Site icon Vistara News

ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಶೀಘ್ರ ತೀರ್ಮಾನ : CM ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ: ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪರಿಶೀಲನೆ ಮಾಡಿದ ನಂತರ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದರು.

ಉಡುಪಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 8ನೇ ವರ್ಷಾಚರಣೆ ಅಂಗವಾಗಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಹಾಗೂ ಇತರರ ಅಭಿಪ್ರಾಯಗಳನ್ನು ಪರಿಗಣಿಸಲಾಗುವುದು. ಈ ಎಲ್ಲ ವಿಚಾರಗಳ ಬಗ್ಗೆ ಸಮಗ್ರ ವರದಿ ಹಾಗೂ ವಾಸ್ತವಾಂಶವನ್ನು ತಿಳಿಸುವಂತೆ ಶಿಕ್ಷಣ ಸಚಿವರಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ವರದಿ ಪಡೆದು, ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು. ನಾಳೆ(ಗುರುವಾರ) ವರದಿ ದೊರೆಯಲಿದ್ದು, ಪಠ್ಯಗಳನ್ನು ವಾಪಸ್ಸು ಪಡೆಯುತ್ತೇವೆ ಎನ್ನುವ ಸಾಹಿತಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಎಸಿಬಿ ಕುರಿತು ಪ್ರತಿಕ್ರಿಯಿಸಿದ ಸಿಎಂ, ಎಸಿಬಿ ಈಗಾಗಲೇ ಬಲವರ್ಧನೆಯಾಗಿದೆ. ಲೋಕಾಯುಕ್ತ ಇದ್ದರೂ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಎಸಿಬಿಗೆ ಆ ಅಧಿಕಾರವಿದೆ ಎಂದರು. ಕರಾವಳಿ ಭಾಗದಲ್ಲಿ ಮತ್ತೊಮ್ಮೆ ಲವ್ ಜಿಹಾದ್ ಸದ್ದುಮಾಡುತ್ತಿರುವ ಬಗ್ಗೆ ಪ್ರತಿಕ್ರಯಿಸಿ, ಇದಕ್ಕಾಗಿ ಕಾನೂನು ರೂಪಿಸಲಾಗಿದ್ದು, ಯಾರೂ ಕಾನೂನು ಉಲ್ಲಂಘನೆ ಮಾಡುವಂತಿಲ್ಲಎಂದು ಹೇಳಿದರು.

ಇದನ್ನೂ ಓದಿ: ಸರ್ಕಾರಿ ನೌಕರರ ಆರೋಗ್ಯ ಸಂಜೀವಿನಿ ಶೀಘ್ರ ಚಾಲನೆ: CM ಬೊಮ್ಮಾಯಿ ಭರವಸೆ

Exit mobile version