Site icon Vistara News

Road Accident : ರಾಯಚೂರಿನಲ್ಲಿ ಬೈಕ್‌ಗೆ ಲಾರಿ ಡಿಕ್ಕಿ ಸ್ಥಳದಲ್ಲೇ ಸವಾರರಿಬ್ಬರು ಸಾವು

Road Accident

ರಾಯಚೂರಿನ ಹೊರವಲಯದ ವೈಟಿಪಿಎಸ್ ವಿದ್ಯುತ್ ಕೇಂದ್ರದ ಬಳಿ ಬೈಕ್‌ಗೆ ಲಾರಿ ಡಿಕ್ಕಿಯಾಗಿ ಸವಾರರಿಬ್ಬರು ಸ್ಥಳದಲ್ಲೇ (Road Accident) ಮೃತಪಟ್ಟಿದ್ದಾರೆ. ಜನಾರ್ದನ (27) ಮೃತ ಬೈಕ್ ಸವಾರ, ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ. ರಾಯಚೂರು – ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಖಾಸಗಿ ಕಂಪನಿ ಉದ್ಯೋಗಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ. ತಲೆಗೆ ಬಲವಾದ ಪೆಟ್ಟು ಬಿದ್ದು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಂಡಿ ಓಡಿಸುವ ಸ್ಪರ್ಧೆಯಲ್ಲಿ ಅವಘಡ

ವಿಜಯನಗರ: ಬಂಡಿ ಓಡಿಸುವ ಸ್ಪರ್ಧೆಯಲ್ಲಿ ಎರಡು ಅವಘಡಗಳು ತಪ್ಪಿದೆ. ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಯುವಕ ಪಾರಾಗಿದ್ದಾನೆ. ರಭಸವಾಗಿ ಓಡೋ ಎತ್ತಿನ ಬಂಡಿಯಿಂದ ಕೆಳಗೆ ಬಿದ್ದ ಯುವಕ ರಸ್ತೆ ಮೇಲೆ ಜಾರಿಕೊಂಡು ಹೋಗಿದ್ದಾನೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತಗಳು ತಪ್ಪಿದೆ. ವಿಜಯದಶಮಿ ಹಬ್ಬದ ನಿಮಿತ್ತ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದಲ್ಲಿ ಬೆಲ್ಲದ ಬಂಡಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಬಂಡಿ ಓಡಿಸುವ ಸ್ಪರ್ಧೆ ವೇಳೆ ಎತ್ತುಗಳು ರಭಸವಾಗಿ ಓಡುತ್ತಿದ್ದಾಗ ರಸ್ತೆಯ ಬಂಡಿ ತಿವುದು ಮಾರುದ್ದ ಹಾರಿ ಯುವಕ ಬಿದ್ದಿದ್ದ. ಕೂದಲೆಳೆ ಅಂತರದಲ್ಲಿ ಎತ್ತಿನ ಬಂಡಿಯ ಚಕ್ರದಡಿಯಿಂದ ಪಾರಾಗಿದ್ದಾನೆ.

ಮೈಸೂರಿನಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ

ಮೈಸೂರಿನ ಕುವೆಂಪು ನಗರದ ಆದಿಚುಂಚನಗಿರಿ ರಸ್ತೆ ಪೂರ್ಣಚಂದ್ರ ತೇಜಸ್ವಿ ವೃತ್ತದಲ್ಲಿ ಅಪಘಾತ ನಡೆದಿದೆ. ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂಬದಿ ಸವಾರರಿಗೆ ಗಂಭೀರ ಗಾಯವಾಗಿದೆ. ಭಾನುವಾರ ಮುಂಜಾನೆ ಇದೇ ವೃತ್ತದಲ್ಲಿ ಮತ್ತೊಂದು ಅಪಘಾತ ನಡೆದಿತ್ತು. ಇದೀಗ ಮತ್ತೊಂದು ಅಪಘಾತ ಸಂಭವಿಸಿದ್ದು, ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಿಂಬದಿ ಕುಳಿತ್ತಿದ್ದ ಸವಾರರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದೆ. ಅವೈಜ್ಞಾನಿಕವಾಗಿ ಹಾಕಲಾಗಿರುವ ಡಿವೈಡರ್ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬೈಕ್‌-ಕಾರು ಅಪಘಾತದಲ್ಲಿ ಕಾಲು ಮುರಿದುಕೊಂಡ ಸವಾರ

ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಕೋಡಿಹಳ್ಳಿ ಗ್ರಾಮದ ಅಂಡರ್ ಪಾಸ್ ಬಳಿ ಅಪಘಾತ ನಡೆದಿದೆ. ಕಾರು-ಬೈಕ್ ನಡುವೆ ಅಪಘಾತದಿಂದ ಬೈಕ್ ಸವಾರನಿಗೆ ಕಾಲು ಮುರಿದಿದ್ದು, ಕಾರು ಚಾಲಕ ಗಾಯಗೊಂಡಿದ್ದಾರೆ. ಹಂಪ್ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Exit mobile version