Tipu Sultan Insult: ಟಿಪ್ಪು ಭಾವಚಿತ್ರಕ್ಕೆ ಚಪ್ಪಲಿ ಹಾರ, ಸಿರವಾರ ಉದ್ವಿಗ್ನ, ಪ್ರತಿಭಟನೆ - Vistara News

ರಾಯಚೂರು

Tipu Sultan Insult: ಟಿಪ್ಪು ಭಾವಚಿತ್ರಕ್ಕೆ ಚಪ್ಪಲಿ ಹಾರ, ಸಿರವಾರ ಉದ್ವಿಗ್ನ, ಪ್ರತಿಭಟನೆ

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಿರವಾರದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಕಿಡಿಗೇಡಿಗಳು ರಾತ್ರೋರಾತ್ರಿ ಚಪ್ಪಲಿ ಹಾರ (Tipu Sultan Insult)
ಹಾಕಿದ್ದು, ಮುಂಜಾನೆ ಕಣ್ಣಿಗೆ ಬಿದ್ದಿದೆ.

VISTARANEWS.COM


on

sirawara tipu sultan insult
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ಟಿಪ್ಪು ಸುಲ್ತಾನ್ (Tipu Sultan) ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ (Tipu Sultan Insult) ಪರಿಣಾಮ ಬೆಳ್ಳಂಬೆಳಿಗ್ಗೆಯಿಂದಲೇ ರಾಯಚೂರು ಜಿಲ್ಲೆಯ (Raichur News) ಸಿರವಾರ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಿರವಾರದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಕಿಡಿಗೇಡಿಗಳು ರಾತ್ರೋರಾತ್ರಿ ಚಪ್ಪಲಿ ಹಾರ ಹಾಕಿದ್ದು, ಮುಂಜಾನೆ ಕಣ್ಣಿಗೆ ಬಿದ್ದಿದೆ. ಇದರಿಂದ ರೊಚ್ಚಿಗೆದ್ದ ಮುಸ್ಲಿಂ ಸಮುದಾಯದ ಯುವಕರು, ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ರಸ್ತೆ ತಡೆ ನಡೆಸಿದರು.

ಪಟ್ಟಣದ ಮಟನ್ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್‌ನಲ್ಲಿ ಈ ಘಟನೆ ನಡೆದಿದೆ. ಇದರಿಂದ ಸಿರವಾರ ಪಟ್ಟಣದಲ್ಲಿ ಬೆಳ್ಳಂ ಬೆಳಗ್ಗೆ ಬಿಗುವಿನ ವಾತಾವರಣ ಉಂಟಾಗಿದ್ದು, ಪ್ರತಿಭಟನಾಕಾರರು ರಸ್ತೆ ಮಧ್ಯದಲ್ಲಿ ಕುಳಿತು ಸಂಚಾರಕ್ಕೆ ತಡೆ ಒಡ್ಡಿದರಲ್ಲದೆ, ಟಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಮಾಲಿಕರು ಆತಂಕಪಟ್ಟುದು ಕಂಡುಬಂತು.

ಪೊಲೀಸರು ಸ್ಥಳದಲ್ಲಿ ಭದ್ರತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ. ಟಿಪ್ಪು ಸುಲ್ತಾನ್‌ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳ ಪತ್ತೆಗೆ ಸ್ಥಳೀಯ ಸಿಸಿ ಟಿವಿ ಫೂಟೇಜ್‌ಗಳ ಪರಿಶೀಲನೆ ಸೇರಿದಂತೆ ಅಗತ್ಯ ತನಿಖಾ ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ.

ಕೆರಗೋಡು ಗ್ರಾಮದಲ್ಲಿ ಬಿಜೆಪಿ ಸುತ್ತಾಟ

ಮಂಡ್ಯ: ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವು ವಿವಾದದ ಹಿನ್ನೆಲೆಯಲ್ಲಿ ಲಾಠಿ ಚಾರ್ಜ್‌‌ನಲ್ಲಿ ಗಾಯಗೊಂಡವರನ್ನು ಬಿಜೆಪಿ ನಾಯಕರು ಭೇಟಿ ಮಾಡುತ್ತಿದ್ದಾರೆ. ಭಾನುವಾರ ಕೆರಗೋಡಿನಲ್ಲಿ, ಸೋಮವಾರ ಮಂಡ್ಯದಲ್ಲಿ ಪ್ರತಿಭಟನೆ ಸಂದರ್ಭ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಈ ವೇಳೆ ಹಲವು ಜನರಿಗೆ ಗಾಯಗಳಾಗಿದ್ದವು. ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಇಂದ್ರೇಶ್ ನೇತೃತ್ವದಲ್ಲಿ ಹಲವು ಬಿಜೆಪಿ ಕಾರ್ಯಕರ್ತರು ಕೆರಗೋಡು ಗ್ರಾಮದಲ್ಲಿ ಗಾಯಗೊಂಡವರನ್ನು ಭೇಟಿಯಾಗಿ ಕ್ಷೇಮ ವಿಚಾರಿಸಿದರು.

ಪಾದಯಾತ್ರೆ ವೇಳೆ ಕಾಂಗ್ರೆಸ್ ಶಾಸಕನ ಫ್ಲೆಕ್ಸ್ ಹರಿದಿದ್ದ ಆರೋಪದಲ್ಲಿ ಪೊಲೀಸರು ಕೆರಗೋಡು ಗ್ರಾಮದ ಅಪ್ರಾಪ್ತನನ್ನು ಕರೆದೊಯ್ದು ವಿಚಾರಣೆ ನಡೆಸಿದ್ದರು. ಬಾಲಕನ ಜೊತೆ ತಂದೆ ಪಾಪಣ್ಣನನ್ನು ಬೆಳ್ಳಂಬೆಳಿಗ್ಗೆ ಕರೆದೊಯ್ದಿದ್ದ ಪೊಲೀಸರು ವಿಚಾರಣೆ ನಡೆಸಿ ವಾಪಾಸ್ ಕಳುಹಿಸಿದ್ದರು.

ವಿಚಾರ ತಿಳಿದು ಬಾಲಕನ ಮನೆಗೆ ಆಗಮಿಸಿದ ಬಿಜೆಪಿ ನಿಯೋಗವನ್ನು ತಂದೆ ತಡೆದು ಬಾಗಿಲು ಹಾಕಿಕೊಂಡಿದ್ದಾರೆ. “ನೀವು ಮನೆಗೆ ಬರೋದು ಬೇಡ, ನಮಗೆ ರಾಜಕೀಯ ಬೇಡ. ಯಾವ ಧ್ವಜವಾದರೂ ಹಾರಾಡಲಿ” ಎಂದಿದ್ದಾರೆ. “ನಾವು ನ್ಯಾಯಕ್ಕಾಗಿ ಹೋರಾಡಿದ್ದೇವೆ ಹೊರತು ರೇಪ್‌, ದರೋಡೆ ಮಾಡಿಲ್ಲ. ನಾವು ನಿಮ್ಮೊಂದಿಗೆ ಇದ್ದೇವೆ” ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಸಮಾಧಾನಪಡಿಸಿ ಧೈರ್ಯ ಹೇಳಿದ್ದಾರೆ.

ಇದನ್ನೂ ಓದಿ: Hanuman Flag : ಕೆರಗೋಡು ಬಳಿಕ ಭಟ್ಕಳದಲ್ಲಿ ಧ್ವಜ ದಂಗಲ್‌; ಸಾವರ್ಕರ್‌ ವೃತ್ತ, ಭಗವಾಧ್ವಜ ತೆರವಿಗೆ ಭುಗಿಲೆದ್ದ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Road Accident: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದುಗಲ್ ಬಳಿ ಅಪಘಾತ ನಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Road Accident
Koo

ರಾಯಚೂರು: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದುಗಲ್ ಬಳಿ ನಡೆದಿದೆ. ಬೈಕ್ ಸವಾರ ಭೀಮಣ್ಣ (55) ಮೃತರು. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನುಜ್ಜುಗುಜ್ಜಾಗಿದೆ.

ಕಾಲುವೆಗೆ ಈಜಲು ಹೋಗಿದ್ದ ಬಾಲಕ ನೀರು ಪಾಲು

ರಾಯಚೂರು: ಕಾಲುವೆಗೆ ಈಜಲು ಹೋಗಿದ್ದ ಬಾಲಕ ನೀರು ಪಾಲಾಗಿರುವ ಘಟನೆ ಜಿಲ್ಲೆಯ ಲಿಂಗಸುಗೂರಿನ‌ ಕೊಠಾ ಗ್ರಾಮದ ಬಳಿ ನಡೆದಿದೆ. ಅಯ್ಯನ್ ಶಫಿ (17) ನೀರು ಪಾಲಾದ ಬಾಲಕ. ಮೂವರು ಸ್ನೇಹಿತರೊಂದಿಗೆ ಕಾಲುವೆಗೆ ಈಜಲು ಹೋಗಿದ್ದಾಗ ದುರ್ಘಟನೆ ನಡೆದಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಲಿಂಗಸುಗೂರು ಅಗ್ನಿ ಶಾಮಕ ದಳದ ಸಿಬ್ಬಂದಿ ತೆರಳಿ, ಶೋಧಕಾರ್ಯ ನಡೆಸಿ ಯುವಕನ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

ವಿಜಯನಗರ: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ಕುರಿಗಾಹಿ ಯುವಕ ಮೃತಪಟ್ಟಿರುವ ಘಟನೆ ಹಗರಿಬೊಮ್ಮನಹಳ್ಳಿ ತಾಲೂಕು ಬಸರಕೋಡು ಗ್ರಾಮದ ಬಳಿ ನಡೆದಿದೆ.

ಕೊಟ್ಟೂರು ತಾಲೂಕು ಹರಾಳು ಗ್ರಾಮದ ಅಂಜಿನಪ್ಪ (26) ಮೃತಪಟ್ಟ ಕುರಿಗಾಹಿ. ತುಂಗಭದ್ರಾ ನದಿ ದಂಡೆಯಲ್ಲಿ ಕುರಿ ಮೇಯಿಸಲು ಹೋಗಿದ್ದ ಕುರಿಗಾಹಿ ಈಜಲು ನದಿಗೆ ಇಳಿದಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

Jai Shri Ram Slogan: ಜೈ ಶ್ರೀರಾಮ್ ಘೋಷಣೆ ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದಿದ್ದ ಕೈ ಮುಖಂಡ ಅಮಾನತು

Jai Shri Ram Slogan: ‌ಅತಿ ಸೂಕ್ಷ್ಮ ವಿಷಯಗಳ ಬಗ್ಗೆ ಮಾತನಾಡಬಾರದು ಎಂಬ ಕೆಪಿಸಿಸಿ ಸೂಚನೆಯ ನಡುವೆಯೂ ವಿವಾದಿಕ ಹೇಳಿಕೆ ನೀಡಿದ್ದರಿಂದ ರಾಯಚೂರು ಕಾಂಗ್ರೆಸ್‌ ಮುಖಂಡನನ್ನು ಅಮಾನತು ಮಾಡಲಾಗಿದೆ.

VISTARANEWS.COM


on

Jai Shri Ram Slogan
Koo

ರಾಯಚೂರು: ಜೈ ಶ್ರೀರಾಮ್ ಘೋಷಣೆ (Jai Shri Ram Slogan) ಕೂಗಿದವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಮುಖಂಡನನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ. ರಾಯಚೂರು ಕಾಂಗ್ರೆಸ್ ಮುಖಂಡ ಬಷಿರುದ್ದೀನ್ ಅವರನ್ನು ಪಕ್ಷದಿಂದ ಅಮಾನತು ಮಾಡಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ.

‌ಅತಿ ಸೂಕ್ಷ್ಮ ವಿಷಯಗಳ ಬಗ್ಗೆ ಮಾತನಾಡಬಾರದು ಎಂಬ ಕೆಪಿಸಿಸಿ ಸೂಚನೆಯ ನಡುವೆ ಚುನಾವಣೆ ಹೊತ್ತಿನಲ್ಲಿ ಪಕ್ಷ ಮತ್ತು ನಾಯಕರಿಗೆ ಮುಜುಗಗರವಾಗುವ ರೀತಿಯಲ್ಲಿ ಹೇಳಿಕೆ ನೀಡಿದ್ದರಿಂದ ನಿಮ್ಮನ್ನು ಕಾಂಗ್ರೆಸ್ ‌ಪಕ್ಷದಿಂದ ಅಮಾನತು ಮಾಡಲಾಗಿದೆ. ತಾವು 7 ದಿನಗಳೊಳಗಾಗಿ ಈ ಹೇಳಿಕೆಗಳ ವಿವರಣೆ ನೀಡಬೇಕು ಎಂದು ಕೈ ಮುಖಂಡ ಬಷೀರುದ್ದೀನ್‌ ಅವರಿಗೆ ಅಮಾನತು ಆದೇಶ ಪತ್ರದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ | Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

ನಗರಸಭೆ ಕಮಿಷನರ್ ಗುರುಸಿದ್ದಯ್ಯ ಹಿರೇಮಠ ಅವರ ಮುಂದೆಯೇ ಕಾಂಗ್ರೆಸ್‌ ಮುಖಂಡ ಬಷಿರುದ್ದೀನ್ ಉದ್ಧಟತನದ ಹೇಳಿಕೆ ನೀಡಿದ್ದರು. ರಾಯಚೂರಲ್ಲಿ ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲೇ ಒದ್ದು‌ ಒಳಗೆ ಹಾಕಬೇಕು‌ ಎಂದು ಹೇಳಿದ್ದರು. ಹೀಗಾಗಿ ಬಷಿರುದ್ದೀನ್ ಹೇಳಿಕೆ ಎಲ್ಲೆಡೆ ವೈರಲ್ ಆಗಿತ್ತು. ಕೈ‌ ಮುಖಂಡನ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಕಾಂಗ್ರೆಸ್‌ ಮುಖಂಡನನ್ನು ಅಮಾತುಗೊಳಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಬಗ್ಗೆ ಪೋಸ್ಟ್:‌ ಮಹೇಶ್‌ ವಿಕ್ರಂ ಹೆಗ್ಡೆ, ವಸಂತ್‌ ಗಿಳಿಯಾರ್ ಬಂಧನವಿಲ್ಲ

cm siddaramaiah

ಬೆಂಗಳೂರು: ಸೋಶಿಯಲ್‌ ಮೀಡಿಯಾದಲ್ಲಿ (Social media) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಮಾನಹಾನಿ (derogatory) ಮಾಡುವಂತಹ ಪೋಸ್ಟ್‌ ಹಾಕಿದ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ʼಪೋಸ್ಟ್‌ಕಾರ್ಡ್‌ʼ (Postcard) ಮುಖ್ಯಸ್ಥ ಮಹೇಶ್‌ ವಿಕ್ರಮ್‌ ಹೆಗ್ಡೆ (Mahesh Vikram Hegde) ಮತ್ತು ವಸಂತ್‌ ಗಿಳಿಯಾರ್‌ (Vasant Giliyar) ಅವರನ್ನು ಸದ್ಯಕ್ಕೆ ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್‌ (Highcourt) ನಿರ್ದೇಶಿಸಿದೆ.

ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಹೇಶ್‌ ವಿಕ್ರಮ್‌ ಹೆಗ್ಡೆ ಮತ್ತು ವಸಂತ್‌ ಗಿಳಿಯಾರ್‌ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಪೊಲೀಸರ ಪರ ಹೆಚ್ಚುವರಿ ಸರ್ಕಾರಿ ಅಭಿಯೋಜಕರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅದನ್ನು ಪರಿಗಣಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಮೇ 9ಕ್ಕೆ ವಿಚಾರಣೆ ಮುಂದೂಡಿತು. ಅಲ್ಲಿಯವರೆಗೆ ಅರ್ಜಿದಾರರನ್ನು ಬಂಧಿಸಬಾರದು ಎಂದು ಪೊಲೀಸರಿಗೆ ನಿರ್ದೇಶಿಸಿ ಮಧ್ಯಂತರ ಆದೇಶ ಮಾಡಿತು.

ಮಹೇಶ್‌ ವಿಕ್ರಮ್‌ ಹೆಗ್ಡೆ ಅವರು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ಟ್ವಿಟರ್‌ ಮತ್ತು ವಾಟ್ಸಾಪ್‌ಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾನಹಾನಿ ಮಾಡುವಂತಹ ಸುಳ್ಳು ಸುದ್ದಿ ಹರಿಬಿಟ್ಟಿದ್ದಾರೆ. ಜನರನ್ನು ಪ್ರಚೋದಿಸುವ ಉದ್ದೇಶದಿಂದಲೇ ಈ ಕೃತ್ಯ ಎಸಗಿದ್ದಾರೆ. ಸಿದ್ದರಾಮಯ್ಯ ಅವರ ಫೋಟೊ ದುರ್ಬಳಕೆ ಮಾಡಿಕೊಂಡಿದ್ದಾರೆ. ಜತೆಗೆ, ಪೋಟೋವನ್ನು ಕೆಟ್ಟ ಮಾಹಿತಿಯೊಂದಿಗೆ ಬಳಕೆ ಮಾಡುವ ಮೂಲಕ ಸಿಎಂ ವರ್ಚಸ್ಸಿಗೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಹರೀಶ್‌ ನಾಗರಾಜು 2024ರ ಏ.9ರಂದು ಅರ್ಜಿದಾರರು ಸೇರಿದಂತೆ ಒಟ್ಟು 7 ಮಂದಿ ವಿರುದ್ಧ ಬೆಂಗಳೂರಿನ ಬಸವೇಶ್ವರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಇದನ್ನೂ ಓದಿ: Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

ಅದನ್ನು ಆಧರಿಸಿ ಅರ್ಜಿದಾರರ ವಿರುದ್ಧ ಪಶ್ವಿಮ ವಿಭಾಗದ ಸಿಇಎನ್‌ ಠಾಣಾ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಬಂಧನ ಭೀತಿ ಎದುರಾದ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿದಾರರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

Continue Reading

ಮಳೆ

Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

Karnataka Weather Forecast : ಬೆಂಗಳೂರಲ್ಲಿ ಎರಡು ದಿನಗಳಿಂದ ಮಳೆಯು ಅಬ್ಬರಿಸಿತ್ತು. ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲಿ ಮಳೆ (Rain News) ಜತೆಗೆ ಹೀಟ್‌ ವೇವ್‌ (Heat Wave) ಅಲರ್ಟ್‌ ಅನ್ನು ಹವಾಮಾನ ಇಲಾಖೆ ನೀಡಿದೆ. ಇತ್ತ ನಿನ್ನೆ ಶುಕ್ರವಾರ ಬಂದ ಬಿರುಗಾಳಿ ಮಳೆಗೆ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

By

karnataka weather Forecast
ಬಿರುಗಾಳಿಗೆ ಸಿಲುಕಿ ಮೃತಪಟ್ಟ ವೃದ್ಧೆ ಮಾದಮ್ಮ
Koo

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಬಿಸಿಲು ಸಿಕ್ಸರ್‌ ಬಾರಿಸುತ್ತಿದ್ದರೆ, ಅತ್ತ ಮಳೆಯು ಫೋರ್ ಬಾರಿಸುತ್ತಿದೆ. ಗುರುವಾದ ಅಬ್ಬರಿಸಿದ ಬಿರುಗಾಳಿ ಮಳೆಗೆ (Rain News) ವೃದ್ಧೆಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಮೈಸೂರಿನ ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದಲ್ಲಿ ಘಟನೆ (Karnataka Weather Forecast) ನಡೆದಿದೆ.

ಮಾದಮ್ಮ (66) ಮೃತ ದುರ್ದೈವಿ. ನಿನ್ನೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಮಳೆಗೆ ಮಾದಮ್ಮ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎಂದಿನಂತೆ ತಮ್ಮ ಜಮೀನಿಗೆ ಮೇವು ತರಲು ಹೋದ ಸಂದರ್ಭದಲ್ಲಿ ಬಿರುಗಾಳಿ ಮಳೆಗೆ ಸಿಲುಕಿದ್ದಾರೆ. ಮೇವನ್ನು ತೆಗೆದುಕೊಂಡು ಬರುವಾಗ ರಸ್ತೆ ಮಧ್ಯದಲ್ಲಿ ಬಿರುಗಾಳಿ ಮಳೆಗೆ ಸಿಲುಕಿ ಕುಸಿದು ಬಿದ್ದಿದ್ದಾರೆ. ಕೆಳಗಡೆ ಬಿದ್ದ ಪರಿಣಾಮ ಮಾದಮ್ಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

ನಾಗರಹೊಳೆ ಅಭಯಾರಣ್ಯಕ್ಕೆ ತಂಪೆರೆದ ಮಳೆರಾಯ

ನಾಗರಹೊಳೆ ಅಭಯಾರಣ್ಯದಲ್ಲಿ ಮಳೆರಾಯ ತಂಪೆರೆದಿದ್ದಾನೆ. ಇದರಿಂದಾಗಿ ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಕಾಡ್ಗಿಚ್ಚು ಆತಂಕದಲ್ಲಿದ್ದ ಸಿಬ್ಬಂದಿಗೆ ವರಣನ ಸಿಂಚನದಿಂದ ಆತಂಕ ದೂರವಾಗಿದೆ. ಮೈಸೂರು ಜಿಲ್ಲೆ ಎಚ್.ಡಿ ಕೋಟೆ ಮಾರ್ಗ ಮಧ್ಯೆ ಬಿರುಗಾಳಿ ಸಹಿತ ಸುರಿದ ಮಳೆಗೆ ನೂರಾರು ಮರಗಳು ಧರೆಗುರುಳಿದ್ದವು.

ಎಚ್.ಡಿ ಕೋಟೆಯ ದಮ್ಮನಕಟ್ಟೆ ವಲಯದಲ್ಲಿ ಧಾರಾಕಾರ ಮಳೆಯಾಗಿದೆ. ಒಣಗಿ ನಿಂತ ಕಾನನಕ್ಕೆ ಜೀವ ಕಳೆ ಬಂದಿದೆ. ರಸ್ತೆಯ ಹಿಕ್ಕೆಲೆಗಳ ಹಸಿರು ಹುಲ್ಲು ಬರಲು ಮೊದಲ ಮಳೆ ಸಹಕಾರಿಯಾಗಿದೆ. ಸದ್ಯಕ್ಕೆ ಕಾಡಿಗೆ ಬೆಂಕಿ ಬೀಳುವ ಆತಂಕವು ಅರಣ್ಯ ಇಲಾಖೆ‌ ಸಿಬ್ಬಂದಿಗೆ ದೂರಾವಾಗಿದೆ.

ಶನಿವಾರವೂ ಮಳೆ ಅಬ್ಬರ

ಶನಿವಾರ ಮಧ್ಯಾಹ್ನದಂದು ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಐಎಂಡಿ ಮಾಹಿತಿ ನೀಡಿದೆ.

ಮೇ.5ರ ಭಾನುವಾರದಂದು ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಏ. 6ರಂದು ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

ಶಾಖದ ಅಲೆಯ ಎಚ್ಚರಿಕೆ

ಮಳೆ ನಡುವೆಯೂ ಕೆಲವೆಡೆ ಶಾಖದ ಅಲೆಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಒಳನಾಡಿನ ಬೀದರ್, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ಬೆಂಗಳೂರು ನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಮುಂದಿನ 4 ದಿನಗಳವರೆಗೆ ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ರಾತ್ರಿ ಸಮಯ ಬೆಚ್ಚಗಿನ ವಾತಾವರಣ ಇರಲಿದೆ. ಕರಾವಳಿಯಲ್ಲಿ ಬಿಸಿ ಗಾಳಿ ಬೀಸಲಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

Accident News: ಪ್ರತ್ಯೇಕ ಕಡೆಗಳಲ್ಲಿ ನಡೆದ ಅವಘಡದಲ್ಲಿ ಮೂವರು ಮೃತಪಟ್ಟಿದ್ದಾರೆ. ಮೈಸೂರಲ್ಲಿ ಮಳೆ ಸಹಿತ ಜೋರಾಗಿ ಬೀಸಿದ ಗಾಳಿಗೆ ಕೂಲಿಂಗ್‌ ಶೀಟ್‌ ತಲೆ ಮೇಲೆ ಬಿದ್ದು ವ್ಯಕ್ತಿಯೊಬ್ಬರು ದಾರುಣ ಅಂತ್ಯ ಕಂಡಿದ್ದಾರೆ. ಇತ್ತ ರಾಯಚೂರಲ್ಲಿ ರಣ ಬಿಸಿಲಿಗೆ ಇಬ್ಬರು ಬಲಿಯಾಗಿದ್ದಾರೆ.

VISTARANEWS.COM


on

By

Accident news
Koo

ಮೈಸೂರು/ರಾಯಚೂರು: ನಿನ್ನೆ ಶುಕ್ರವಾರ ಬೀಸಿದ ಬಿರುಗಾಳಿಗೆ ಕೂಲಿಂಗ್‌ ಶೀಟ್‌ ಕಳಚಿ ವ್ಯಕ್ತಿಯೊಬ್ಬರ ತಲೆ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಕುಸಿದು ಬಿದ್ದ ವ್ಯಕ್ತಿ ಸ್ಥಳದಲ್ಲೇ (Accident News) ಮೃತಪಟ್ಟಿದ್ದಾರೆ. ಮೈಸೂರಿನ ಆಲನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಿವಕುಮಾರ್ (34) ಮೃತ ದುರ್ದೈವಿ.

ಮಾರಶೆಟ್ಟಹಳ್ಳಿ ಗ್ರಾಮದ ನಿವಾಸಿಯಾದ ಶಿವಕುಮಾರ್‌ ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದ. ಈ ವೇಳೆ ಜೋರಾಗಿ ಬಿರುಗಾಳಿ ಬೀಸಿದ್ದು, ಕೂಲಿಂಗ್ ಶೀಟ್ ನೇರವಾಗಿ ಶಿವಕುಮಾರ್‌ ತಲೆ ಮೇಲೆ ಬಿದ್ದಿದೆ. ಪರಿಣಾಮ ಗಂಭೀರ ಗಾಯಗೊಂಡ ಶಿವಕುಮಾರ್‌ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇಬ್ಬರನ್ನು ಬಲಿ ಪಡೆದ ರಾಯಚೂರು ರಣ ಬಿಸಿಲು

ಒಂದು ಕಡೆ ಬಿರುಗಾಳಿ ಸಹಿತ ಮಳೆ ಮತ್ತೊಂದು ಕಡೆ ರಣ ಬಿಸಿಲಿಗೆ ಜನರು ತತ್ತರಿಸಿ ಹೋಗಿದ್ದಾರೆ. ರಾಯಚೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅತಿಯಾದ ಬಿಸಿಲಿನ ತಾಪಮಾನದಿಂದ ಮಲ್ಲಯ್ಯ ಹಾಗೂ ಆಂಜನೇಯ ಎಂಬುವವರು ಮೃತಪಟ್ಟಿದ್ದಾರೆ.

ರಾಯಚೂರಿನ ಮಸ್ಕಿ ಪಟ್ಟಣದಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಮೃತಪಟ್ಟಿದ್ದಾರೆ. ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದ ಮಲ್ಲಯ್ಯ (45) ಅವರ ಪ್ರಾಣಪಕ್ಷಿ ಹಾರಿ ಹೋಗಿದೆ.

ಮಲ್ಲಯ್ಯ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಮೇಲೆ ಸ್ವಗ್ರಾಮ ಮಸ್ಕಿಯ ಹಸಮಕಲ್‌ಗೆ ಬಂದಿದ್ದರು. ಮಧ್ಯಾಹ್ನ ಮಸ್ಕಿ ಪಟ್ಟಣದಲ್ಲಿ ಕಿರಾಣಿ ಸಾಮಾನು ತರಲು ಬಂದಾಗ ರಸ್ತೆಯಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ತಿಳಿದುಬಂದಿದೆ.

ಇತ್ತ ರಾಯಚೂರು ತಾಲೂಕಿನ ಜಾಲಿಬೆಂಚಿಯಲ್ಲೂ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಜಾಲಿಬೆಂಚಿಯ ಆಂಜನೇಯ (45) ಮೃತ ದುರ್ದೈವಿ. ಆಂಜನೇಯ ಹೊಲದಿಂದ ಕೆಲಸ ಮುಗಿಸಿ ಮನೆಗೆ ಬರುವಾಗ ಸುಸ್ತಾಗಿ ಬಿದ್ದು ಮೃತಪಟ್ಟಿದ್ದಾರೆ. ನಿತ್ಯ 44-46°C ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ಅನಾವಶ್ಯಕವಾಗಿ ಹೊರಗೆ ಓಡಾಡದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಮೈಸೂರಿನಲ್ಲಿ ಏಕಾಏಕಿ ಹೊತ್ತಿ ಉರಿದ ಬೈಕ್

ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ನಿನ್ನೆ ಶುಕ್ರವಾರ ಮಧ್ಯಾಹ್ನ ಏಕಾಏಕಿ ಬೈಕ್‌ವೊಂದು ಹೊತ್ತಿ ಉರಿದಿದೆ. ಬಿಸಿಲ ತಾಪಕ್ಕೆ ಇದ್ದಕ್ಕಿದ್ದಂತೆ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್‌ ಯಾರಿಗೂ ಪ್ರಾಣಹಾನಿ ಆಗಿಲ್ಲ.

ಇದನ್ನೂ ಓದಿ: Drama Artist: ಶಕುನಿಯಾಗಿ ಗರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

ರಾಯಚೂರಲ್ಲಿ ಬಿಸಿಲಾಜ್ಞೆ; ಮಧ್ಯಾಹ್ನ 12-4ರ ವರೆಗೆ ಹೊರಬರದಂತೆ ಡಿಸಿ ಕಟ್ಟಾಜ್ಞೆ!

ರಾಯಚೂರು/ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಉರಿ ಬಿಸಿಲು ಜನರನ್ನು ಸುಸ್ತು (Karnataka Weather Forecast) ಮಾಡಿದೆ. ಅದರಲ್ಲೂ ಉತ್ತರ ಕರ್ನಾಟಕದ ಮಂದಿ ಕುಂತರೂ ನಿಂತರೂ ಬೆವರು ಸುರಿಸುವಂತಾಗಿದೆ. ಬಿಸಿಲಿನ ಆಜ್ಞೆಗೆ ಜನರು ಹೊರಬರಲು ಆಗದೆ ಅಘೋಷಿತ ಬಂದ್‌ ನಿರ್ಮಾಣವಾಗಿದೆ. ಸದ್ಯ ಅತಿಯಾದ ಬಿಸಿಲಿಗೆ ತತ್ತರಿಸಿದ ರಾಯಚೂರು ಜನರು ಮಧ್ಯಾಹ್ನ ಹೊರಗೆ ಬಾರದಂತೆ ರಾಯಚೂರು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.

ಮುಂದಿನ ಒಂದು ವಾರ ಮತ್ತಷ್ಟು ಗರಿಷ್ಠ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಈಗಾಗಲೇ 44 ರಿಂದ 46 ಡಿ.ಸೆ ನಷ್ಟು ತಾಪಮಾನ ದಾಖಲಾಗುತ್ತಿದೆ. ಇದರಿಂದ ಅನಾರೋಗ್ಯ ಸಮಸ್ಯೆ ಜತೆಗೆ ಬಿಸಿಲಾಘಾತಕ್ಕೆ ಸಾವು ಸಂಭವಿಸಬಹುದು. ಹಾಗಾಗಿ ಮಧ್ಯಾಹ್ನ 12 ರಿಂದ 4 ಗಂಟೆವರೆಗೂ ಹೊರಗೆ ಹೋಗದಿರಿ ಎಂದು ಡಿಸಿ ಎಲ್ ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹೊರಗೆ ಹೋಗಲೇಬೇಕಾದ ಅವಶ್ಯಕತೆ ಇದ್ದರೆ ಶುದ್ಧ ಕುಡಿಯುವ ನೀರಿನ ಬಾಟಲ್ ಕೊಂಡೊಯ್ಯಿರಿ. ಟೋಪಿ ಅಥವಾ ಛತ್ರಿ ಬಳಸಿ, ಆದಷ್ಟು ನೆರಳಿನ ಪ್ರದೇಶಗಳಲ್ಲಿ ಓಡಾಡಿ. ಬಾಯಾರಿಕೆ ಆಗದಿದ್ದರೂ ಆಗಾಗ ನೀರು ಕುಡಿಬೇಕು. ಯಾವಾಗಲೂ ನಿಮ್ಮ ಬಳಿ ನೀರು ಇಟ್ಟುಕೊಂಡಿರಿ ಎಂದು ಜಿಲ್ಲಾಧಿಕಾರಿ ಎಲ್‌.ಚಂದ್ರಶೇಖರ ನಾಯಕ್ ಸಲಹೆ ನೀಡಿದ್ದಾರೆ. ಹಾಗೆಯೇ ಮನೆ- ಕಚೇರಿಗಳಲ್ಲಿ ಪಕ್ಷಿಗಳಿಗೂ ನೀರನ್ನು ತುಂಬಿ ಇಡಿ ಎಂದಿದ್ದಾರೆ.

karnataka weather forecast

ತುಮಕೂರಲ್ಲಿ ಬಿಸಿ ಗಾಳಿ; ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ

ತುಮಕೂರು ಜಿಲ್ಲೆಯಲ್ಲೂ ಬಿಸಿ ಗಾಳಿಯು ಆತಂಕವನ್ನು ಹೆಚ್ಚಿಸಿದೆ. ಪಾವಗಡ ತಾಲೂಕಿನಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಬಿಸಿಲ ಬೇಗೆಗೆ ಪ್ರಾಣಿ ಪಕ್ಷಿಗಳೂ ಹೈರಾಣಾಗಿವೆ. ಇತ್ತ ರೈತರು ದನ ಕರುಗಳಿಗೆ ಒದ್ದೆ ಮಾಡಿದ ಗೋಣಿಚೀಲ ಹಾಕುತ್ತಿದ್ದಾರೆ. ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ಹಸುಗಳಿಗೆ ತೇವದ ಗೋಣಿಚೀಲದ ಹೊದಿಕೆ ಹಾಕಿ, ತಂಪು ಮಾಡುತ್ತಿದ್ದಾರೆ.

ಬಿಸಿಲಿನ ಹೊಡೆತ- ಚಿಕ್ಕಬಳ್ಳಾಪುರ ಪ್ರವಾಸಿತಾಣ ಖಾಲಿ ಖಾಲಿ

ಇತ್ತ ಚಿಕ್ಕಬಳ್ಳಾಪುರದಲ್ಲೂ ಅತಿಯಾದ ತಾಪಮಾನದಿಂದಾಗಿ ಪ್ರವಾಸಿ ತಾಣಗಳು ಪ್ರವಾಸಿಗರು ಇಲ್ಲದೆ ಬಣಗುಡುತ್ತಿದೆ. ನಂದಿ ಬೆಟ್ಟ, ಈಶಾ ಫೌಂಡೇಶನ್ ಜನರಿಲ್ಲದೆ ಖಾಲಿ ಖಾಲಿಯಾಗಿದೆ. ಬಿಸಿಲಿನ ತಾಪಕ್ಕೆ ಜನರು ಮನೆ ಬಿಟ್ಟು‌ ಕದಲದ ಕಾರಣಕ್ಕೆ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಬಳ್ಳಾಪುರದಲ್ಲಿ ಆಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಪ್ರತಿನಿತ್ಯ ಪ್ರವಾಸಿಗರಿಂದ ಗಿಜುಗುಡುತಿದ್ದ ನಂದಿಬೆಟ್ಟ ಖಾಲಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
World Laughter Day
ಆರೋಗ್ಯ29 mins ago

World Laughter Day 2024: ಇಂದು ವಿಶ್ವ ನಗುವಿನ ದಿನ; ನಗುನಗುತ ಬಾಳೋಣ

Dina Bhavishya
ಭವಿಷ್ಯ29 mins ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

HD Revanna
ಕರ್ನಾಟಕ6 hours ago

HD Revanna: ಛೇ, ಎಂಥ ಸ್ಥಿತಿ ಬಂತಪ್ಪ; ಎಸ್‌ಐಟಿ ಸೆಲ್‌ನಲ್ಲಿ ಗಳಗಳನೆ ಅತ್ತ ಎಚ್‌.ಡಿ.ರೇವಣ್ಣ

Road Accident
ಕರ್ನಾಟಕ6 hours ago

Road Accident: ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವು

Virat kohli
ಪ್ರಮುಖ ಸುದ್ದಿ6 hours ago

IPL 2024 : ಟೀಕೆಗಳಿಗೆ ಪ್ರತಿಕ್ರಿಯಿಸುವುದು ಯಾಕೆ? ಕೊಹ್ಲಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಗವಾಸ್ಕರ್​

IPL 2024
ಕ್ರೀಡೆ6 hours ago

IPL 2024 : ಅತಿ ವೇಗದ ಬೌಲರ್​ ಮಯಾಂಕ್ ಐಪಿಎಲ್​ನಿಂದ ಔಟ್​​

HD Revanna
ಕರ್ನಾಟಕ6 hours ago

HD Revanna: ಎಸ್‌ಐಟಿ ಸೆಲ್‌ನಲ್ಲೇ ‘ಮೊದಲ ರಾತ್ರಿ’ ಕಳೆಯಲಿರುವ ರೇವಣ್ಣ; ಬೆಳಗ್ಗೆ ಜಡ್ಜ್‌ ಎದುರು ಹಾಜರ್!

IPL 2024
ಕ್ರೀಡೆ6 hours ago

IPL 2024 : ಅಭಿಮಾನಿಗಳಿಗೆ ಸತಾಯಿಸಿ ಖುಷಿ ಕೊಟ್ಟ ಆರ್​ಸಿಬಿ, ಗುಜರಾತ್​ ವಿರುದ್ಧ 4 ವಿಕೆಟ್​ ಜಯ

Dingaleshwar Swamiji
ಕರ್ನಾಟಕ6 hours ago

Dingaleshwar Swamiji: ದ್ವೇಷ ಭಾಷಣ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್

Virat kohli
ಕ್ರೀಡೆ7 hours ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ29 mins ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌