Site icon Vistara News

Rain News: ಇನ್ನೆರಡು ದಿನ ಬಿರು ಮಳೆ; ನೆಲಕ್ಕುರಿಳಿದ ಮರಗಳು, ವಿದ್ಯುತ್ ಕಂಬಗಳು, ಕೊಚ್ಚಿ ಹೋದ ಸೇತುವೆ

Rain Effected

ಬೆಂಗಳೂರು: ಬಿಪರ್‌ಜಾಯ್‌ ಸೈಕ್ಲೋನ್‌ ಎಫೆಕ್ಟ್‌ನಿಂದಾಗಿ ಕರಾವಳಿ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ. ಜೂ.10ರಂದು ದಕ್ಷಿಣ ಕನ್ನಡ, ಕೊಡಗು, ಕೋಲಾರ ಹಾಗೂ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ವೇಗವು ಗಂಟೆಗೆ 30-40ಕಿ.ಮೀ ತಲುಪುವ ಸಾಧ್ಯತೆ ಇದೆ. ಚಾಮರಾಜನಗರ, ಬೀದರ್‌,ಕಲಬುರಗಿ, ರಾಯಚೂರು, ಮೈಸೂರು ಮತ್ತು ಯಾದಗಿರಿಯಲ್ಲೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಸಮುದ್ರದಲ್ಲಿ ಅಲೆಗಳ ಅಬ್ಬರ

ಅಲೆಗಳ ಅಬ್ಬರ, ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಕಡಲ ತೀರದಲ್ಲಿ ಭಾರಿ ಪ್ರಮಾಣದಲ್ಲಿ ಸಮುದ್ರದ ಅಲೆಗಳು ಅಪ್ಪಳಿಸುತ್ತಿದೆ. ಕಾರವಾರ, ಅಂಕೋಲಾ, ಕುಮಟಾ, ಭಟ್ಕಳದ ಸಮುದ್ರ ಪ್ರದೇಶದಲ್ಲಿ ಅಲೆಗಳ ಆರ್ಭಟ ಜೋರಾಗಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮೀನುಗಾರಿಕಾ ಇಲಾಖೆ ಜೂ. 11ರ ವರೆಗೂ ಹೈಅಲರ್ಟ್ ನೀಡಿದೆ. ಕಾರವಾರ ಕಡಲತೀರದಿಂದ ಭಟ್ಕಳ ಕಡಲತೀರದವರಗೆ ಬರುವ ಪ್ರವಾಸಿಗರಿಗೂ ನೀರಿಗಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಕೊಚ್ಚಿ ಹೋದ ಸೇತುವೆ

ಮಳೆಯ ರಭಸಕ್ಕೆ ಕೊಚ್ಚಿ ಹೋದ ಸೇತುವೆ

ಕಲಬುರಗಿ ಜಿಲ್ಲೆಯಾದ್ಯಂತ ಕೆಲವಡೆ ಕಳೆದ ರಾತ್ರಿ ಬಿರುಗಾಳಿ ಸಹಿತ ಮಳೆಯಾಗಿದೆ. ಮಳೆ ನೀರಿನ ರಭಸಕ್ಕೆ ಸೇತುವೆಯೇ ಕೊಚ್ಚಿ ಹೋಗಿದೆ. ಕಲಬುರಗಿಯ ಚಿಂಚೋಳಿ ತಾಲೂಕಿನ ದೇಗಲಮಡಿ ಗ್ರಾಮದ ಹೊರವಲಯದಲ್ಲಿ ನಿರ್ಮಿಸಲಾಗಿದ್ದ ಸೇತುವೆ ಕೊಚ್ಚಿ ಹೋಗಿದೆ. ಸೇತುವೆ ಕೊಚ್ಚಿಕೊಂಡು ಹೋದ ಹಿನ್ನೆಲೆಯಲ್ಲಿ ದೇಗಲಮಡಿ ಗ್ರಾಮಕ್ಕೆ ಸಂಚಾರ ಸ್ಥಗಿತಗೊಂಡಿದೆ. ದೊಡ್ಡ ಸೇತುವೆ ನಿರ್ಮಾಣ ಮಾಡುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಚಿಕ್ಕದಾದ ಸೇತುವೆ ನಿರ್ಮಿಸಲಾಗಿತ್ತು.

ಇದನ್ನೂ ಓದಿ: Viral news: ಮಳೆ ಬರದ ಊರಿನಲ್ಲಿ ಒಲ್ಲದ ವಧು- ವರನಿಗೆ ಕಂಕಣಯೋಗ!

ಮುರಿದು ಬಿದ್ದ ವಿದ್ಯುತ್‌ ಕಂಬಗಳು

ಮುರಿದು ಬಿದ್ದ ವಿದ್ಯುತ್‌ ಕಂಬಗಳು

ಮಂಡ್ಯದ ಮದ್ದೂರು ತಾಲೂಕು ವ್ಯಾಪ್ತಿಯಲ್ಲಿ ಬಿರುಗಾಳಿ‌ ಸಹಿತ ಮಳೆಯಾಗುತ್ತಿದೆ. ಮದ್ದೂರು ತಾಲೂಕಿನ ನಗರಕೆರೆ, ಸೋಂಪುರ, ಮಾಲಗಾರನಹಳ್ಳಿ, ಅಜ್ಜಹಳ್ಳಿ, ಕ್ಯಾತಘಟ್ಟ,‌ ಹುಲಿಗೆರೆಪುರ ಸೇರಿದಂತೆ 10ಕ್ಕೂ ಹೆಚ್ಚು ಗ್ರಾಮಗಳಲ್ಲಿ ಭಾರಿ ಮಳೆಯಾಗಿದೆ. ಬಿರುಗಾಳಿಗೆ ಕೆಲವು ಕಡೆ ವಿದ್ಯುತ್ ಕಂಬಗಳು ಮುರಿದು ಅವಾಂತರವೇ ಸೃಷ್ಟಿಯಾಗಿದೆ.

ಧರೆಗುರುಳಿದ ತೆಂಗಿನ ಮರ, ವಿದ್ಯುತ್‌ ಕಂಬ

ಸ್ಥಳಕ್ಕೆ ಸೆಸ್ಕಾಂ‌ ಅಧಿಕಾರಿಗಳು ಭೇಟಿ ನೀಡಿದ್ದು, ಮುರಿದು ಬಿದ್ದ ಕಂಬಗಳನ್ನು ತೆರವು ಮಾಡಲಾಗಿದೆ. ಹಲವೆಡೆ ಮರಗಳು ಬುಡಸಮೇತ ನೆಲಕ್ಕುರುಳಿವೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version