Site icon Vistara News

Road Accident : ಸ್ಕೂಲ್‌ ಬಸ್‌-ಸಾರಿಗೆ ಬಸ್‌ ಡಿಕ್ಕಿ; ಡೆಡ್ಲಿ ಆ್ಯಕ್ಸಿಡೆಂಟ್‌ಗೆ ಮಕ್ಕಳಿಬ್ಬರು ಬಲಿ, ತುಂಡಾಯ್ತು ಮಕ್ಕಳ ಕಾಲುಗಳು

Road Accident

ರಾಯಚೂರು: ಸ್ಕೂಲ್ ಬಸ್ ಮತ್ತು ಸಾರಿಗೆ ಬಸ್ ನಡುವೆ ಭೀಕರ ಅಪಘಾತ (Road Accident) ಸಂಭವಿಸಿದ್ದು, ಇಬ್ಬರು ಶಾಲಾ ಮಕ್ಕಳು ದಾರುಣವಾಗಿ ಮೃತಪಟ್ಟಿದ್ದಾರೆ. ಒಂದನೇ ತರಗತಿ ವಿದ್ಯಾರ್ಥಿ ಸಮರ್ಥ, ಏಳನೇ ತರಗತಿ ವಿದ್ಯಾರ್ಥಿ ಶ್ರೀಕಾಂತ್‌ ಮೃತದುರ್ದೈವಿಗಳು. ಸ್ಕೂಲ್ ಬಸ್‌ನೊಳಗೆ ಇದ್ದ ಮೂವರು ಮಕ್ಕಳ ಕಾಲುಗಳು ತುಂಡಾಗಿವೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಈ ದುರ್ಘಟನೆ ನಡೆದಿದೆ.

ಖಾಸಗಿ ಶಾಲೆಯ ಬಸ್‌ವೊಂದು ಮಕ್ಕಳನ್ನು ಕರೆದುಕೊಂಡು ಕಪಗಲ್‌ನಿಂದ ಮಾನ್ವಿ ಕಡೆ ಹೊರಟಿತ್ತು. ಸಾರಿಗೆ ಬಸ್‌ ಸಿಂಧನೂರು ಕಡೆಯಿಂದ ರಾಯಚೂರು ಕಡೆಗೆ ಹೊರಟ್ಟಿದ್ದಾಗ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಮಕ್ಕಳಿಬ್ಬರ ಕಾಲು ತುಂಡಾಗಿ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕುಡಿ ಗ್ರಾಮದ ಓರ್ವ ಬಾಲಕ ಮತ್ತು ಬಾಲಕಿ ಮೃತಪಟ್ಟಿದ್ದಾರೆ. ರಿಮ್ಸ್ ಆಸ್ಪತ್ರೆಗೆ ಎಸ್‌ಪಿ ಮತ್ತು ಡಿಸಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಿಮ್ಸ್ ಆಸ್ಪತ್ರೆ ಮುಂಭಾಗ ಮುಟ್ಟಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಕ್ಕಳ ಕಾಲು ತುಂಡಾಗಿರುವ ಸ್ಥಿತಿ ಕಂಡು ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ: Child Death: ಶಿವಮೊಗ್ಗದಲ್ಲಿ ಜ್ಯೂಸ್‌ ಬಾಟೆಲ್‌ನ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಉಸಿರುಗಟ್ಟಿ ಸಾವು

ಎರಡು ಬಸ್‌ಗಳ ನಡುವೆ ಅಪಘಾತದಿಂದಾಗಿ ಸಿಂಧನೂರು- ರಾಯಚೂರು ಮಾರ್ಗದ ರಸ್ತೆ ಬಂದ್ ಆಗಿದೆ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಶಾಲಾ ಬಸ್‌ನಲ್ಲಿ ಒಟ್ಟು 32 ಮಕ್ಕಳ ಪೈಕಿ 18 ಜನರಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ 14 ಮಕ್ಕಳಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಪೈಕಿ ಮೂವರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version