Site icon Vistara News

Woman Deliver Baby in Auto: ಆಸ್ಪತ್ರೆಗೆ ಹೋಗುವಾಗ ಆಟೋದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

Woman Deliver Baby in Auto

ರಾಯಚೂರು: ಗರ್ಭಿಣಿಯೊಬ್ಬರು ಹೆರಿಗೆಗಾಗಿ ಆಸ್ಪತ್ರೆಗೆ ತೆರಳುವ ವೇಳೆ ಆಟೊದಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ. ಪಟ್ಟಣದ ಸಂತೆ ಬಜಾರ್‌ ರಸ್ತೆಯ ಮನೆಯೊಂದರ ಗರ್ಭಿಣಿಗೆ ಬೆಳಗ್ಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕುಟುಂಬಸ್ಥರು ತಕ್ಷಣ ಆಟೋ ಕರೆಸಿದ್ದರು. ಆಟೋದಲ್ಲಿ ಮಹಿಳೆಯನ್ನು ಕೂರಿಸಿಕೊಂಡು ಆಸ್ಪತ್ರೆಗೆ ಹೋಗುವ ವೇಳೆ ಹೆರಿಗೆ ನೋವು ಹೆಚ್ಚಾಗಿದ್ದು, ಈ ವೇಳೆ ಗಂಡು ಮಗುವಿಗೆ ಜನ್ಮ (Woman Deliver Baby in Auto) ನೀಡಿದ್ದಾಳೆ.

ಆಟೋದಲ್ಲಿ ಹೋಗುತ್ತಿದ್ದಾಗ ಗರ್ಭಿಣಿಗೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ ಚಾಲಕ ಮಾರ್ಗ ಮಧ್ಯದಲ್ಲಿಯೇ ಆಟೊ ನಿಲ್ಲಿಸಿದ್ದಾನೆ. ನೆರೆಹೊರೆ ಮಹಿಳೆಯರು ಹಾಗೂ ಕುಟುಂಬದ ಸದಸ್ಯರು ಆಟೋ ಸುತ್ತ ಪರದೆ ಕಟ್ಟಿ ಹೆರಿಗೆಗೆ ಸಹಕಾರ ನೀಡಿದ್ದಾರೆ. ಮಹಿಳೆಯು ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಆಶಾ ಕಾರ್ಯಕರ್ತೆಯರು ಮಹಿಳೆ ಹಾಗೂ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲು ನೆರವಾಗಿದ್ದಾರೆ.

ಇದನ್ನೂ ಓದಿ | Viral Video: ನಿನಗೆಷ್ಟು ಬಾಯ್‌ಫ್ರೆಂಡ್‌ ಎನ್ನುತ್ತ ಗೆಳತಿಗೆ ಭೀಕರವಾಗಿ ಇರಿದ ಯುವ ಕಾಂಗ್ರೆಸ್ ಮುಖಂಡ!

Viral Video: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬಿದ್ದ ಕಬ್ಬಿಣದ ಗೇಟ್; ಶಾಕಿಂಗ್‌ ವಿಡಿಯೊ

ಪುಣೆ : ಮಕ್ಕಳನ್ನು ಮನೆಯ ಹೊರಗೆ ಆಟವಾಡಲು ಬಿಡುವಾಗ ಪೋಷಕರು ಸ್ವಲ್ಪ ಎಚ್ಚರ ವಹಿಸಬೇಕು. ಮಕ್ಕಳನ್ನು ಅವರ ಪಾಡಿಗೆ ಬಿಡಬಾರದು. ಅವರು ಮನೆಯ ಹೊರಗೆ ಆಟವಾಡುತ್ತಿದ್ದರೆ ಅವರ ಕಡೆ ಗಮನ ಕೊಡುತ್ತಿರಬೇಕು. ಇಲ್ಲವಾದರೆ ಇದರಿಂದ ದುರ್ಘಟನೆಗಳು ಸಂಭವಿಸಿ ಮಕ್ಕಳಿಗೆ ಅಪಾಯವಾಗಬಹುದು. ಅಂತಹದೊಂದು ಘಟನೆ ಪುಣೆಯಲ್ಲಿ ಬೆಳಕಿಗೆ ಬಂದಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಮೂರುವರೆ ವರ್ಷದ ಬಾಲಕಿಯ ಮೇಲೆ ಭಾರವಾದ ಕಬ್ಬಿಣದ ಗೇಟ್ ಬಿದ್ದು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಪುಣೆಯ ಪಿಂಪ್ರಿ-ಚಿಂಚ್ವಾಡಿಯ ಗಣೇಶ್ ನಗರದ ಬೋಪ್ಖೇಲ್‍ನಲ್ಲಿ ಬುಧವಾರ ನಡೆದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಘಟನೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ ನಾಲ್ಕು ಮಕ್ಕಳು ತಮ್ಮ ಮನೆಯ ಹೊರಗೆ ಆಟವಾಡುತ್ತಿದ್ದರು. ಕೆಲವು ಕ್ಷಣಗಳ ನಂತರ, ಹುಡುಗರಲ್ಲಿ ಒಬ್ಬ ಸೈಕಲ್ ಹೊಂದಿರುವ ಮತ್ತೊಂದು ಹುಡುಗನಿಗೆ ಮನೆಯೊಳಗೆ ಹೋಗಲು ಗೇಟ್ ಅನ್ನು ಹಿಂದಕ್ಕೆ ತಳ್ಳಿದನು. ಹುಡುಗ ಪ್ರವೇಶಿಸಿದಾಗ, ಅವನು ಅದನ್ನು ಲಾಕ್ ಮಾಡಲು ಗೇಟ್ ಅನ್ನು ಮುಂದಕ್ಕೆ ಎಳೆದಿದ್ದಾನೆ. ಇದನ್ನು ನೋಡಿದ ಇಬ್ಬರು ಹುಡುಗಿಯರು ಕಬ್ಬಿಣದ ಗೇಟ್ ಕಡೆಗೆ ಓಡಿ ಬಂದಿದ್ದಾರೆ. ಆಗ ಗೇಟ್ ಆಯತಪ್ಪಿ ಕೆಳಗೆ ಬಿದ್ದಿದೆ. ಆ ವೇಳೆ ಟೆಡ್ಡಿ ಬೇರ್ ಹಿಡಿದಿದ್ದ ಒಬ್ಬ ಹುಡುಗಿ ಸಮಯಕ್ಕೆ ಸರಿಯಾಗಿ ಅಲ್ಲಿಂದ ಜಿಗಿದರೆ, ಗೇಟ್ ಕೆಳಗೆ ಬಿದ್ದು ಇನ್ನೊಬ್ಬ ಹುಡುಗಿ ನಜ್ಜುಗುಜ್ಜಾಗಿದ್ದಾಳೆ.

ಭಯಭೀತರಾದ ಮಕ್ಕಳು ಸಹಾಯಕ್ಕಾಗಿ ಕೂಗುತ್ತಾ ಓಡಿಹೋದರು. ನಂತರ ಅಲ್ಲಿಗೆ ಬಂದ ವ್ಯಕ್ತಿಯೊಬ್ಬರು ಗೇಟ್ ಅನ್ನು ಎತ್ತಿ ಮಗುವನ್ನು ಎತ್ತಿಕೊಂಡು ಓಡಿದ್ದಾರೆ. ವರದಿಗಳ ಪ್ರಕಾರ, ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಪ್ರಾರಂಭವಾಗುವ ಮೊದಲೇ ಅವಳು ಸತ್ತಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪ್ರೀತಿಸಿದ ಹುಡುಗಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವಕ; ಗಾಬರಿಗೊಳಿಸುವ ವಿಡಿಯೊ

ಮೃತಪಟ್ಟ ಹುಡುಗಿಯನ್ನು ಗಿರಿಜಾ ಗಣೇಶ್ ಶಿಂಧೆ ಎಂದು ಗುರುತಿಸಲಾಗಿದೆ. ಕಟ್ಟಡದ ಮಾಲೀಕರು ಮತ್ತು ನಿವಾಸಿಗಳು ಗೇಟ್ ಸರಿಯಾಗಿರಲಿಲ್ಲ. ಹಾಗಾಗಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ತನಿಖೆಯ ವೇಳೆ ತಿಳಿಸಿದ್ದಾರೆ. ಈ ಘಟನೆಯು ನಿವಾಸಿಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿದ್ದು, ಕಟ್ಟಡ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Exit mobile version