ರಾಯಚೂರು: ಇತ್ತೀಚೆಗೆ ಪೊಲೀಸ್ ಇಲಾಖೆಯಲ್ಲಿ ಹೃದಯಾಘಾತದಿಂದ (Heart Attack) ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮೊನ್ನೆಯಷ್ಟೇ ಹಾವೇರಿ, ಕೊಡಗಿನಲ್ಲಿ ಹೃದಯಾಘಾತವಾಗಿ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ರಾಯಚೂರಿನಲ್ಲಿ ಹೃದಯಾಘಾತಕ್ಕೆ ಪೊಲೀಸ್ ಕಾನ್ಸ್‌ಟೇಬಲ್ (police constable) ಮೃತಪಟ್ಟಿದ್ದಾರೆ.
ರಾಯಚೂರು ಜಿಲ್ಲೆ ಮಸ್ಕಿ ಠಾಣೆಯಲ್ಲಿ ರೈಟರ್ ಆಗಿದ್ದ ಬಸನಗೌಡ (34) ಮೃತ ದುರ್ದೈವಿ. ಬಸನಗೌಡಗೆ ಬಿಪಿ, ಶುಗರ್ ಅಥವಾ ಯಾವುದೇ ಹೃದಯ ಸಂಬಂಧಿ ಖಾಯಿಲೆ ಇರಲಿಲ್ಲ. ನಿನ್ನೆ (ಆ.10) ರಾತ್ರಿ ಮಲಗಿದ್ದಲ್ಲೇ ಬಸನಗೌಡಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬಸನಗೌಡ ಮೂಲತಃ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ನಿವಾಸಿ. ಸಿಬ್ಬಂದಿ ಸಾವಿಗೆ ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆ ಮರುಗಿದೆ.
SSLC ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ
ವಿಜಯ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ(Spandana Vijay Raghavendra) ಅವರು ಹೃದಯಾಘಾತದಿಂದ (Heart attack) ಮೃತಪಟ್ಟ ಹಿನ್ನೆಲೆಯಲ್ಲಿ ಸಣ್ಣ ವಯಸ್ಸಿನವರಲ್ಲೇ ಉಂಟಾಗುವ ಹೃದಯಾಘಾತದ ಕುರಿತ ಆತಂಕ ಮತ್ತೆ ಮುನ್ನೆಲೆಗೆ ಬಂದಿದೆ. ಇದರ ನಡುವೆ ಕೇವಲ 16 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಪ್ರಾಣ (SSLC student dies of heart attack) ಕಳೆದುಕೊಂಡಿದ್ದಾಳೆ.
ಗುಂಡ್ಲುಪೇಟೆ ಪಟ್ಟಣದ ನಿರ್ಮಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಫೆಲಿಶಾ (16) ಮೃತ ದುರ್ದೈವಿ ಬಾಲಕಿ. ಬೆಂಗಳೂರು ನಿವಾಸಿಗಿರುವ ಫೆಲಿಶಾ ಗುಂಡ್ಲುಪೇಟೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ ಬುಧವಾರ ಬೆಳಗ್ಗೆ ವಾಯು ವಿಹಾರ ಮಾಡುವ ವೇಳೆ ಒಮ್ಮಿಂದೊಮ್ಮೆಗೇ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಳು. ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದ ಆಕೆಯನ್ನು ಕೂಡಲೇ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರೆ, ಚಿಕಿತ್ಸೆ ಫಲಿಸದೆ ಸಾವು ಸಂಭವಿಸಿದೆ. ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಲೋ ಬಿಪಿಯಾಗಿ ಕುಸಿದು ಬಿದ್ದು ಹೆಡ್ ಕಾನ್ಸ್‌ಟೇಬಲ್ ಸಾವು!
ಹಾವೇರಿ: ಲೊ ಬಿಪಿಯಾಗಿ (Low Bp) ಕರ್ತವ್ಯನಿರತ ಹೆಡ್ ಕಾನ್ಸ್‌ಟೇಬಲ್ (Head Constable) ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ನಡೆದಿತ್ತು. ಬಸಪ್ಪ ಮಲ್ಲಾಡದ (48) ಮೃತ ದುರ್ದೈವಿ.
112 ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸಪ್ಪ ಅವರಿಗೆ ಲೊ ಬಿಪಿಯಾಗಿ ಕುಸಿದು ಬಿದ್ದಿದ್ದರು.. ಮೂಲತಃ ರಾಣೇಬೆನ್ನೂರು ತಾಲ್ಲೂಕಿನ ಹಾರೋಗೊಪ್ಪ ನಿವಾಸಿ ಆಗಿದ್ದು, 26 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.
ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ದುರ್ಮರಣ
ಕೊಡಗು: ತಲೆ ತಿರುಗಿ (Low Bp) ಮರದಿಂದ ಬಿದ್ದು ಗಂಭೀರ ಗಾಯಗೊಂಡು ಪೊಲೀಸ್ ಸಿಬ್ಬಂದಿ (Accident news) ಮೃತಪಟ್ಟ ಘಟನೆ ಕಾನ್ ಬೈಲ್ ಗ್ರಾಮದ ತೋಟದಲ್ಲಿ ನಡೆದಿತ್ತು. ಲೋಕೇಶ್ ಮೃತ ದುರ್ದೈವಿ.
ಲೋಕೇಶ್ ಕಳೆದ 15 ವರ್ಷಗಳಿಗೂ ಹೆಚ್ಚು ಕಾಲ ಗನ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಗನ್ ಮ್ಯಾನ್ ಆಗಿದ್ದರು. ಆಸ್ಪತ್ರೆಗೆ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಹಾಗೂ ಕೆ.ಜಿ ಬೋಪಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದರು.
ಲೋಕೇಶ್ ಸಾವಿಗೆ ಕಂಬನಿ ಮೀಡಿದ ಅಪ್ಪಚ್ಚು ರಂಜನ್, 10 ವರ್ಷಗಳಿಂದ ನನಗೆ ಗನ್ ಮ್ಯಾನ್ ಆಗಿದ್ದರು. ಎಲ್ಲ ಕೆಲಸದಲ್ಲೂ ಮುಂದೆ ಇರುತ್ತಿದ್ದರು. ಪ್ರಕೃತಿ ವಿಕೋಪದ ಸಮಯದಲ್ಲೂ ಧೈರ್ಯದಿಂದ ಮುನ್ನುಗುತ್ತಿದ್ದರು. ಸಣ್ಣ ವಯಸಿನಲ್ಲಿ ಹೀಗೆ ಆಗಿದ್ದು, ಬಹಳ ನೋವು ತಂದಿದೆ ಎಂದಿದ್ದರು. ಲೋಕೇಶ್ ಮಾವಿನ ಮರದಲ್ಲಿ ಕಸಿ ಮಾಡಲು ಹೋಗಿದ್ದರು. ಈ ವೇಳೆ ಲೋ ಬಿಪಿ ಯಾಗಿ ತಲೆ ತಿರುಗಿ ಮರದಿಂದ ಕಾಂಕ್ರೀಟ್ ರೋಡ್‌ಗೆ ಬಿದ್ದು ಮೃತಪಟ್ಟಿದ್ದರು.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ