ರಾಯಚೂರು: ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ (Lokayukta Raid) ಅಧಿಕಾರಿಗಳು ದಾಳಿ ನಡೆಸಿದ್ದು, 45 ಸಾವಿರ ರೂಪಾಯಿ ಲಂಚ ಪಡೆಯುವಾಗ ನಗರಸಭೆ ನೈರ್ಮಲ್ಯ ಅಭಿಯಂತರ ಮಲ್ಲಿಕಾರ್ಜುನ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಟ್ರ್ಯಾಕ್ಟರ್ ಮಾಲೀಕ ಭಗತ್ ಸಿಂಗ್ ಅವರಿಂದ ಮಲ್ಲಿಕಾರ್ಜುನ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಗರ ನೈರ್ಮಲ್ಯ ಕಾರ್ಯಕ್ಕೆ ಗುತ್ತಿಗೆ ಬಿಲ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದಾದ ಬಳಿಕ ಭಗತ್ ಸಿಂಗ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಭಗತ್ ಸಿಂಗ್ ಅವರ ದೂರಿನ ಮೇರೆಗೆ ಲೋಕಾಯುಕ್ತ ಎಸ್‌ಪಿ ಡಾ.ರಾಮ್ ಅರಸಿದ್ದಿ ಅವರ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಲಂಚಕೋರ ಅಧಿಕಾರಿಯನ್ನು ರೆಡ್ ಹ್ಯಾಂಡ್ ಆಗಿ ಬಲೆಗೆ ಬೀಳಿಸಿದ್ದಾರೆ. 45 ಸಾವಿರ ರೂಪಾಯಿಯನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳ ತಂಡದಲ್ಲಿ ನಾಗರಾಜ್, ಗುರುಲಿಂಗಪ್ಪಗೌಡ ಪಾಟೀಲ್ ಇದ್ದರು.
ಹುಬ್ಬಳ್ಳಿ ಪಾಲಿಕೆ ಸದಸ್ಯ ಚೇತನ ಹಿರೇಕೆರೂರ ಬಂಧನ
ಹುಬ್ಬಳ್ಳಿಯಲ್ಲಿ ಗೂಂಡಾ ಕಾಯ್ದೆ ಅಡಿ ಪೊಲೀಸರು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಪಕ್ಷೇತರ ಸದಸ್ಯ ಚೇತನ್ ಹಿರೇಕೆರೂರನನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ರೌಡಿಶೀಟರ್, ಬುಧವಾರವಷ್ಟೇ ಜಗದೀಶ್ ಶೆಟ್ಟರ್ ರೋಡ್‌ಶೋನಲ್ಲಿ ಭಾಗಿಯಾಗಿದ್ದ. ರೌಡಿಶೀಟರ್ ಪಟ್ಟಿಯಲ್ಲಿರುವ ಈತನನ್ನು ಬಂಧಿಸಿ ಬೆಳಗಾವಿಯ ಹಿಂಡಲಾಗ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.
ಇದನ್ನೂ ಓದಿ: Byrathi Basavaraj: ಸಚಿವ ಬೈರತಿ ಬಸವರಾಜ್ ವಿರುದ್ಧ 49 ಲಕ್ಷ ರೂ. ಗುಳುಂ ಆರೋಪ; ಲೋಕಾಯುಕ್ತಕ್ಕೆ ಮತ್ತೊಂದು ದೂರು