Site icon Vistara News

Road Accident : ಕುಡಿದು ಕಾರು ಓಡಿಸಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು ; ಕಾರ್ಕಳದಲ್ಲಿ ಸಿಲಿಂಡರ್ ಸ್ಫೋಟ

road Accident

ರಾಯಚೂರು: ಕೆಎಸ್‌ಆರ್‌ಟಿಸಿ ಬಸ್ಸಿಗೆ (Ksrtc Bus) ಕಾರೊಂದು ಡಿಕ್ಕಿ (Road Accident) ಹೊಡೆದಿದೆ. ಪರಿಣಾಮ ಕಾರಿನೊಬ್ಬಗೆ ಇದ್ದ ಯುವಕರಿಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕುಡಿದು ಕಾರು ಚಲಾಯಿಸಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ರಾಯಚೂರಿನ (Raichur News) ಲಿಂಗಸಗರೂ ತಾಲೂಕಿನ ಅಡವಿಬಾವಿ ಕ್ರಾಸ್ ಬಳಿ ತಡರಾತ್ರಿ ಅಪಘಾತ ನಡೆದಿದೆ.

ವಿರೇಶ್ (25), ಚನ್ನಬಸವ (24) ಮೃತ ದುರ್ದೈವಿಗಳು. ಲಿಂಗಸಗೂರು ಹೊರವಲಯದ ಕರಡಕಲ್ ಗ್ರಾಮದ ನಿವಾಸಿಗಳಾದ ಇವರಿಬ್ಬರು, ನಾರಾಯಣಪುರ ಜಲಾಶಯದತ್ತ ಹೊರಟ್ಟಿದ್ದರು. ಇದೇ ವೇಳೆ ಮುದ್ದೇಬಿಹಾಳ ಕಡೆಯಿಂದ ಲಿಂಗಸಗೂರಿನತ್ತ ಬಸ್‌ ಬರುತ್ತಿತ್ತು.

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದರಿಂದ ಈ ವೇಳೆ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ವಿರೇಶ್‌ ಹಾಗೂ ಚನ್ನಬಸವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಲಿಂಗಸಗೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.

ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ಬಸ್ಸಿನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬಸ್‌ನ ಮುಂಭಾಗ ಜಖಂಗೊಂಡಿದೆ.

ಇದನ್ನೂ ಓದಿ:4 ಲಕ್ಷ ಬೈಕ್‌, ಸ್ಕೂಟರ್‌ ಹಿಂಪಡೆಯಲು ಮುಂದಾದ ಸುಜುಕಿ ಇಂಡಿಯಾ; ಈ ಪಟ್ಟಿಯಲ್ಲಿ ನಿಮ್ಮ ವಾಹನವೂ ಇದ್ಯಾ? ಹೀಗೆ ಚೆಕ್‌ ಮಾಡಿ

ಕಾರ್ಕಳದಲ್ಲಿ ಸಿಲಿಂಡರ್ ಸ್ಫೋಟಕ್ಕೆ ಇಬ್ಬರು ಗಂಭೀರ

ಉಡುಪಿಯ ಕಾರ್ಕಳದ ಆನೆಕೆರೆ ಸಮೀಪದ ಕೃಷ್ಣಾ ಅಪಾರ್ಟ್ಮೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸಿಲಿಂಡರ್ ಸ್ಫೋಟಕ್ಕೆ ಕಾರ್ಕಳದ ಜನತೆ ಬೆಚ್ಚಿ ಬಿದ್ದಿದ್ದಾರೆ. ಭಾರಿ ಶಬ್ದದೊಂದಿಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಅಪಾರ್ಟ್ಮೆಂಟ್‌ನ ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಮನೆಯ ಗೋಡೆಗಳು ಛಿದ್ರಗೊಂಡು ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಗಾಯಾಳುಗಳನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version