ಬೆಂಗಳೂರು: ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಶಿಕ್ಷಕರಿಂದ ಪಿಂಚಣಿಗಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಿಕ್ಷಕರೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಂಕರಪ್ಪ ಬೋರಡ್ಡಿ (42) ಮೃತ ದುರ್ದೈವಿ. ಇವರು ಮೂಲತಃ ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದಲ್ಲಿ ಗಣಿತ ಶಿಕ್ಷಕರಾಗಿದ್ದರು. ಮಂಗಳವಾರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪ್ರತಿಭಟನೆ ಬಳಿಕ ಶಿಕ್ಷಕರ ಸದನದಲ್ಲಿ ತಂಗಿದ್ದ ಶಂಕರಪ್ಪ, ಬಳಿಕ ರೂಮಿನಲ್ಲೇ ಬ್ಯಾಗ್ ಇಟ್ಟು ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ತೆರಳಿ ರೈಲಿನ ಹಳಿಯಲ್ಲಿ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬುಧವಾರ ಮಧ್ಯರಾತ್ರಿ ನಡೆದಿರುವ ಘಟನೆ ಇದಾಗಿದ್ದು, ನಿನ್ನೆ ತಡರಾತ್ರಿ ಮೃತರ ಊರಿಗೆ ಮೃತದೇಹ ರವಾನಿಸಲಾಗಿದೆ. ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ನಿರತ ಶಿಕ್ಷಕರು ಈ ಬಗ್ಗೆ ಮಾಹಿತಿ ನೀಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ: Suicide Case: ಹೆಂಡ್ತಿ ಬಿಟ್ಟು ಪ್ರಿಯತಮೆ ಜತೆ ಪರಾರಿಯಾದವನು ಶವವಾಗಿ ಪತ್ತೆ; ಕುಟುಂಬಸ್ಥರಿಂದ ಕೊಲೆ ಶಂಕೆ