ಬೆಂಗಳೂರು, ಕರ್ನಾಟಕ: ಹೈದ್ರಾಬಾದ್ ಕರ್ನಾಟಕದ ಪ್ರಮುಖ ಕ್ಷೇತ್ರವಾಗಿರುವ ರಾಯಚೂರು ನಗರ ಕ್ಷೇತ್ರದಲ್ಲಿ ಬಿಜೆಪಿಯ ಶಿವರಾಜ್ ಪಾಟೀಲ್ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ನ ಮೊಹಮ್ಮದ್ ಶಾಲಮ್ ಅವರ ವಿರುದ್ಧ 3732 ಮತಗಳ ಅಂತರದ ಗೆಲುವು ದಾಖಲಿಸಿದ್ದಾರೆ. ಜೆಡಿಎಸ್‌ನ ವಿನಯಕುಮಾರ್ ಅವರು 2780 ಮತಗಳನ್ನು ಮಾತ್ರ ಪಡೆದುಕೊಳ್ಳಲು ಸಾಧ್ಯವಾಯಿತು. ಗೆದ್ದ ಅಭ್ಯರ್ಥಿ ಶಿವರಾಜ್ ಪಾಟೀಲ್ ಅವರಿಗೆ ಒಟ್ಟು 69655 ಮತಗಳು ಬಂದಿವೆ. ಕಾಂಗ್ರೆಸ್ ಅಭ್ಯರ್ಥಿ ಶಾಲಂ ಅವರು 65923 ಮತಗಳನ್ನು ಪಡೆದುಕೊಂಡಿದ್ದಾರೆ(Raichur Election Results).
2023ರ ಚುನಾವಣೆಯ ಅಭ್ಯರ್ಥಿಗಳು
ಬಿಜೆಪಿಯ ಹಾಲಿ ಶಾಸಕ ಶಿವರಾಜ್ ಪಾಟೀಲ್ ಮತ್ತೆ ಕಣದಲ್ಲಿದ್ದರು. ಕಾಂಗ್ರೆಸ್ ಪಕ್ಷದಿಂದ ಮಹಮ್ಮದ್ ಶಾಲಂ, ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಕಣದಲ್ಲಿದ್ದರು.
ಇದನ್ನೂ ಓದಿ: Karnataka Election Results Live Updates: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ; ಡಬಲ್ ಎಂಜಿನ್ನ ಕೊಂಡಿ ಕಳಚಿದ ‘ಕೈ’
2018ರ ಚುನಾವಣೆಯ ಫಲಿತಾಂಶ ಏನಾಗಿತ್ತು?
ಕಲ್ಯಾಣ ಕರ್ನಾಟಕದಲ್ಲಿ ರಾಯಚೂರು ಪ್ರಮುಖ ಕ್ಷೇತ್ರವಾಗಿದೆ. 1952ರಿಂದಲೂ ಅಸ್ತಿತ್ವದಲ್ಲಿರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್, ಸೋಷಿಯಲಿಸ್ಟ್ ಪಾರ್ಟಿ, ಜನತಾ ಪರಿವಾರದ ಅಭ್ಯರ್ಥಿಗಳು ಗೆದ್ದಿದ್ದಾರೆ. ಕಳೆದ ಬಾರಿ ಬಿಜೆಪಿ ಈ ಕ್ಷೇತ್ರದಲ್ಲಿ ತನ್ನ ಖಾತೆ ತೆರೆದಿದೆ. 2018ರ ಚುನಾವಣೆಯಲ್ಲಿ ಬಿಜೆಪಿಯ ಶಿವರಾಜ್ ಪಾಟೀಲ್ ಅವರು 56511 ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ ಪಕ್ಷದ ಸಯ್ಯದ್ ಯಾಸೀನ್ ಅವರು 45520 ಮತ ಗಳಿಸಿದ್ದರು. ಬಿಜೆಪಿಯ ಅಭ್ಯರ್ಥಿ 10091 ಮತಗಳ ಅಂತರದಿಂದ ಗೆದ್ದಿದ್ದರು. ಜೆಡಿಎಸ್ ಅಭ್ಯರ್ಥಿ ಮಹಾಂತೇ ಪಾಟೀಲ್ ಅವರು 7796 ಮತಗಳನ್ನು ತಮ್ಮದಾಗಿಸಿಕೊಂಡಿದ್ದರು. 2013ರಲ್ಲಿ ಜನತಾ ದಳ ಗೆದ್ದಿತ್ತು. ಈಗ ಬಿಜೆಪಿಯ ಅಭ್ಯರ್ಥಿಯಾಗಿರುವ ಶಿವರಾಜ್ ಪಾಟೀಲ್ ಅವರೇ 2013ರಲ್ಲಿ ಗೆದ್ದಿದ್ದರು. ಈ ಕ್ಷೇತ್ರದಲ್ಲಿ ಅತಿಹೆಚ್ಚು ಬಾರಿ ಮುಸ್ಲಿಮ್ ಅಭ್ಯರ್ಥಿಗಳು ಆಯ್ಕೆಯಾಗಿರುವುದು ಅದರ ವಿಶೇಷತೆಯಾಗಿದೆ.