ರಾಯಚೂರು: ವಿಸ್ತಾರ ನ್ಯೂಸ್ ಸಹಯೋಗದಲ್ಲಿ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ (University) ಆವರಣದಲ್ಲಿ ಬುಧವಾರ ಅಂತಾರಾಷ್ಟ್ರೀಯ ಯೋಗ ದಿನ (International Yoga Day) ಆಚರಿಸಲಾಯಿತು.
ವಿಸ್ತಾರ ನ್ಯೂಸ್, ಪತಂಜಲಿ ಯೋಗ ಸಮಿತಿ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಕೃಷಿ ವಿವಿಯ ಸ್ನಾತಕೋತ್ತರ ವಿಭಾಗದ ಡೀನ್ ಡಾ.ಗುರುರಾಜ ಸುಂಕದ ಅವರು, ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು.
ಇದನ್ನೂ ಓದಿ: Yoga Day 2023: ಸುತ್ತೂರು ಮಠದಲ್ಲಿ ಯೋಗ ದಿನಾಚರಣೆ; 2 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ
ಬಳಿಕ ಮಾತನಾಡಿದ ಅವರು, ಯೋಗ ಪ್ರತಿಯೊಬ್ಬರ ಜೀವನಕ್ಕೆ ಅತ್ಯವಶ್ಯಕವಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ಯೋಗವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಬಳಿಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಫುಟ್‌ಬಾಲ್ ಮೈದಾನದಲ್ಲಿ ವಿವಿಯ ವಿದ್ಯಾರ್ಥಿಗಳು, ಸಿಬ್ಬಂದಿ ಹಾಗೂ ಇತರರಿಂದ ಯೋಗಾಭ್ಯಾಸ ನಡೆಯಿತು.
ಇದನ್ನೂ ಓದಿ: Indian Army Recruitment 2023 : ಎಂಜಿನಿಯರಿಂಗ್ ಪದವೀಧರರಿಗೆ ಸೇನೆಯಲ್ಲಿ ಆಫೀಸರ್ ಹುದ್ದೆ; ಕೂಡಲೇ ಅರ್ಜಿ ಸಲ್ಲಿಸಿ!
ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಸಮಿತಿಯ ಜಿ.ಡಿ. ಪಟೇಲ್, ರುತುರಾಜ್ ಗೌಡ, ಲಾಲಜಿ ಪಟೇಲ್, ರಾಜಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.