Site icon Vistara News

Rain Alert: ಇಂದಿನಿಂದ ರಾಜ್ಯದಲ್ಲಿ ಭಾರಿ ಗಾಳಿ ಮಳೆ, ಸಮುದ್ರ ತೀರ, ತಗ್ಗು ಪ್ರದೇಶದಲ್ಲಿರುವವರು ಎಚ್ಚರ

rain pic

ಬೆಂಗಳೂರು: ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (rain alert) ನೀಡಿದೆ. ತಗ್ಗು ಪ್ರದೇಶದಲ್ಲಿರುವ ನಿವಾಸಿಗಳು, ಸಮುದ್ರದ ಬಳಿ ಇರುವವರು ಎಚ್ಚರದಿಂದಿರುವಂತೆ ಸೂಚನೆ ನೀಡಲಾಗಿದೆ.

ಇಂದು ಕರಾವಳಿಗೆ ರೆಡ್ ಅಲರ್ಟ್, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್‌, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, 115 ಮಿ.ಮೀನಿಂದ 204 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಮಳೆ ಜೊತೆ ಈ ಎಲ್ಲಾ ಭಾಗಗಳಲ್ಲಿ ಗುಡುಗು ಮಿಂಚು, ಭಾರಿ ಗಾಳಿಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಭಾರಿ ಮಳೆ (bangalore rain) ಆಗಬಹುದು. ತಗ್ಗು ಪ್ರದೇಶದಲ್ಲಿ ಇರುವವರು ಎಚ್ಚರವಾಗಿರಲು ಸೂಚಿಸಲಾಗಿದೆ.

ಇದನ್ನೂ ಓದಿ: Rain News : ದೇಶ ಪೂರ್ತಿ ಆವರಿಸಿದ ಮುಂಗಾರು, ಆದರೂ ವಾಡಿಕೆಗಿಂತ ಕಡಿಮೆ

Exit mobile version