Site icon Vistara News

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in mangalore

ಮಂಗಳೂರು/ಬೆಂಗಳೂರು: ಬಿಪರ್‌ಜಾಯ್ ಚಂಡಮಾರುತ ಎಫೆಕ್ಟ್‌ನಿಂದಾಗಿ (Cyclone Biparjoy) ಶುಕ್ರವಾರ (ಜೂ.8) ಮುಂಜಾನೆ ಮಂಗಳೂರಿನಲ್ಲಿ ಬಿಡದೆ ಮಳೆ (Rain News) ಸುರಿಯುತ್ತಿದೆ. ಮುಂಜಾನೆಯೇ ಆರಂಭಗೊಂಡ ಮಳೆಯಿಂದ ಕಛೇರಿಗೆ ತೆರಳುವವರು, ಶಾಲಾ-ಕಾಲೇಜಿಗೆ ಹೋಗುವವರು ಕೊಂಚ (Weather Report) ಪರದಾಡಿದರು.

ಶುಕ್ರವಾರ ಮುಂಜಾನೆ ಮಂಗಳೂರಲ್ಲಿ ಬಿಡದೆ ಸುರಿಯುತ್ತಿರುವ ಮಳೆ

ಜೂನ್‌ 8 ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ವೇಳೆ ವಿದ್ಯುತ್‌ ವ್ಯತ್ಯಯ ಉಂಟಾಗಬಹುದು. ಬಿರುಗಾಳಿ ಸಹಿತ ಮಳೆಯಾಗುವ ಕಾರಣದಿಂದಾಗಿ ಮರದಡಿ ನಿಲ್ಲದಂತೆ ಸೂಚನೆ ನೀಡಲಾಗಿದೆ. ಇನ್ನು ಕರ್ನಾಟಕ ಕರಾವಳಿಯ ಸಮುದ್ರ ತೀರಾದಲ್ಲಿ ಗಾಳಿ ವೇಗವು 45-55 ಕಿ.ಮೀ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಐಎಂಡಿ ಎಚ್ಚರಿಕೆ ನೀಡಿದೆ.

ಬಿಪರ್‌ಜಾಯ್ ಚಂಡಮಾರುತ ಎಫೆಕ್ಟ್‌ನಿಂದಾಗಿ ಉತ್ತರಕನ್ನಡದ ಭಟ್ಕಳ, ಹೊನ್ನಾವರ, ಅಂಕೋಲಾ ತಾಲೂಕುಗಳಲ್ಲಿ ಬೆಳಗ್ಗೆ 9 ಗಂಟೆಯಿಂದ‌ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಬಿಪರ್‌ಜಾಯ್‌ ಚಂಡಮಾರುತ ಹಿನ್ನೆಲೆ ಜೂ.10 ರವರೆಗೆ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಡಲತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದು, ಭಾರೀ ಪ್ರಮಾಣದಲ್ಲಿ ಗಾಳಿ ಬೀಸುತ್ತಿದೆ. ಹೀಗಾಗಿ ತೀರ ಪ್ರದೇಶದ ನಿವಾಸಿಗಳಿಗೆ ಎಚ್ಚರಿಕೆಯಲ್ಲಿ ಇರುವಂತೆ ಸೂಚನೆ ನೀಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇತ್ತ ಕುಮಟಾ, ಕಾರವಾರ ತಾಲೂಕಿನಲ್ಲಿ ಬಿಸಿಲಿನ ವಾತಾವರಣ ಇದೆ.

ಬೆಂಗಳೂರಲ್ಲಿ ಕೆಲವೊಮ್ಮೆ ವಾತಾವರಣವು ಬಿಸಿಲಿನಿಂದ ಕೂಡಿದ್ದರೆ ಮಧ್ಯಾಹ್ನದ ವೇಳೆ ಮೋಡ ಕವಿಯಲಿದೆ. ಸಂಜೆ ಅಥವಾ ರಾತ್ರಿಯಂದು ಮಳೆಯಾಗುವ ಸಾಧ್ಯತೆ ಇದೆ. ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮೈಸೂರು, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡ, ಗದಗ, ಕೊಪ್ಪಳ, ರಾಯಚೂರು ಹಾಗೂ ಬಳ್ಳಾರಿ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಲಿದೆ. ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಅಲ್ಲಲ್ಲಿ ವರುಣ ಅಬ್ಬರಿಸಲಿದ್ದಾನೆ.


ಇದನ್ನೂ ಓದಿ:Mother Dairy: ಬಳಕೆದಾರರ ಮೇಲೆ ‘ಮದರ್ ಡೇರಿ’ ಮಮತೆ, ಅಡುಗೆ ಎಣ್ಣೆ ದರದಲ್ಲಿ ಭಾರೀ ಇಳಿಕೆ!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಕಲಬುರಗಿ: 42 ಡಿ.ಸೆ – 27 ಡಿ.ಸೆ
ಗದಗ: 37 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 35 ಡಿ.ಸೆ – 21 ಡಿ.ಸೆ
ಕಾರವಾರ: 33 ಡಿ.ಸೆ – 27 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಹೊನ್ನಾವರ: 33 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 32 ಡಿ.ಸೆ – 22 ಡಿ.ಸೆ

ಉತ್ತರ ಕನ್ನಡದಲ್ಲಿ ವರುಣಾರ್ಭಟ ಇಲ್ಲಿದೆ ನೋಡಿ

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version