Raichur district administration gearing up for vote counting says District Collector Chandrasekhara Naik Karnataka election 2023 UpdatesKarnataka election 2023: ಮತ ಎಣಿಕೆಗೆ ರಾಯಚೂರು ಜಿಲ್ಲಾಡಳಿತ ಸಜ್ಜು: ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ - Vistara News

ಕರ್ನಾಟಕ

Karnataka election 2023: ಮತ ಎಣಿಕೆಗೆ ರಾಯಚೂರು ಜಿಲ್ಲಾಡಳಿತ ಸಜ್ಜು: ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್

Assembly Election: ಮೇ 13 ರಂದು ನಡೆಯಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ರಾಯಚೂರು ಜಿಲ್ಲಾಡಳಿತ ಸಜ್ಜುಗೊಂಡಿದೆ, ಎರಡು ಕಾಲೇಜುಗಳಲ್ಲಿ ಏಳು ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

VISTARANEWS.COM


on

Raichur District Collector Chandrasekhara Naik Pressmeet
ರಾಯಚೂರು ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ಸಾರ್ವತ್ರಿಕ ವಿಧಾನಸಭಾ ಚುನಾವಣೆಯ (Karnataka election 2023) ಮತ ಎಣಿಕೆ (Vote counting) ಕಾರ್ಯಕ್ಕೆ ಜಿಲ್ಲಾಡಳಿತ ಸಜ್ಜುಗೊಂಡಿದೆ, ಎರಡು ಕಾಲೇಜುಗಳಲ್ಲಿ ಏಳು ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರು ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ಮತದಾನ ನಡೆದಿದ್ದು, ಈ ಬಾರಿ ರಾಯಚೂರು ನಗರದ ಎಲ್‌ವಿಡಿ ಮತ್ತು ಎಸ್‌ಆರ್‌ಪಿಎಸ್ ಕಾಲೇಜುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದರು.

ಇದನ್ನೂ ಓದಿ: Accident News: 3ನೇ ಮಹಡಿಯಿಂದ ಬಿದ್ದು ಪೇಂಟರ್‌ ಸಾವು; ಆಂಬ್ಯುಲೆನ್ಸ್‌ ಬಾರದೆ ನಡು ರಸ್ತೆಯಲ್ಲೆ ಒದ್ದಾಡಿ ಪ್ರಾಣಬಿಟ್ಟ

7 ಕ್ಷೇತ್ರಗಳ ಪೈಕಿ ರಾಯಚೂರು ನಗರ, ರಾಯಚೂರು ಗ್ರಾಮೀಣ, ಮಾನ್ವಿ ಈ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಗರದ ಎಲ್‌ವಿಡಿ‌ ಕಾಲೇಜಿನಲ್ಲಿ ಮತ ಎಣಿಕೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ.ಇನ್ನುಳಿದ ಲಿಂಗಸುಗೂರು, ಮಸ್ಕಿ, ಸಿಂಧನೂರು, ದೇವದುರ್ಗ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಎಸ್‌ಆರ್‌ಪಿಎಸ್ ಕಾಲೇಜಿನಲ್ಲಿ ನಡೆಯಲಿದೆ ಎಂದು ಹೇಳಿದರು.

ಲಿಂಗಸುಗೂರು ವಿಧಾನಸಭಾ ಕ್ಷೇತ್ರ

ಲಿಂಗಸುಗೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 255534 ಮತದಾರರ ಇದ್ದು, ಈ ಪೈಕಿ 173056 ಜನರು ಮತದಾನ ಮಾಡಿದ್ದಾರೆ. ಲಿಂಗಸುಗೂರು ಕ್ಷೇತ್ರದ ಮತ ಎಣಿಕೆ 14 ಟೇಬಲ್ ಗಳಲ್ಲಿ 20 ಸುತ್ತಿನಲ್ಲಿ ಮುಕ್ತಾಯವಾಗಲಿದೆ.

ದೇವದುರ್ಗ ವಿಧಾನಸಭಾ ಕ್ಷೇತ್ರ

ದೇವದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 233472 ಮತದಾರರ ಇದ್ದು, ಈ ಪೈಕಿ ಈ ಬಾರಿ 174204 ಜನರು ಮತದಾನ ಮಾಡಿದ್ದಾರೆ. ದೇವದುರ್ಗ ಕ್ಷೇತ್ರದ ಮತ ಎಣಿಕೆ 14 ಟೇಬಲ್ ಗಳಲ್ಲಿ 19 ಸುತ್ತಿನಲ್ಲಿ ಎಣಿಕೆ ನಡೆಯಲಿದೆ.

ಇದನ್ನೂ ಓದಿ: Weather Report: ಕಳಸದಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ಸೇತುವೆ; ಸಿಕ್ಕಿಹಾಕಿಕೊಂಡ ಪಿಕಪ್ ವಾಹನ

ರಾಯಚೂರು ನಗರ ವಿಧಾನಸಭಾ ಕ್ಷೇತ್ರ

ರಾಯಚೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ 232698 ಮತದಾರರು ಇದ್ದು, ಈ ಪೈಕಿ ಈ ಬಾರಿ 144294 ಜನರು ಮತದಾನ‌ ಮಾಡಿದ್ದಾರೆ. ರಾಯಚೂರು ನಗರ ಕ್ಷೇತ್ರದ ಮತ ಎಣಿಕೆಯು 14 ಟೇಬಲ್ ಗಳಲ್ಲಿ 18 ಸುತ್ತು ನಡೆಯಲಿದೆ.

ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ

ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಒಟ್ಟು 229046 ಸಂಖ್ಯೆಯಲ್ಲಿ ಮತದಾರರು ಇದ್ದು,ಈ ಬಾರಿ 172478 ಜನರು ಮತದಾನ ಮಾಡಿದ್ದಾರೆ. ರಾಯಚೂರು ಗ್ರಾಮೀಣ ಕ್ಷೇತ್ರದ ಮತ ಎಣಿಕೆ 14 ಟೇಬಲ್ ಗಳಲ್ಲಿ 20 ಸುತ್ತು ನಡೆಯಲಿದೆ.

ಮಾನ್ವಿ‌ ವಿಧಾನಸಭಾ ಕ್ಷೇತ್ರ

ಮಾನ್ವಿ‌ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 233823 ಮತದಾರ ರು ಇದ್ದು,ಈ ಪೈಕಿ 156725 ಜನರು ಮತದಾನ ಮಾಡಿದ್ದಾರೆ. ಮಾನ್ವಿ ಕ್ಷೇತ್ರದ ಮತ ಎಣಿಕೆ 14 ಟೇಬಲ್ ಗಳಲ್ಲಿ 20 ಸುತ್ತು ನಡೆಯಲಿದೆ.

ಸಿಂಧನೂರು ವಿಧಾನಸಭಾ ಕ್ಷೇತ್ರ

ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 239247 ಮತದಾರರು ಇದ್ದು,ಈ ಪೈಕಿ 174230 ಜನರು ಮತದಾನ ಮಾಡಿದ್ದಾರೆ. ಸಿಂಧನೂರು ಕ್ಷೇತ್ರದ ಮತ ಎಣಿಕೆ 14 ಟೇಬಲ್ ಗಳಲ್ಲಿ 20 ಸುತ್ತು ಎಣಿಕೆ.

ಇದನ್ನೂ ಓದಿ: 30 ಸಾವಿರ ಸಂಬಳ ಪಡೆಯುವ ಸರ್ಕಾರಿ ಮಹಿಳಾ ಅಧಿಕಾರಿ, 7 ಕೋಟಿ ರೂ.ಆಸ್ತಿಗೆ ಒಡತಿ; ಬಂಗಲೆಯಲ್ಲಿ ಶೋಧ

ಮಸ್ಕಿ ವಿಧಾನಸಭಾ ಕ್ಷೇತ್ರ

ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 211169 ಮತದಾರರು ಇದ್ದು,ಈ ಬಾರಿ 149956 ಜನರು ಮತದಾನ ಮಾಡಿದ್ದಾರೆ. ಮಸ್ಕಿ ಕ್ಷೇತ್ರದ ಮತ ಎಣಿಕೆ ಕಾರ್ಯವು 14 ಟೇಬಲ್ ಗಳಲ್ಲಿ 17 ಸುತ್ತು ಎಣಿಕೆ‌ ನಡೆಯಲಿದೆ ಎಂದರು.

ಒಟ್ಟು ಕ್ಷೇತ್ರಗಳಿಗೆ 134 ಸುತ್ತು ಮತ ಎಣಿಕೆ ನಡೆಯಲಿದ್ದು,ಮತ ಎಣಿಕೆ ಕಾರ್ಯಕ್ಕೆ 378 ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಭದ್ರತೆ

ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಮಾತನಾಡಿ, ಮತ ಎಣಿಕೆ ದಿನ‌ದಂದು ಜಿಲ್ಲೆಯಾದ್ಯಂತ ಪೊಲೀಸ್ ಫುಲ್ ಅಲರ್ಟ್ ಆಗಿರಲಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದೆ. ಹೀಗಾಗಿ ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದರು.

ಮತ ಎಣಿಕೆ ಕೇಂದ್ರದ ಸುತ್ತ ಎಸ್ ಪಿ 01. ಡಿಎಸ್‌ಪಿ 02, ಸಿಪಿಐ 12, ಪಿಎಸ್‌ಐ 25, ಎಎಸ್‌ಐ 52, ಪಿಸಿ 350, ಹೋಮ್ ಗಾರ್ಡ್ 100, ಕೇಂದ್ರ ಸಶಸ್ತ್ರ ಪಡೆ 03, ಕೆಎಸ್‌ಆರ್‌ಪಿ ತುಕಡಿ 02, ಜಿಲ್ಲಾ ಸಶಸ್ತ್ರ ಮೀಸಲು ತುಕಡಿ 02 ಆಯೋಜಸಲಾಗಿದೆ.

ಇದನ್ನೂ ಓದಿ: KPSC Departmental Examination : ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಯನ್ನು ಮತ್ತೆ ಮುಂದೂಡಿದ ಕೆಪಿಎಸ್‌ಸಿ

ಇನ್ನೂ 07 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 10 ಕೇಂದ್ರ ಸಶಸ್ತ್ರ ಮೀಸಲು‌ ಪಡೆ. 8 ಕೆಎಸ್‌ಆರ್‌ಪಿ ತುಕಡಿ. 08 ಜಿಲ್ಲಾ ಸಶಸ್ತ್ರ ಮೀಸಲು ಪಡೆ. ಹೋಮ್‌ಗಾರ್ಡ್ 100 ಹಾಗೂ ಸಂಪೂರ್ಣ ಸಿವಿಲ್ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿ.ಪಂ. ಸಿಇಒ ಶಶಿಧರ್‌ ಕುರೇರ್‌ ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ನಲ್ಲಿ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

T20 World Cup 2024: ಸಿಎಂ ಸಿದ್ದರಾಮಯ್ಯ(Siddaramaiah) ಅವರು ಗುರುವಾರ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ ಹರ್ಷ ವ್ಯಕ್ತಪಡಿಸಿ, ‘ನಂದಿನಿ’ ಲಾಂಛನ ಜಾಗತಿಕ ಬ್ರ್ಯಾಂಡ್‌ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ.

VISTARANEWS.COM


on

T20 World Cup 2024
Koo

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ–20 ಕ್ರಿಕೆಟ್‌ ವಿಶ್ವಕಪ್‌(T20 World Cup 2024) ಟೂರ್ನಿಯಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿ(KMF) ಸ್ಕಾಟ್ಲೆಂಡ್(Scotland) ಮತ್ತು ಐರ್ಲೆಂಡ್(Ireland) ತಂಡಗಳ ಪ್ರಾಯೋಜಕತ್ವ ಪಡೆದಿದೆ. ‘ನಂದಿನಿ’ ಲಾಂಛನ(nandini milk logo) ಇರುವ ನೂತನ ಜೆರ್ಸಿಯನ್ನು ಸ್ಕಾಟ್ಲೆಂಡ್ ತಂಡ ಬುಧವಾರ ಬಿಡುಗಡೆ ಮಾಡಿತ್ತು. ಕೆಎಂಎಫ್‌ ಕೇಂದ್ರ ಕಚೇರಿಯಲ್ಲಿ ನಡೆದ ವರ್ಚುವಲ್‌ ಮಾದರಿಯ ಸಭೆಯಲ್ಲಿ ಈ ಜೆರ್ಸಿಯನ್ನು ಬಿಡುಗಡೆಗೊಳಿಸಲಾಗಿತ್ತು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಗುರುವಾರ ತಮ್ಮ ಅಧಿಕೃತ ಟ್ವಿಟರ್​ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿ ಹರ್ಷ ವ್ಯಕ್ತಪಡಿಸಿ, ‘ನಂದಿನಿ’ ಲಾಂಛನ ಜಾಗತಿಕ ಬ್ರ್ಯಾಂಡ್‌ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆ ಎಂದು ಹೇಳಿದ್ದಾರೆ.

“ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ನಂದಿನಿಯ ಹೆಸರು ರಾರಾಜಿಸಲಿದೆ. ಕನ್ನಡದ ಕಂಪು ಕಂಗೊಳಿಸಲಿದೆ” ಎಂದು ಬಣ್ಣಿಸಿದ್ದಾರೆ.

ಈಗಾಗಲೇ ಮಲೇಷ್ಯಾ, ವಿಯೆಟ್ನಾಂ, ಸಿಂಗಾಪುರ, ಅಮೆರಿಕ, ದುಬೈ, ಯುಎಇ ಸೇರಿ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದರು.

ಕೆಎಂಎಫ್‌ ಕ್ರಿಕೆಟ್‌ ಲೋಕಕ್ಕೆ ಕಾಲಿಟ್ಟು ನಂದಿನಿ(nandini milk) ಲೋಗೋವನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಲು ಮುಂದಾಗಿದೆ. ಜತೆಗೆ ಅಮೂಲ್‌ಗೆ ತೀವ್ರ ಪೈಪೋಟಿ ನೀಡಲಿದೆ. ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ನಮ್ಮ ಬ್ರಾಂಡ್​ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವುದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದರು.

ಇದನ್ನೂ ಓದಿ T20 World Cup 2024: ಭಾರತ ಕೇವಲ ಒಂದು ಅಭ್ಯಾಸ ಪಂದ್ಯ ಮಾತ್ರ ಆಡಲಿದೆ; ಕಾರಣ ಏನು?

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳ ಎಡಗೈ ಮೇಲೆ ನಂದಿನಿ ಲೋಗೋ ಕನ್ನಡ ಮತ್ತು ಇಂಗ್ಲೀಸ್​ನಲ್ಲಿ ಕಾಣಿಸಿಕೊಳ್ಳಲಿದೆ. ಐರ್ಲೆಂಡ್ ತಂಡ ಜೆರ್ಸಿ ಇನ್ನಷ್ಟೇ ಅನಾವರಣಗೊಳ್ಳಬೇಕಿದೆ. ಮಿನಿ ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ಮೋಹನ್‌ದಾಸ್‌ ಪೈ ವಿರೋಧ


ಉದ್ಯಮಿ ಮೋಹನ್‌ದಾಸ್‌ ಪೈ (Mohandas Pai) ಅವರು ಸ್ಕಾಟ್ಲೆಂಡ್, ಐರ್ಲೆಂಡ್‌ ತಂಡಗಳಿಗೆ KMF ಪ್ರಾಯೋಜಕತ್ವ ಪಡೆದ ಕಾರಣ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಕೆಎಂಎಫ್‌ಗೆ ಕರ್ನಾಟಕ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು ಕಾಣುವುದಿಲ್ಲವೇ? ಇವುಗಳಿಗೇಕೆ ಪ್ರಾಯೋಜಕತ್ವ ನೀಡಿಲ್ಲ ಎಂದು ಪ್ರಶ್ನೆ ಮಾಡಿದ್ದರು.

ಕೆಎಂಎಫ್‌ನಿಂದ ವಿದೇಶಿ ಕ್ರಿಕೆಟ್ ತಂಡಗಳಿಗೆ ಪ್ರಾಯೊಜಕತ್ವ ಪಡೆದ ವಿಚಾರದ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋಹನ್‌ ದಾಸ್‌ ಪೈ, ಕರ್ನಾಟಕದ ರಣಜಿ ತಂಡ, ರಾಜ್ಯದ ಕ್ರೀಡಾಪಟುಗಳು, ಕಲಾವಿದರು, ರೈತರ ಮಕ್ಕಳು, ಬಡವರಿಗೆ ವಿದ್ಯಾರ್ಥಿ ವೇತನಗಳಿಗೆ ಏಕೆ ಕೆಎಂಎಫ್‌ ಪ್ರಾಯೋಜಕತ್ವವನ್ನು ನೀಡಬಾರದು? ಕೆಎಂಎಫ್ ಕನ್ನಡಿಗ ತೆರಿಗೆದಾರರ ಹಣ, ಸಬ್ಸಿಡಿ ಮತ್ತು ಬಜೆಟ್‌ನಿಂದ ಧನಸಹಾಯವನ್ನು ಪಡೆದುಕೊಳ್ಳುತ್ತದೆ. ಆದರೆ, ಯಾರಿಗೂ ಗೊತ್ತಿಲ್ಲದ ವಿದೇಶಿ ತಂಡಗಳಿಗೆ ಖರ್ಚು ಮಾಡಲು ಹೊರಟಿದೆ” ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಈ ಬಗ್ಗೆ ಟ್ಯಾಗ್‌ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದರು.

Continue Reading

ಹಾಸನ

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Drowned in water : ಹಾಸನದಲ್ಲಿ ಶಾಲೆಗೆ ರಜೆ ಹಿನ್ನೆಲೆಯಲ್ಲಿ ಕೆರೆಯಲ್ಲಿ ಈಜಲು ಹೋದ ಐವರ ಪೈಕಿ ನಾಲ್ವರು ಬಾಲಕರು ನೀರುಪಾಲಾಗಿದ್ದಾರೆ. ಮತ್ತೊರ್ವ ಬದುಕುಳಿದಿದ್ದಾನೆ.

VISTARANEWS.COM


on

By

Drowned in water
Koo

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು (Drowned in water) ನೀರುಪಾಲಾಗಿದ್ದಾರೆ. ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ದುರ್ದೈವಿಗಳು. ಮೃತ ಮಕ್ಕಳು ಮುತ್ತಿಗೆ ಗ್ರಾಮದವರು ಎಂದು ತಿಳಿದು ಬಂದಿದೆ. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರಲು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದಾರೆ. ಮತ್ತೊರ್ವ ಬದುಕುಳಿದಿದ್ದಾನೆ.

ಇದನ್ನೂ ಓದಿ: Murder Case : ಚಾಕುವಿನಿಂದ ಇರಿದು ಯುವಕನ ಕೊಲೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

ಈಜಲು ತೆರಳಿದ್ದ ಐವರು ಬಾಲಕರಲ್ಲಿ, ನಾಲ್ವರು‌ ಮುಳುಗಡೆ ಆಗುತ್ತಿದ್ದರು. ಇತ್ತ ಬದುಕುಳಿದ ಓರ್ವ ಬಾಲಕ ಓಡಿ ಹೋಗಿ ಸಮೀಪದಲ್ಲಿದ್ದವರಿಗೆ ಸುದ್ದಿ ತಿಳಿಸಿದ್ದ. ಆದರೆ ಕೆರೆ ಬಳಿ ಬಂದು ನೋಡುವಷ್ಟರಲ್ಲಿ ನಾಲ್ವರು ಬಾಲಕರು ಮುಳುಗಿದ್ದರು.

ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ನೀರಲ್ಲಿ ಕೊಚ್ಚಿ ಹೋಗಿರುವ ಮೃತದೇಹಕ್ಕಾಗಿ ಅಗ್ನಿಶಾಮಕದಳದ ಸಿಬ್ಬಂದಿಯಿಂದ ಶೋಧಕಾರ್ಯ ಮುಂದುವರಿದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

HD Devegowda: 92ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದ ಎಚ್‌ಡಿ ದೇವೇಗೌಡ; ಮೊಮ್ಮಗನ ಕೇಸ್‌ನಿಂದ ಈ ತೀರ್ಮಾನ?

HD Devegowda: ಇದೇ ತಿಂಗಳ 18ಕ್ಕೆ ನಾನು 92ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಇದ್ದಲ್ಲಿಂದಲೇ ಹಾರೈಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ. ಈಗ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಗಳ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ನಿಮ್ಮೆಲ್ಲರ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ ಎಂದು ಎಚ್.ಡಿ. ದೇವೇಗೌಡ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

VISTARANEWS.COM


on

HD DeveGowda Wont celebrate 92nd birthday
Koo

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ (HD Devegowda) ಅವರು ತಮ್ಮ 92ನೇ ವರ್ಷದ ಹುಟ್ಟುಹಬ್ಬವನ್ನು (HD Devegowda Birthday) ಆಚರಿಸಿಕೊಳ್ಳದಿರಲು ತೀರ್ಮಾನ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿರುವ ಎಚ್‌ಡಿಡಿ, ನೀವೆಲ್ಲರೂ ಇದ್ದಲ್ಲಿಯೇ ಹಾರೈಕೆ ತೋರಿ ಎಂದು ಹೇಳಿದ್ದಾರೆ.

ಇದೇ ತಿಂಗಳ 18ಕ್ಕೆ ನಾನು 92ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಇದ್ದಲ್ಲಿಂದಲೇ ಹಾರೈಸಿ ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ. ಈಗ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಗಳ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ನಿಮ್ಮೆಲ್ಲರ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ ಎಂದು ಎಚ್.ಡಿ. ದೇವೇಗೌಡ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

HD DeveGowda Wont celebrate 92nd birthday

ಏಕೆ ಈ ನಿರ್ಧಾರ?

ಈಗಾಗಲೇ ಮೊಮ್ಮಗ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ದೌರ್ಜ್ಯನ್ಯ ಪ್ರಕರಣದಿಂದ ಕುಟುಂಬದ ಹೆಸರು ಮಣ್ಣುಪಾಲಾಗಿದೆ. ಸಾಕಷ್ಟು ಟೀಕೆಗಳು ಸಹ ಬರುತ್ತಿದೆ. ಇನ್ನು ಪುತ್ರ ಎಚ್.ಡಿ. ರೇವಣ್ಣ ಸಹ ಒಂದು ಬಾರಿ ಜೈಲಿಗೆ ಹೋಗಿ ಬಂದಿದ್ದಾರೆ. ಹೀಗಾಗಿ ಇಂಥ ನೋವಿನ ಸಂದರ್ಭದಲ್ಲಿ ತಾವು ಹುಟ್ಟುಹಬ್ಬವನ್ನು ಹೇಗೆ ಆಚರಿಸಿಕೊಳ್ಳುವುದು ಎಂಬ ಬೇಸರದಿಂದ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading

ಕ್ರೈಂ

HD Revanna Case: ಎಚ್‌ಡಿ ರೇವಣ್ಣ ಮತ್ತೆ ಕೋರ್ಟ್‌ನಲ್ಲಿ; ಎಸ್‌ಐಟಿ ಅಧಿಕಾರಿಗಳು ರೇವಣ್ಣ ನಿವಾಸದಲ್ಲಿ!

HD Revanna Case: ಎಚ್‌ಡಿ ರೇವಣ್ಣ ಅವರು ಇಂದು ಬೆಳಗ್ಗಿನಿಂದ ಟೆಂಪಲ್ ರನ್‌ ನಡೆಸಿದರು. ಬಳಿಕ ಇನ್ನೊಂದು ಪ್ರಕರಣದಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರಾದರು. ಈಗಾಗಲೇ ಮೈಸೂರಿನ ಸಂತ್ರಸ್ತೆಯ ಕಿಡ್‌ನ್ಯಾಪ್‌ (kidnap case) ಪ್ರಕರಣದಲ್ಲಿ ಅವರು ಜಾಮೀನು ಪಡೆದಿದ್ದಾರೆ. ಆದರೆ ಹೊಳೆನರಸೀಪುರದ ಪ್ರಕರಣದಲ್ಲೂ ಜಾಮೀನು ಪಡೆಯಲು ಅವರು ತಯಾರಿ ನಡೆಸಿದ್ದಾರೆ.

VISTARANEWS.COM


on

hd revanna case
Koo

ಬೆಂಗಳೂರು: ಅತ್ತ ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಜಾಮೀನು (Bail) ಪಡೆಯಲು ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ನ್ಯಾಯಾಲಯದಲ್ಲಿ ಕಸರತ್ತು ನಡೆಸಿದ್ದರೆ, ಇತ್ತ ಎಸ್‌ಐಟಿ (SIT) ಅಧಿಕಾರಿಗಳು ರೇವಣ್ಣರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.

ಎಚ್‌ಡಿ ರೇವಣ್ಣ ಅವರು ಇಂದು ಬೆಳಗ್ಗಿನಿಂದ ಟೆಂಪಲ್ ರನ್‌ ನಡೆಸಿದರು. ಬಳಿಕ ಇನ್ನೊಂದು ಪ್ರಕರಣದಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರಾದರು. ಈಗಾಗಲೇ ಮೈಸೂರಿನ ಸಂತ್ರಸ್ತೆಯ ಕಿಡ್‌ನ್ಯಾಪ್‌ (kidnap case) ಪ್ರಕರಣದಲ್ಲಿ ಅವರು ಜಾಮೀನು ಪಡೆದಿದ್ದಾರೆ. ಆದರೆ ಹೊಳೆನರಸೀಪುರದ ಪ್ರಕರಣದಲ್ಲೂ ಜಾಮೀನು ಪಡೆಯಲು ಅವರು ತಯಾರಿ ನಡೆಸಿದ್ದಾರೆ.

ಇಂದು ಮುಂಜಾನೆ ತಾವು ಉಳಿದುಕೊಂಡಿದ್ದ ದೇವೇಗೌಡರ ಮನೆಯಿಂದ ಹೊರಟ ರೇವಣ್ಣ ಅವರು ವೈದ್ಯ ಸಿಎನ್ ಮಂಜುನಾಥ್ ಅವರ ನಿವಾಸಕ್ಕೆ ಬಂದು, ಅಲ್ಲಿಂದ ಟೆಂಪಲ್ ರನ್ ಶುರು ಮಾಡಿದರು. ಬೆಳಗ್ಗೆ 8:26ಕ್ಕೆ ಜಯನಗರ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನ, 8:50ಕ್ಕೆ ಗವಿಗಂಗಾಧರೇಶ್ವರ ದೇವಸ್ಥಾನ, 9:10ಕ್ಕೆ ಶ್ರೀ ಶೃಂಗೇರಿ ಶಂಕರ ಮಠ, 10:31ಕ್ಕೆ ಬಸವನಗುಡಿಯ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿ ನಂತರ ಕೋರ್ಟ್‌ಗೆ ಹಾಜರಾದರು.

ವಕೀಲರೊಂದಿಗೆ ಜನಪ್ರತಿನಿಧಿಗಳ ಕೋರ್ಟ್‌ಗೆ ಹಾಜರಾಗಿರುವ ರೇವಣ್ಣ ನ್ಯಾಯಾಧೀಶರ ಎದುರು ಕೈ ಕಟ್ಟಿಕೊಂಡು ನಿಂತರು. ಹೊಳೆನರಸೀಪುರದ ಪ್ರಕರಣ ಬೇಲೆಬಲ್‌ ಪ್ರಕರಣವಾಗಿದ್ದು, ಇದರಲ್ಲೂ ಮುನ್ನೆಚ್ಚರಿಕೆಯಾಗಿ ಜಾಮೀನು ಪಡೆಯಲು ಅವರು ಮುಂದಾಗಿದ್ದಾರೆ. 42ನೇ ಎಸಿಎಂಎಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಧೀಶರು ಜಾಮೀನು ಅರ್ಜಿ ವಿಚಾರಣೆಯನ್ನು ಮಧ್ಯಾಹ್ನ ನಂತರದ ಕಲಾಪಕ್ಕೆ ಮುಂದೂಡಿದರು.

ರೇವಣ್ಣಗೆ ಜಾಮೀನು ನೀಡದಂತೆ ಎಸ್ಐಟಿ ಪರ ವಕೀಲರಾದ ಎಸ್ಪಿಪಿ ಅಶೋಕ್ ನಾಯಕ್ ಅವರ ಜ್ಯೂನಿಯರ್ ವಕೀಲರು ‌ಮನವಿ ಮಾಡಿದರು. ನ್ಯಾಯಾಧೀಶೆ ಪ್ರೀತ್ ಜೆ. ಅವರು, ಎಸ್ಐಟಿ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು‌ ಸೂಚಿಸಿ ವಿಚಾರಣೆ ಮುಂದೂಡಿದರು. ಈ ಕೇಸಲ್ಲಿ ನಾನ್ ಬೇಲೆಬಲ್‌ ಸೆಕ್ಷನ್ ಇಲ್ಲ, ಹೀಗಾಗಿ ಕಡ್ಡಾಯವಾಗಿ ಜಾಮೀನು ನೀಡಬೇಕು ಎಂದು ರೇವಣ್ಣ ಪರ ವಕೀಲರು ಮನವಿ ಮಾಡಿದರು.

ಎಸ್‌ಐಟಿ ಸ್ಥಳ ಮಹಜರು

ಅತ್ತ ಅದೇ ಸಮಯದಲ್ಲಿ ಬಸವನಗುಡಿಯ ರೇವಣ್ಣರ ನಿವಾಸದಲ್ಲಿ ಎಸ್‌ಐಟಿ ತಂಡ ಸ್ಥಳ ಮಹಜರು ನಡೆಸಿತು. ಮನೆಗೆಲಸದ ಹುಡುಗನಿಗೆ ತಪಾಸಣೆಗೆ ಪಡೆದ ಅನುಮತಿ ಪತ್ರ ತೋರಿಸಿ ನಿವಾಸದೊಳಗೆ ಹೋದ ಎಸ್ಐಟಿ ಟೀಮ್, ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳಿಗಾಗಿ ಹುಡುಕಾಟ ನಡೆಸಿತು.

ರೇವಣ್ಣ ನಡೆ ನಿಗೂಢ

ಜಾಮೀನು ಆಗಿ ಎರಡು ದಿನಗಳು ಕಳೆದರೂ ರೇವಣ್ಣ ಹಾಸನ ಕಡೆ ಮುಖ ಮಾಡಿಲ್ಲ. ಮೊದಲ ದಿನವೇ ಶೃಂಗೇರಿಗೆ ಹೋಗಿ ಬಳಿಕ ಹಾಸನಕ್ಕೆ ಹೋಗ್ತಾರೆ ಎಂದು ರೇವಣ್ಣ ಆಪ್ತ ಮೂಲಗಳು ಹೇಳಿದ್ದರಾದರೂ, ನಿನ್ನೆ ಏಕಾಏಕಿ ಪ್ರವಾಸ ರದ್ದು ಮಾಡಿದ್ದರು. ನಿನ್ನೆ ಟೆಂಪಲ್ ರನ್ ಬಳಿಕ ವಕೀಲರ ಭೇಟಿ ಮಾಡಿದ್ದರು. ಇಂದು ಸಹ ಬೆಂಗಳೂರಿನಲ್ಲಿ ಉಳಿದುಕೊಂಡು ಟೆಂಪಲ್ ರನ್ ನಡೆಸಿ ಬಳಿಕ ಕೋರ್ಟ್‌ಗೆ ತೆರಳಿದ್ದಾರೆ.

ಈ ನಡುವೆ, ಮಾಜಿ ಸಚಿವರ ಪತ್ನಿ ಭವಾನಿ ಹಾಗೂ ಪುತ್ರ ಸೂರಜ್ ರೇವಣ್ಣ ಎಲ್ಲೂ ಕಾಣಿಸಿಕೊಂಡಿಲ್ಲ. ಬಸವನಗುಡಿಯ ಸ್ವನಿವಾಸದಿಂದ ರೇವಣ್ಣ ದೂರವೇ ಉಳಿದಿದ್ದಾರೆ. ಸ್ವನಿವಾಸದಿಂದ ದೂರ ಉಳಿಯುವಂತೆ ರೇವಣ್ಣನಿಗೆ ಆಪ್ತ ಜ್ಯೋತಿಷ್ಯಿಗಳು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಜೈಲಿನಿಂದ ಬಿಡುಗಡೆಯಾದಾಗಿನಿಂದ ಬಸವನಗುಡಿ ನಿವಾಸಕ್ಕೆ ಒಮ್ಮೆ ಮಾತ್ರ ಭೇಟಿ ನೀಡಿ ಎರಡೇ ನಿಮಿಷಗಳಲ್ಲಿ ತೆರಳಿದ್ದರು. ಇದಾದ ನಂತರ ಹೆಚ್.ಡಿ ದೇವೇಗೌಡರ ನಿವಾಸದಲ್ಲಿಯೇ ಅವರು ವಾಸ್ತವ್ಯ ಹೂಡಿದ್ದಾರೆ.

ಇದನ್ನೂ ಓದಿ: HD Revanna: ಬಸವನಗುಡಿ ನಿವಾಸದಿಂದ ದೂರವೇ ಉಳಿದ ಎಚ್‌ ಡಿ ರೇವಣ್ಣ; ಜ್ಯೋತಿಷಿಗಳ ಕಟ್ಟೆಚ್ಚರ?

Continue Reading
Advertisement
T20 World Cup 2024
ಕ್ರೀಡೆ5 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ‘ನಂದಿನಿ’ ಲಾಂಛನ; ಹರ್ಷ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

pm narendra modi yogi adityanath
ಪ್ರಮುಖ ಸುದ್ದಿ28 mins ago

PM Narendra Modi: ʼಗೂಂಡಾರಾಜ್‌ʼ ನೆನಪಿಸಿದ ಮೋದಿ, ಉ.ಪ್ರದಲ್ಲಿ ʼಯೋಗಿ ಸ್ವಚ್ಛತಾ ಅಭಿಯಾನʼಕ್ಕೆ ಮೆಚ್ಚುಗೆ

Viral video
ವೈರಲ್ ನ್ಯೂಸ್37 mins ago

Viral Video: ಪನೀರ್‌ ಬಿರಿಯಾನಿಯಲ್ಲಿ ಚಿಕನ್‌ ಪೀಸ್‌.. ಜೊಮ್ಯಾಟೊದಿಂದ ಮತ್ತೊಂದು ಎಡವಟ್ಟು

Head Coach
ಕ್ರೀಡೆ39 mins ago

Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

Drowned in water
ಹಾಸನ1 hour ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

HD DeveGowda Wont celebrate 92nd birthday
ರಾಜಕೀಯ1 hour ago

HD Devegowda: 92ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದ ಎಚ್‌ಡಿ ದೇವೇಗೌಡ; ಮೊಮ್ಮಗನ ಕೇಸ್‌ನಿಂದ ಈ ತೀರ್ಮಾನ?

hd revanna case
ಕ್ರೈಂ1 hour ago

HD Revanna Case: ಎಚ್‌ಡಿ ರೇವಣ್ಣ ಮತ್ತೆ ಕೋರ್ಟ್‌ನಲ್ಲಿ; ಎಸ್‌ಐಟಿ ಅಧಿಕಾರಿಗಳು ರೇವಣ್ಣ ನಿವಾಸದಲ್ಲಿ!

Murder case
ದಾವಣಗೆರೆ1 hour ago

Murder Case : ಚಾಕುವಿನಿಂದ ಇರಿದು ಯುವಕನ ಕೊಲೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

Amruthadhaare Serial bhoomika in birthday chaya singh
ಕಿರುತೆರೆ1 hour ago

Amruthadhaare Serial: ಇಂದು ಭೂಮಿಕಾಗೆ ಹುಟ್ಟು ಹಬ್ಬ: ರೀಲ್‌ ಗಂಡ ಎಸ್ಟೇಟ್​ ಬರೆದು ಕೊಟ್ರು! ರಿಯಲ್‌ ಗಂಡ ಕೊಟ್ಟ ಗಿಫ್ಟ್‌ ಏನು?

Theft in two houses in Kudligi taluk
ವಿಜಯನಗರ1 hour ago

Theft Case: ಕೂಡ್ಲಿಗಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌