Site icon Vistara News

Contaminated Water: ರಾಯಚೂರು ಕಲುಷಿತ ನೀರು ಸೇವನೆ ಪ್ರಕರಣ; ಜಿಪಂ ಸಿಇಒಗೆ ನೋಟಿಸ್‌

karnataka state pollution control board

#image_title

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕು ಗೋರೆಬಾಳ ಹಾಗೂ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಒಬ್ಬ ಬಾಲಕ ಸಾವು ಹಾಗೂ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಪ್ರಕರಣದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ ವಹಿಸಿದ ಗ್ರಾಮ ಪಂಚಾಯಿಗಳ ವಿರುದ್ಧ ಕ್ರಮ ಕೈಗೊಳ್ಳದ ಜಿಲ್ಲಾ ಪಂಚಾಯಿತಿ ಸಿಇಒಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್‌ ನೀಡಿದೆ.

ಜನರ ಆರೋಗ್ಯ ದೃಷ್ಟಿಯಿಂದ ಶುದ್ಧ ನೀರು ಪೂರೈಕೆ ಮಾಡುವುದು ಹಾಗೂ ನೀರಿನ ಮೂಲಗಳಾದ ಕೊಳವೆ ಬಾವಿ, ಕೆರೆ, ಬಾವಿ ಹಾಗೂ ಹಳ್ಳಗಳ ನೀರು ಕಲುಷಿತವಾಗದಂತೆ ನೋಡಿಕೊಳ್ಳುವುದು ಅವಶ್ಯಕ. ಆದರೆ, ಜಲ ಕಾಯ್ದೆ 1974ರ ಸೆಕ್ಷನ್‌ 24, 25 ರ ಪ್ರಕಾರ ಜಲಮೂಲಗಳನ್ನು ಕಲುಷಿತಗೊಳಿಸುವುದು ಶಿಕ್ಷಾರ್ಹ ಅಪರಾಧ. ಹೀಗಾಗಿ ಘಟನೆಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳ ವಿರುದ್ಧ ಈವರೆಗೆ ಏಕೆ ಕ್ರಮ ಕೈಗೊಳ್ಳಬಾರದು ಎಂಬುವುದಕ್ಕೆ 7 ದಿನಗಳೊಳಗೆ ಸಮಾಜಾಯಿಷಿ ನೀಡಿ ಎಂದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ್ ಕುರೇರ ಅವರಿಗೆ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿ | Rain News: ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರ ಸಾವು; ರಾಮನಗರದಲ್ಲಿ 4 ಮೇಕೆ ಬಲಿ, ಮೂವರಿಗೆ ಗಾಯ

ಕಲುಷಿತ ನೀರು ಸೇವನೆಯಿಂದ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಹನುಮೇಶ್‌ (5) ಬಾಲಕ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅದೇ ಲಿಂಗಸುಗೂರು ತಾಲೂಕಿನ ಗೋರೆಬಾಳದಲ್ಲಿ ಅನೇಕ ಮಂದಿ ಅಸ್ವಸ್ಥಗೊಂಡಿದ್ದಾರೆ. ಇದರ ಬೆನ್ನಲ್ಲೇ ತಾಲೂಕಿನ ಜೂಲಗುಡ್ಡ ಗ್ರಾಮದಲ್ಲೂ ಸೋಮವಾರ 8 ಮಂದಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿರುವುದು ಕಂಡುಬಂದಿದೆ.

Exit mobile version