Site icon Vistara News

Raichur News: ಮಸ್ಕಿ: ಸ್ವಾತಂತ್ರ‍್ಯ ದಿನಾಚರಣೆಯ ಪೂರ್ವಭಾವಿ ಸಭೆ

Preparatory meeting for Independence Day at Maski

ಮಸ್ಕಿ: ಸ್ವಾತಂತ್ರ‍್ಯ ದಿನಾಚರಣೆಯನ್ನು (Independence Day) ಮನೆಯ ಹಬ್ಬದಂತೆ ಆಚರಿಸಲು ಅಗತ್ಯ ಕ್ರಮವನ್ನು ಕೈಗೊಳ್ಳಬೇಕು ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಸೀಲ್ದಾರ್ ಅರಮನೆ ಸುಧಾ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಸ್ವಾತಂತ್ರ‍್ಯ ದಿನಾಚರಣೆಗೆ ಸಂಬಂಧಿಸಿದಂತೆ ಮಂಗಳವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬರುವ ಆ.15 ರಂದು ಸ್ವಾತಂತ್ರ‍್ಯ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಗುವುದು. ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್ ಧ್ವಜದ ಬಳಕೆ ಎಲ್ಲಿಯೂ ಆಗಬಾರದು. ಇದಕ್ಕಾಗಿ ಯಾವುದೇ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟವಾಗಬಾರದು. ಜನರು ಕೂಡ ಬಳಸಬಾರದು ಎಂದು ಮನವಿ ಮಾಡಿದರು.

ಇದನ್ನೂ ಓದಿ: Ballari News: ಬಳ್ಳಾರಿಯಲ್ಲಿ ಕಿಷ್ಕಿಂದ ವಿಶ್ವವಿದ್ಯಾಲಯ ಪ್ರಾರಂಭ: ಡಾ. ಎಸ್.ಜೆ.ವಿ. ಮಹಿಪಾಲ್

ಸ್ವಾತಂತ್ರ‍್ಯ ದಿನದಂದು ಬೆಳಗ್ಗೆ 7 ಗಂಟೆಗೆ ದೈವದಕಟ್ಟೆ ಹತ್ತಿರ, ಬೆಳಗ್ಗೆ 7.20 ಕ್ಕೆ ಪುರಸಭೆ ಕಾರ್ಯಾಲಯ, ಬೆಳಗ್ಗೆ 7.45 ಕ್ಕೆ ಗಾಂಧಿ ಪ್ರತಿಮೆ ಹತ್ತಿರ ಹಾಗೂ ಬೆಳಿಗ್ಗೆ 9 ಗಂಟೆಗೆ ಸರ್ಕಾರಿ ಕೇಂದ್ರ ಶಾಲಾ ಮೈದಾನದಲ್ಲಿ ಸಾರ್ವಜನಿಕ ಧ್ವಜಾರೊಹಣವನ್ನು ತಹಸೀಲ್ದಾರರು ನೆರವೇರಿಸಲಿದ್ದಾರೆ.

ಪ್ರತಿಯೊಂದು ಕಚೇರಿಯ ಮುಂದೆ ಅಂದಿನ ದಿನ ಧ್ವಜ ಹಾರಿಸುವುದು ಕಡ್ಡಾಯ. ಧ್ವಜ ಸಂಹಿತೆ ಅನುಸಾರವಾಗಿ ಧ್ವಜಾರೋಹಣ ಮಾಡಬೇಕು. ಧ್ವಜದ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಸ್ವಾತಂತ್ರ‍್ಯ ದಿನಾಚರಣೆ ನಿಮಿತ್ತ ಪಟ್ಟಣದ ಪ್ರಮುಖ ಬೀದಿ, ಸರ್ಕಾರಿ ಕಚೇರಿ ಕಟ್ಟಡಗಳಿಗೆ ವಿದ್ಯುತ್ ದೀಪಾಲಂಕಾರ ಕೈಗೊಂಡು ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಲಾ ಮಕ್ಕಳಿಗೆ ಬೆಳಿಗ್ಗೆಯೇ ಆಯಾ ಶಾಲಾ ಮುಖ್ಯಸ್ಥರು ಉಪಹಾರ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಅಲ್ಲದೆ ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿಸಬೇಕು ಎಂದು ತಹಸೀಲ್ದಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: Yadgiri News: ಭರ್ತಿಯಾದ ಹತ್ತಿಕುಣಿ ಜಲಾಶಯ; ರೈತರಲ್ಲಿ ಸಂತಸ

ಈ ಸಂದರ್ಭದಲ್ಲಿ ಸಿಪಿಐ ಬಾಲಚಂದ್ರ ಡಿ.ಲಕ್ಕಂ, ಪಿಎಸ್‌ಐ ಮಣಿಮಠ, ಪುರಸಭೆ ಮುಖ್ಯಾಧಿಕಾರಿ ನರಸರಡ್ಡಿ, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳಾದ ಅಶೋಕ ಮುರಾರಿ, ದುರಗರಾಜ ವಟಗಲ್, ಆರ್.ಕೆ. ನಾಯಕ, ಕಿರಣ ಮುರಾರಿ, ಪುರಸಭೆ, ಶಿಕ್ಷಣ ಇಲಾಖೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

Exit mobile version