R Dhruvanarayana : ಸಭ್ಯತೆಯ ಸವ್ಯಸಾಚಿ, ಶುದ್ಧ- ಮೌಲ್ಯಾಧರಿತ ರಾಜಕಾರಣದ ʻಧ್ರುವʼ ನಕ್ಷತ್ರ ಕಣ್ಮರೆ - Vistara News

ಕರ್ನಾಟಕ

R Dhruvanarayana : ಸಭ್ಯತೆಯ ಸವ್ಯಸಾಚಿ, ಶುದ್ಧ- ಮೌಲ್ಯಾಧರಿತ ರಾಜಕಾರಣದ ʻಧ್ರುವʼ ನಕ್ಷತ್ರ ಕಣ್ಮರೆ

ಜನಪರ ಮಾತ್ರವಲ್ಲ ಎಲ್ಲ ಪಕ್ಷ, ನಾಯಕರ ಜತೆಗೂ ಅತ್ಯುತ್ತಮ ಬಾಂಧವ್ಯ ಹೊಂದಿದ್ದವರು ಆರ್‌. ಧ್ರುವನಾರಾಯಣ (R Dhruvanarayana). ಸಭ್ಯ ರಾಜಕಾರಣಕ್ಕೆ, ಒಳ್ಳೆಯತನಕ್ಕೆ ಮತ್ತೊಂದು ಹೆಸರು

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಪರಿಶುದ್ಧ ರಾಜಕಾರಣ, ಸಭ್ಯ ನಡೆ-ನುಡಿಗಳಿಗೆ ಹೆಸರಾಗಿದ್ದ ಚಾಮರಾಜ ನಗರದ ಕಾಂಗ್ರೆಸ್‌ ನಾಯಕ ಆರ್‌. ಧ್ರುವ ನಾರಾಯಣ(62) ಕಣ್ಮರೆಯಾಗಿದ್ದಾರೆ (R Dhruvanarayana). ಈ ಮೂಲಕ ಶುದ್ಧ-ಮೌಲ್ಯಾಧರಿತ ರಾಜಕೀಯದ ಧ್ರುವ ನಕ್ಷತ್ರವೊಂದು ಕಳಚಿಬಿದ್ದಂತಾಗಿದೆ.

ವಿದ್ಯಾರ್ಥಿ ನಾಯಕರಾಗಿ ನಾಯಕತ್ವದ ಪಟ್ಟುಗಳನ್ನು ಬೆಳೆಸಿಕೊಂಡು ಕಾಂಗ್ರೆಸ್‌ ಪಕ್ಷದ ಮೂಲಕ ರಾಜಕಾರಣವನ್ನು ಪ್ರವೇಶಿಸಿದ ಧ್ರುವನಾರಾಯಣ ಅವರು ಎರಡು ಸೋಲು ಮತ್ತು ನಾಲ್ಕು ಗೆಲುವುಗಳ ನಡುವೆ ಜೀಕಿದವರು. ಎರಡು ಬಾರಿ ವಿಧಾನಸಭೆಗೆ, ಎರಡು ಬಾರಿ ಲೋಕಸಭೆಗೆ ಆಯ್ಕೆಯಾದವರು. ಸದ್ಯ ರಾಜ್ಯ ಕಾಂಗ್ರೆಸ್‌ನಲ್ಲಿ ಕಾರ್ಯಾಧ್ಯಕ್ಷರಾಗಿ ತಂತ್ರಗಾರಿಕೆ ಹೆಣೆಯುತ್ತಿರುವ ಹೊತ್ತಿನಲ್ಲೇ ಹೃದಯಾಘಾತದಿಂದ ಕಾಲವಶರಾಗಿದ್ದಾರೆ. 2004ರಲ್ಲಿ ಕೇವಲ ಒಂದೇ ಒಂದು ಮತದಿಂದ ಗೆಲ್ಲುವ ಮೂಲಕ ಇಡೀ ದೇಶದಲ್ಲಿ ಗಮನ ಸೆಳೆದ ಧ್ರುವನಾರಾಯಣ ಅವರು ತಮ್ಮ ಉತ್ತಮ ನಡವಳಿಕೆಗಳ ಮೂಲಕವೂ ಜನಮಾನದಲ್ಲಿ ಶಾಶ್ವತ ನೆನಪುಗಳನ್ನು ಬಿಟ್ಟುಹೋಗಿರುವ ನಾಯಕ.

ಕಾಂಗ್ರೆಸ್‌ ಪ್ರಚಾರ ಕಾರ್ಯಕ್ರಮದಲ್ಲಿ

ಯಾವತ್ತೂ ವಿರೋಧಿಗಳ ಬಗ್ಗೆ ಕೆಟ್ಟ ಮಾತುಗಳನ್ನು ಆಡದೆ, ಕುತಂತ್ರಗಳನ್ನು ಮಾಡದೆ ನೇರ ರಾಜಕೀಯದ ಮೂಲಕವೇ ತಮ್ಮ ದಿಟ್ಟ ಹೆಜ್ಜೆಗಳನ್ನು ಇಟ್ಟವರು ಧ್ರುವನಾರಾಯಣ ಎನ್ನುವುದು ಇಡೀ ರಾಜಕೀಯ ವಲಯದಲ್ಲಿ ಒಪ್ಪುವಂತ ಮಾತು. ಯಾವತ್ತೂ ತಾಳ್ಮೆ ಕಳೆದುಕೊಳ್ಳದೆ, ಸೋತರೂ ದ್ವೇಷ ಸಾಧಿಸದೆ ಪಕ್ಷದೊಳಗೆ ಮಾತ್ರವಲ್ಲ ವಿರೋಧ ಪಕ್ಷದಲ್ಲೂ ಗೌರವವನ್ನು ಪಡೆದುಕೊಂಡಿದ್ದ ಸಜ್ಜನಿಕೆಯ ವ್ಯಕ್ತಿತ್ವ ಧ್ರುವನಾರಾಯಣ ಅವರದು.

ಕೃಷಿ ಪದವೀಧರ ರಂಗಸ್ವಾಮಿ ಧ್ರುವನಾರಾಯಣ

ಚಾಮರಾಜ ನಗರ ಜಿಲ್ಲೆಯ ಹಗ್ಗವಾಡಿ ಗ್ರಾಮದಲ್ಲಿ 1961ರ ಜುಲೈ 31ರಂದು ಜನಿಸಿದ ಧ್ರುವ ನಾರಾಯಣ ಅವರು ಕೇವಲ ರಾಜಕಾರಣಿಯಲ್ಲ. ಅವರೊಬ್ಬ ಕೃಷಿ ವಿಜ್ಞಾನಿ ಕೂಡಾ. ಬೆಂಗಳೂರು ಕೃಷಿ ವಿಶ್ವ ವಿದ್ಯಾಲಯದಲ್ಲಿ ಕೃಷಿಯಲ್ಲಿ ಬಿಎಸ್‌ಸಿ ಮತ್ತು ಎಂಎಸ್‌ಸಿ ಪದವಿಯನ್ನು ಪಡೆದಿದ್ದ ಅವರು ಕಾಲೇಜು ಜೀವನದಲ್ಲೇ ನಾಯಕತ್ವದ ಗುಣಗಳನ್ನು ತೋರಿಸಿದ್ದರು. ಕೃಷಿಯ ವಿಚಾರದಲ್ಲೂ ಅಪಾರ ಜ್ಞಾನವನ್ನು ಹೊಂದಿದ್ದರು.

ದೇವರ ಮುಂದೆ ಧ್ರುವನಾರಾಯಣ

1983ರಲ್ಲಿ ರಾಜಕೀಯ ಪ್ರವೇಶ

1983ರಲ್ಲಿ ಕಾಂಗ್ರೆಸ್‌ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಸೇರಿದ್ದರು. 1984ರಲ್ಲಿ ಹೆಬ್ಬಾಳದ ಕೃಷಿ ವಿವಿಯ ವಿದ್ಯಾರ್ಥಿ ನಾಯಕನಾಗಿ ಆಯ್ಕೆಯಾದ ಅವರು ಮುಂದೆ ಅದೇ ವರ್ಷ ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟನೆಯಾದ ಎನ್‌ಎಸ್‌ಯುಐನ ಬೆಂಗಳೂರು ನಗರಾಧ್ಯಕ್ಷರಾಗಿ ಆಯ್ಕೆಯಾದರು.

1986ರಲ್ಲಿ ಅವರು ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿ ಹೊಸ ಜೀವನಕ್ಕೆ ಕಾಲಿಟ್ಟರು.

ಅವರ ಚುನಾವಣಾ ರಾಜಕೀಯ ಆರಂಭವಾಗಿದ್ದು 1999ರಲ್ಲಿ ಸಂತೇಮಾರಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಅವರು ಜೆಡಿಯು ಅಭ್ಯರ್ಥಿ ಎ.ಆರ್‌. ಕೃಷ್ಣಮೂರ್ತಿ ಅವರ ವಿರುದ್ಧ ಸೋಲನ್ನು ಅನುಭವಿಸಿದ್ದರು. ಆದರೆ, ಅದೇ ಕ್ಷೇತ್ರ ಮತ್ತು ಅದೇ ಕೃಷ್ಣಮೂರ್ತಿ ಅವರ ವಿರುದ್ಧ 2004ರ ಚುನಾವಣೆಯಲ್ಲಿ ಒಂದು ಮತದಿಂದ ಗೆಲುವು ಸಾಧಿಸಿದ್ದು ಚರಿತ್ರೆಯಾಗಿ ದಾಖಲಾಯಿತು.

ಮಾಜಿ ಸಚಿವ ಪಿ. ಚಿದಂಬರಂ ಅವರಿಗೆ ಅಭಿವೃದ್ಧಿಗಾಗಿ ಮನವಿ

2008ರಲ್ಲಿ ಅವರು ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ 11,800 ಮತಗಳಿಂದ ಗೆದ್ದರು. 2009ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ 4020 ಮತಗಳಿಂದ ಗೆದ್ದ ಅವರು 2014ರ ಹೊತ್ತಿಗೆ ಗೆಲುವಿನ ಅಂತರವನ್ನು 1,41,182 ಮತಗಳಿಗೆ ವಿಸ್ತರಿಸುವಲ್ಲಿ ಯಶಸ್ವಿಯಾಗಿದ್ದರು. ಅದರೆ, 2019ರ ಚುನಾವಣೆಯಲ್ಲಿ ಅವರು ಬಿಜೆಪಿಯ ಶ್ರೀನಿವಾಸ್‌ ಪ್ರಸಾದ್‌ ಅವರ ವಿರುದ್ಧ ಸೋಲು ಕಾಣಬೇಕಾಯಿತು. ಆದರೆ, ಪ್ರಬಲ ಮೋದಿ ಅಲೆಯ ನಡುವೆಯೂ ಅವರು ಸೋತಿದ್ದು ಕೇವಲ 12,716 ಮತಗಳಿಂದ ಎಂಬುದು ವಿಶೇಷ.

ಇವತ್ತು ಧ್ರುವ ನಾರಾಯಣ ಅವರದು ಕಾಂಗ್ರೆಸ್‌ನಲ್ಲಿ ದೊಡ್ಡ ಹೆಸರು. ಯಾವುದೆ ಕಾರ್ಯತಂತ್ರಗಳಲ್ಲಿ ಅವರಿಗೆ ಮುಂಚೂಣಿ ಸ್ಥಾನ. ದಾಖಲೆಗಳೊಂದಿಗೆ ಮಾತನಾಡಬಲ್ಲ ಈ ಶಕ್ತಿವಂತ ರಾಜಕಾರಣಿ, ವಿರೋಧ ಪಕ್ಷದವರನ್ನೂ ಗೌರವದಿಂದಲೇ ಕಾಣುವ ಗುಣವನ್ನು ಹೊಂದಿದ್ದಾರೆ. ಹೀಗಾಗಿ ಅವರು ಎಲ್ಲ ಪಕ್ಷ, ರಾಜಕಾರಣಿಗಳ ನಡುವೆ ಒಂದು ರೀತಿಯ ಅಜಾತಶತ್ರು.

ಕೇಂದ್ರದಲ್ಲಿ ಸಚಿವರಾಗಿದ್ದ ಪ್ರಣಬ್‌ ಮುಖರ್ಜಿ ಅವರಿಗೆ ಮನವಿ ಸಲ್ಲಿಕೆ

ಅತ್ಯುತ್ತಮ ಕೆಲಸಗಾರ ಧ್ರುವನಾರಾಯಣ

ಧ್ರುವ ನಾರಾಯಣ ಅವರು ಕೇವಲ ಸಭ್ಯ ರಾಜಕಾರಣಿಯಾಗಿ ಮಾತ್ರವಲ್ಲ ಉತ್ತಮ ಕೆಲಸಗಾರನಾಗಿಯೂ ಗಮನ ಸೆಳೆದವರು. ಅವರು ಶಾಸಕರಾಗಿ ಮತ್ತು ಲೋಕಸಭಾ ಸದಸ್ಯರಾಗಿ ಅತ್ಯುತ್ತಮ ಕೆಲಸ ಮಾಡಿದವರು. ಸಂಸದರ ನಿಧಿಯನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಂಡ ಹೆಗ್ಗಳಿಕೆ.

ಸೋಲು ಮತ್ತು ಗೆಲುವುಗಳ ನಡುವೆ

ಧ್ರುವನಾರಾಯಣ ಅವರ ಚುನಾವಣಾ ರಾಜಕೀಯ ಆದಿ ಮತ್ತು ಅಂತ್ಯದ ಎರಡು ಸೋಲು ಮತ್ತು ನಡುವಿನ ನಾಲ್ಕು ಗೆಲುವುಗಳ ನಡುವೆ ಜೀಕಾಡಿದೆ.

1999: ವಿಧಾನಸಭಾ ಚುನಾವಣೆ- ಸಂತೇಮಾರಹಳ್ಳಿಯಲ್ಲಿ ಎ.ಆರ್‌. ಕೃಷ್ಣಮೂರ್ತಿ ವಿರುದ್ಧ ಸೋಲು
2004: ವಿಧಾನಸಭಾ ಚುನಾವಣೆ-ಸಂತೇಮಾರಹಳ್ಳಿಯಲ್ಲಿ ಎ.ಆರ್‌. ಕೃಷ್ಣಮೂರ್ತಿ ವಿರುದ್ಧ 1 ಮತದ ಗೆಲುವು
2008: ವಿಧಾನಸಭಾ ಚುನಾವಣೆ-ಕೊಳ್ಳೇಗಾಲ ಕ್ಷೇತ್ರದಲ್ಲಿ 11,800 ಮತಗಳಿಂದ ಗೆಲುವು
2009: ಲೋಕಸಭಾ ಚುನಾವಣೆ- ಚಾಮರಾಜ ನಗರದ ಕ್ಷೇತ್ರದಲ್ಲಿ 4080 ಮತಗಳಿಂದ ಗೆಲುವು
2014: ಲೋಕಸಭಾ ಚುನಾವಣೆ- ಚಾಮರಾಜ ನಗರದ ಕ್ಷೇತ್ರದಲ್ಲಿ 1,41,182 ಮತಗಳಿಂದ ಗೆಲುವು
2019: ಲೋಕಸಭಾ ಚುನಾವಣೆ- ಚಾಮರಾಜ ನಗರದ ಕ್ಷೇತ್ರದಲ್ಲಿ 12,716 ಮತಗಳಿಂದ ಸೋಲು

ಇದನ್ನೂ ಓದಿ : R Dhruvanarayan: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೃದಯಾಘಾತದಿಂದ ನಿಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕರ್ನಾಟಕ

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಅವರು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ ಅದು ವಿಫಲವಾಯಿತು. ಕ್ಷೇತ್ರ ಮರುವಿಂಗಡನೆ ಮಾಡದೆಯೇ ಮಹಿಳಾ ಮೀಸಲಾತಿ ಒಂದೇ ಮಂಡನೆಯಾಗಿದ್ದರೆ ಅಂಗೀಕಾರವಾಗುತ್ತಿತು. ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ ಎಂದರು. ಕೇಂದ್ರ ಸರ್ಕಾರ ಇದರಲ್ಲಿ ರಾಜಕೀಯ ಮಾಡಿದ್ದಾರೆ ಎಂದು ದೂರಿದರು.

Continue Reading

ಪ್ರಮುಖ ಸುದ್ದಿ

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

VISTARANEWS.COM


on


ಜೈ ಶ್ರೀ ಗುರುದೇವ್‌,
ನಾಡಿನ ಎಲ್ಲಾ ಕನ್ನಡದ ಸೃಜನಶೀಲ ಮನಸುಗಳಿಗೆ ನಮಸ್ಕಾರ.
ಭಾಷೆ ನಮ್ಮ ಬದುಕು, ಭಾಷೆಯೊಂದಿಗೆ ಅನುಸಂಧಾನ ಮಾಡಿಕೊಂಡು ಕೆಲಸ ಮಾಡುವ ಮಾಧ್ಯಮವೇ ಪತ್ರಿಕೋದ್ಯಮ. ಪತ್ರಿಕಾ ಮಾಧ್ಯಮದಲ್ಲಿ ಸೇವೆ ಸಲ್ಲಿಸಬೇಕು ಎನ್ನುವುದು ನನ್ನ ಹಲವು ಕಾಲದ ಅಭಿಲಾಷೆಯಾಗಿತ್ತು. ಪರಮಾತ್ಮನ ದಯೆಯಿಂದ ಹಾಗೂ ಗುರುಗಳ ಕೃಪೆಯಿಂದ ಆ ಸದವಕಾಶ ಈಗ ಒದಗಿ ಬಂದಿದೆ. ಕನ್ನಡಿಗರ ಧ್ವನಿಯಾಗಿ ಮುಖ್ಯವಾಹಿನಿ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಲು ನಾವು ʻಪಿಎನ್‌ಎಸ್‌ ವಿಸ್ತಾರʼ ಸುದ್ದಿವಾಹಿನಿಯನ್ನು ಪುನರಾರಂಭಿಸುತ್ತಿದ್ದೇವೆ. ʻಪಿಎನ್‌ಎಸ್‌ ವಿಸ್ತಾರʼ ನ್ಯೂಸ್‌ ಕನ್ನಡ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಈಗಾಗಲೆ ತನ್ನದೇ ಆದ ಒಂದು ಬ್ರಾಂಡ್‌ ಸೃಷ್ಟಿಸಿಕೊಂಡಿದ್ದ ಸುದ್ದಿ ವಾಹಿನಿ, ಕಾರಣಾಂತರಗಳಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿತ್ತು. ಒಂದು ವಿಶೇಷ ಹಾಗೂ ವಿಭಿನ್ನ ಕಾರ್ಯಯೋಜನೆಯೊಂದಿಗೆ ನಾವು ಮರಳಿ ಬರುತ್ತಿದ್ದೇವೆ. ಕನ್ನಡ ನಾಡಿನ ಬಂಧುಗಳ ಕಷ್ಟ-ನಷ್ಟಗಳ ಕುರಿತು ವಸ್ತುನಿಷ್ಟ ವರದಿ ಮಾಡಲು, ಕನ್ನಡ ನಾಡಿನ ಸಂಸ್ಕೃತಿ ಸಾರಗಳನ್ನು ಜಗತ್ತಿನಾದ್ಯಂತ ಪಸರಿಸಲು, ಕನ್ನಡದ ನುಡಿಸಿರಿಯ ವೈವಿಧ್ಯತೆಯನ್ನು ವರ್ಣಿಸಲು ಸರ್ವಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಸುದ್ದಿ ಜಗತ್ತಿನ ನಿಖರ ವರ್ತಮಾನಗಳನ್ನು ನಿರ್ಭೀತಿಯಿಂದ ನಿಮ್ಮ ಮುಂದಿಡಲು ನಾವು ಸಿದ್ಧರಾಗಿದ್ದೇವೆ. ಜನಸಾಮಾನ್ಯರ ಪ್ರತಿನಿಧಿಯಾಗಿ ಆಳುವ ಪ್ರಭುತ್ವವನ್ನು ಧೈರ್ಯದಿಂದ ಪ್ರಶ್ನಿಸಲು ನಾವು ಸಿದ್ಧರಾಗಿದ್ದೇವೆ. ಕರ್ನಾಟಕದ ನಾಡು-ನುಡಿ, ನೆಲ, ಜಲ, ಸಂಸ್ಕೃತಿಗಳ ಹಿತರಕ್ಷಣೆಗಾಗಿ ಸಂಕಲ್ಪಿಸಿಕೊಂಡಿದ್ದೇವೆ. ನಾವು ಕೇವಲ ಸುದ್ದಿಗಳನ್ನು ಪ್ರಾಮಾಣಿಕವಾಗಿ ವರದಿ ಮಾಡುತ್ತೇವೆ. ಮಾಹಿತಿಯೊಂದಿಗೆ ಮನೋರಂಜನೆ ಎಂಬ ವಿಶೇಷ ಆಯಾಮವನ್ನು ನಮ್ಮ ಮಾಧ್ಯಮದಲ್ಲಿ ಪ್ರಸ್ತುತ ಪಡಿಸಲಿದ್ದೇವೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ವರ್ಷಗಳ ಅನುಭವ ಹೊಂದಿರುವ ಹಿರಿಯ, ಅನುಭವಿ, ಪ್ರಾವೀಣ್ಯತೆ ಹೊಂದಿರುವ ತಂಡ ನಮ್ಮೊಂದಿಗೆ ಕೆಲಸ ಮಾಡುತ್ತಿದೆ. ಪ್ರಸ್ತುತ ವಿದ್ಯಮಾನ, ರಾಜಕೀಯ, ಸಿನಿಮಾ-ಕಲೆ, ಕ್ರೀಡೆ, ಸಂಸ್ಕೃತಿ-ಸಂಪ್ರದಾಯ, ಆಚಾರ-ವಿಚಾರ, ಜೀವನಶೈಲಿ, ಇತಿಹಾಸ-ಪುರಾಣ, ಪದ್ಧತಿ-ಪರಂಪರೆ, ಭಾಷೆಯ ಸೊಗಡು ಮತ್ತು ಆಹಾರ ಕ್ರಮಗಳು, ನದಿ- ಪರಿಸರ ಅರಣ್ಯ- ಜೀವವೈವಿಧ್ಯ ಸೇರಿದಂತೆ ಹತ್ತಾರು ವಿಷಯಗಳ ಬಗ್ಗೆ ನಾವು ನಮ್ಮ ವಾಹಿನಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮ ಮುಂದೆ ತರಲಿದ್ದೇವೆ. ನಮ್ಮ ನಾಡಿನ ಕ್ರಿಯಾಶೀಲ, ಸೃಜನಶೀಲ ಮನಸುಗಳಿಗೆ ಅತ್ಯಂತ ಆಹ್ಲಾದಕಾರಿ ಸುದ್ದಿ ಸಂಗತಿಗಳನ್ನು ಉಣಬಡಿಸಬೇಕು ಅನ್ನುವುದಷ್ಟೆ ನಮ್ಮ ಕಳಕಳಿ. ಈ ನಿಟ್ಟಿನಲ್ಲಿ ನಮ್ಮ ʻಪಿಎನ್‌ಎಸ್‌ ವಿಸ್ತಾರʼ ನ್ಯೂಸ್‌ ತಂಡ ಕಳೆದ ಕೆಲವು ತಿಂಗಳಿನಿಂದ ಕಠಿಣ ಪರಿಶ್ರಮ ನಡೆಸುತ್ತಿದೆ. ಎಲ್ಲಾ ವಯೋಮಾನದವರ, ಎಲ್ಲಾ ವರ್ಗದವರ ಮತ್ತು ಎಲ್ಲಾ ರೀತಿಯ ಮನಸ್ಥಿತಿಯ ಜನಸಮುದಾಯವನ್ನು ತಲುಪಬೇಕು ಅನ್ನುವುದು ನಮ್ಮ ಹಿರಿಯಾಸೆ. ಕನ್ನಡಿಗರ ಆದ್ಯತೆಯ ವಿಷಯಗಳನ್ನು ಆಯ್ದು ನಮ್ಮ ಮಾಧ್ಯಮದಲ್ಲಿ ಪ್ರಸಾರ ಮಾಡಲು ಕಾರ್ಯಯೋಜನೆ ರೂಪಿಸಿಕೊಂಡಿದ್ದೇವೆ. ಈಗ ಬೇಕಿರುವುದು ನಿಮ್ಮ ಶುಭ ಹಾರೈಕೆ ಮಾತ್ರ. ನೀವು ನಮ್ಮೊಂದಿಗಿರಿ ಸಾಕು, ನಾವು ನಿಮಗಾಗಿ ದಿನದ ೨೪ ಗಂಟೆ, ವಾರದ ೭ ದಿನ, ವರ್ಷದ ೩೬೫ ದಿನಗಳು ಸೇವೆ ಸಲ್ಲಿಸಲು ಶತಸಿದ್ಧ.

ಕರುನಾಡಿನ ಸಮಸ್ತ ಕನ್ನಡಿಗರಿಗೆ ನನ್ನ ಧನ್ಯವಾದಗಳು

ಸದಾ ನಿಮ್ಮ ಸೇವೆಯಲ್ಲಿ.
-ಹೆಚ್.ಜಿ ಪವಿತ್ರ ಗೌಡ, ‌ಸಿಇಒ, ಪಿಎನ್‌ಎಸ್‌ ವಿಸ್ತಾರ ನ್ಯೂಸ್

Continue Reading

ಕೊಡಗು

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Kodagu News : ಈ ಬಾರಿ ಮುದ್ದಂಡ ಕುಟುಂಬಕ್ಕೆ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಜವಬ್ದಾರಿ ಹೆಗಲೇರಿದ್ದು ಪಂದ್ಯಾವಳಿಯಲ್ಲಿ ಅಚ್ಚುಕಟ್ಟಾಗಿ ಆಯೋಜಿಸುವ ಗುರಿ ಹೊಂದಿದ್ದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ 25ನೇ ವರ್ಷದ ಪಂದ್ಯಾವಳಿ ಅಯೋಜಿಸಲಾಗಿದೆ.

VISTARANEWS.COM


on

Kodava Family Hockey Tournament Website Launched

ಕೊಡಗು: 25ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೆಬ್ ಸೈಟ್ ಲೋಕಾರ್ಪಣೆ ಕಾರ್ಯಕ್ರಮ ಮಡಿಕೇರಿ ಹೊರ ವಲಯದ ಖಾಸಗಿ ರೆಸಾರ್ಟ್ ನಲ್ಲಿ (Kodagu News ) ನಡೆಯಿತು. ಪ್ರತಿ ವರ್ಷ ಕೂಡ ಒಂದೊಂದು ಕುಟುಂಬಗಳು ಪಂದ್ಯಾಟ ಆಯೋಜಿಸುವ ಜವಬ್ದಾರಿ ಹೊತ್ತುಕೊಳ್ಳುತ್ತೆ. ಈ ಬಾರಿ ಮುದ್ದಂಡ ಕುಟುಂಬಕ್ಕೆ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ಜವಬ್ದಾರಿ ಹೆಗಲೇರಿದ್ದು ಪಂದ್ಯಾವಳಿಯಲ್ಲಿ ಅಚ್ಚುಕಟ್ಟಾಗಿ ಆಯೋಜಿಸುವ ಗುರಿ ಹೊಂದಿದ್ದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ 25ನೇ ವರ್ಷದ ಪಂದ್ಯಾವಳಿ ಅಯೋಜಿಸಲಾಗಿದೆ.

ಮೊದಲಿಗೆ ದೀಪ ಬೆಳಗುವ ಮೂಲಕ ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ‌ 2025 ನೇ ಮುದಂಡ ಕ್ರಿಕೇಟ್ ಪಂದ್ಯಾವಳಿಯ ವೆಬ್ ಸೈಟ್ ಲಾಂಚ್ ಮಾಡಿದ್ದು ಎಲ್ಲಾ ರೀತಿಯ ಮಾಹಿತಿಯನ್ನ ವೆಬ್ ಸೈಟ್ ನಲ್ಲಿ ಪಡೆದುಕೊಳ್ಳಬಹುದಾಗಿದೆ.

ಹಾಕಿ ಪಂದ್ಯಾವಳಿಯ ಗೌರವ ಅಧ್ಯಕ್ಷರಾದ ಎಂಬಿ ದೇವಯ್ಯ ಮಾತನಾಡಿ ಮುದ್ದಂಡ ಕುಟುಂಬದ ಹಿರಿಯರು ಹಾಕಿ ಅಕಾಡೆಮಿ ಸಹಕಾರದಲ್ಲಿ ಈ ಬಾರಿ ಹಾಕಿ ಉತ್ಸವವನ್ನು ಯಶಸ್ವಿಯಾಗಿ ನಡೆಸಲು ನಿರ್ಧರಿಸಿದ್ದೇವೆ. ಈಗಾಗಲೇ ಸಮಿತಿಯನ್ನು ರಚನೆ ಮಾಡಿದ್ದೇವೆ. ಕೆಲಸಗಳನ್ನು ಆರಂಭಿಸಿದ್ದು, ಎಲ್ಲರು ಸಹಕಾರ ನೀಡುವಂತೆ ಮನವಿ ಮಾಡಿದರು. 25ನೇ ವರ್ಷದ ಕಾರ್ಯಕ್ರಮ ಆಯೋಜನೆಗೆ ನಮಗೆ ಸಿಕ್ಕಿರೋದು ಬಹಳ ಸಂತೋಷವಿದ್ದು ಎಲ್ಲವನ್ನು ಅಚ್ಚುಕಟ್ಟಾಗಿ ಮಾಡುವ ಗುರಿ ಹೊಂದಿದೆ.

Kodava Family Hockey Tournament Website Launched

ಕಾರ್ಯಕ್ರಮದಲ್ಲಿ ಕೊಡಗು ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಬೋಪಣ್ಣ, ಸ್ಥಳೀಯ ದಿನಪತ್ರಿಕೆ ಪ್ರಧಾನ ಸಂಪಾದಕರಾದ ಜಿ. ರಾಜೇಂದ್ರ,ಉಳ್ಳಿಯಡ ಪೂವಯ್ಯ, ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿತಾ ರೈ,ಮುದ್ದಂಡ ಸ್ಪೋರ್ಟ್ಸ್ ಅ್ಯಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುದ್ದಂಡ ರಶಿತ್ ಸುಬ್ಬಯ್ಯ,
ಅತಿಥಿಗಳಾಗಿ ಕುಟುಂಬದ ಪಟ್ಟೆದಾರ ಡಾಲಿ ತಿಮ್ಮಯ್ಯ, ಡೀನ್ ಬೋಪಣ್ಣ, ಉಪಾಧ್ಯಕ್ಷ ಅಶೋಕ್, ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ,ಆದ್ಯ ಪೊನ್ನಣ್ಣ ,ರಂಜಿತ್ ಪೊನ್ನಪ್ಪ, ಚಂಗಪ್ಪ, ದಿವ್ಯ ಪ್ರಮುಖರು ಇದ್ದರು

Continue Reading

ಬೆಂಗಳೂರು

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Bengaluru News : 21 ನೇ ವಯಸ್ಸಿನಲ್ಲಿ, “ಕಿರಿಯ ಸೌಂದರ್ಯ ಸ್ಪರ್ಧೆಯ ನಿರ್ದೇಶಕ” ಗಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದ್ದಾರೆ.

VISTARANEWS.COM


on

Bengaluru News

ಬೆಂಗಳೂರು: ಬಹುನಿರೀಕ್ಷಿತ ಸೌಂದರ್ಯ ಸ್ಪರ್ಧೆ, ಮಿಸ್ಟರ್ ಅಂಡ್ ಮಿಸ್ ಐಡಲ್ ಆಫ್ ಇಂಡಿಯಾ 2024 ಕಳೆದ ಅಕ್ಟೋಬರ್ 27 ರಂದು ತರಳು ಎಸ್ಟೇಟ್‌ನ ವಿಂಟೇಜ್ ಫಾರ್ಮ್ಸ್ನಲ್ಲಿ (Bengaluru News) ನಡೆಯಿತು. ಈ ಕಾರ್ಯಕ್ರಮವನ್ನು ಕಿರಿಯ ಸೌಂದರ್ಯ ಸ್ಪರ್ಧೆಯ ನಿರ್ದೇಶಕ ಕೌಶಿಕ್ ಆರ್ ಅವರು ಕೌಶಲ್ಯದಿಂದ ನಿರ್ದೇಶಿಸಿದರು. ಅವರು ಕೇವಲ 21 ನೇ ವಯಸ್ಸಿನಲ್ಲಿ, “ಕಿರಿಯ ಸೌಂದರ್ಯ ಸ್ಪರ್ಧೆಯ ನಿರ್ದೇಶಕ” ಗಾಗಿ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದ್ದಾರೆ ಮತ್ತು ಅಜಯ್ ಪ್ರಸಾದ್, ರಾವುಲ್, ಶರತ್, ಕಾತಿ೯ಕ್ ಮತ್ತು ಕೆಎಸ್‌ಎಚ್‌ ಗ್ರೂಪ್ಸ್‌ ( Ksh Groups) ಸಹಕಾರ ನೀಡಿದರು.

A 21-year-old man is trying to set a Guinness World Record as the director of a junior beauty pageant

ಈ ಸ್ಪರ್ಧೆಯು ಭಾರತದಾದ್ಯಂತದ ಪ್ರತಿಭಾವಂತ ಸ್ಪರ್ಧಿಗಳನ್ನು ಒಟ್ಟುಗೂಡಿಸಿ ಅವರ ಸೌಂದರ್ಯ, ಪ್ರತಿಭೆ ಮತ್ತು ವರ್ಚಸ್ಸನ್ನು ಪ್ರದರ್ಶಿಸಿತು. ಮಹತ್ವಾಕಾಂಕ್ಷಿ ಮಾದರಿಗಳಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಮತ್ತು ಮನರಂಜನಾ ಉದ್ಯಮದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಲು ವೇದಿಕೆಯನ್ನು ಒದಗಿಸುವುದು ಈ ಕಾರ್ಯಕ್ರಮದ ಪ್ರಾಥಮಿಕ ಉದ್ದೇಶವಾಗಿತ್ತು.

A 21-year-old man is trying to set a Guinness World Record as the director of a junior beauty pageant

ರ‍್ಯಾಂಪ್ ವಾಕ್, ನೃತ್ಯ ಮತ್ತು ಪ್ರಶ್ನೆ-ಉತ್ತರಗಳಂತಹ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸುವ ಮೂಲಕ ಸ್ಪರ್ಧಿಗಳು ಕಠಿಣ ತರಬೇತಿ ಮತ್ತು ಅಂದಗೊಳಿಸುವ ಸೆಷನ್ಗಳಿಗೆ ಒಳಗಾದರು. ಪ್ರಸಿದ್ಧ ಉದ್ಯಮ ತಜ್ಞರನ್ನು ಒಳಗೊಂಡ ತೀರ್ಪುಗಾರರ ಸಮಿತಿಯು ಸ್ಪರ್ಧಿಗಳ ಪ್ರದರ್ಶನವನ್ನು ಎಚ್ಚರಿಕೆಯಿಂದ ಮೌಲ್ಯಮಾಪನ ಮಾಡಿತು.

ಆರ್. ಸಿ. ರೋಹಿತ್ ಮಿಸ್ಟರ್ ಐಡಲ್ ಆಫ್ ಇಂಡಿಯಾ 2024 ಕಿರೀಟವನ್ನು ಪಡೆದರೆ, ವರ್ಷಿತಾ ಮಿಸ್ ಐಡಲ್ ಆಫ್ ಇಂಡಿಯಾ 2024 ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ವಿಜೇತರಿಗೆ ಪ್ರತಿಷ್ಠಿತ ಬಹುಮಾನಗಳು ಮತ್ತು ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಭಾರತವನ್ನು ಪ್ರತಿನಿಧಿಸುವ ಅವಕಾಶಗಳನ್ನು ನೀಡಲಾಯಿತು. ಕೌಶಿಕ್ ಅವರ ಗಮನಾರ್ಹ ಸಾಧನೆಯು ಅವರ ಸಮರ್ಪಣೆ, ಕಠಿಣ ಪರಿಶ್ರಮ ಮತ್ತು ಈವೆಂಟ್ ನಿರ್ವಹಣೆಯ ನವೀನ ವಿಧಾನಕ್ಕೆ ಸಾಕ್ಷಿಯಾಗಿದೆ.

21 ವರ್ಷ ವಯಸ್ಸಿನಲ್ಲಿ ರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯನ್ನು ನಿರ್ದೇಶಿಸುವ ಮೂಲಕ, ಅವರು ಯುವ ಉದ್ಯಮಿಗಳು ಮತ್ತು ಈವೆಂಟ್ ವೃತ್ತಿಪರರಿಗೆ ಹೊಸ ಮಾನದಂಡವನ್ನು ಸ್ಥಾಪಿಸಿದ್ದಾರೆ. ಈ ಪ್ರತಿಷ್ಠಿತ ಕಾರ್ಯಕ್ರಮವನ್ನು ನಿರ್ದೇಶಿಸುವ ಮತ್ತು ಇತಿಹಾಸ ನಿರ್ಮಿಸುವ ಅವಕಾಶ ದೊರೆತಿರುವುದಕ್ಕೆ ನಾನು ರೋಮಾಂಚನಗೊಂಡಿದ್ದೇನೆ ಎಂದು ಕೌಶಿಕ್ ಆರ್ ಹೇಳಿದರು.

Continue Reading
Advertisement
ಕರ್ನಾಟಕ13 ಗಂಟೆಗಳು ago

ಮಹಿಳಾ ಮೀಸಲಾತಿಗೆ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ

Latest16 ಗಂಟೆಗಳು ago

ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಂದ PNS ವಿಸ್ತಾರ ನ್ಯೂಸ್ ಕಚೇರಿ ಉದ್ಘಾಟನೆ

ಪ್ರಮುಖ ಸುದ್ದಿ17 ಗಂಟೆಗಳು ago

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

ಸುವಚನ17 ಗಂಟೆಗಳು ago

ಕರುನಾಡಿನ ಜನಧ್ವನಿಯಾಗಿ ಶುಭಾರಂಭಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ -ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ

Kodava Family Hockey Tournament Website Launched
ಕೊಡಗು1 ವರ್ಷ ago

Kodagu News : ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯ ವೈಬ್ ಸೈಟ್ ಲೋಕಾರ್ಪಣೆ

Bengaluru News
ಬೆಂಗಳೂರು1 ವರ್ಷ ago

Bengaluru News : ಮಾಡಲಿಂಗ್‌ನಲ್ಲಿ ಗಿನ್ನಿಸ್‌ ರೆಕಾರ್ಡ್‌ ಮಾಡಲು ಹೊರಟ ಹಳ್ಳಿಹೈದ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ

Gadag News Father commits suicide by throwing three children into river
ಗದಗ1 ವರ್ಷ ago

Gadag News : ಮೂವರು ಮಕ್ಕಳನ್ನು ನದಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಂದೆ!

Dina Bhavishya
ಭವಿಷ್ಯ1 ವರ್ಷ ago

Dina Bhavishya: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಖಂಡಿತ

Dina Bhavishya
ಭವಿಷ್ಯ1 ವರ್ಷ ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌