Rain in Bangalore | ರಾಜಧಾನಿಯಲ್ಲಿ ಮಳೆ ಆರ್ಭಟ, ರಸ್ತೆಯಲ್ಲಿ ಜನ ಪರದಾಟ Vistara News
Connect with us

ಕರ್ನಾಟಕ

Rain in Bangalore | ರಾಜಧಾನಿಯಲ್ಲಿ ಮಳೆ ಆರ್ಭಟ, ರಸ್ತೆಯಲ್ಲಿ ಜನ ಪರದಾಟ

ಶನಿವಾರ ರಾತ್ರಿ ಭಾರಿ ಮಳೆ ಸುರಿದು ರಾಜಧಾನಿಯ ಸಂಚಾರವನ್ನು ಅಸ್ತವ್ಯವಸ್ತಗೊಳಿಸಿತು. ರಸ್ತೆಗಳಲ್ಲಿ ನೀರು ನಿಂತು, ಮನೆಗಳಿಗೆ ನೀರು ನುಗ್ಗಿದ ವರ್ತಮಾನ ಕೂಡ ಹಲವೆಡೆಯಿಂದ ಬಂದಿದೆ.

VISTARANEWS.COM


on

rain
Koo

ಬೆಂಗಳೂರು: ಹಲವು ದಿನಗಳಿಂದ ಬಿಸಿಲು ಕಂಡಿದ್ದ ರಾಜಧಾನಿಯಲ್ಲಿ ಶನಿವಾರ ರಾತ್ರಿ ಇದ್ದಕ್ಕಿದ್ದಂತೆ ಭಾರಿ ಮಳೆ ಸುರಿಯಿತು. ರಾತ್ರಿ 9 ಗಂಟೆಗೆ ಆರಂಭವಾದ ಮಳೆ ಸುಮಾರು ಒಂದು ಗಂಟೆ ಬಿಡದೆ ಸುರಿದು ರಸ್ತೆ ಸಂಚಾರವನ್ನು ಅಸ್ತವ್ಯಸ್ತಗೊಳಿಸಿತು.

ಕಾರ್ಪೋರೇಷನ್, ಮೆಜೆಸ್ಟಿಕ್, ಮಲ್ಲೇಶ್ವರಂ ಸೇರಿದಂತೆ‌ ಹಲವು ಪ್ರಮುಖ ಭಾಗಗಳಲ್ಲಿ ಮಳೆಯಾಯಿತು. ಕಚೇರಿಯಿಂದ ಮನೆ ಕಡೆಗೆ ಹೊರಟಿದ್ದ ವಾಹನ ಸವಾರರು ರಸ್ತೆಯಲ್ಲಿ ನೀರು ತುಂಬಿ ಫಜೀತಿ ಅನುಭವಿಸಿದರು. ಪಾದಚಾರಿ ಮಾರ್ಗಗಳು ಕೂಡ ಜಲಾವೃತವಾದುದರಿಂದ ಪಾದಚಾರಿಗಳು ನಡೆಯಲು ಎಡೆಯಿಲ್ಲದೆ ಸಿಲುಕಿಕೊಂಡರು. ಬಸ್‌ ನಿಲ್ದಾಣಗಳಲ್ಲಿ, ಅಂಗಡಿಗಳ ಮುಂದೆ ಆಶ್ರಯ ಪಡೆದರು. ವಾರಾಂತ್ಯದಲ್ಲಿ ಊರಿನ ಕಡೆಗೆ ಹೊರಟಿದ್ದ ಹೊರ ಊರಿನ ಜನತೆ, ಮೆಜೆಸ್ಟಿಕ್‌ ಆಸುಪಾಸು ಸಂಚಾರ ದಟ್ಟಣೆಯಿಂದ ಆತಂಕ ಅನುಭವಿಸಿದರು.

ಒಂದು ಗಂಟೆಯಿಂದ ಸುರಿದ ಧಾರಾಕಾರ ಮಳೆಯಿಂದಾಗಿ ವಿಜಯನಗರದಲ್ಲಿ‌ ಹಲವು ಮನೆಗಳಿಗೆ‌ ಮಳೆ ನೀರು ನುಗ್ಗಿತು. ಹೊಸದಾಗಿ ನಿರ್ಮಾಣವಾದ ರಸ್ತೆಯಲ್ಲಿ 2 ಅಡಿಗೂ ಹೆಚ್ಚು ನೀರು ನಿಂತಿತು. ನವೀಕರಣಗೊಂಡ ರಾಜಕಾಲುವೆಯಿಂದಲೂ ನೀರು ಉಕ್ಕಿ ಹರಿಯಿತು.

ರಾಜ್ಯದ ಹಲವೆಡೆ ಕೂಡ ಇದೇ ಸಂದರ್ಭದಲ್ಲಿ ಭಾರೀ ಮಳೆಯಾಗಿದೆ. ಇನ್ನೆರಡು ದಿನ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಬೀದರ್, ಕಲ್ಬುರ್ಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ ಹಾಗು ನಗರ ಸೇರಿದಂತೆ ಹಲವೆಡೆ ಮಳೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಚಿಕ್ಕೋಡಿ: ಕಳೆದ ಒಂದು ವಾರದಿಂದ ಶಾಂತವಾಗಿದ್ದ ಮಳೆರಾಯ ಮತ್ತೆ ಇಂದಿನಿಂದ ತನ್ನ ಆರ್ಭಟ ಆರಂಭಿಸಿದ್ದಾನೆ. ಚಿಕ್ಕೋಡಿ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನದಿಂದ ಧಾರಾಕಾರ ಮಳೆ ಆರಂಭವಾಗಿದೆ. ಬೆಳಗಾವಿಯ ಹುಕ್ಕೇರಿ ತಾಲೂಕಿನ‌ ವಿವಿಧೆಡೆ ಭಾರಿ ಮಳೆಯಾದ ಕಾರಣ ಮನೆಗಳಿಗೆ ಮಳೆ ನೀರು ನುಗ್ಗಿದೆ‌. ಹುಕ್ಕೇರಿ ತಾಲೂಕಿನ ಹುಲ್ಲೋಳಿ ಹಟ್ಟಿ ಗ್ರಾಮದ ರಾಜೇಸಾಬ್ ಮುಲ್ತಾನಿ ಹಾಗೂ ಲಕ್ಷವ್ವ ಕುಗಟೋಳಿ ಎಂಬುವರ ಮನೆಗಳಿಗೆ ನೀರು ನುಗ್ಗಿದೆ.

ಆನೇಕಲ್: ಬೆಂಗಳೂರು ಗ್ರಾಮಾಂತರ ಪ್ರದೇಶವಾದ ಆನೇಕಲ್‌ನಲ್ಲಿ ಭಾರಿ ಮಳೆಗೆ ಜನರು ತತ್ತರಗೊಂಡರು. ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿತು. ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಗಳೆಲ್ಲ ಸಂಪೂರ್ಣ ಜಲಾವೃತಗೊಂಡು, ಮನೆಗಳಿಗೆ ನೀರು ನುಗ್ಗಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Cabinet: 34 ಸಚಿವರ ಪೈಕಿ 16 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್, ನಂ.1 ಸ್ಥಾನದಲ್ಲಿ ಯಾರಿದ್ದಾರೆ?

Karnataka Cabinet: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟವು ಶನಿವಾರ ಅಸ್ತಿತ್ವಕ್ಕೆ ಬಂದಿದೆ. 34 ಸಚಿವರ ಪೈಕಿ 16 ಸಚಿವರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.

VISTARANEWS.COM


on

Edited by

CM Siddaramaiah and B Nagendra and DK Shivakumar
Koo

ಬೆಂಗಳೂರು, ಕರ್ನಾಟಕ: ಸಿದ್ದರಾಮಯ್ಯ (CM Siddaramaiah) ನೇತೃತ್ವದ ಸರ್ಕಾರದಲ್ಲಿ ಎಲ್ಲ ಮಂತ್ರಿ ಸ್ಥಾನಗಳ್ನು (Karnataka Cabinet) ಭರ್ತಿ ಮಾಡಲಾಗಿದೆ. ಕಳೆದ ವಾರ 8 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರೆ, ನಿನ್ನೆ ಮತ್ತೆ 24 ಶಾಸಕರು ಸಚಿವರಾಗಿದ್ದಾರೆ. ಈ ಮೂಲಕ ಪೂರ್ಣ ಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಂತಾಗಿದೆ. ಈ ಮಧ್ಯೆ, ಸಿದ್ದರಾಮಯ್ಯ ಸಂಪುಟದಲ್ಲಿರುವ ಸಚಿವರ ಪೈಕಿ ಅಂದರೆ, 34 ಸಚಿವರ ಪೈಕಿ 16 ಜನರು ಕ್ರಿಮಿನಲ್ ಪ್ರಕರಣಗಳನ್ನು (Criminal Cases) ಎದುರಿಸುತ್ತಿದ್ದಾರೆ. ಎಡಿಆರ್ (ADR) ಈ ಮಾಹಿತಿಯನ್ನು ಹೊರ ಹಾಕಿದೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿರುವ ಸಚಿವ ಬಿ ನಾಗೇಂದ್ರ ಅವರ 42 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಮತ್ತು ಈ ಪಟ್ಟಿಯಲ್ಲಿ ಅವರೇ ಅಗ್ರಸ್ಥಾನಿಯಾಗಿದ್ದಾರೆ. ನಾಗೇಂದ್ರ ನಂತರದ ಸ್ಥಾನದಲ್ಲಿ ಉಪ ಮುಖ್ಯಂತ್ರಿಯಾಗಿರುವ ಡಿ ಕೆ ಶಿವಕುಮಾರ್ ಅವರಿದ್ದು, 19 ಕ್ರಿಮಿನಲ್ ಪ್ರಕ್ರಣಗಳ ವಿಚಾರಣೆ ನಡೆಯುತ್ತಿದೆ. ನಾಗೇಂದ್ರ ಅವರ ವಿರುದ್ಧ ಪ್ರಕರಣಗಳಲ್ಲಿ 21 ಪ್ರಕರಣಗಳು ಲೋಕಾಯುಕ್ತ ಮುಂದಿವೆ. ಉಳಿದ ಪ್ರಕರಣಗಳು ಸಿಬಿಐ, ಸಿಐಡಿಗಳ ಮುಂದಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೂಡ 13 ಪ್ರಕರಣಗಳಿವೆ. ಕಾನೂನು ಬಾಹಿರ ಸಭೆ, ಚುನಾವಣೆ ಮೇಲೆ ಪ್ರಭಾವ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳಿವೆ. ಜಮೀರ್ ಖಾನ್ ಅವರು ವಿರುದ್ಧ 6 ಗಂಭೀರ ಪ್ರಕರಣಗಳಿವೆ. ಇನ್ನುಳಿದಂತೆ ಪ್ರಿಯಾಂಕ್ ಖರ್ಗೆ(9), ಈಶ್ವರ್ ಖಂಡ್ರೆ(7), ಎಂ ಬಿ ಪಾಟೀಲ್(5), ರಾಮಲಿಂಗಾ ರೆಡ್ಡಿ(4), ಡಾ. ಜಿ ಪರಮೇಶ್ವರ್(3), ಎಚ್ ಕೆ ಪಾಟೀಲ್ (2), ಡಿ ಸುಧಾಕರ್ (2), ಸತೀಶ್ ಜಾರಕಿಹೊಳಿ (2), ಕೃಷ್ಣ ಭೈರೇಗೌಡ (1), ಎನ್ ಚಲುವರಾಯಸ್ವಾಮಿ (1), ಕೆ ಎಚ್ ಮುನಿಯಪ್ಪ (1) ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ.

ಇದನ್ನೂ ಓದಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ: ಲಕ್ಷ್ಮೀ ಹೆಬ್ಬಾಳ್ಕರ್‌ ಸೇರಿ 24 ಶಾಸಕರಿಗೆ ಸಚಿವ ಸ್ಥಾನ, ಮತ್ತೆ ಸಿದ್ದು ಮೇಲುಗೈ

ಅಸೋಶಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(Association for Demorcatic Reforms- ADR) ಈ ಮಾಹಿತಿಯನ್ನು ಹೊರ ಹಾಕಿದೆ. ಚುನಾವಣಾ ವೇಳೆ ಆಯೋಗಕ್ಕೆ ಸಲ್ಲಿಸಲಾದ ಅಫಿಡವಿಟ್‌ಗಳ ಮೂಲಕ ಈ ಪಟ್ಟಿಯನ್ನು ರಚಿಸಲಾಗಿದೆ.

ಕರ್ನಾಟಕ ರಾಜಕೀಯದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ಉಡುಪಿ

Weather Report: ಭಾನುವಾರ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ; ಗಾಳಿ ವೇಗವೂ ಹೆಚ್ಚಲಿದೆ ಎಂದ ಹವಾಮಾನ ಇಲಾಖೆ

Weather report: ಉತ್ತರ ಒಳನಾಡಿನಲ್ಲಿ ಬ್ರೇಕ್‌ ನೀಡಿರುವ ಮಳೆರಾಯ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ (Rain News) ಅಬ್ಬರಿಸಲಿದ್ದಾನೆ. ಭಾನುವಾರ (ಮೇ 28) ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ (Bangalore Rain) ಸಾಧ್ಯತೆ ಇದೆ.

VISTARANEWS.COM


on

Edited by

Rain alert
ಸಂಗ್ರಹ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಏರಿಕೆಯ ನಡುವೆಯು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ (Weather Report) ಸಾಧ್ಯತೆ ಇದೆ. ಚಾಮರಾಜನಗರ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Update) ಮುನ್ಸೂಚನೆಯನ್ನು ನೀಡಿದೆ.

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಸೇರಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವೂ ಗಂಟೆಗೆ 30-40 ಕಿ.ಮೀ ವ್ಯಾಪಿಸಲಿದೆ.

ಪ್ರಮುಖ ನಗರಗಳಲ್ಲಿನ ಪ್ರಸ್ತುತ ಹವಾಮಾನ ಹೀಗಿದೆ

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 40 ಡಿ.ಸೆ – 26 ಡಿ.ಸೆ
ಗದಗ: 38 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 21 ಡಿ.ಸೆ
ಕಾರವಾರ: 36 ಡಿ.ಸೆ – 27 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಹೊನ್ನಾವರ: 34 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 22 ಡಿ.ಸೆ

Continue Reading

ಕರ್ನಾಟಕ

ದಾವಣಗೆರೆಯಲ್ಲಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟ ಆರ್​ಟಿಐ ಕಾರ್ಯಕರ್ತ

ಹರೀಶ್ ಹಳ್ಳಿ ಆರ್​ಟಿಐ ಕಾರ್ಯಕರ್ತನಾಗಿದ್ದು, ಒಟ್ಟು 2 ಕೋಟಿ ರೂ.ಬೆಲೆಯ ಮೂರು ನಿವೇಶನಗಳನ್ನು ಅಕ್ರಮವಾಗಿ ನೋಂದಣಿ ಮಾಡಿಸಿಕೊಂಡ ಆರೋಪ ಎದುರಿಸುತ್ತಿದ್ದ.

VISTARANEWS.COM


on

Edited by

RTI Activist Harish Halli Died
Koo

ದಾವಣಗೆರೆ: ಕೋಟ್ಯಂತರ ರೂಪಾಯಿ ಭೂ ಅಕ್ರಮದ ಆರೋಪಿಯಾಗಿದ್ದ ಹರೀಶ್​ ಹಳ್ಳಿ (Harish Halli) ಎಂಬಾತ ಪೊಲೀಸ್ ಕಾರಿ (Police Vehicle)ನಿಂದ ಜಿಗಿದು ಮೃತಪಟ್ಟಿದ್ದಾನೆ. ತನ್ನ ಪತಿಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ ಎಂದು ಆತನ ಪತ್ನಿ ಆರೋಪಿಸಿದ್ದಾರೆ. ಈ ಘಟನೆ ನಡೆದಿದ್ದು ದಾವಣಗೆರೆಯಲ್ಲಿ (Davanagere News).

ಈ ಹರೀಶ್ ಹಳ್ಳಿ ಆರ್​ಟಿಐ ಕಾರ್ಯಕರ್ತನಾಗಿದ್ದು, ಒಟ್ಟು 2 ಕೋಟಿ ರೂ.ಬೆಲೆಯ ಮೂರು ನಿವೇಶನಗಳನ್ನು ಅಕ್ರಮವಾಗಿ ನೋಂದಣಿ ಮಾಡಿಸಿಕೊಂಡ ಆರೋಪ ಎದುರಿಸುತ್ತಿದ್ದ. ಈ ಭೂ ಅಕ್ರಮ ಕೇಸ್​​ನಡಿ ಹರೀಶ್ ಹಳ್ಳಿ, ಸಬ್​ ರಿಜಿಸ್ಟ್ರಾರ್ ಆರ್.ಎಲ್.ವೀಣಾ ಸೇರಿ ಒಟ್ಟು ಐವರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಈತ ಸೈಟ್​ನ್ನು ತನ್ನದಾಗಿಸಿಕೊಳ್ಳಲು ನಕಲಿ ಮಾಲೀಕರನ್ನೇ ಸೃಷ್ಟಿಸಿದ್ದ. ನಕಲಿ ಆಧಾರ್​ ಕಾರ್ಡ್​ ಮಾಡಿಸಿಕೊಂಡಿದ್ದ ಎಂದೂ ಪೊಲೀಸರು ಹೇಳಿದ್ದಾರೆ.

ಭೂ ಅಕ್ರಮದ ಕೇಸ್​​ನಲ್ಲಿ ಎ 1 ಆರೋಪಿಯಾದ ಹರೀಶ್​ನನ್ನು ಮೇ 27ರ ಮಧ್ಯರಾತ್ರಿ 12 ಗಂಟೆ ಹೊತ್ತಿಗೆ ಪೊಲೀಸರು ಬಂಧಿಸಿ, ವಿಚಾರಣೆಗೆಂದು ಕರೆದುಕೊಂಡು ಬರುವಾಗ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಫ್ಲೈಓವರ್​ ಮೇಲೆ ಪೋಲೀಸ್ ವಾಹನ ಹೋಗುತ್ತಿದ್ದಾಗ ಈತ ಜಿಗಿದಿದ್ದಾನೆ. ತೀವ್ರವಾಗಿ ಪೆಟ್ಟು ಬಿದ್ದು ಗಾಯಗೊಂಡಿದ್ದ ಅವನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಆದರೆ ಆತನ ಪತ್ನಿ ಕಿಡಿಕಾರಿದ್ದಾರೆ. ನನ್ನ ಪತಿಯನ್ನು ಪೊಲೀಸರು ಮಧ್ಯರಾತ್ರಿ ಕರೆದುಕೊಂಡು ಹೋಗಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಹರಿಶ್​ ಹಳ್ಳಿಯನ್ನು ಕರೆದುಕೊಂಡು ಹೋದ ಗಾಂಧಿನಗರ ಪೊಲೀಸ್​ ಠಾಣೆ ಪಿಎಸ್​ಐ ಮತ್ತು ಚಾಲಕನ ವಿರುದ್ಧ ದೂರು ನೀಡಿದ್ದಾರೆ.

ಅಪ್ಪ ಹೇಳೋದೇನು?
ಪೊಲೀಸರೇ ನನ್ನ ಮಗನನ್ನು ಕೊಲೆ ಮಾಡಿದ್ದಾರೆ. ಮುಂಜಾನೆ ನಮಗೆ ಫೋನ್​ ಮಾಡಿ ವಿಷಯ ತಿಳಿಸಿದ್ದಾರೆ. ಪೊಲೀಸರೇ ಕೊಲೆ ಮಾಡಿ ಆಸ್ಪತ್ರೆಗೆ ತಂದು ಹಾಕಿದ್ದಾರೆ. ಈಗ ಜಂಪ್​ ಮಾಡಿದ, ಅದೂ ಇದು ಎಂದು ಕಥೆ ಕಟ್ಟುತ್ತಿದ್ದಾರೆ ಎಂದು ಮೃತ ಹರೀಶ್ ಹಳ್ಳಿ ತಂದೆ ಆರೋಪಿಸಿದ್ದಾರೆ. ವಾಹನದಲ್ಲಿ ಅವನ ಅಕ್ಕ-ಪಕ್ಕ ಪೊಲೀಸರೇ ಕುಳಿತಿದ್ದರು. ಅಂದಮೇಲೆ ಅವನು ಹೇಗೆ ಕಾರಿನಿಂದ ಜಂಪ್​ ಮಾಡಿದ ಎಂದೂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:Illegal Mining | ಕೊಪ್ಪಳದಲ್ಲಿ ನೀರಾವರಿ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ, ಸಚಿವರಿಂದ ಕ್ರಮ ಕೈಗೊಳ್ಳುವ ಭರವಸೆ

Continue Reading

ಕರ್ನಾಟಕ

ಒಂಟಿಯಾಗಿದ್ದ ವೃದ್ಧೆಯ ಭೀಕರ ಹತ್ಯೆ; ಗಂಡ ಕಟ್ಟಿದ ಮನೆಯೆಂದು ಮಗನ ಜತೆಗೂ ಹೋಗಿರಲಿಲ್ಲ

ಈ ವೃದ್ಧೆಯ ಹೆಸರು ಕಮಲಮ್ಮ ಎಂದಾಗಿದ್ದು, ಮನೆ ಇರುವುದು ಪೊಲೀಸ್​ ಠಾಣೆಗೆ ಕೂಗಳತೆ ದೂರದಲ್ಲಿ. ರಾತ್ರಿ ಮನೆಗೆ ನುಗ್ಗಿದವರು ವೃದ್ಧೆಯ ಕೈಯಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್​ ಹಾಕಿ ಉಸಿರುಗಟ್ಟಿ ಕೊಂದಿದ್ದಾರೆ.

VISTARANEWS.COM


on

Edited by

80 years Old woman Murdered In Bengaluru
Koo

ಬೆಂಗಳೂರಿನ ಉತ್ತರ ವಿಭಾಗದಲ್ಲಿ ಕಳೆದ ಒಂದು ವಾರದಿಂದಲೂ ಕೊಲೆ, ಕೊಲೆಯತ್ನ, ರಾಬರಿ ಪ್ರಕರಣಗಳು ನಡೆಯುತ್ತಲೇ ಇವರ. ಈಗ ಮೇ 27ರಂದು ರಾತ್ರಿ ಹಂತಕರು ಮಹಾಲಕ್ಷ್ಮೀ ಲೇಔಟ್​​​ನಲ್ಲಿ ಮನೆಯೊಂದರಲ್ಲಿ ಒಂಟಿಯಾಗಿ ಇದ್ದ 80ವರ್ಷದ ವೃದ್ಧೆಯನ್ನು (Old Lady Murder) ಭಯಾನಕವಾಗಿ ಹತ್ಯೆಗೈದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಪೊಲೀಸರು ಸಿಸಿಟಿವಿ ಫೂಟೇಜ್​ಗಳನ್ನೆಲ್ಲ ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ವೃದ್ಧೆಯ ಹೆಸರು ಕಮಲಮ್ಮ ಎಂದಾಗಿದ್ದು, ಮನೆ ಇರುವುದು ಪೊಲೀಸ್​ ಠಾಣೆಗೆ ಕೂಗಳತೆ ದೂರದಲ್ಲಿ. ರಾತ್ರಿ ಮನೆಗೆ ನುಗ್ಗಿದವರು ವೃದ್ಧೆಯ ಕೈಯಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್​ ಹಾಕಿ ಉಸಿರುಗಟ್ಟಿ ಕೊಂದಿದ್ದಾರೆ. ವೃದ್ಧೆಗೆ ಮೂರು ಮಕ್ಕಳಿದ್ದು ಮಗ ವೈಟ್​ಫೀಲ್ಡ್​ನಲ್ಲಿ ಮತ್ತು ಹೆಣ್ಣುಮಕ್ಕಳಿಬ್ಬರು ಜೆಪಿ ನಗರದಲ್ಲಿ ಇದ್ದಾರೆ. ಮಗ ಅದೆಷ್ಟೋ ಬಾರಿ ಇವರನ್ನು ತನ್ನ ಜತೆಗೆ ಬಂದಿರು ಎಂದು ಕರೆದರೂ ವೃದ್ಧೆ ಹೋಗಿರಲಿಲ್ಲ. ನನ್ನ ಗಂಡ ಕಟ್ಟಿಸಿದ ಮನೆ ಇದು, ಇಲ್ಲಿಯೇ ಇರುತ್ತೇನೆ ಎಂದು ಹೇಳಿ ಈ ಮನೆಯಲ್ಲೇ ಒಬ್ಬರೇ ಇದ್ದರಂತೆ.

ಹಂತಕರು ಸಂಜೆ ವೇಳೆ ಮನೆಗೆ ನುಗ್ಗಿದಾಗ ಕಮಲಮ್ಮ ತಮ್ಮ ಮಲಗುವ ಕೋಣೆಯಲ್ಲಿ ಇದ್ದರು. ಅಲ್ಲಿಗೇ ಹೋಗಿ ಅವರ ಕೈಕಾಲು ಕಟ್ಟಿದ್ದಾರೆ. ಬಳಿಕ ಉಸಿರುಗಟ್ಟಿಸಿದ್ದಾರೆ. ಬಳಿಕ ಮನೆಯಲ್ಲಿದ್ದ ಎಲ್ಲ ಚಿನ್ನಾಭರಣಗಳು, ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಇನ್ನು ಏಳುಗಂಟೆ ಹೊತ್ತಿಗೆ ಪಕ್ಕದ ಮನೆ ಮಕ್ಕಳು ಅಜ್ಜಿಯನ್ನು ಹುಡುಕಿ ಬಂದಾಗ, ಬಾಗಿಲು ತೆರೆದೇ ಇತ್ತು. ಒಳಗೆ ಹೋದರೆ ಅಜ್ಜಿ ಬಿದ್ದಿದ್ದರು. ಅದನ್ನು ನೋಡಿ ತಮ್ಮ ಮನೆಯವರಿಗೆ ತಿಳಿಸಿದ್ದಾರೆ. ಅಕ್ಕಪಕ್ಕದ ಮನೆಯವರೆಲ್ಲ ಸೇರಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಇದನ್ನೂ ಓದಿ: Road Accident: ಅಪರಿಚಿತ ವಾಹನ ಡಿಕ್ಕಿಯಾಗಿ ವೃದ್ಧೆ ಸಾವು; ಭೀಕರ ಅಪಘಾತದಲ್ಲಿ ಚಾಲಕ ದುರ್ಮರಣ

ಸ್ಥಳಕ್ಕಾಗಮಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು, ಶ್ವಾನದಳ, ಪಿಂಗರ್ ಪ್ರಿಂಟ್ ತಜ್ಞರು ಹಾಗೂ ಎಫ್ಎಸ್ಎಲ್ ತಜ್ಞರಿಂದ ಪರಿಶೀಲನೆ ಮಾಡಿಸಿದ್ದಾರೆ. ಹಂತಕರ ಸುಳಿವಿನ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಮೇಲ್ನೊಟಕ್ಕೆ ಕಮಲಮ್ಮನನ್ನ ವೃತ್ತಿಪರ ಹಂತಕರೇ ಚಿನ್ನಾಭರಣ ದೋಚುವ ಸಲುವಾಗಿ ಹತ್ಯೆಗೈದಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಶವವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Continue Reading
Advertisement
CM Siddaramaiah and B Nagendra and DK Shivakumar
ಕರ್ನಾಟಕ1 min ago

Karnataka Cabinet: 34 ಸಚಿವರ ಪೈಕಿ 16 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್, ನಂ.1 ಸ್ಥಾನದಲ್ಲಿ ಯಾರಿದ್ದಾರೆ?

Rain alert
ಉಡುಪಿ16 mins ago

Weather Report: ಭಾನುವಾರ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ; ಗಾಳಿ ವೇಗವೂ ಹೆಚ್ಚಲಿದೆ ಎಂದ ಹವಾಮಾನ ಇಲಾಖೆ

french open novak djokovic
ಕ್ರೀಡೆ37 mins ago

French Open 2023: ಇಂದಿನಿಂದ ಫ್ರೆಂಚ್‌ ಓಪನ್‌; ನಡಾಲ್‌ ದಾಖಲೆ ಮುರಿಯುವ ವಿಶ್ವಾಸದಲ್ಲಿ ಜೋಕೊ

Shah Rukh Khan And Akshay kumar Voice Over to New parliament building Video
ದೇಶ42 mins ago

ಪ್ರಧಾನಿ ಮೋದಿ ಮನವಿಗೆ ಸ್ಪಂದನೆ; ಸಂಸತ್​ ಭವನದ ವಿಡಿಯೊಕ್ಕೆ ಧ್ವನಿ ಕೊಟ್ಟ ಶಾರುಖ್​ ಖಾನ್​, ಅಕ್ಷಯ್​ ಕುಮಾರ್​

naresh and pavitra lokesh Live in Relationship
South Cinema53 mins ago

Telugu star Naresh: ಮಕ್ಕಳು ಮಾಡಿಕೊಳ್ಳುವ ಆಲೋಚನೆ ಬಗ್ಗೆ ನರೇಶ್‌, ಪವಿತ್ರಾ ಲೋಕೇಶ್‌ ಹೇಳಿದ್ದೇನು?

IIFA 2023 Winners Hrithik Roshan and anil Kapoor
South Cinema55 mins ago

IIFA 2023 Winners Full List: ಹೃತಿಕ್ ರೋಷನ್, ಆಲಿಯಾ ಭಟ್‌ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ; ವಿಜೇತರ ಪಟ್ಟಿ ಇಲ್ಲಿದೆ!

new Parliament building and coffin box
ದೇಶ59 mins ago

New Parliament Building: ಹೊಸ ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಲಾಲು ಪ್ರಸಾದ್ ಯಾದವರ ಆರ್‌ಜೆಡಿ ಪಕ್ಷ!

ipl records gill
ಕ್ರಿಕೆಟ್1 hour ago

IPL 2023: ಕೊಹ್ಲಿ ದಾಖಲೆ ಮುರಿಯುವರೇ ಶುಭಮನ್​ ಗಿಲ್​?

aditya ranjan ias
ಅಂಕಣ1 hour ago

ರಾಜ ಮಾರ್ಗ ಅಂಕಣ: ಆಧುನಿಕ ಅಂಗನವಾಡಿಗಳ ನಿರ್ಮಾಪಕ ಆದಿತ್ಯರಂಜನ್ IAS

New Parliament building inauguration Live Video Here
ದೇಶ2 hours ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

New Parliament building inauguration Live Video Here
ದೇಶ2 hours ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

horoscope today
ಪ್ರಮುಖ ಸುದ್ದಿ7 hours ago

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Laxmi Hebbalkar oath taking as a minister
ಕರ್ನಾಟಕ19 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ2 days ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ2 days ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ2 days ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ3 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ3 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ4 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

ಟ್ರೆಂಡಿಂಗ್‌

error: Content is protected !!