Site icon Vistara News

Rain news | ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ, ಇನ್ನೂ 5 ದಿನ ಭಾರಿ ಮಳೆ

rain

ಬೆಂಗಳೂರು: ರಾಜಧಾನಿ ಹಾಗೂ ಸುತ್ತಮಜತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ರಾತ್ರಿಯಿಂದ ಭಾರಿ ಮಳೆ ಸುರಿಯಲಾರಂಭಿಸಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು, ಇನ್ನೂ ಐದು ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಬೆಂಗಳೂರಲ್ಲಿ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿಗೆ ಇಂದಿನಿಂದ 5 ದಿನ ಮಳೆ ಇರಲಿದ್ದು ಯೆಲ್ಲೋ ಅಲರ್ಟ್, ಉತ್ತರ ಒಳನಾಡಿಗೆ ಇಂದಿನಿಂದ 3 ದಿನಗಳು ಮಳೆ ಇರಲಿದ್ದು, ಯೆಲ್ಲೋ ಅಲರ್ಟ್ ತಿಳಿಸಲಾಗಿದೆ. ಕರಾವಳಿ ಭಾಗಕ್ಕೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಅಲ್ಲೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರಿಗೆ ಇನ್ನು 5 ದಿನ ಮಳೆ ಇರಲಿದ್ದು ಇಂದು ಮಾತ್ರ ಐೆಲ್ಲೋ ಅಲರ್ಟ್ ನೀಡಲಾಗಿದೆ. ಗುಡುಗು- ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ರಾಜಾಕಾಲುವೆ ಸುತ್ತಮುತ್ತಲಿನ ಹಾಗೂ ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನಾದ್ಯಂತ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು ಮೆಜೆಸ್ಟಿಕ್, ವಿಜಯ ನಗರ, ಕಾರ್ಪೋರೇಷನ್, ಮೈಸೂರ್ ಬ್ಯಾಂಕ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.

ಇದನ್ನೂ ಓದಿ | Rain News | ರಾಜ್ಯದಲ್ಲಿ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ; ವಿವಿಧೆಡೆ ಮನೆಗಳಿಗೆ ನುಗ್ಗಿದ ನೀರು

Exit mobile version