Site icon Vistara News

Rain Alert In karnataka | ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮಳೆ ಅಲರ್ಟ್‌

Weather News

ಬೆಂಗಳೂರು: ಚುಮು ಚುಮು ಚಳಿ ನಡುವೆ ರಾಜ್ಯದ ಜನರಿಗೆ ಹವಾಮಾನ ಇಲಾಖೆ ಮಳೆ ಅಲರ್ಟ್‌ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಮುಂದಿನ 24 ಗಂಟೆಯಲ್ಲಿ ಮಳೆಯಾಗುವ ಸಾಧ್ಯತೆ (Rain Alert In karnataka) ಇದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ನವೆಂಬರ್‌ 22 ರಿಂದ ರಾಜ್ಯದಲ್ಲಿ ಮಳೆ ಆಗಲಿದ್ದು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ ಬೀಳಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ ಸೇರಿ ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ ಹಾಗೂ ಮೈಸೂರು, ತುಮಕೂರು, ವಿಜಯಪುರ ಸೇರಿ ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇನ್ನೆರಡು ದಿನ ಹಲವೆಡೆ ಮಳೆ ಜತೆಯೇ ಚಳಿ ಏಟು
ಈಗಾಗಲೇ ರಾಜ್ಯದಲ್ಲಿ ಚಳಿ ಕೂಡ ಜಾಸ್ತಿಯಾಗಿದ್ದು, ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗುವ ಬಗ್ಗೆಯೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 7.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಇದನ್ನೂ ಓದಿ | ಕರ್ನಾಟಕ ಮಾತೆಯ ಹೊಸ ಅಧಿಕೃತ ಚಿತ್ರ ಇದು: ಎಲ್ಲ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಬಳಕೆ ಕಡ್ಡಾಯ

Exit mobile version