Site icon Vistara News

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Food Poisoning

ರಾಯಚೂರು: ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು (Morarji Desai Residential School) ದಿಢೀರ್ (Food Poisoning) ಅಸ್ವಸ್ಥಗೊಂಡಿದ್ದಾರೆ. 25ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ವಾಂತಿ-ಭೇದಿ ಸಮಸ್ಯೆ ಉಲ್ಬಣಗೊಂಡಿದೆ. ರಾಯಚೂರಿನ (Raichur News) ಮಾನ್ವಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.

ರಾತ್ರಿ ಊಟ ಮಾಡಿದ ಬಳಿಕ ವಿದ್ಯಾರ್ಥಿಗಳು ನಿದ್ದೆಗೆ ಜಾರಿದ್ದರು. ಆದರೆ ಊಟ ಸೇವಿಸಿದ ಅರ್ಧ ಗಂಟೆಯಲ್ಲೇ ಏಕಕಾಲಕ್ಕೆ ವಿದ್ಯಾರ್ಥಿಗಳು ವಾಂತಿ-ಭೇದಿಯಿಂದ ಸುಸ್ತಾಗಿದ್ದಾರೆ. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳನ್ನು ರಿಮ್ಸ್‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಲಬುರಗಿಯಲ್ಲೂ ಉಪಾಹಾರ ಸೇವಿಸಿ ಆಸ್ಪತ್ರೆಪಾಲಾಗಿದ್ದ ವಿದ್ಯಾರ್ಥಿನಿಯರು

ಕಳೆದ ಜೂ. 29ರಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣ ಹೊರವಲಯದಲ್ಲಿ ನಡೆದಿತ್ತು. ಶನಿವಾರ ಬೆಳಗ್ಗೆ ವಸತಿ ಶಾಲೆಯಲ್ಲಿ ಉಪಾಹಾರ ಸೇವನೆ ಬಳಿಕ ಏಕಾಏಕಿ ವಾಂತಿ ಮಾಡಿಕೊಂಡು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ಅವರನ್ನು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ನಿರ್ಲಕ್ಷ್ಯದಿಂದ ಈ ರೀತಿಯಾಗಿದೆ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

ಇದನ್ನೂ ಓದಿ: Dengue Fever: ಡೆಂಗ್ಯುಗೆ ಕೋವಿಡ್‌ ಮಾದರಿ ಉಚಿತ ಚಿಕಿತ್ಸೆ ಕೊಡಿ, ಮೆಡಿಕಲ್‌ ಎಮರ್ಜೆನ್ಸಿ ಘೋಷಿಸಿ: ಡಾ. ಮಂಜುನಾಥ್

ಬೆಂಗಳೂರಿನ ಪ್ರಯಾಣಿಕರನ್ನು ದಿಲ್ಲಿಯಲ್ಲಿ ವಿಮಾನದೊಳಗೇ ಲಾಕ್‌

ಹೊಸದಿಲ್ಲಿ: ಸ್ಪೈಸ್ ಜೆಟ್ (SpiceJet) ವಿಮಾನ (Airlines) ಸಿಬ್ಬಂದಿಯ ಎಡವಟ್ಟಿನಿಂದಾಗಿ 12 ಗಂಟೆಗಳ ಕಾಲ ವಿಮಾನ ಟೇಕ್ ಆಫ್ (Delhi Bangalore Flight) ಆಗದೆ, ಬೆಂಗಳೂರಿಗೆ ಬರಬೇಕಿದ್ದ ಪ್ರಯಾಣಿಕರು ದಿಲ್ಲಿಯಲ್ಲಿಯೇ ವಿಮಾನದೊಳಗೇ ಕೊಳೆಯುವಂತಾಯಿತು. ನಿನ್ನೆ ಸಂಜೆ ಬೆಂಗಳೂರಿಗೆ ಬರಬೇಕಿದ್ದ ವಿಮಾನ, ಕಡೆಗೂ ಬೆಳಗ್ಗೆ ಟೇಕ್ ಆಫ್ (Take Off) ಆಗಿ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Devanahalli International Airport) ಬಂದಿದೆ.

ದೆಹಲಿ- ಬೆಂಗಳೂರು SG8151 ಸ್ಪೈಸ್ ಜೆಟ್ ವಿಮಾನದಲ್ಲಿ ಪ್ರಯಾಣಿಕರು ಈ ಘೋರ ಅನುಭವಿಸಿದ್ದಾರೆ. ಸುಮಾರು 12 ಗಂಟೆಗಳ ಕಾಲ ಫ್ಲೈಟ್‌ನಲ್ಲೇ ಪ್ರಯಾಣಿಕರು ಅನ್ನ ನೀರು ಇಲ್ಲದೇ ಕಾಲ ಕಳೆದರು. ಟರ್ಮಿನಲ್ 3ರಿಂದ ನಿನ್ನೆ ರಾತ್ರಿ 7.40ಕ್ಕೆ ವಿಮಾನ ಟೇಕಾಫ್ ಆಗಬೇಕಿತ್ತು. ಆದರೆ ವಿಮಾನ ಟೇಕಾಫ್ ಆಗದೇ ಟರ್ಮಿನಲ್‌ನಲ್ಲಿಯೇ ನಿಲ್ಲಿಸಿಕೊಳ್ಳಲಾಗಿತ್ತು. ತಾಂತ್ರಿಕ ದೋಷದಿಂದ ವಿಮಾನ ನಿಂತಿರುವುದಾಗಿ ಮಾಹಿತಿ ಲಭ್ಯವಾಗಿತ್ತು.

ಸತತ 12 ಗಂಟೆಗಳ ಬಳಿಕ ಟೇಕ್ ಆಫ್ ಆದ ವಿಮಾನ‌ ಇಂದು ಬೆಳಗ್ಗೆ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದೆ. ದೆಹಲಿಯಿಂದ ಅಂತೂ ಬೆಂಗಳೂರಿಗೆ ತಲುಪಿಕೊಂಡ ಪ್ರಯಾಣಿಕರು ಸ್ಪೈಸ್ ಜೆಟ್ ಬಗ್ಗೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಸ್ಪೈಸ್ ಜೆಟ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಿಮಾನದ ಸಿಬ್ಬಂದಿ ಊಟ ತಿಂಡಿ ಕೊಡದೆ ನಮ್ಮನ್ನು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ಏರ್‌ಲೈನ್ಸ್ ಸಿಬ್ಬಂದಿ ಮಾಡಿದ ಎಡವಟ್ಟಿನಿಂದ ಬಿಪಿ ಶುಗರ್ ಮಾತ್ರೆ ತೆಗೆದುಕೊಳ್ಳಲೂ ಆಗಿಲ್ಲ ಎಂದು ಕೆಲವರು ಆಕ್ರೋಶಿಸಿದ್ದಾರೆ. ವಿಮಾನಕ್ಕೆ ಏನು ಆಗಿದೆ, ಪರ್ಯಾಯ ವ್ಯವಸ್ಥೆ ಏನು, ಇತ್ಯಾದಿಗಳ ಬಗೆಗೆ ಯಾವ ಮಾಹಿತಿಯನ್ನೂ ನೀಡದೆ ನಮ್ಮನ್ನು ಕತ್ತಲಲ್ಲಿಡಲಾಗಿತ್ತು ಎಂದು ಸಂತ್ರಸ್ತ ಪ್ರಯಾಣಿಕ ತಿಳಿಸಿದ್ದು, ತಮಗೆ ಆಗಿರುವ ಮಾನಸಿಕ ಹಿಂಸೆಗಾಗಿ ಕಾನೂನು ಮೊರೆ ಹೋಗುವ ಆಶಯವನ್ನೂ ವ್ಯಕ್ತಪಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version