Site icon Vistara News

Exam Scam: ಕೆಇಎ ಪರೀಕ್ಷಾ ಅಕ್ರಮ; ಆರ್.ಡಿ. ಪಾಟೀಲ್ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

RD Patil

ಕಲಬುರಗಿ: ಕೆಇಎ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ (Exam Scam) ಕಿಂಗ್‌ಪಿನ್ ಆರ್.ಡಿ. ಪಾಟೀಲ್ ಸೇರಿ ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪೊಲೀಸ್ ಕಸ್ಟಡಿಗೆ ನೀಡುವಂತೆ ತನಿಖಾಧಿಕಾರಿ ಮನವಿ ಮಾಡಿದ್ದರು. ಆದರೆ, ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡದೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ನ್ಯಾಯಾಧೀಶೆ ಸ್ಮಿತಾ ಸೂಚಿಸಿದ್ದಾರೆ.

ಇದಕ್ಕೂ ಮೊದಲು ಆರೋಪಿ‌ಗಳಿಗೆ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಲಾಯಿತು. ವೃತ್ತಿಯಲ್ಲಿ ದೈಹಿಕ‌ ಶಿಕ್ಷಣ ಶಿಕ್ಷಕನಾಗಿರುವ ಆರೋಪಿ ಸಂತೋಷ್‌ ಮೀಡಿಯಾ ಕ್ಯಾಮೆರಾಗಳನ್ನು ಕಂಡು ಭಯಭೀತವಾಗಿದ್ದ. ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಸದ್ಯ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಕರಣದ ಬಗ್ಗೆ ಸಿಐಡಿ ತನಿಖೆ ಚುರುಕುಗೊಳಿಸಿದೆ. ಅಫಜಲಪುರದ ಶಾಲೆಯೊಂದರಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಶಂಕತೆ ಇದೆ. ರಾಯಲ್ ಪಬ್ಲಿಕ್ ಶಾಲೆಯಿಂದ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವ ಅನುಮಾನಗಳಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ | Rajasthan Crime: ಬಾಲಕಿ ಮೇಲೆ ಸಬ್‌ ಇನ್ಸ್‌ಪೆಕ್ಟರ್‌ ಲೈಂಗಿಕ ದೌರ್ಜನ್ಯ; ಕಾಯುವ ಕೈಗಳೇ…

300ಕ್ಕೂ ಹೆಚ್ಚು ಬ್ಲುಟುತ್ ಪೂರೈಕೆ?

ಎಫ್‌ಡಿಎ ಪರೀಕ್ಷೆಗೆ 300ಕ್ಕೂ ಹೆಚ್ಚು ಬ್ಲೂಟೂತ್ ಪೂರೈಕೆ ಮಾಡಲಾಗಿತ್ತು ಎಂಬ ವಿಷಯ ತಿಳಿದುಬಂದಿದೆ. 300ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಬ್ಲುಟೂತ್ ಪೂರೈಕೆಗೆ ಡೀಲ್‌ ನಡೆದಿತ್ತು ಎನ್ನಲಾಗಿದ್ದು, ಈ ಬಗ್ಗೆ ತನಿಖಾಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ.

ಆರ್‌.ಡಿ. ಪಾಟೀಲ್‌ ಬೆಂಬಲಿಗರಿಂದಲೇ ಬ್ಲೂಟೂತ್ ಪೂರೈಕೆ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಮತ್ಯಾವ ಜಿಲ್ಲೆಯ ಕೇಂದ್ರಗಳಲ್ಲಿ ಬ್ಲೂಟೂತ್ ಬಳಕೆ ಮಾಡಲಾಗಿದೆ ಎಂಬುವುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. 20 ರಿಂದ 25 ಅಭ್ಯರ್ಥಿಗಳಿಗೆ ಬ್ಲೂಟೂತ್ ಪೂರೈಕೆ ಮಾಡಲು ತಲಾ ಒಬ್ಬ ಮಧ್ಯವರ್ತಿಯನ್ನು ನಿಯೋಜಿಸಲಾಗಿತ್ತು ಎನ್ನಲಾಗಿದೆ.

ಕೆಇಎ ಪರೀಕ್ಷಾ ಅಕ್ರಮ ಪ್ರಕರಣ ಸಿಐಡಿಗೆ ಹಸ್ತಾಂತರ

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮ ಪ್ರಕರಣದ (Exam Scam) ತನಿಖೆಯನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ. ಪರೀಕ್ಷಾ ಅಕ್ರಮದ ಕಿಂಗ್‌ಪಿನ್‌ ಆರ್​.ಡಿ. ಪಾಟೀಲ್​ ಬಂಧನವಾದ ಬೆನ್ನಲ್ಲೇ ಗೃಹ ಇಲಾಖೆ ಸೂಚನೆ ಮೇರೆಗೆ ಪ್ರಕರಣದ ತನಿಖೆ ಹೊಣೆಯನ್ನು ಸಿಐಡಿಗೆ ನೀಡಲಾಗಿದೆ.

ಕೆಇಎ ಪರೀಕ್ಷಾ ಅಕ್ರಮ ಪ್ರಕರಣ ಸಂಬಂಧ ಯಾದಗಿರಿ ನಗರ ಠಾಣೆಯಲ್ಲಿ 5 ಪ್ರಕರಣಗಳು ದಾಖಲಾಗಿದ್ದವು. ತನಿಖೆಗಾಗಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹೀತೇಂದ್ರ ಅವರು ಸಿಐಡಿ ತನಿಖಾಧಿಕಾರಿಗೆ ಪ್ರಕರಣದ ಕಡತಗಳನ್ನು ಹಸ್ತಾಂತರ ಮಾಡಿದ್ದಾರೆ.

ಕೆಇಎ ಪರೀಕ್ಷೆ ಅಕ್ರಮ ಆರೋಪಿ ಕಿಂಗ್​ಪಿನ್​ ಆರ್​.ಡಿ ಪಾಟೀಲ್​ ಕಳೆದ 12 ದಿನಗಳಿಂದ ನಾಪತ್ತೆಯಾಗಿದ್ದ. ನ 6. ರಂದು ಕಲಬುರಗಿ ನಗರದ ವರ್ಧಾ ಲೇಔಟ್‌ನ ಮಹಾಲಕ್ಷ್ಮಿ ಅಪಾರ್ಟ್ಮೆಂಟ್‌ನ ಕಾಂಪೌಂಡ್ ಹಾರಿ ಆರ್‌.ಡಿ. ಪಾಟೀಲ್ ಎಸ್ಕೇಪ್ ಆಗಿದ್ದ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ, ಶುಕ್ರವಾರ ಮಹಾರಾಷ್ಟ್ರದ ಸೊಲ್ಲಾಪುರಲ್ಲಿ ಸಿಕ್ಕಿಬಿದ್ದಿದ್ದ. ಸದ್ಯ ಆತನನ್ನು ಬಂಧಿಸಿ ಕಲಬುರಗಿಗೆ ತರಲಾಗಿದೆ.

ಇದನ್ನೂ ಓದಿ | Chaitra Fraud Case : ಅಭಿನವ ಹಾಲಶ್ರೀ ಸ್ವಾಮೀಜಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ

ಅಕ್ಟೋಬರ್‌ 28 ಮತ್ತು 29ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination authority-KEA) ನಡೆಸಿದ ನಿಗಮ ಮತ್ತು ಮಂಡಳಿ ನೇಮಕಾತಿ ಪರೀಕ್ಷೆಯ (Exam Scam) ವೇಳೆ ಕೆಲ ಅಭ್ಯರ್ಥಿಗಳು ಬ್ಲೂ ಟೂತ್‌ ಬಳಸಿ ಸಿಕ್ಕಿಬಿದ್ದಿದ್ದರು. ನಂತರ ಪರೀಕ್ಷಾ ಅಕ್ರಮದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣದಲ್ಲಿ ಹಲವರ ಬಂಧನವಾಗಿದ್ದು, ವಿಚಾರಣೆ ನಡೆಯುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version