Site icon Vistara News

Heart Attack : ಶ್ರೀಶೈಲ ಪಾದಯಾತ್ರೆ ವೇಳೆ ನಿಂತು ಹೋಯ್ತು ಯುವಕನ ಹೃದಯದ ಬಡಿತ

Heart attack

ರಾಯಚೂರು: ಶ್ರೀಶೈಲ ಪಾದಯಾತ್ರೆ‌ಗೆ (Srisailam Padayatra) ಹೊರಟ್ಟಿದ್ದ ಯುವಕನೊರ್ವ ದಾರಿ ಮಧ್ಯೆ ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ. ರಾಯಚೂರಿನ ಮಾನ್ವಿ ತಾಲೂಕಿನ ಚಿಕ್ಕ ಕೊಟ್ನೆಕಲ್ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಬಾಗಲಕೋಟೆ ಮೂಲದ 22 ವರ್ಷದ ಪಾದಯಾತ್ರಾರ್ಥಿ ವಿಶ್ರಾಂತಿಗಾಗಿ ತಂಗಿದ್ದಾಗ ಹೃದಯಾಘಾತವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಮ್ಮಡ ಗ್ರಾಮದ ಶ್ರೀಶೈಲ ದಡೂತಿ ಮೃತ ದುರ್ದೈವಿ.

ಶ್ರೀಶೈಲ ದಡೂತಿ ಪ್ರತಿ ವರ್ಷದಂತೆ ಗ್ರಾಮಸ್ಥರ ಜತೆಗೂಡಿ ಶ್ರೀಶೈಲಕ್ಕೆ ಪಾದಯಾತ್ರೆಯನ್ನು ಕೈಗೊಳ್ಳುತ್ತಿದ್ದರು. ಕಳೆದ ಸೋಮವಾರದಂದು ಮನೆಯಿಂದ ಪಾದಯಾತ್ರೆ ಹೊರಟ ಶ್ರೀಶೈಲ ದಡೂತಿ ಭಾನುವಾರ ಮಾನ್ವಿ ತಾಲೂಕಿನ ಚಿಕ್ಕಕೊಟ್ನೆಕಲ್ ಗ್ರಾಮಕ್ಕೆ ತಲುಪಿದ್ದರು.

ಬಿಸಿಲಿನ ತಾಪಕ್ಕೆ ಸುಸ್ತಾದ ಕಾರಣಕ್ಕೆ ದಾರಿ ಮಧ್ಯೆ ವಿಶ್ರಾಂತಿಗಾಗಿ ಕುಳಿತ್ತಿದ್ದರು. ಈ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಉಳಿದ ಪಾದಯಾತ್ರಾರ್ಥಿಗಳಿಂದ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಾನ್ವಿ ತಾಲೂಕು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Heart Attack : ವಿಡಿಯೊಗ್ರಫಿ ಮಾಡುತ್ತಿದ್ದಾಗಲೇ ಹೃದಯಾಘಾತ; ಸ್ಥಳದಲ್ಲೇ ಕುಸಿದು ಮೃತ್ಯು

Heart Attack : ಬಸ್‌ ಏರಿ ಕುಳಿತಾಗಲೇ ಹಠಾತ್ ಹೃದಯಾಘಾತ; ಹಾರಿ ಹೋಯ್ತು ವೃದ್ಧನ ಪ್ರಾಣ ಪಕ್ಷಿ

ಬೆಂಗಳೂರು: ಹೃದಯಾಘಾತ (Heart Attack) ವೃದ್ಧರೊಬ್ಬರ ಪ್ರಾಣವನ್ನು ಬಲಿ ಪಡೆದಿದೆ. ಈಗೀಗ ಹೃದಯಾಘಾತ (Heart attack) ಯಾವುದೇ ಕ್ಷಣದಲ್ಲಿ ಆಗಿಬಿಡಬಹುದು ಎನ್ನುವಷ್ಟು ಭಯಾನಕವಾಗಿದೆ. ಕುಳಿತಲ್ಲೇ, ಕುಸಿದುಬಿದ್ದು ಪ್ರಾಣ ಕಳೆದುಕೊಳ್ಳುವ, ನಿಂತಲ್ಲೇ ಉಸಿರು ನಿಲ್ಲುವ, ಮಲಗಿದ್ದಲ್ಲೇ ಉಸಿರು ಚೆಲ್ಲುವ ವಿದ್ಯಮಾನಗಳು ಏಕಾಏಕಿ ಹೆಚ್ಚಾಗಿದೆ.

ಇಂಥಹುದೇ ಒಂದು ಆತಂಕ ಮೂಡಿಸುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ವೃದ್ಧರೊಬ್ಬರು ಕುಳಿತಲ್ಲೇ ಕುಸಿದಿದ್ದು, ಕ್ಷಣಾರ್ಧದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹಠಾತ್ ಹೃದಯಾಘಾತದಿಂದ ವೃದ್ಧ ಪ್ರಾಣ ಕಳೆದುಕೊಂಡಿದ್ದಾರೆ.

ಕೃಷ್ಣ (60) ಮೃತ ದುರ್ದೈವಿ. 11 ಗಂಟೆ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಿಂದ ಬಸ್ ಹತ್ತಿದ್ದ ಕೃಷ್ಣ ಅವರು ಟಿಕೆಟ್ ಪಡೆದು ಸೀಟ್‌ನಲ್ಲಿ ಕುಳಿತುಕೊಂಡಿದ್ದರು. ನವರಂಗ್ ಬಳಿ ಬರುತ್ತಿದ್ದಂತೆ ಹದಿನೈದು ನಿಮಿಷದಲ್ಲೇ ಹೃದಯಾಘಾತವಾಗಿದೆ. ನೋಡನೋಡುತ್ತಿದ್ದಂತೆ ಬಸ್ಸಿನಲ್ಲೇ ಉಸಿರು ಚೆಲ್ಲಿದ್ದಾರೆ.

ಏಕಾಏಕಿ ವ್ಯಕ್ತಿ ಮೃತಪಟ್ಟಿದ್ದು ಕಂಡ ಸಹಪ್ರಯಾಣಿಕರು ಆತಂಕಗೊಂಡು ಕಿರುಚಾಡಿದ್ದಾರೆ. ಕೂಡಲೇ ಚಾಲಕ ಹಾಗು ನಿರ್ವಾಹಕರು ಬಿಎಂಟಿಸಿ ಬಸ್‌ನಲ್ಲೇ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾಗಿ ಘೋಷಿಸಿದ್ದಾರೆ. ಬಳಿಕ ಮೃತ ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Road Accident : ಹೆಡ್‌ ಕಾನ್ಸ್‌ಟೇಬಲ್‌ ಪ್ರಾಣ ತೆಗೆದ ರೋಡ್‌ ಹಂಪ್‌; ಕಾರು ಅಪಘಾತದಲ್ಲಿ ಚಾಲಕ ಸಾವು

ಅಭ್ಯಾಸ ಮಾಡುವಾಗ ಕುಸಿದು ಬಿದ್ದು ಯುವ ಟೆನಿಸ್ ಆಟಗಾರ್ತಿ ಸಾವು

ಇಸ್ಲಾಮಾಬಾದ್: ಇತ್ತೀಚೆಗೆ ಸಣ್ಣ ಸಣ್ಣ ವಯಸ್ಸಿನ ಯುವಕರೇ ಹೃದಯಾಘಾತಕ್ಕೀಡಾಗಿ (Heart Attack) ಕ್ಷಣ ಮಾತ್ರದಲ್ಲಿ ಜೀವ ಕಳೆದುಕೊಳ್ಳುವ ವಿದ್ಯಮಾನಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲೂ ಜಿಮ್‌ ನಲ್ಲಿ ವರ್ಕೌಟ್‌ ಮಾಡುವಾಗ, ಆಟ ಆಡುವಾಗ ಒಮ್ಮೆಲೇ ಹೃದಯ ನಿಂತು ಬಿಡುವುದು ಹೆಚ್ಚಾಗುತ್ತಲೇ ಇದೆ.  ಪಾಕಿಸ್ತಾನದ(Pakistani tennis player Zainab Ali Naqvi) ಯುವ ಟೆನಿಸ್ ಆಟಗಾರ್ತಿ ಝೈನಾಬ್ ಅಲಿ ನಖ್ವಿ(Zainab Ali Naqvi) ಅಭ್ಯಾಸ ಮಾಡುವಾಗ ಕುಸಿದು ಸಾವನ್ನಪ್ಪಿದ್ದಾರೆ. 17 ವರ್ಷದ ಆಟಗಾರ್ತಿಗೆ ಹೃದಯಾಘಾತವಾಗಿರುವ(Heart Attack) ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಮುಂಬರುವ ಐಟಿಎಫ್ ಜೂನಿಯರ್ ಟೂರ್ನಿಯಲ್ಲಿ(ITF junior tournament) ಆಡಲು ಅವರು ಸಿದ್ಧತೆ ನಡೆಸುತ್ತಿದ್ದರು.

‘ಝೈನಾಬ್ ಉದಯೋನ್ಮುಖ ಆಟಗಾರ್ತಿಯಾಗಿದ್ದರು. ವೈದ್ಯರು ಅವರಿಗೆ ಹೃದಯಾಘಾತ ಆಗಿದೆ ಎಂದು ಸಂದೇಹ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಸಹಜ ಸಾವು ಎಂದು ದಾಖಲಿಸಲಾಗಿದೆ. ಆಟಗಾರ್ತಿಯ ದೇಹದ ಮರಣೋತ್ತರ ಪರೀಕ್ಷೆ ಬೇಡವೆಂದು ಪಾಲಕರೂ ಮನವಿ ಮಾಡಿದ್ದರಿಂದ ಕುಟುಂಬದವರಿಗೆ ಆಟಗಾರ್ತಿಯ ಪಾರ್ಥಿವ ಶರೀರವನ್ನು ಹಸ್ತಾಂತರಿಸಲಾಗಿದೆ ಎಂದು ಪಾಕಿಸ್ತಾನ ಟೆನಿಸ್ ಫೆಡರೇಷನ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.Heart Attack : ನಮಾಜ್‌ ಮಾಡುತ್ತಿದ್ದಾಗ ಕುಳಿತಲ್ಲೇ ಕುಸಿದು ಬಿದ್ದು ಮೃತ್ಯು; ವಿಡಿಯೊ ಇದೆಅಭ್ಯಾಸ ನಡೆಸಿ ತಮ್ಮ ಕೋಣೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಅವರು ಸಾವಿಗೀಡಾದರು. ಪ್ರಜ್ಞಾಹೀನರಾದ ಝೈನಾಬ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. ಝೈನಾಬ್ ಜತೆಗೆ ಅವರ ಅಜ್ಜಿ ಕೂಡ ಈ ಕೋಣೆಯಲ್ಲಿದ್ದರು. ಇವರ ಸಾವಿಗೆ ಟೆನ್ನಿಸ್​ ಫೆಡರೇಶನ್​ ಸಂತಾಪ ಸೂಚಿಸಿದೆ

.ಕಳೆದ ವರ್ಷ ಪಾಕಿಸ್ತಾನದಲ್ಲಿ ಕ್ಲಬ್‌ ಕ್ರಿಕೆಟ್‌ ಆಡುವ ವೇಳೆ ಯುವ ಕ್ರಿಕೆಟಿಗರೊಬ್ಬರು ಹೃದಯಾಘಾತದಿಂದ ಕ್ರೀಡಾಂಗಣದಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದರು. ಘಟನೆ ಬಗ್ಗೆ ಅಲ್ಲಿನ ಕ್ರಿಕೆಟರ್‌ಗಳು ದಿಗ್ರ್ಭಮೆ ವ್ಯಕ್ತಪಡಿಸಿದ್ದರು. ಅಲ್ಲಿನ ಕಾರ್ಪೊರೇಟ್‌ ಕ್ರಿಕೆಟ್‌ ಟೂರ್ನಮೆಂಟ್‌ ವೇಳೆ ಘಟನೆ ಸಂಭವಿಸಿತ್ತು. ಮೃತಪಟ್ಟ ಉಸ್ಮಾನ್‌ ಶಿನ್ವಾರಿ ಫೀಲ್ಡಿಂಗ್ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಸಹ ಆಟಗಾರರು ನೆರವಿಗೆ ಹೋದರು ಪ್ರಯೋಜನಕ್ಕೆ ಬರಲಿಲ್ಲ. ಬಳಿಕ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಕ್ಕಿಂತ ಮೊದಲೇ ಅವರು ಮೃತಪಟ್ಟಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version