Rain | ರಾಜ್ಯದ ಈ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಜುಲೈ 9ರಂದು ರಜೆ ಘೋಷಣೆ - Vistara News

ಕರ್ನಾಟಕ

Rain | ರಾಜ್ಯದ ಈ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಜುಲೈ 9ರಂದು ರಜೆ ಘೋಷಣೆ

ಬಂಗಾಳಕೊಲ್ಲಿಯಲ್ಲಿ ಮೇಲ್ಮೈಸುಳಿಗಾಳಿಯಿಂದಾಗಿ ಕರಾವಳಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಮುಂಜಾಗ್ರತಾ ದೃಷ್ಟಿಯಿಂದ ಕೆಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಾಳೆಹೊಳೆ ಗ್ರಾಮದಲ್ಲಿ ರಾಜ್ಯ ಹೆದ್ದಾರಿಗೆ ಬೃಹ
ಮಳೆ ಅಬ್ಬರಕ್ಕೆ ನೆಲಕಚ್ಚಿದ ಮರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು ಚುರುಕು ಪಡೆದುಕೊಂಡಿದ್ದು, ಕರಾವಳಿಯೊಂದಿಗೆ ಮಲೆನಾಡು ಭಾಗಗಳಲ್ಲಿ ಎಡಬಿಡದೇ ಮಳೆ ಸುರಿಯುತ್ತಿದೆ. ಪರಿಣಾಮ ಗುಡ್ಡ ಕುಸಿತ, ಕಟ್ಟಡ ಗೋಡೆ ಕುಸಿತ, ಮಳೆ ನೀರು ಜಲಾವೃತಗೊಂಡಿದೆ. ಕರಾವಳಿ ಸೇರಿದಂತೆ ಹಲವು ಭಾಗಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹೀಗಾಗಿ ಸುರಕ್ಷತೆ ದೃಷ್ಟಿಯಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಲಬುರಗಿಯಲ್ಲಿ ಕಳೆದ 2 ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಜುಲೈ 9ರಂದು ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಎಲ್ಲ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಜೆ ಘೋಷಿಸಿ ಜಿಲ್ಲಾಧಿಕಾರಿ ಯಶವಂತ ಗುರುಕರ್ ಆದೇಶಿಸಿದ್ದಾರೆ.

ಇದನ್ನೂ ಓದಿ | ಮನೆಯೊಳಗೆ ನೀರು ನುಗ್ಗಿದರೆ ₹10 ಸಾವಿರ ಪರಿಹಾರ: ಮಳೆ ಹಾನಿ ಕುರಿತು ಸಿಎಂ ಬೊಮ್ಮಾಯಿ ಸಭೆ

ಉತ್ತರಕನ್ನಡ ಭಾಗದಲ್ಲೂ ವರುಣನ ಅಬ್ಬರ ಮುಂದುವರಿದಿದ್ದು, ಅತಿ ಹೆಚ್ಚು ಮಳೆಯಾಗುತ್ತಿರುವ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ವಿಸ್ತರಣೆ ಮಾಡಲಾಗಿದೆ. ಜುಲೈ 9 ರಂದು ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲ್ಲೂಕುಗಳಿಗೆ ಮಾತ್ರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಯಲ್ಲಾಪುರ, ಹಳಿಯಾಳ ಹಾಗೂ ದಾಂಡೇಲಿ ತಾಲ್ಲೂಕುಗಳ ಶಾಲೆ, ಕಾಲೇಜಿಗೆ ರಜೆ ಇರುವುದಿಲ್ಲ.

ಕೊಡುಗು ಜಿಲ್ಲೆಯಲ್ಲೂ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಎಲ್ಲ ಶಾಲಾ- ಕಾಲೇಜುಗಳಿಗೆ, ಅಂಗನವಾಡಿಗಳಿಗೆ ರಜೆ ವಿಸ್ತರಣೆಯಾಗಿದ್ದು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ | Weather Report: ಕರಾವಳಿಯಲ್ಲಿ ಮತ್ತೆರಡು ದಿನ ರೆಡ್‌ ಅಲರ್ಟ್‌: ಜುಲೈ 9ರಂದು ಶಾಲಾ-ಕಾಲೇಜುಗಳಿಗೆ ರಜೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Narendra Modi: ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ.

VISTARANEWS.COM


on

Modi in Karnataka stay in Belagavi tomorrow and Huge gatherings at five places
Koo

ಬೆಂಗಳೂರು: ಕರ್ನಾಟಕದ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದೆ. ಈ ಹಿನ್ನೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Narendra Modi) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಅಂತೆಯೇ ಮೊದಲು ಬೆಳಗಾಗಿಯಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಮಾತನಾಡಿದ್ದಾರೆ. ಈ ಸಭೆಯ ನೇರ ಪ್ರಸಾರವನ್ನು (Narendra Modi Live) ಇಲ್ಲಿ ವೀಕ್ಷಿಸಿ.

ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್‌ 27) ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಕುಂದಾ ನಗರಿಯಲ್ಲಿಯೇ ಐಟಿಸಿ ವೆಲ್​ಕಮ್​ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ರಾತ್ರಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಮಂದಿಗೆ ಸ್ವಾಗತ ಕೋರಲು ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರಿಗೆ ಮೋದಿ ಅವರನ್ನು ಸ್ವಾಗತಿಸಲು ಅವಕಾಶ ಮಾಡಿಕೊಡಲಾತ್ತು.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading

ಪ್ರಮುಖ ಸುದ್ದಿ

Car Accident : ಯಮವೇಗದಲ್ಲಿ ಬಂದ ಇನೋವಾ ಕಾರು ಪಲ್ಟಿ, ಯುವತಿ ಸಾವು

Car Accident: ಕಾರು ಹುಣ್ಸೆಮಕ್ಕಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಳಿಕ ರಸ್ತೆ ಬದಿಯ ಮರಕ್ಕೂ ಢಿಕ್ಕಿ ಹೊಡೆದು ಇನ್ನೋವಾ ಮಾತು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ತೀವ್ರತೆಗೆ ಕಾರಿನಲ್ಲಿದ್ದ 5 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

VISTARANEWS.COM


on

Car Accident
Koo

ಉಡುಪಿ: ಅತಿ ವೇಗದಲ್ಲಿ ಸಾಗುತ್ತಿದ್ದ ಇನೋವಾ ಕಾರು ಪಲ್ಟಿಯಾಗಿ ಯುವತಿಯೊಬ್ಬಳು ಮೃತಪಟ್ಟ (Car Accident) ಘಟನೆ ನಡೆದಿದೆ. ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚೆನ್ನಪಟ್ಟಣ ಮೂಲದ ಯುವತಿ ಕೀರ್ತಿ ಎಂಬುವರು ಅಪಘಾತದಲ್ಲಿ ಮೃತಪಟ್ಟವರು.

ಚೆನ್ನಪಟ್ಟಣ ಮೂಲದ ಅವರು ಧರ್ಮಸ್ಥಳಕ್ಕೆ ಬಂದಿದ್ದರು. ಅಲ್ಲಿಂದ ಅವರು ಮುರುಡೇಶ್ವರಕ್ಕೆ ಹೊರಟಿದ್ದರು. ಅತಿ ವೇಗದಲ್ಲಿ ಸಾಗುತ್ತಿದ್ದ ಕಾರು ಹುಣ್ಸೆಮಕ್ಕಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಳಿಕ ರಸ್ತೆ ಬದಿಯ ಮರಕ್ಕೂ ಢಿಕ್ಕಿ ಹೊಡೆದು ಇನ್ನೋವಾ ಮಾತು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ತೀವ್ರತೆಗೆ ಕಾರಿನಲ್ಲಿದ್ದ 5 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

ಬೆಂಗಳೂರು ನಗರ ವಲಯದಲ್ಲಿ ಅರಣ್ಯಕ್ಕೆ ಬೆಂಕಿ, ಭಾರೀ ಹಾನಿ

ಬೆಂಗಳೂರು: ಮಹಾನಗರದ ಹೊರವಲಯದ ಸುಮನ್ನಹಳ್ಳಿ ಬ್ರಿಡ್ಜ್ ಬಳಿ ಶ್ರೀಗಂಧ ಕಾವಲ್ ನಲ್ಲಿ ಬೆಂಕಿ ಅವಘಡ (Fire Accident) ಸಂಭವಿಸಿದೆ. ಮೂರು ಎಕರೆ ಅರಣ್ಯ ಪ್ರದೇಶದಲ್ಲಿ ಹೊತ್ತಿ ಮರಗಳು ಹೊತ್ತಿ ಉರಿದಿವೆ. ಒಣ ಕಸಕ್ಕೆ ಬೆಂಕಿ ಹಾಕಿರುವ ಹಿನ್ನಲೆ ಮರಗಳಿಗೆ ಬೆಂಕಿ ತಗುಲಿದೆ ಎಂದು ಶಂಕಿಸಲಾಗಿದೆ. ಬೆಂಗಳೂರು ನಗರದಲ್ಲಿ ಬೇಸಿಗೆ ಪ್ರಭಾವ ಹೆಚ್ಚಾಗಿದೆ. ಹೀಗಾಗಿ ಕಸಕ್ಕೆ ಹಾಕಿದ ಬೆಂಕಿ ಅರಣಕ್ಕೆ ತಾಗಿದೆ ಎಂದು ಮೂಲಗಳು ತಿಳಿಸಿವೆ.

ಗುರುವಾರ ರಾತ್ರಿ ವೇಳೆ ಅರಣ್ಯ ಪ್ರದೇಶಕ್ಕೆ ಬೆಂಕಿ ತಾಗಿದೆ. ಎರಡು ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದೆ. ಅರಣ್ಯವು ಬಿಬಿಎಂಪಿ ವ್ಯಾಪ್ತಿಗೆ ಸೇರಿದ್ದು, ಅದರಲ್ಲಿ 1.5 ಎಕರೆ ಜಾಗಕ್ಕೆ ಸಂಪೂರ್ಣ ಬೆಂಕಿ ಆವರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ನಗರದಲ್ಲಿ ತೆರವುಗೊಳಿಸಿದ ಮರಗಳನ್ನು ಇಲ್ಲಿ ತಂದು ಡಂಪ್ ಮಾಡಲಾಗುತ್ತಿತ್ತು. ಅದೇ ರೀತಿ ಹೊರಗಡೆ ಮಾರಟ ಮಾಡುವ ಕಟ್ಟಿಗೆಗಳನ್ನು ಇಲ್ಲಿ ತಂದು ಹಾಕಿ ಹರಾಜು ಮಾಡಲಾಗ್ತಿತ್ತು. ಹರಾಜು ಆಗದೇ ಉಳಿದಿದ್ದ ಕಟ್ಟಿಗೆಗಳೆಲ್ಲ ಅರಣ್ಯ ವ್ಯಾಪ್ತಿಯಲ್ಲಿ ರಾಶಿ ಬಿದ್ದಿದ್ದವು. ತೀವ್ರ ಬಿಸಿಲಿನ ಕಾರಣ ಸಂಪೂರ್ಣ ಒಣಗಿದ್ದ ಮರದ ತುಂಡುಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಸಾಧ್ಯತೆಯೂ ಇದೆ ಎಂಬುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.

ಕಾಮಾಕ್ಷಿಪಾಳ್ಯ ಪೊಲೀಸರು ಮತ್ತು ಬಿಬಿಎಂಪಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸತತ 9 ಗಂಟೆಗಳಿಂದ ನಿರಂತರ ಕಾರ್ಯಾಚರಣೆ ನಡೆಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Continue Reading

ಶಿವಮೊಗ್ಗ

Lok Sabha Election 2024: ಅತಿ ಹೆಚ್ಚು ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ ಗೆಲುವು: ಆರ್.ಎ. ಚಾಬುಸಾಬ್

Lok Sabha Election 2024: ಮೇ 7ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಬೆಂಬಲಿತ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಈ ಬಾರಿ ಅತಿ ಹೆಚ್ಚು ಮತಗಳ ಆಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಹೇಳಿದ್ದಾರೆ.

VISTARANEWS.COM


on

state JDS secretary R A Chabusab statement In Ripponpet
Koo

ರಿಪ್ಪನ್‌ಪೇಟೆ: ಮೇ 7ರಂದು ನಡೆಯುವ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ-ಜೆಡಿಎಸ್ ಬೆಂಬಲಿತ ಆಭ್ಯರ್ಥಿ ಬಿ.ವೈ. ರಾಘವೇಂದ್ರ, ಈ ಬಾರಿ ಅತಿ ಹೆಚ್ಚು ಮತಗಳ ಆಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ವಿಶ್ವಾಸ ವ್ಯಕ್ತಪಡಿಸಿದರು.

ರಿಪ್ಪನ್‌ಪೇಟೆಯ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಎರಡು ಪಕ್ಷದ ಮುಖಂಡರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಫರ್ಧಿಸಿದರೂ ಬಿ.ವೈ.ರಾಘವೇಂದ್ರರ ಗೆಲುವು ತಡೆಯಲು ಸಾಧ್ಯವಿಲ್ಲ ಎಂದ ಅವರು, ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ಬಹಳಷ್ಟು ಆಭಿವೃದ್ದಿ ಕಾರ್ಯಗಳನ್ನು ಬಿ.ವೈ. ರಾಘವೇಂದ್ರ ಅವರು ಕೇಂದ್ರದ ಸಚಿವರಾಗಿ ಈಡೇರಿಸುತ್ತಾರೆ.

ಇದನ್ನೂ ಓದಿ: TCS World 10K : ನಾಳೆ ಬೆಂಗಳೂರಿನಲ್ಲಿ ವಿಶ್ವ ವಿಖ್ಯಾತಿಯ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಾಥಾನ್​

ದೇಶಕ್ಕೆ ಬೆಳಕು ನೀಡುವ ಉದ್ದೇಶದಿಂದ ಮನೆ-ಮಠವನ್ನು ಕಳೆದುಕೊಂಡು ನಿರಾಶ್ರಿತರಾಗಿರುವ ಶರಾವತಿ ಸಂತ್ರಸ್ಥ ಕುಟುಂಬಕ್ಕೆ ಶಾಶ್ವತ ನೆಲೆ ಕಾಣುವಂತೆ ಮಾಡುವ ಬಗ್ಗೆ ಕೇಂದ್ರ ಸಂಪುಟ ಸಭೆಯಲ್ಲಿ ಸಾಕಷ್ಟು ಬಾರಿ ಗಮನ ಸೆಳೆದಿರುವ ಬಿ.ವೈ.ರಾಘವೇಂದ್ರ, ಈ ಬಾರಿ ಗೆದ್ದು ಆ ಜ್ವಲಂತ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುತ್ತಾರೆ ಎಂಬ ವಿಶ್ವಾಸ ನಮ್ಮದಾಗಿದೆ ಎಂದರು.

ಕಳೆದ ಹತ್ತು ವರ್ಷದ ಹಿಂದೆ ಕಾಂಗ್ರೆಸ್ ಪಕ್ಷದ ಆಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಸೋತವರು ಕ್ಷೇತ್ರದ ಕಡೇ ಮುಖ ಹಾಕಲೇ ಇಲ್ಲ ಎಂದು ಆರೋಪಿಸಿದ ಅವರು,. ಇದೀಗ ದಿಢೀರ್ ಅಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಪ್ರತ್ಯಕ್ಷರಾಗಿದ್ದಾರೆ. ಇವರಿಗೆ ಮತ ಹಾಕಿ ಗೆಲ್ಲಿಸಬೇಕೇ? ಜಿಲ್ಲೆಯ ಹತ್ತು ಹಲವು ಸಮಸ್ಯೆಗಳ ಅರಿವೇ ಇಲ್ಲದವರನ್ನು ಬೆಂಬಲಿಸಬೇಕಾ ಎಂದರು.

ಹಾಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಕೇವಲ 10 ವರ್ಷದಲ್ಲಿ ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಟೊಂಕ ಕಟ್ಟಿ ನಿಂತಿದ್ದಾರೆ ಎಂಬುದಕ್ಕೆ ಮೈಸೂರು-ಬೆಂಗಳೂರು, ಶಿವಮೊಗ್ಗ-ಸಾಗರ-ತಾಳಗುಪ್ಪ ಇಂಟರ್ ಸಿಟಿ ರೈಲು ಸೇರಿದಂತೆ ವಿಮಾನ ನಿಲ್ದಾಣ, ಮೇಗರವಳ್ಳಿಯಿಂದ ಆಗುಂಬೆ ಮಾರ್ಗದ ಸೋಮೇಶ್ವರದವರೆಗೆ ಸುರಂಗ ಮಾರ್ಗದ ಸಂಪರ್ಕದ ರಸ್ತೆ ಅಭಿವೃದ್ಧಿ ಹಾಗೂ ರಾಣೆಬೆನ್ನೂರು-ಬೈಂದೂರುವರೆಗೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಕೋಟ್ಯಾಂತರ ರೂ. ಅನುದಾನ ತರಲಾಗಿದ್ದರೂ ಕಾಂಗ್ರೆಸ್ ಪಕ್ಷದವರು ಏನು ಮಾಡಿಲ್ಲ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆಲ್ಲ ಮತದಾರರು ಕಿವಿಗೊಡಬೇಡಿ ಎಂದ ಅವರು, ನಮ್ಮ ಎರಡು ಪಕ್ಷದವರು ಮತದಾರರಿಗೆ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಸಾಧನೆಗಳನ್ನು ಮನವರಿಕೆ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.

ಇದನ್ನೂ ಓದಿ: MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

ಈ ವೇಳೆ ಹೊಸನಗರ ತಾಲೂಕು ಜೆಡಿಎಸ್ ಆಧ್ಯಕ್ಷ ಎನ್.ವರ್ತೇಶ್, ಬಿಜೆಪಿ ಜಿಲ್ಲಾ ಮುಖಂಡ ಆರ್.ಟಿ.ಗೋಪಾಲ, ಎಂ.ಬಿ.ಮಂಜುನಾಥ, ನಾಗಾರ್ಜುನಸ್ವಾಮಿ, ಕೃಷ್ಣೋಜಿರಾವ್, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಜಿ.ಎಸ್.ವರದರಾಜ್, ಬಿಜೆಪಿ ಮುಖಂಡರಾದ ಸುಂದರೇಶ್, ಸುಧೀಂದ್ರ ಪೂಜಾರಿ, ಪಿ.ರಮೇಶ್, ಮಹೇಶ ಮಾಣಿಕೆರೆ, ಮಂಜುನಾಥ ಗವಟೂರು, ರಾಮು ಬಳೆಗಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

Narendra Modi: ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ಬದಲಿಗೆ ಪಕ್ಕದ ಕೊಲ್ಲಾಪುರ ವಿಮಾನ ನಿಲ್ದಾಣದಲ್ಲಿ ಸಿಎಂ ವಿಮಾನ ಲ್ಯಾಂಡ್ ಆಗಲಿದೆ. ಮಧ್ಯಾಹ್ನ 12 ಗಂಟೆಗೆ ಕೊಲ್ಲಾಪುರದ ಛತ್ರಪತಿ ರಾಜಾರಾಮ್ ಮಹಾರಾಜ್ ವಿಮಾನ ನಿಲ್ದಾಣದಲ್ಲಿ ಅವರ ವಿಮಾನ ಇಳಿಯಲಿದೆ. ಬಳಿಕ ಹೆಲಿಕಾಪ್ಟರ್ ಮೂಲಕ ಕಾಗವಾಡ ತಾಲೂಕಿನ ಉಗಾರ್ ಖುರ್ದ ಗೆ ಅವರು ಹೋಗಲಿದ್ದಾರೆ.

VISTARANEWS.COM


on

Narendra Modi
Koo

ಬೆಳಗಾವಿ: ಸಿಎಂ ಸಿದ್ದರಾಮಯ್ಯ ವಿಶೇಷ ವಿಮಾನಕ್ಕೆ ಬೆಳಗಾವಿ ವಿಮಾನ ನಿಲ್ದಾಣ ಎಂಟ್ರಿಗೆ ನಿರಾಕರಣೆ ಮಾಡಲಾಗಿದೆ.ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ವಿಮಾನ ಇದೇ ಏರ್​ಪೋರ್ಟ್​​ನಲ್ಲಿರುವ ಕಾರಣ ಸಿಎಂ ವಿಮಾನಕ್ಕೆ ಅನುಮತಿ ದೊರಕಿಲ್ಲ.

ಸಿಎಂ ಸಿದ್ದರಾಮಯ್ಯ ಅವರು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಹೊರಟಿದ್ದರು. ಆದರೆ, ಅಲ್ಲಿ ಲ್ಯಾಂಡಿಂಗ್ ಗೆ ಅನುಮತಿ ಸಿಕ್ಕಿಲ್ಲ. ಬೆಳಗ್ಗೆ 11.05ಕ್ಕೆ ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಿಎಂ ವಿಮಾನ ಬರಬೇಕಿತ್ತು. ಅಲ್ಲಿಂದ ಅವರು ಶಿರಸಿಗೆ ತೆರಳಲು ಯೋಜನೆ ಹಾಕಲಾಗಿತ್ತು. ಆದರೆ ಪಿಎಂ ವಿಮಾನ ಇರುವ ಕಾರಣ ಅಲ್ಲಿ ಅವಕಾಶ ಸಿಕ್ಕಿಲ್ಲ.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ಬದಲಿಗೆ ಪಕ್ಕದ ಕೊಲ್ಲಾಪುರ ವಿಮಾನ ನಿಲ್ದಾಣದಲ್ಲಿ ಸಿಎಂ ವಿಮಾನ ಲ್ಯಾಂಡ್ ಆಗಲಿದೆ. ಮಧ್ಯಾಹ್ನ 12 ಗಂಟೆಗೆ ಕೊಲ್ಲಾಪುರದ ಛತ್ರಪತಿ ರಾಜಾರಾಮ್ ಮಹಾರಾಜ್ ವಿಮಾನ ನಿಲ್ದಾಣದಲ್ಲಿ ಅವರ ವಿಮಾನ ಇಳಿಯಲಿದೆ. ಬಳಿಕ ಹೆಲಿಕಾಪ್ಟರ್ ಮೂಲಕ ಕಾಗವಾಡ ತಾಲೂಕಿನ ಉಗಾರ್ ಖುರ್ದ ಗೆ ಅವರು ಹೋಗಲಿದ್ದಾರೆ.

ಇಂದು ಮೋದಿಯಿಂದ ಬಹಿರಂಗ ಪ್ರಚಾರ

ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್‌ 27) ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸಿದ್ದಾರೆ. ಕುಂದಾ ನಗರಿಯಲ್ಲಿಯೇ ಐಟಿಸಿ ವೆಲ್​ಕಮ್​ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶನಿವಾರ ರಾತ್ರಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಮಂದಿಗೆ ಸ್ವಾಗತ ಕೋರಲು ಅವಕಾಶ ನೀಡಲಾಗಿತ್ತು. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರಿಗೆ ಮೋದಿ ಅವರನ್ನು ಸ್ವಾಗತಿಸಲು ಅವಕಾಶ ಮಾಡಿಕೊಡಲಾತ್ತು.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading
Advertisement
Manjummel Boys
ಮಾಲಿವುಡ್28 mins ago

Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

girl Saved Mother
ಪ್ರಮುಖ ಸುದ್ದಿ35 mins ago

Girl Saved Mother : ಬುದ್ಧಿವಂತ ಬಾಲಕಿ; ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯನ್ನು ಕಾಪಾಡಿದ 7 ವರ್ಷದ ಪುತ್ರಿ

ವಿದೇಶ47 mins ago

TikTok star: ಇರಾಕ್‌ನಲ್ಲಿ ಗುಂಡಿಕ್ಕಿ ಟಿಕ್‌ಟಾಕ್‌ ಸ್ಟಾರ್‌ನ ಭೀಕರ ಹತ್ಯೆ

Sahil Khan Arrested in Mahadev Betting App Case
ಬಾಲಿವುಡ್1 hour ago

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 hour ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ದೇಶ2 hours ago

Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಚಾಟಿತ ನಾಯಕ ಅರೆಸ್ಟ್‌

Car Accident
ಪ್ರಮುಖ ಸುದ್ದಿ2 hours ago

Car Accident : ಯಮವೇಗದಲ್ಲಿ ಬಂದ ಇನೋವಾ ಕಾರು ಪಲ್ಟಿ, ಯುವತಿ ಸಾವು

Manvita Kamath Marriage Details Future Husband Arun
ಸ್ಯಾಂಡಲ್ ವುಡ್2 hours ago

Manvita Kamath: ‘ಟಗರು ಪುಟ್ಟಿʼ ಮಾನ್ವಿತಾದ್ದು ಲವ್ ಮ್ಯಾರೇಜ್? ಕೊನೆಗೂ ಸ್ಪಷ್ಟನೆ ಕೊಟ್ಟ ನಟಿ!

state JDS secretary R A Chabusab statement In Ripponpet
ಶಿವಮೊಗ್ಗ2 hours ago

Lok Sabha Election 2024: ಅತಿ ಹೆಚ್ಚು ಮತಗಳ ಅಂತರದಿಂದ ಬಿ.ವೈ.ರಾಘವೇಂದ್ರ ಗೆಲುವು: ಆರ್.ಎ. ಚಾಬುಸಾಬ್

Narendra Modi
ಪ್ರಮುಖ ಸುದ್ದಿ2 hours ago

Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 hour ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202418 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ23 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

ಟ್ರೆಂಡಿಂಗ್‌