Site icon Vistara News

Raichur News: 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ: ಸಚಿವ ಎನ್.ಎಸ್ ಬೋಸರಾಜು

Pulse Polio programme in Raichur

ರಾಯಚೂರು: ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ (Pulse Polio) ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು (Raichur News) ಹೇಳಿದರು.

ನಗರದ ಕೆ.ಇ.ಬಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನವ ಹಕ್ಕುಗಳ ಸಂಘಟನೆಯ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇದನ್ನೂ ಓದಿ: Karnataka Weather : ಬಿಸಿಲ ಬೇಗೆಗೆ ಬೆಂದು ಸುಸ್ತಾದ ಜನರು; ಶುಷ್ಕ ವಾತಾವರಣ ಮುಂದುವರಿಕೆ

ಜಿಲ್ಲೆಯಾದ್ಯಂತ 5ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಖಾಯಿಲೆ ಬಾರದಂತೆ ಮುಂಜಾಗೃತಾ ಕ್ರಮವಾಗಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಲಾಗುತ್ತಿದೆ, ಇಂದು ಬೂತ್‍ಗಳಲ್ಲಿ ಲಸಿಕೆ ಹಾಕಲಾಗುತ್ತಿದ್ದು, ಮಾ.4ರಿಂದ ಮಾ.6ರವರೆಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಮನೆ ಮನೆಗೆ ತೆರಳಿ ಲಸಿಕೆಯನ್ನು ಹಾಕಲಾಗುತ್ತದೆ ಎಂದು ತಿಳಿಸಿದರು.

ನಗರ ಶಾಸಕ ಡಾ.ಎಸ್.ಶಿವರಾಜ ಪಾಟೀಲ್ ಮಾತನಾಡಿ, ಪೋಲಿಯೋ ಕಾಯಿಲೆಯನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ಹಾಕಿಸುವುದು ಅತ್ಯಂತ ಅಗತ್ಯವಾಗಿದೆ ಎಂದರು.

ಇದನ್ನೂ ಓದಿ: Job Alert: ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿದೆ ಬರೋಬ್ಬರಿ 517 ಟ್ರೈನಿ ಎಂಜಿನಿಯರ್ ಹುದ್ದೆ

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ತಹಸೀಲ್ದಾರ್ ಸುರೇಶ ವರ್ಮಾ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಕುಮಾರ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಶಾಕೀರ ಮೊಯಿನುದ್ದಿನ್, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಜ್ವಲ್ ಕುಮಾರ, ಅಕ್ಷರ ದಾಸೋಹ ಅಧಿಕಾರಿ ಈರಣ್ಣ, ಚಂದ್ರಕಾಂತ, ಮಹೇಶ, ಮಂಜುನಾಥ, ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.‌

Exit mobile version