ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುರುವಾರ ಸಂಜೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಹವಾಮಾನ ಇಲಾಖೆ ಮುನ್ಸೂಚನೆ (Rain alert) ನೀಡಿದ್ದು, ಬೆಂಗಳೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಮುಂಜಾಗ್ರತೆ ವಹಿಸಬೇಕಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದೆ. ಉಳಿದಂತೆ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಲಿದೆ.
ಉತ್ತರ ಒಳನಾಡಿನ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳು ಸೇರಿದಂತೆ ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜಿಟಿಜಿಟಿಯಿಂದ ಮಳೆ ಶುರುವಾಗಿ ಧಾರಾಕಾರ ಮಳೆಯಾಗಲಿದೆ.
ಇದನ್ನೂ ಓದಿ | Road collapse | ಮಳೆಯ ಆರ್ಭಟಕ್ಕೆ ಕೆರೆ ಏರಿ ಕುಸಿತ; ವಾಹನ ಸಂಚಾರ ಸ್ಥಗಿತ