ಮಡಿಕೇರಿ: ಕೊಡಗಿನಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಇಂದು ಮುಂಜಾನೆ 8:30 ರವರೆಗೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕೊಡಗಿನ ಬ್ರಹ್ಮಗಿರಿ ತಪ್ಪಲು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ
ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು- ಭಾಗಮಂಡಲ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ ನಾಪೋಕ್ಲು- ಭಾಗಮಂಡಲ ಸಂಪರ್ಕ ಕಡಿತವಾಗಿದೆ. ಭಾಗಮಂಡಲ- ಮಡಿಕೇರಿ ರಸ್ತೆ ಮೇಲೆ ಸುಮಾರು 2 ಅಡಿಗಳಷ್ಟು ನೀರು ಹರಿಯುತ್ತಿದೆ.
ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ವ್ಯಾಪಕ ಮಳೆಯ ಪರಿಣಾಮ ರಾಜ್ಯದ ನಾನಾ ಕಡೆಗಳಲ್ಲಿ ತೀವ್ರ ಬೆಳೆ ಹಾನಿ ಸಂಭವಿಸಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಕೂಡ ಬಿಡುವಿಲ್ಲದಂತೆ ಮಳೆ ಸುರಿಯುತ್ತಿದೆ.