾಪ್ತಿಯಲ್ಲಿ 05ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ-ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಬೆಂಬಲಿಗರು ಸೇರಿ 05 ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರತಕ್ಕದ್ದಲ್ಲ., ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯೊಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ.

ಇದನ್ನೂ ಓದಿ: Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜಿರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್‌ ಕೆಫೆಗಳನ್ನು ನಿರ್ಬಂಧಿಸಿದೆ. ಕಲ್ಲುಗಳನ್ನು, ಕಾರ ಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಹಾಗೂ ಯಾವುದೇ ದಾಹಕ ವಸ್ತುಗಳನ್ನು ಹಾಗೂ ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಮನುಷ್ಯ ರೂಪದ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಎಲ್ಲಾ ಮತಗಟ್ಟೆ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ ಹಾಗೂ ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದ ಓಲೈಕೆ ಮಾಡುವಂತಿಲ್ಲ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

ಶವಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಮಾರ್ಗಸೂಚಿಗಳನ್ನು ನಿಯಮಗಳನ್ನು ಪಾಲಿಸುವುದು., ಚುನಾವಣಾ ಕಾರ್ಯದಲ್ಲಿ ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆದ ಅಧಿಕಾರಿಗಳು ಸಿಬ್ಬಂದಿ ಹೊರತುಪಡಿಸಿ ಮತಗಟ್ಟೆ ಕೇಂದ್ರಗಳ ಸುತ್ತಲು 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡ್ಲೆಸ್ ಪೋನ್, ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್ ಉಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126ರ ಷರತ್ತುಗಳನ್ನು ಪಾಲಿಸತಕ್ಕದ್ದು., ಮತಗಟ್ಟೆಗಳ ಸುತ್ತಲೂ 100 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್ ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ.

ಇದನ್ನೂ ಓದಿ: Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

ಚುನಾವಣೆಯ ಮತದಾನವು ಅಂತ್ಯಗೊಳ್ಳುವ 48 ಗಂಟೆಗಳ ಪೂರ್ವದಲ್ಲಿ ಚುನಾವಣೆ ಪ್ರಚಾರ ಹಾಗೂ ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಈ ಸಮಯದಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಗಳು ಬಾಗಿಲಿನಿಂದ ಬಾಗಿಲಿಗೆ ಹೋಗಿ ಮತಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಹೋಗುವುದು ನಿರ್ಬಂಧಿಸಿರುವುದಿಲ್ಲ. ಆದರೆ 5 ಜನರಿಗಿಂತ ಹೆಚ್ಚಿನ ಜನರು ಗುಂಪು ಕೂಡಿಕೊಂಡು ಮನೆಯಿಂದ ಮನೆಗೆ ಹೋಗಿ ಮತಯಾಚಿಸುವುದು ನಿರ್ಬಂಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು. ಈ ಆದೇಶವು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Continue Reading
Advertisement
Mobile
ದೇಶ55 mins ago

ಪರೀಕ್ಷೆಗೆ ಓದುವುದು ಬಿಟ್ಟು ಮೊಬೈಲ್‌ನಲ್ಲೇ ತಲ್ಲೀನ; 22 ವರ್ಷದ ಮಗಳನ್ನೇ ಕೊಂದ ತಾಯಿ

Rameshwaram Cafe Blast
ಕರ್ನಾಟಕ58 mins ago

Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಹುಬ್ಬಳ್ಳಿಯಲ್ಲಿ ಇಬ್ಬರು ಎನ್‌ಐಎ ವಶಕ್ಕೆ

LPL 2024
ಪ್ರಮುಖ ಸುದ್ದಿ1 hour ago

LPL 2024 : ಐಪಿಎಲ್ ಎಫೆಕ್ಟ್​, ಸಿಕ್ಕಾಪಟ್ಟೆ ದುಡ್ಡು ಬಾಚಿದ ಮಹೀಶ್ ಪತಿರಾನಾ

Porsche
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಸಬಲರ ಎದುರು ದುರ್ಬಲ ಕಾನೂನು; ಅಮಾಯಕರ ಜೀವಕ್ಕೆ ಬೆಲೆಯೇ ಇಲ್ಲ

Hajj pilgrimage
ಬೆಂಗಳೂರು1 hour ago

Hajj Pilgrimage: ಹಜ್ ಯಾತ್ರಿಗಳನ್ನು ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ; ಹಜ್ ಭವನ ನಿರ್ಮಾಣಕ್ಕೆ ಅನುದಾನ

IPL 2024
ಕ್ರೀಡೆ2 hours ago

IPL 2024 : ಕೆಕೆಆರ್​ 4ನೇ ಬಾರಿ ಐಪಿಎಲ್​​ನ​ ಫೈನಲ್​ಗೆ, ಎಸ್ಆರ್​ಎಚ್​ಗೆ ಇನ್ನೊಂದು ಅವಕಾಶ

Robert Vadra
ದೇಶ2 hours ago

Robert Vadra: ಸ್ವಂತ ಬಲದಿಂದ ರಾಜಕೀಯಕ್ಕೆ ಬರುವೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ ಶಪಥ!

IPL 2024
ಕ್ರೀಡೆ3 hours ago

IPL 2024 : ರನ್​ ಔಟ್​​ ಆಗಿದ್ದಕ್ಕೆ ಸಿಟ್ಟಿಗೆದ್ದ ಕಾವ್ಯಾ ಮಾರನ್​, ಕಣ್ಣೀರು ಹಾಕಿದ ರಾಹುಲ್ ತ್ರಿಪಾಠಿ

Talking Digital Safety for Teens programme by Meta in Bengaluru
ಕರ್ನಾಟಕ3 hours ago

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

MLC Election North East Graduates Constituency Election Prohibitory order imposed in Vijayanagar district from June 1
ವಿಜಯನಗರ3 hours ago

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು12 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು13 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌