Chakravarty Sulibele: 'ಲೆಟರ್ ಇಲ್ದೇ ಕಾಶ್ಮೀರ ಪಡೆಯುವುದು ಪಟೇಲರ ದೂರದೃಷ್ಟಿಯಾಗಿತ್ತು' - Vistara News

ರಾಜಕೀಯ

Chakravarty Sulibele: ‘ಲೆಟರ್ ಇಲ್ದೇ ಕಾಶ್ಮೀರ ಪಡೆಯುವುದು ಪಟೇಲರ ದೂರದೃಷ್ಟಿಯಾಗಿತ್ತು’

VISTARANEWS.COM


on

Chakravarti Sulibele
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024: ರಾಮನಗರ ಜಿಲ್ಲಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿಗೆ ಸಹಸ್ರಾರು ಮಂದಿ ಕಾಂಗ್ರೆಸ್‌ ಕಾರ್ಯಕರ್ತರ ಜತೆಗೆ ಮೆರವಣಿಗೆ ನಡೆಸಿದ ಡಿ.ಕೆ. ಸುರೇಶ್‌ ರಾಮನಗರ ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಇತ್ತ ಬೃಹತ್‌ ವೇದಿಕೆಯಲ್ಲಿ ಕಾಂಗ್ರೆಸ್‌ ಪಕ್ಷವು ಬಲಪ್ರದರ್ಶನ ಮಾಡಿದೆ.

VISTARANEWS.COM


on

Lok Sabha Election 2024 DK Brothers hold roadshow in Ramanagara and DK Suresh file nomination
Koo

ರಾಮನಗರ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ (Bangalore Rural Constituency) ಕಾಂಗ್ರೆಸ್‌ ಅಭ್ಯರ್ಥಿ, ಸಂಸದ ಡಿ.ಕೆ. ಸುರೇಶ್‌ (DK Suresh) ಅವರು ಜನಸ್ತೋಮದ ನಡುವೆ ಗುರುವಾರ (ಮಾ. 28) ನಾಮ ಪತ್ರವನ್ನು ಸಲ್ಲಿಸಿದ್ದಾರೆ. ಈ ವೇಳೆ ರಾಮನಗರದ ಜಿಲ್ಲಾ ಮೈದಾನದಲ್ಲಿ ಶಕ್ತಿ ಪ್ರದರ್ಶನವನ್ನು ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Suresh) ಸೇರಿದಂತೆ ಕಾಂಗ್ರೆಸ್‌ ನಾಯಕರು ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಡಿ.ಕೆ. ಸುರೇಶ್‌ ನನ್ನ ತಮ್ಮ ಅನ್ನೋದನ್ನು ಸೈಡಿಗಿಡಿ. ಒಬ್ಬ ಸಂಸದನಾಗಿ ಅವರು ಗ್ರಾಮ ಪಂಚಾಯಿತಿ ಸದಸ್ಯನಂತೆ ಮಾಡಿರುವ ಅಭಿವೃದ್ಧಿ ಕಾರ್ಯವನ್ನು ನೋಡಿ ಮತ ಹಾಕಿ ಎಂದು ಹೇಳಿದರು.

ರಾಮನಗರ ಜಿಲ್ಲಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿಗೆ ಸಹಸ್ರಾರು ಮಂದಿ ಕಾಂಗ್ರೆಸ್‌ ಕಾರ್ಯಕರ್ತರ ಜತೆಗೆ ಮೆರವಣಿಗೆ ನಡೆಸಿದ ಡಿ.ಕೆ. ಸುರೇಶ್‌ ರಾಮನಗರ ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಎಚ್.ಸಿ. ಬಾಲಕೃಷ್ಣ, ಆನೇಕಲ್ ಶಿವಣ್ಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಮತ್ತಿತರರು ಇದ್ದರು.

ಇದನ್ನೂ ಓದಿ: Lok Sabha Election 2024: ಇಂದು ಡಿಕೆ ಸುರೇಶ್‌ ನಾಮಪತ್ರ ಸಲ್ಲಿಕೆ; ಅಣ್ಣ – ಅತ್ತಿಗೆ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಸಂಸದ

ಇತ್ತ ರಾಮನಗರ ಜಿಲ್ಲಾ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ನಮ್ಮ ಮೇಲೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಬಿದ್ದು ಬಿಟ್ಟಿದ್ದಾರೆ. ಐಟಿ, ಇಡಿಗೆ ದೂರು ಕೊಟ್ಟಿದ್ದಾರೆ. ಅದಕ್ಕೆ ನಿಮ್ಮನ್ನು ಬಿಸಿಲಿನಲ್ಲಿ ನಿಲ್ಲಿಸಿದ್ದೇವೆ ಎಂದು ಮಾರ್ಮಿಕವಾಗಿ ಹೇಳಿದರು.

ಡಿ.ಕೆ ಸುರೇಶ್ ಅವರು ನಾಲ್ಕನೇ ಬಾರಿ ಲೋಕಸಭೆ ಪ್ರವೇಶಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಅರ್ಜಿ ಸಲ್ಲಿಸಿದ್ದಾರೆ. ನಾವ್ಯಾರೂ ಡಿ.ಕೆ. ಸುರೇಶ್ ಅವರನ್ನು ಆಯ್ಕೆ ಮಾಡಿ ಕಳಿಸಿರಲಿಲ್ಲ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಅಂದು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟು ಬೈ ಎಲೆಕ್ಷನ್ ಆಯಿತು. ಆಗ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇದ್ದರು, ನಾನು ಮಂತ್ರಿ ಆಗಿರಲಿಲ್ಲ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಡಿ.ಕೆ. ಸುರೇಶ್‌ಗೆ ಟಿಕೆಟ್ ಕೊಟ್ಟಿದ್ದರು. ಅಂದು ಜಿಲ್ಲೆಯ ಜನತೆ ಡಿ.ಕೆ. ಶಿವಕುಮಾರ್ ಅವರಿಗೆ ಶಕ್ತಿ ತುಂಬಬೇಕು ಎಂದು 1 ಲಕ್ಷ 30 ಸಾವಿರ ಮತಗಳಿಂದ ಲೋಕಸಭೆಗೆ ಕಳಿಸಿದ್ದೀರಿ ಎಂದು ಹೇಳಿದರು.

ಡಿಕೆಸು ನನ್ನ ತಮ್ಮ ಅನ್ನೋದು ಬಿಡಿ!

ಡಿ.ಕೆ. ಸುರೇಶ್ ನನ್ನ ತಮ್ಮ ಅನ್ನೋದು ಬಿಡಿ, ಪಂಚಾಯಿತಿ ಸದಸ್ಯನ ರೀತಿಯಲ್ಲಿ ಅವರು ಕೆಲಸ ‌ಮಾಡಿದರು. ದೇವೇಗೌಡರು, ಕುಮಾರಸ್ವಾಮಿ ಸಂಸದರು ಆಗಿದ್ದರು. ಅವರು ಎಷ್ಟು ಬಾರಿ ನಿಮ್ಮ ಹಳ್ಳಿಗೆ ಬಂದಿದ್ದಾರೆ‌? ಅದು ನಿಮ್ಮ ಮತ್ತು ಅವರ ಆತ್ಮಸಾಕ್ಷಿಗೆ ಬಿಡುತ್ತೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಕ್ಷೇತ್ರದ ಜನರಿಗೆ 100 ಎಕರೆಯಲ್ಲಿ ಸೈಟ್ ಕೊಡಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದೆ. ಆದರೆ, ಕುಮಾರಸ್ವಾಮಿ ಸಭೆಗೆ ಬರಲಿಲ್ಲ. ಈಗ ಇಕ್ಬಾಲ್ ಅವರನ್ನು ಆಯ್ಕೆ ಮಾಡಿದ್ದೀರಿ. ಮಾಗಡಿಯಲ್ಲಿ ಸೈಟ್ ಕೊಡಲು ತೀರ್ಮಾನ ಮಾಡಿದ್ದೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನೀರಿಗಾಗಿ ಮೇಕೆದಾಟು ಪಾದಯಾತ್ರೆ ಮಾಡಿದ್ದೇವೆ. ಆಗ ಜೆಡಿಎಸ್ ಬೆಂಬಲ ಕೊಡಲಿಲ್ಲ. ಈಗ ಎಚ್.ಡಿ. ದೇವೇಗೌಡರು ನೀರಿನ ಬಗ್ಗೆ ಮಾತನಾಡುತ್ತಿದ್ದಾರೆ. ತಮ್ಮ ಕುಟುಂಬದವರು ಸ್ಪರ್ಧೆ ಮಾಡಿದ್ದಾರೆ ಎಂದು ಮಾತನಾಡುತ್ತಿದ್ದಾರೆ. ರೈತರ ಮುನಿಸು ತಟ್ಟಬಹುದು ಎಂದು ಮಾತನಾಡುತ್ತಾರೆ‌ ಎಂದು ಡಿ.ಕೆ ಶಿವಕುಮಾರ್ ಕಿಡಿಕಾರಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯನ್ನು ಬಿಜೆಪಿ ಚಿಹ್ನೆಯಲ್ಲಿ ನಿಲ್ಲಿಸಿದ್ದಾರೆ‌‌. ಕರ್ನಾಟಕದಲ್ಲಿ ಜೆಡಿಎಸ್‌ ಎಲ್ಲಿದೆ‌? ಎಚ್.ಡಿ. ಕುಮಾರಸ್ವಾಮಿ ಅವರು ಎರಡು ಬಾರಿ ಜಿಲ್ಲೆಯಿಂದ ಸಿಎಂ ಆಗಿದ್ದರು. ಈಗ ಮಂಡ್ಯಕ್ಕೆ ಹೊರಟಿದ್ದಾರೆ. ನೀವು ಟಾಟಾ ಗುಡ್ ಬೈ ಹೇಳಬೇಕು ಎಂದು ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

ಇದನ್ನೂ ಓದಿ: Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

ಡಿ.ಕೆ. ಸುರೇಶ್ ರಾಜೀನಾಮೆ ಕೊಡಲು ಹೋಗಿದ್ದಾರೆ!

ಡಿ.ಕೆ. ಶಿವಕುಮಾರ್‌ ಅವರು ಮಾತನಾಡುವ ಭರದಲ್ಲಿ ಡಿ.ಕೆ. ಸುರೇಶ್ ರಾಜೀನಾಮೆ ಕೊಡಲು ಹೋಗಿದ್ದಾರೆ ಎಂದು ಬಾಯಿ ತಪ್ಪಿ ಹೇಳಿದರು. ಬಳಿಕ ನಾಮಪತ್ರ ಸಲ್ಲಿಸಲು ಹೋಗಿದ್ದಾರೆ ಎಂದು ಸರಿಮಾಡಿಕೊಂಡರು.

ಕೋವಿಡ್ ಸಮಯದಲ್ಲಿ ಶಾಸಕರಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅವರು ಎಲ್ಲಿಗೆ ಹೋಗಿದ್ದರು? ಅಭ್ಯರ್ಥಿ, ಕುಟುಂಬದವರು ಎಲ್ಲಿ ಹೋಗಿದ್ದರು? ಡಿ.ಕೆ. ಸುರೇಶ್ ಅವರು ಸಂಕಷ್ಟದಲ್ಲಿ ಜನರಿಗೆ ಔಷಧಿ, ಆಸ್ಪತ್ರೆ ವ್ಯವಸ್ಥೆಗಳನ್ನು ಮಾಡಿದರು. ಕೊಟ್ಟ ಕುದುರೆ ಏರದವನು ವೀರನೂ ಅಲ್ಲ, ಧೀರನೂ ಅಲ್ಲ. ಅಧಿಕಾರದಲ್ಲಿ ಇದ್ದಾಗಲೇ ಏನು ಮಾಡಲಿಲ್ಲ, ಈಗ ಏನು ಮಾಡ್ತಾರೆ? ನಾವು ನಿಮ್ಮ ಸೇವೆಗೆ ಸಿದ್ಧವಾಗಿದ್ದೇವೆ ಎಂದು ಎಚ್‌ಡಿಕೆ ವಿರುದ್ಧ ಡಿ.ಕೆ. ಶಿವಕುಮಾರ್‌ ವಾಗ್ದಾಳಿ ನಡೆಸಿದರು.

ಸಚಿವ ಮಂಕಾಳ್ ವೈದ್ಯ, ಕುಣಿಗಲ್ ಶಾಸಕ ರಂಗನಾಥ್, ಇಕ್ಬಾಲ್ ಹುಸೇನ್, ಪಿ.ಜಿ.ಆರ್ ಸಿಂಧ್ಯ, ಕುಸುಮಾ ಹನುಮಂತರಾಯಪ್ಪ, ಯೂತ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Continue Reading

Lok Sabha Election 2024

Lok Sabha Election 2024: ಪ್ರಲ್ಹಾದ್‌ ಜೋಶಿಗೆ ವಾಲ್ಮೀಕಿ ಸಮಾಜದ ಬೆಂಬಲ: ಪ್ರಸನ್ನಾನಂದಪುರಿ ಸ್ವಾಮೀಜಿ

Lok Sabha Election 2024: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಮಾಜದವರು ಒಗ್ಗಟ್ಟಾಗಿ ಪ್ರಲ್ಹಾದ್‌ ಜೋಶಿಯವರನ್ನು ಬೆಂಬಲಿಸುವ ಮೂಲಕ ಶಕ್ತಿ ತುಂಬಬೇಕು. ರಾಜ್ಯದಲ್ಲೇ ಅತಿ ಹೆಚ್ಚು ಅಂತರದ ಗೆಲುವು ಜೋಶಿಯವರದ್ದಾಗಬೇಕು ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಕರೆ ನೀಡಿದ್ದಾರೆ.

VISTARANEWS.COM


on

Lok Sabha Election 2024 Valmiki Samaj to support Pralhad Joshi says Prasannanandapuri Swamiji
Koo

ಹುಬ್ಬಳ್ಳಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ವಾಲ್ಮೀಕಿ ಸಮಾಜದವರು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರ ಬೆನ್ನಿಗೆ ನಿಲ್ಲಬೇಕು. ಅವರಿಗೆ ಶಕ್ತಿಯಾಗಬೇಕು ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ (Prasannanandapuri Swamiji) ಸಮಾಜದ ಬಾಂಧವರಿಗೆ ಕರೆ ನೀಡಿದ್ದಾರೆ.

ರಾಜನಹಳ್ಳಿ ವಾಲ್ಮೀಕಿ ಗುರುಪೀಠಕ್ಕೆ ಭೇಟಿ ನೀಡಿದ ಸಚಿವ ಪ್ರಲ್ಹಾದ್‌ ಜೋಶಿ ಅವರನ್ನು ಆಶೀರ್ವದಿಸಿ ಮಾತನಾಡಿದ ಪ್ರಸನ್ನಾನಂದಪುರಿ ಸ್ವಾಮೀಜಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಮಾಜದವರು ಒಗ್ಗಟ್ಟಾಗಿ ಪ್ರಲ್ಹಾದ್‌ ಜೋಶಿಯವರನ್ನು ಬೆಂಬಲಿಸುವ ಮೂಲಕ ಶಕ್ತಿ ತುಂಬಬೇಕು. ರಾಜ್ಯದಲ್ಲೇ ಅತಿ ಹೆಚ್ಚು ಅಂತರದ ಗೆಲುವು ಜೋಶಿಯವರದ್ದಾಗಬೇಕು ಎಂದು ಆಶಿಸಿದರು.

ಪ್ರಲ್ಹಾದ್‌ ಜೋಶಿಯವರು ಮತ್ತೆ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಂತ್ರಿಯಾಗಿ ನಮ್ಮೆಲ್ಲರ ಬೇಡಿಕೆಗೆ ಸ್ಪಂದಿಸುತ್ತಾರೆ ಎಂಬ ವಿಶ್ವಾಸ ನಮಗಿದೆ. ಎಲ್ಲ ಸಮಾಜದ ಜನರನ್ನು ನಾವು ವಿಶ್ವಾಸಕ್ಕೆ ತೆಗೆದುಕೊಂಡು ಬಿಜೆಪಿಯ ಐತಿಹಾಸಿಕ ಗೆಲುವಿಗೆ ಕಾರಣವಾಗಬೇಕು ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.

ವಾಲ್ಮೀಕಿ ಕಾರ್ಯಕರ್ತರನ್ನು ನಾಯಕರನ್ನಾಗಿ ಬೆಳೆಸಿದ್ದಾರೆ

ನಮ್ಮ ಸಮಾಜದ ಕಾರ್ಯಕರ್ತರನ್ನು ನಾಯಕರನ್ನಾಗಿಸಿದ್ದೇ ಪ್ರಲ್ಹಾದ್‌ ಜೋಶಿಯವರು. ಬಂಗಾರು ಹನುಮಂತು ರಾಜ್ಯ ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ಆಗಲು ಬೆನ್ನ ಹಿಂದೆ ನಿಂತು ಪ್ರೋತ್ಸಾಹಿಸಿ ಸಹಕರಿಸಿದವರು ಪ್ರಲ್ಹಾದ್‌ ಜೋಶಿ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಸ್ಮರಿಸಿದರು.

ಧರಣಿಗೆ ನ್ಯಾಯ ನೀಡಿದರು

ಬೆಂಗಳೂರಿನಲ್ಲಿ ತಾವು ಉಪವಾಸ ಧರಣಿ ಕುಳಿತ ವೇಳೆ ತನ್ನೆಲ್ಲ ಪ್ರೋಟೋಕಾಲ್ ಮರೆತು ನನ್ನನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದಲ್ಲದೆ, ಕೇಂದ್ರ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಿ ನಮ್ಮ ಬೇಡಿಕೆಗೆ ನ್ಯಾಯ ಒದಗಿಸಿದವರು ಪ್ರಲ್ಹಾದ್‌ ಜೋಶಿ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಅಭಿಮಾನ ವ್ಯಕ್ತಪಡಿಸಿದರು.

ಜಾತಿ ಭೇದ ತೋರದ ನಾಯಕ

ಸಚಿವ ಪ್ರಲ್ಹಾದ್‌ ಜೋಶಿಯವರು ಯಾವತ್ತೂ ಜಾತಿ ಭೇದ ತೋರಿದವರಲ್ಲ. ಎಲ್ಲ ಸಮಾಜ, ವರ್ಗದವರನ್ನು ಸಮಾನವಾಗಿ ಕಂಡು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಪಡಿಸಿ ಮನ ಗೆದ್ದಿದ್ದಾರೆ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.

ಇದನ್ನೂ ಓದಿ: Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

ಗುರು-ಹಿರಿಯರ ಆಶೀರ್ವಾದವೇ ಶ್ರೀರಕ್ಷೆ

ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಶೀರ್ವಾದ ಪಡೆದರು.

ವಾಲ್ಮೀಕಿ ಸಮುದಾಯದ ಪ್ರಗತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿ, ಶ್ರಮಿಸಿದೆ. ಮುಂದೆಯೂ ಸಮಾಜದ ಪರ ಇರಲಿದೆ ಎಂದು ಪ್ರಲ್ಹಾದ್‌ ಜೋಶಿ‌ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಎಸ್.ಟಿ. ಮೋರ್ಚಾದ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಮಣಿಕಂಠ ಶಾಗೋಟಿ, ಪುಂಡಲಿಕ ತಳವಾರ, ಮೋಹನ್ ಗುಡಿಸಲ್ಮನಿ, ಮಾರುತಿ ಚಾಕಲಬ್ಬಿ, ಲಕ್ಷ್ಮಣ್ ಮ್ಯಾಗಿನ್ಮನಿ, ಅಶೋಕ ಸೋಲಾರ್ಕೊಪ್ಪ, ಸಂತೋಷ ಟಿ, ದೇವೇಂದ್ರ, ಮಂಜು ಹುಡ್ಡೇದ ಹಾಗೂ ಬಿಜೆಪಿ ಪ್ರಮುಖರು ಮತ್ತು ವಾಲ್ಮೀಕಿ ಸಮಾಜದ ಮುಖಂಡರು ಉಪಸ್ಥಿತರಿದ್ದರು

Continue Reading

Lok Sabha Election 2024

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

Lok Sabha Election 2024: ಕೋಲಾರದಲ್ಲಿ ಯಾರೂ ರಾಜೀನಾಮೆ ನೀಡಲ್ಲ. ಟಿಕೆಟ್ ವಿಚಾರವಾಗಿ ಒತ್ತಡ ಇದೆ. ಪಕ್ಷ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸಮ್ಮುಖದಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

Lok Sabha Election 2024 personal prestige will not be allowed DK Shivakumar warns Kolar leaders
Koo

ಬೆಂಗಳೂರು: ಈ ಲೋಕಸಭಾ ಚುನಾವಣೆ (Lok Sabha Election 2024:) ಸಂಬಂಧ ಕೋಲಾರದಲ್ಲಿ ಎಲ್ಲ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ (Congress Candidate) ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂಧಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಕೋಲಾರದಲ್ಲಿ ಯಾರೂ ರಾಜೀನಾಮೆ ನೀಡಲ್ಲ. ಟಿಕೆಟ್ ವಿಚಾರವಾಗಿ ಒತ್ತಡ ಇದೆ. ಪಕ್ಷ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸಮ್ಮುಖದಲ್ಲಿ ಚರ್ಚೆ ಮಾಡಿ ಅಂತಿಮಗೊಳಿಸಲಾಗುತ್ತದೆ ಎಂದು ತಿಳಿಸಿದರು.

ಕೋವಿಡ್ ಸಮಯದಲ್ಲಿ ಸುರೇಶ್ ಸೇವೆ ಒಂದು ಇತಿಹಾಸ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ತಯಾರಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ನಾವು ಕೇವಲ ಇಂದು ಚುನಾವಣೆ ತಯಾರಿ ಮಾಡುತ್ತಿಲ್ಲ. ಸುರೇಶ್ ಅವರು ಗೆದ್ದ ಮೊದಲ ದಿನದಿಂದ ಪ್ರತಿ ನಿತ್ಯ ಕೆಲಸ ಮಾಡಿಕೊಂಡೇ ಬಂದಿದ್ದಾರೆ. ಕೋವಿಡ್ ಸಮಯದಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ದೇಹವನ್ನು ಅವರ ತವರೂರಿಗೆ ತರಲು ಬಿಜೆಪಿ ಕೇಂದ್ರ ಸರ್ಕಾರ ಅವಕಾಶ ನೀಡಲಿಲ್ಲ. ಆದರೆ, ಡಿ.ಕೆ. ಸುರೇಶ್ ಅವರು ಕೋವಿಡ್ ಕಷ್ಟಕಾಲದಲ್ಲಿ ರೈತರಿಂದ ಹಣ್ಣು ತರಕಾರಿ ಖರೀದಿ ಮಾಡಿ ಜನರಿಗೆ ಉಚಿತವಾಗಿ ಹಂಚಿದರು. ಜನರಿಗೆ ಮೆಡಿಕಲ್ ಕಿಟ್ ನೀಡಿ ಸಹಾಯ ಮಾಡಿದರು. ಸರ್ಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವರ ಮನೆಯವರು ಮುಂದೆ ಬಾರದಿದ್ದಾಗ ಡಿ.ಕೆ ಸುರೇಶ್ ಪಿಪಿಇ ಕಿಟ್ ಧರಿಸಿ ಶವಗಳ ಅಂತ್ಯ ಸಂಸ್ಕಾರ ಮಾಡಿದರು.

ಎಲ್ಲ ನಾಯಕರು ಮನೆಯಿಂದ ಆಚೆ ಬರಲು ಹಿಂಜರಿದಾಗ, ಸುರೇಶ್ ಕೋವಿಡ್ ಆಸ್ಪತ್ರೆಗಳಿಗೆ ಹೋಗಿ, ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಇದೆಲ್ಲವೂ ಇತಿಹಾಸ. ಅಂತಹ ಕಷ್ಟ ಕಾಲದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕ್ಷೇತ್ರದ ಜನರಿಗಾಗಿ ಶ್ರಮಿಸಿದ್ದಾರೆ. ಇದ್ಯಾವುದೂ ಚುನಾವಣೆ ಸಮಯದಲ್ಲಿ ಮಾಡಿದ ಕೆಲಸವಲ್ಲ. ಸುರೇಶ್ ಅವರು ಪ್ರತಿ ಹಳ್ಳಿ, ಹಳ್ಳಿ ಸುತ್ತಾಡಿ ಪಂಚಾಯ್ತಿ ಸದಸ್ಯನಂತೆ ಕೆಲಸ ಮಾಡಿದ್ದಾರೆ. ಹೀಗಾಗಿ ನಾವು ಈ ಬಾರಿಯ ಚುನಾವಣೆಯಲ್ಲಿ ನಾವು ವಿಶೇಷವಾದ ತಯಾರಿ ಮಾಡುವ ಅಗತ್ಯವಿಲ್ಲ. ನಮ್ಮ ಪರವಾಗಿ ಜನರು, ಕಾರ್ಯಕರ್ತರು ಇದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ದೇವೇಗೌಡರ ಕುಟುಂಬದ ವಿರುದ್ಧ ಹೋರಾಟ ನಮಗೆ ಹೊಸತಲ್ಲ

ಬಿಜೆಪಿ ಹಾಗೂ ಜೆಡಿಎಸ್ ಸೇರಿ‌ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬದವರಾದ ಡಾ. ಸಿ.ಎನ್.‌ ಮಂಜುನಾಥ್ ಅವರನ್ನು ಕಣಕ್ಕೆ ಇಳಿಸಲಾಗಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್‌, ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ದೇವೇಗೌಡರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ. ನಾನು ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. 2013ರ ಉಪಚುನಾವಣೆಯಲ್ಲಿ ಇದೇ ರೀತಿ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಸುರೇಶ್ ಅವರು ಗೆದ್ದಿದ್ದರು. ಆಗ ಸಿದ್ದರಾಮಯ್ಯ ಅವರ ಸರ್ಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ದೊಡ್ಡ ಸವಾಲಾಗಿತ್ತು. ಆಗಲೂ ನಾವು ಸಹೋದರಿ ಅನಿತಾ ಕುಮಾರಸ್ವಾಮಿ ಅವರನ್ನು 1.30 ಲಕ್ಷ ಮತಗಳಿಂದ ಮಣಿಸಿದೆವು. ನಂತರ ಜನ ಸುರೇಶ್ ಅವರನ್ನು ಸತತವಾಗಿ ಗೆಲ್ಲಿಸಿಕೊಂಡು ಬಂದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Lok Sabha Election 2024: ಇಂದು ಡಿಕೆ ಸುರೇಶ್‌ ನಾಮಪತ್ರ ಸಲ್ಲಿಕೆ; ಅಣ್ಣ – ಅತ್ತಿಗೆ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಸಂಸದ

ಬಿಜೆಪಿ ದುರ್ಬಲವಾಗಿರುವುದಕ್ಕೆ ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ

ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಗೋವಿಂದ ಕಾರಜೋಳ ಅವರ ಸ್ಪರ್ಧೆ ಬಗ್ಗೆ ಮಾಧ್ಯಮದವರು ಪ್ರಶ್ನೆ ಮಾಡಿದಾಗ, ಅವರ ಪಕ್ಷದಿಂದ ಯಾರನ್ನಾದರೂ ನಿಲ್ಲಿಸಲಿ. ನಾವು ಚಂದ್ರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ. ಹಾಲಿ ಸಚಿವರಿಗೆ, ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಆ ಮೂಲಕ ಅವರ ಪಕ್ಷ ದುರ್ಬಲವಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ರಾಹುಲ್‌, ಸೋನಿಯಾ, ಪ್ರಿಯಾಂಕಾ ಬರ್ತಾರೆ ಪ್ರಚಾರಕ್ಕೆ

ಚುನಾವಣೆಯ ಸ್ಟಾರ್ ಪ್ರಚಾರಕರಾಗಿ ಯಾರು ಆಗಮಿಸಲಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, “ಎಐಸಿಸಿ ಅಧ್ಯಕ್ಷರು ನಮ್ಮವರೇ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ಆಗಮಿಸುವಂತೆ ಮನವಿ ಮಾಡಿದ್ದೇವೆ. ಅವರು ಇಡೀ ದೇಶದಲ್ಲಿ ಪ್ರಚಾರ ಮಾಡಬೇಕಿದ್ದು, ಅವರಿಂದ ರಾಜ್ಯದಲ್ಲಿ ಹೆಚ್ಚು ದಿನಗಳ ಪ್ರಚಾರ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದು ತಿಳಿಸಿದರು.

Continue Reading

Lok Sabha Election 2024

Lok Sabha Election 2024: ಇಂದು ಡಿಕೆ ಸುರೇಶ್‌ ನಾಮಪತ್ರ ಸಲ್ಲಿಕೆ; ಅಣ್ಣ – ಅತ್ತಿಗೆ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಸಂಸದ

Lok Sabha Election 2024: ನಾಮಪತ್ರ ಸಲ್ಲಿಕೆಗೂ ಮುನ್ನ ಆಶೀರ್ವಾದ ಪಡೆದ ಸಂಸದ ಡಿ.ಕೆ. ಸುರೇಶ್ ಅವರು ಅಣ್ಣ ಡಿ.ಕೆ. ಶಿವಕುಮಾರ್ ಅವರಿಂದ ಬಿ ಫಾರಂ ಅನ್ನು ಪಡೆದುಕೊಂಡರು. ಅಲ್ಲಿಂದ ಕನಕಪುರ ನಗರದ ಕೆಂಕೇರಮ್ಮ ದೇವಸ್ಥಾನಕ್ಕೆ ತೆರಳಿದ ಡಿ.ಕೆ. ಶಿವಕುಮಾರ್‌, ಡಿ.ಕೆ. ಸುರೇಶ್‌ ಹಾಗೂ ಕುಟುಂಬಸ್ಥರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

VISTARANEWS.COM


on

Lok Sabha Election 2024 DK Suresh files nomination today MP and perform pooja at temple
Koo

ಬೆಂಗಳೂರು: ಲೋಕಸಭಾ ಚುನಾವಣಾ (Lok Sabha Election 2024) ಕಣ ಸಿದ್ಧಗೊಂಡಿದ್ದು, ಎಲ್ಲ ರಾಜಕೀಯ ಪಕ್ಷಗಳು ಬಹುತೇಕ ಅಭ್ಯರ್ಥಿಗಳನ್ನು ಘೋಷಿಸಿವೆ. ಇಂದು (ಗುರುವಾರ – ಮಾ. 28) ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಡಿಸಿಎಂ ಡಿ.ಕೆ ಶಿವಕುಮಾರ್‌ ಸಹೋದರ ಡಿ.ಕೆ. ಸುರೇಶ್‌ ಅವರು ನಾಮಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಡಿಕೆಶಿ ಹಾಗೂ ಅತ್ತಿಗೆ ಉಷಾ ಅವರ ಕಾಲಿಗೆ ಬಿದ್ದು ಆಶೀರ್ವಾದವನ್ನು ಪಡೆದುಕೊಂಡರು. ಅಲ್ಲಿಂದ ಕನಕಪುರ ನಗರದ ಕೆಂಕೇರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ಆಶೀರ್ವಾದ ಪಡೆದ ಸಂಸದ ಡಿ.ಕೆ. ಸುರೇಶ್ ಅವರು ಅಣ್ಣ ಡಿ.ಕೆ. ಶಿವಕುಮಾರ್ ಅವರಿಂದ ಬಿ ಫಾರಂ ಅನ್ನು ಪಡೆದುಕೊಂಡರು. ಅಲ್ಲಿಂದ ಕನಕಪುರ ನಗರದ ಕೆಂಕೇರಮ್ಮ ದೇವಸ್ಥಾನಕ್ಕೆ ತೆರಳಿದ ಡಿ.ಕೆ. ಶಿವಕುಮಾರ್‌, ಡಿ.ಕೆ. ಸುರೇಶ್‌ ಹಾಗೂ ಕುಟುಂಬಸ್ಥರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲಿ ದೇವಿ ಎದುರು ಬಿ.ಫಾರಂ ಇಟ್ಟು ಪೂಜೆ ಸಲ್ಲಿಸಲಾಯಿತು.

ಸಹೋದರ ಡಿ.ಕೆ. ಶಿವಕುಮಾರ್‌ ಹಾಗೂ ಅತ್ತಿಗೆ ಉಷಾ ಶಿವಕುಮಾರ್‌ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡ ಡಿ.ಕೆ. ಸುರೇಶ್

ಕನಕಪುರದಿಂದ ರಾಮನಗರಕ್ಕೆ ಹೊರಟ ಡಿ.ಕೆ. ಸುರೇಶ್‌ ಅವರು ಅಲ್ಲಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಚಾಮುಂಡೇಶ್ವರಿ ದೇವಸ್ಥಾನದಿಂದ ಪಿ.ಎಸ್.ವಿ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಚರ್ಚ್‌ನಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಚರ್ಚ್‌ನಿಂದ ಜಿಲ್ಲಾ‌ ಮೈದಾನಕ್ಕೆ ಆಗಮಿಸಿ, ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಲಿದ್ದಾರೆ. ಮೆರವಣಿಗೆ ‌ಮೂಲಕ ತೆರಳಿ ಡಿ.ಕೆ. ಸುರೇಶ್ ಅವರು‌ ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ದೇವೇಗೌಡರ ಕುಟುಂಬದ ವಿರುದ್ಧ ಹೋರಾಟ ನಮಗೆ ಹೊಸತಲ್ಲ: ಡಿ.ಕೆ. ಶಿವಕುಮಾರ್

‌ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಈ ಬಾರಿಯ ಚುನಾವಣೆಯಲ್ಲಿ ನಾವು ವಿಶೇಷವಾದ ತಯಾರಿ ಮಾಡುವ ಅಗತ್ಯವಿಲ್ಲ. ನಮ್ಮ ಪರವಾಗಿ ಜನರು, ಕಾರ್ಯಕರ್ತರು ಇದ್ದಾರೆ. ಡಿ.ಕೆ. ಸುರೇಶ್‌ ಅವರು ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿ ಜನಮನ್ನಣೆ ಗಳಿಸಿದ್ದಾರೆ. ಕೋವಿಡ್‌ ಕಾಲದಲ್ಲಿ ಅವರ ಶ್ರಮ ಮತ್ತು ಕೆಲಸ ಶ್ಲಾಘನೀಯ ಎಂದು ಹೇಳಿದರು.

ಕೋವಿಡ್‌ ಕಾಲದಲ್ಲಿ ಎಲ್ಲ ನಾಯಕರು ಮನೆಯಿಂದ ಆಚೆ ಬರಲು ಹಿಂಜರಿದಾಗ, ಸುರೇಶ್ ಕೋವಿಡ್ ಆಸ್ಪತ್ರೆಗಳಿಗೆ ಹೋಗಿ, ಸೋಂಕಿತರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಇದೆಲ್ಲವೂ ಇತಿಹಾಸ. ಅಂತಹ ಕಷ್ಟ ಕಾಲದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಕ್ಷೇತ್ರದ ಜನರಿಗಾಗಿ ಶ್ರಮಿಸಿದ್ದಾರೆ. ಇದ್ಯಾವುದೂ ಚುನಾವಣೆ ಸಮಯದಲ್ಲಿ ಮಾಡಿದ ಕೆಲಸವಲ್ಲ. ಸುರೇಶ್ ಅವರು ಪ್ರತಿ ಹಳ್ಳಿ, ಹಳ್ಳಿ ಸುತ್ತಾಡಿ ಪಂಚಾಯ್ತಿ ಸದಸ್ಯನಂತೆ ಕೆಲಸ ಮಾಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

Lok Sabha Election 2024 DK Suresh files nomination today

ಇದನ್ನೂ ಓದಿ: Lok Sabha Election 2024: ನಾಳೆಯಿಂದ ಕುರುಡು ಮಲೆಯಿಂದಲೇ ಕಾಂಗ್ರೆಸ್‌ ಪ್ರಚಾರಕ್ಕೆ ನಾಂದಿ; ಆದ್ರೂ ಬಗೆಹರಿದಿಲ್ಲ ಕೋಲಾರ ಟೆನ್ಷನ್!‌

ದೇವೇಗೌಡರ ಕುಟುಂಬದ ವಿರುದ್ಧದ ಹೋರಾಟ ಮೊದಲಲ್ಲ

ಬಿಜೆಪಿ ಹಾಗೂ ಜೆಡಿಎಸ್ ಸೇರಿ‌ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬದವರಾದ ಡಾ. ಸಿ.ಎನ್.‌ ಮಂಜುನಾಥ್ ಅವರನ್ನು ಕಣಕ್ಕೆ ಇಳಿಸಲಾಗಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್‌, ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ದೇವೇಗೌಡರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ. ನಾನು ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. 2013ರ ಉಪಚುನಾವಣೆಯಲ್ಲಿ ಇದೇ ರೀತಿ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಸುರೇಶ್ ಅವರು ಗೆದ್ದಿದ್ದರು. ಆಗ ಸಿದ್ದರಾಮಯ್ಯ ಅವರ ಸರ್ಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ದೊಡ್ಡ ಸವಾಲಾಗಿತ್ತು. ಆಗಲೂ ನಾವು ಸಹೋದರಿ ಅನಿತಾ ಕುಮಾರಸ್ವಾಮಿ ಅವರನ್ನು 1.30 ಲಕ್ಷ ಮತಗಳಿಂದ ಮಣಿಸಿದೆವು. ನಂತರ ಜನ ಸುರೇಶ್ ಅವರನ್ನು ಸತತವಾಗಿ ಗೆಲ್ಲಿಸಿಕೊಂಡು ಬಂದಿದ್ದಾರೆ ಎಂದು ತಿಳಿಸಿದರು.

Continue Reading
Advertisement
Bengaluru News air pressure pipe
ಬೆಂಗಳೂರು43 mins ago

Bengaluru News : ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾಸ್ಟ್‌ ಆಗಿ ಯುವಕ ಸಾವು

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202446 mins ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Actor Darshan at Matinee Movie Team
ಸ್ಯಾಂಡಲ್ ವುಡ್49 mins ago

Actor Darshan: ಸತೀಶ್ ನೀನಾಸಂ-ರಚಿತಾ `ಮ್ಯಾಟ್ನಿ’ ಸಿನಿಮಾಗೆ ಡಿ ಬಾಸ್ ದರ್ಶನ್ ಸಾಥ್!

Drone Prathap prayag
ಸ್ಯಾಂಡಲ್ ವುಡ್52 mins ago

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Bhagwant Mann
ದೇಶ54 mins ago

Bhagwant Mann: 50ನೇ ವಯಸ್ಸಲ್ಲಿ ತಂದೆಯಾದ ಪಂಜಾಬ್‌ ಸಿಎಂ ಭಗವಂತ್ ಮಾನ್;!

kuwj awards
ಕರ್ನಾಟಕ58 mins ago

KUWJ Awards: ಕಾರ್ಯನಿರತ ಪತ್ರಕರ್ತರ ಸಂಘದ 2024ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳು ಪ್ರಕಟ: ಪುರಸ್ಕೃತರ ಪಟ್ಟಿ ಇಲ್ಲಿದೆ

kalaburagi News Drone flying at kalaburagi Central University
ಕಲಬುರಗಿ1 hour ago

Kalaburagi News : ರಾತ್ರಿ ಹೊತ್ತಲ್ಲಿ ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಶಂಕಾಸ್ಪದ ಡ್ರೋನ್‌ ಹಾರಾಟ!

Lok Sabha Election 2024 Valmiki Samaj to support Pralhad Joshi says Prasannanandapuri Swamiji
Lok Sabha Election 20241 hour ago

Lok Sabha Election 2024: ಪ್ರಲ್ಹಾದ್‌ ಜೋಶಿಗೆ ವಾಲ್ಮೀಕಿ ಸಮಾಜದ ಬೆಂಬಲ: ಪ್ರಸನ್ನಾನಂದಪುರಿ ಸ್ವಾಮೀಜಿ

Holi Girls
ದೇಶ2 hours ago

ಹೋಳಿ ಹೆಸರಲ್ಲಿ ಸ್ಕೂಟಿ ಮೇಲೆಯೇ ಕಾಮದೋಕುಳಿ; ಯುವತಿಯರಿಗೆ 80 ಸಾವಿರ ರೂ. ದಂಡ!

Kangana Ranaut
ಬಾಲಿವುಡ್2 hours ago

Kangana Ranaut : ನಾನು, ಶಾರುಖ್‌ ಈ ಯುಗದ ಕೊನೆಯ ಸೂಪರ್‌ಸ್ಟಾರ್‌ಗಳು ಎಂದ ಕಂಗನಾ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202446 mins ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20242 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ10 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ1 day ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ2 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌