ರಾಯಚೂರು : ಕುಡಿಯುವ ನೀರಿನ ವಿಚಾರದಲ್ಲಿ ತೀವ್ರ ನಿರ್ಲಕ್ಷ್ಯ ತೋರಿದ ಆರೋಪದ ಅಡಿಯಲ್ಲಿ ನಗರಸಭೆ ತಾಂತ್ರಿಕ ಶಾಖೆಯ ಮುಖ್ಯಸ್ಥ ಕಾರ್ಯನಿರ್ವಾಹಕ ಇಂಜಿನಿಯರ್ ವೆಂಕಟೇಶ್‌ನನ್ನು ಅಮಾನತು ಮಾಡಲಾಗಿದೆ. ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ ನಾಯ್ಕ್ ಸಲ್ಲಿಸಿದ ವರದಿಯ ಆಧಾರದ ಮೇಲೆ ನಗರಾಭಿವೃದ್ಧಿ ಅಧೀನ ಕಾರ್ಯದರ್ಶಿ ಕೆ.ಎಲ್ ಪ್ರಸಾದ್ ಅಮಾನತುಗೊಳಿಸಿ ಎಂದು ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ಕಲುಷಿತ ನೀರು ಸೇವಿಸಿ ಮೂರು ಮಂದಿ ಸಾವನ್ನಪ್ಪಿದ್ದರು. ಈ ಪ್ರಕರಣ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಣೆ ಮಾಡಿ ಸೂಕ್ತ ತನಿಖೆಗೆ ಸೂಚಿಸಿದ್ದರು.
ಇದನ್ನೂ ಓದಿ | ಪ್ರವಾದಿ ಮೊಹಮ್ಮದ್ ಬಗ್ಗೆ ಮಾತನಾಡಿ ವಿವಾದ ಸೃಷ್ಟಿಸಿದ್ದ ವಕ್ತಾರೆ ನೂಪುರ್ ಶರ್ಮಾ ಬಿಜೆಪಿಯಿಂದ ಅಮಾನತು
ಈ ಪ್ರಕರಣ ಖಂಡಿಸಿ ವಿವಿಧ ಸಂಘಟನೆಗಳು ರಾಯಚೂರು ಬಂದ್‌ಗೆ ಕರೆಕೊಟ್ಟು ತಪ್ಪಿತಸ್ಥ ಅಧಿಕಾರಿಗಳಿಗೆ ಶಿಕ್ಷೆ ನೀಡುವಂತೆ ಜಿಲ್ಲಾಧಿಕಾರಿಗೆ ಒತ್ತಾಯ ಮಾಡಿದ್ದವು. ಸದ್ಯ ಮೊದಲ ಹಂತದ ತನಿಖೆಯಲ್ಲಿ ನಗರಸಭೆಯ ಎಇಇ ತಲೆದಂಡ ಆಗಿದ್ದು, ಇನ್ನುಳಿದ ಅಧಿಕಾರಿಗಳಿಗೆ ಸದ್ಯ ನಡುಕ ಶುರುವಾಗಿದೆ.
ಇದನ್ನೂ ಓದಿ | ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಏಕಕಾಲಕ್ಕೆ 2 ವಿಮಾನಗಳ ಟೇಕಾಫ್, 100 ಅಡಿಯಲ್ಲಿ ತಪ್ಪಿದ್ದ ಅನಾಹುತ, ಸಿಬ್ಬಂದಿ ಸಸ್ಪೆಂಡ್