ರಾಯಚೂರು: ರಾಯಚೂರು ನಗರದ ಬಿಜೆಪಿ ಶಾಸಕರಿಗೆ ವ್ಯಕ್ತಿಯೊಬ್ಬ ಚಾಕು ತೋರಿಸಿ ಹಲ್ಲೆಗೆ (Assault Case) ಯತ್ನಿಸಿದ್ದಾನೆ. ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ರಾಯಚೂರಿನ ಗದ್ವಾಲ್ ರಸ್ತೆಯಲ್ಲಿ ಕಾರ್ಯಕ್ರಮಕ್ಕೆಂದು ತೆರಳಿದ್ದರು. ಈ ವೇಳೆ ಏಕಾಏಕಿ ಶಾಸಕರ ಬಳಿ ಬಂದ ಅಪರಿಚಿತ ಚಾಕು ತೋರಿಸಿ ಹಲ್ಲೆಗೆ ಯತ್ನಿಸಿದ್ದಾನೆ.
ಹಲ್ಲೆಗೆ ಯತ್ನಿಸಿದವನ್ನು ಚಾಂದಪಾಶಾ ಎಂದು ಗುರುತಿಸಲಾಗಿದೆ. ಮದ್ಯ ವ್ಯಸನಿಯಾಗಿರುವ ಚಾಂದಪಾಶಾ, ಶಾಸಕ ಶಿವರಾಜ್ ಪಾಟೀಲ್‌ರನ್ನು ಮನಬಂದಂತೆ ನಿಂದಿಸಿ ಹಲ್ಲೆಗೈಯಲು ಯತ್ನಿಸಿದ್ದಾನೆ. ಈ ವೇಳೆ ಬೆಂಬಲಿಗರು ತಡೆಯಲು ಹೋದಾಗ ಚಾಕು ತೋರಿಸಿದ್ದಾನೆ. ಕೂಡಲೇ ಆತನನ್ನು ಹಿಡಿದು ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನೂ ಈ ಸಂಬಂಧ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್, ಆತ ಮದ್ಯ ವ್ಯಸನಿ ಎಂದು ತಿಳಿದು ಬಂದಿದೆ. ಕುಡಿದು ಬಂದು ಈ ರೀತಿಯ ಕೃತ್ಯ ಎಸಗಿದ್ದಾನೆ. ಬೆಳಗಿನಿಂದ ಈ ಸಂಬಂಧ ಸಾಕಷ್ಟು ಜನರು ಕರೆ ಮಾಡಿ ಕೇಳುತ್ತಿದ್ದಾರೆ. ಆದರೆ ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದೇನೆ. ಇದರ ಹಿಂದೆ ಯಾವುದೇ ಷಡ್ಯಂತ್ರ ಇಲ್ಲವೆನಿಸುತ್ತೆ. ಈ ಘಟನೆಗೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ.
ಆತ ನಗರಸಭೆ ವಾರ್ಡ್ ನಂ23ರಲ್ಲಿ ವಾಸವಿರುವುದು ತಿಳಿದು ಬಂದಿದೆ. ಅಲ್ಲಿನ ಕೌನ್ಸಲರ್‌ಗೂ ನಮ್ಮ ಮುಖಂಡರು ಮಾತನಾಡಿದ್ದಾರೆ. ಆತ ಪ್ರತಿ ದಿನ ಇದೇ ರೀತಿ ಕುಡಿದು ಬಂದು ಮನೆಯವರಿಗೆ, ಮಕ್ಕಳಿಗೆ ಹಿಂಸೆ ಮಾಡುತ್ತಾನೆ ಎಂದು ಹೇಳಿದ್ದಾರೆ. ನನಗೆ ವೈಯಕ್ತಿಕವಾಗಿ ದ್ವೇಷ ಮಾಡುವಂತವರು ಯಾರೂ ಇಲ್ಲ, ನಾನು ಒಬ್ಬನೇ ಓಡಾಡುವ ವ್ಯಕ್ತಿ. ನಾನು ಗನ್ ಮ್ಯಾನ್ ಸಹ ಬೇಡ ಎಂದಿದ್ದೆ, ಆದರೂ ಕೊಟ್ಟಿದ್ದಾರೆ. ಸದ್ಯ ಘಟನೆ ಸಂಬಂಧ ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ ಎಂದರು.
ಇದನ್ನೂ ಓದಿ: Physical Abuse : ದಾರಿಯುದ್ದಕ್ಕೂ ಪುಂಡರ ಚೇಸಿಂಗ್; ಕಾರಿನಲ್ಲಿದ್ದ ಯುವತಿಯರನ್ನು ಸುತ್ತುವರಿದು ಟಾರ್ಚರ್
Assault Case : ಪೊಲೀಸ್ ಠಾಣೆಗೆ ನುಗ್ಗಿ ಎಎಸ್‌ಐಗೆ ಹೊಡೆದ ಮಹಿಳೆ; ಇಬ್ಬರು ಆಸ್ಪತ್ರೆ ಪಾಲು
ಬೆಂಗಳೂರು: ಪ್ರಾಪರ್ಟಿ ವಿಚಾರದಲ್ಲಿ ನ್ಯಾಯ ಸಿಗಲಿಲ್ಲ ಎಂದು ಸಿಟ್ಟಾದ ಮಹಿಳೆಯೊಬ್ಬರು ಪೊಲೀಸ್ ಮೇಲೆ ಹಲ್ಲೆ (Assault Case) ನಡೆಸಿರುವ ಆರೋಪವೊಂದು ಕೇಳಿ ಬಂದಿದೆ. ಶನಿವಾರ ಮಧ್ಯಾಹ್ನ ಬೆಂಗಳೂರಿನ (Bengaluru News) ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.
ಅಶ್ವಿನಿ ಎಂಬಾಕೆ ಎಎಸ್ಐ ನಾಗರಾಜು ಮೇಲೆ ಹಲ್ಲೆ ನಡೆಸಿದ್ದಾರೆ. ಹಲವು ದಿನಗಳಿಂದ ಗಂಗಮ್ಮನ ಗುಡಿ ಪೊಲೀಸ್ ಠಾಣೆಗೆ ಅಶ್ವಿನಿ ಬಂದು ಹೋಗುತ್ತಿದ್ದರು. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅನೇಕ ಬಾರಿ ಅಶ್ವಿನಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದರು ಎನ್ನಲಾಗಿದೆ.ಆದರೆ ತನ್ನ ಸಮಸ್ಯೆಗೆ ನ್ಯಾಯ ಸಿಗುತ್ತಿಲ್ಲವೆಂಬ ಸಿಟ್ಟಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಮಾನಸಿಕ ಅಸ್ವಸ್ಥತೆಯಾಗಿರುವ ಅಶ್ವಿನಿ ಕಳೆದ 15 ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ನಿನ್ನೆ ಠಾಣೆಗೆ ಬಂದ ಅಶ್ವಿನಿ ಎಎಸ್‌ಐ ನಾಗರಾಜು ಜತೆ ಮಾತುಕತೆ ನಡೆಸಿದ್ದಾಳೆ. ಈ ವೇಳೆ ಏಕಾಏಕಿ ಸಿಟ್ಟಾಗಿ ಕೈಗೆ ಸಿಕ್ಕ ವಸ್ತುವಿನಿಂದ ನಾಗರಾಜು ಮೇಲೆ ಹಲ್ಲೆ ನಡೆಸಿದ್ದಾಳೆ.
ಸದ್ಯ ಹಲ್ಲೆಗೊಳಗಾದ ಎಎಸ್ಐ ನಾಗರಾಜು ಅವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತ ಅಶ್ವಿನಿಗೂ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಈ ಘಟನೆ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ