ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಹಾಗೂ ತುಂತುರು ಮಳೆ ಕಂಡುಬಂದಿದೆ.
ನಿನ್ನೆ ಸಂಜೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯ ಜೊತೆಗೆ ಚಳಿಯೂ ಹೆಚ್ಚಾಗಿದೆ. ವಾತಾವರಣದಲ್ಲಿ ಚಳಿ-ಮಳೆ-ಬಿಸಿಲಿನ ಏರಿಳಿತ ಮುಂದುವರಿದಿದ್ದು, ನಾಳೆಯವರೆಗೆ ನಗರದಲ್ಲಿ ಮಳೆ ಮುಂದುವರಿಯಲಿದೆ. ಸಂಜೆ ನಂತರ ಒಂದೆರಡು ಕಡೆಗಳಲ್ಲಿ ಜಿಟಿಜಿಟಿ ಇಲ್ಲವೇ ಹಗುರದಿಂದ ಸಾಧಾರಣವಾಗಿ ಮಳೆ ಸಾಧ್ಯತೆ ಇದೆ.
ಬೆಂಗಳೂರು ಅಷ್ಟೇ ಅಲ್ಲ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲೂ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂ.ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಕೂಡ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ | Rain news | ಬೆಂಗಳೂರಿನಲ್ಲಿ ತುಂತುರು ಮಳೆ, ಇನ್ನೆರಡು ದಿನ ಚಳಿ ಹೆಚ್ಚಳ ಸಾಧ್ಯತೆ