ಕೊಪ್ಪಳ, ಕರ್ನಾಟಕ: ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರೊಂದಿಗೆ ಮಹಿಳಾ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಆದರೆ, ರಾಹುಲ್ ಗಾಂಧಿ ಅವರು ಬರಲು ಸಾಧ್ಯವಾಗದ್ದರಿಂದ, ಅವರಿಲ್ಲದೇ ಇಲ್ಲದೇ ಕಾರ್ಯಕ್ರಮವನ್ನು ಕಾಂಗ್ರೆಸ್ ಕೈಗೊಂಡಿದೆ(Karnataka Election 2023).
ಕುಷ್ಟಗಿಯಲ್ಲಿ ಕಾಂಗ್ರೆಸ್ ಮಹಿಳಾ ಸಂವಾದವನ್ನು ಆಯೋಜಿಸಲಾಗಿತ್ತು. ಈ ಸಂವಾದಕ್ಕೆ ರಾಹುಲ್ ಗಾಂಧಿ ಅವರು ಆಗಮಿಸಬೇಕಾಗಿತ್ತು. ರಾಹುಲ್ ಗಾಂಧಿ ಗಾಂಧಿ ಆಗಮಿಸಲಿದ್ದಾರೆಂದು ಪ್ರಚಾರ ಕೂಡ ಮಾಡಲಾಗಿತ್ತು. ಆದರೆ, ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಮೂಲಕ ರಾಹುಲ್ ಗಾಂಧಿ ಆಗಮಿಸುವುದು ಬಹುತೇಕ ಅನುಮಾನವಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅನುಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಆರಂಭಿಸಲಾಯಿತು.
ಇದನ್ನೂ ಓದಿ: Rahul Gandhi: ಕೂಡಲಸಂಗಮ ಅಭಿವೃದ್ಧಿ ಮಂಡಳಿಗೆ 5 ಸಾವಿರ ರೂಪಾಯಿ ದೇಣಿಗೆ ನೀಡಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ ಮಾತ್ರವಲ್ಲದೇ ಈ ಭಾಗದ ಪ್ರಮುಖ ನಾಯಕರಾದ ಅಮರೇಗೌಡ ಬಯ್ಯಾಪೂರ ಅವರು ಸಹ ಗೈರು ಹಾಜರಾಗಿದ್ದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ನೆಟ್ಟಾ ಡಿಸೋಜ, ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ ಭಾಗಿಯಾಗಿದ್ದರು. ಮಹಿಳಾ ಸಂವಾದದಲ್ಲಿ ಸಾವಿರಾರು ಮಹಿಳೆಯರು ಪಾಲ್ಗೊಂಡಿದ್ದರು. ಆದರೆ, ರಾಹುಲ್ ಗಾಂಧಿ ಅವರು ಬಾರದಕ್ಕೆ ಅವರೆ ನಿರಾಸೆಯಾಗಿದ್ದರು. ರಾಹುಲ್ ಗಾಂಧಿ ಆಗಮಿಸಲಿದ್ದಾರೆಂಬ ಕಾರಣಕ್ಕೆ ಕುಷ್ಟಗಿಯಲ್ಲಿ ಭಾರೀ ಬಂದೋಬಸ್ತ್ ಕೈಗೊಳ್ಳಲಾಗಿತ್ತು.