Site icon Vistara News

Murder Case : ಕಲ್ಲಿನಿಂದ ಜಜ್ಜಿ ಪತ್ನಿಯ ಕೊಂದು ನೇಣಿಗೆ ಶರಣಾದ ಅನುಮಾನ ಪಿಶಾಚಿ

Murder case In Raichur

ರಾಯಚೂರು: ಕ್ಷುಲ್ಲಕ ಕಾರಣಕ್ಕೆ ಗಂಡ- ಹೆಂಡತಿ ನಡೆದ ಜಗಳವು ಕೊಲೆಯಲ್ಲಿ (Murder Case) ಅಂತ್ಯವಾಗಿದೆ. ಸಿಟ್ಟಿನಿಂದ ಪತ್ನಿಯನ್ನು ಕೊಂದು ಪತಿಯೂ ನೇಣಿಗೆ ಶರಣಾಗಿದ್ದಾನೆ. ರಾಯಚೂರಿನ ಸಿಂಧನೂರು ತಾಲೂಕಿನ ದಿದ್ದಿಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಕವಿತಾ (26) ಕೊಲೆಯಾದವಳು. ಭೀಮಣ್ಣ (28) ಎಂಬಾತ ಪತ್ನಿಯನ್ನು ಕೊಂದು ನೇಣಿಗೆ ಶರಣಾದವನು.

ಕವಿತಾ ಹಾಗೂ ಭೀಮಣ್ಣ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಇಬ್ಬರಿಗೂ ಮದುವೆಯಾಗಿತ್ತು. ಈ ದಂಪತಿ ಮೊದಮೊದಲು ಖುಷಿಯಾಗಿಯೇ ಇದ್ದರು. ಆದರೆ ಇತ್ತೀಚೆಗೆ ಭೀಮಣ್ಣನಿಗೆ ಕವಿತಾಳ ಮೇಲೆ ಅನುಮಾನ ಮೂಡಿತ್ತು. ಆಕೆಯ ಶೀಲವನ್ನು ಶಂಕಿಸಿದ್ದ. ಇದೇ ವಿಚಾರಕ್ಕೆ ಪದೇಪದೆ ಪತ್ನಿ ಜತೆ ಜಗಳ ಮಾಡುತ್ತಿದ್ದ.

ಇದೇ ವಿಚಾರಕ್ಕೆ ನಿನ್ನೆ ಗುರುವಾರ ಗಲಾಟೆ ನಡೆದಿದೆ.‌ ಕೋಪದ ಕೈಗೆ ಬುದ್ಧಿಕೊಟ್ಟ ಭೀಮಣ್ಣನ ಕಲ್ಲಿನಿಂದ ಕವಿತಾಳನ್ನು ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಆಕೆ ಮೃತಪಟ್ಟ ಕೂಡಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಳಗಾನೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಗಾನೂರು ಪೊಲೀಸ್‌ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming : ಕಾಲೇಜಿನಿಂದ ಬಂದವಳೇ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿ 4 ಮಂದಿ ಮಲಗಿದಲ್ಲೇ ಕೊಚ್ಚಿ ಕೊಲೆ

ಗದಗ: ಒಂದೇ ಕುಟುಂಬದ ನಾಲ್ಕು ಮಂದಿಯನ್ನು ಮನೆಯಲ್ಲಿ ಮಲಗಿದಲ್ಲೇ ಕೊಚ್ಚಿ ಭೀಕರವಾಗಿ ಹತ್ಯೆ (Murder Case) ಮಾಡಲಾಗಿದೆ. ಈ ಬರ್ಬರ ಘಟನೆ ಗದಗ ನಗರದ ದಾಸರ ಓಣಿಯಲ್ಲಿ ನಡೆದಿದ್ದು, ಕೃತ್ಯದ (Crime news) ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಹುಬ್ಬಳ್ಳಿಯ ಕಾರ್ಪೊರೇಟರ್‌ ಪುತ್ರಿ ನೇಹಾ ಕೊಲೆ (Hubli Neha Murder) ಕೃತ್ಯ ಇನ್ನೂ ಹಸಿಯಾಗಿರುವಾಗಲೇ ಈ ಘಟನೆ ನಡೆದಿದೆ.

ಕೊಲೆಯಾದವರಲ್ಲಿ ನಗರಸಭೆ ಉಪಾಧ್ಯಕ್ಷೆಯ ಪುತ್ರನೊಬ್ಬ ಸೇರಿದ್ದಾನೆ. ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಕೊಲೆಯಾದವರು. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ದರೋಡೆ ಸೇರಿದಂತೆ ವಿವಿಧ ಆಯಾಮಗಳನ್ನು ತನಿಖೆ ನಡೆಸಲಾಗುತ್ತಿದೆ.

ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದ ಪತಿ, ಪತ್ನಿ, ಮಗಳನ್ನು ಕೊಲೆ ಮಾಡಲಾಗಿದೆ. ಈ ಮೂವರೂ ಕೊಪ್ಪಳ ಮೂಲದವರಾಗಿದ್ದು, ಏಪ್ರಿಲ್‌ 17ರಂದು ನಡೆದ ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಫಿಕ್ಸ್ ಕಾರ್ಯಕ್ರಮಕ್ಕಾಗಿ ಆಗಮಿಸಿದ್ದ ಸಂಬಂಧಿಗಳಾಗಿದ್ದಾರೆ.

ಮೇಲಿನ ಮಹಡಿಯ ಬಾಗಿಲು ಸದ್ದು ಕೇಳಿ ಅನುಮಾನಗೊಂಡು ಕುಟುಂಬಸ್ಥರು ಪೊಲೀಸರಿಗೆ ಫೋನ್ ಮಾಡಿದ್ದರು. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಬಾಗಿಲು ತೆಗೆದಿದ್ದರೆ ನಮ್ಮನ್ನೂ ಕೊಲೆ ಮಾಡುವ ಸಾಧ್ಯತೆಯಿತ್ತು ಎಂದು ಮನೆ ಮಾಲೀಕ‌ ಪ್ರಕಾಶ್ ಬಾಕಳೆ ಹೇಳಿಕೆ ನೀಡಿದ್ದಾರೆ.

ಶ್ವಾನದಳ, ಫಾರೆನ್ಸಿಕ್‌ ತಂಡಗಳು ಆಗಮಿಸಿದ್ದು, ಮನೆಯ ಇಂಚಿಂಚೂ ಪರಿಶೀಲನೆ ಮಾಡಲಾಗಿದೆ. ಸ್ಥಳಕ್ಕೆ ಎಸ್ಪಿ ಬಿ.ಎಸ್ ನೇಮಗೌಡ, ಹೆಚ್ಚುವರಿ ಎಸ್ಪಿ ಎಂ.ಬಿ ಸಂಕದ, ಡಿವೈಎಸ್ಪಿ, ಸಿಪಿಐ ಸೇರಿ ಹಲವು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೇಲ್ನೋಟಕ್ಕೆ ದರೋಡೆಗೆ ಬಂದ ತಂಡ ನಡೆಸಿರುವ ಕೃತ್ಯದಂತೆ ಕಂಡುಬಂದಿದ್ದರೂ, ಪ್ರಕರಣದ ಹಲವು ಮಗ್ಗಲುಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version