Rain News Bull killed by lightning in Sirigeri village The farmer is sick Rain News: ಸಿರಿಗೇರಿ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಸಾವು; ರೈತನಿಗೆ ಗಾಯ - Vistara News

ಕರ್ನಾಟಕ

Rain News: ಸಿರಿಗೇರಿ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಸಾವು; ರೈತನಿಗೆ ಗಾಯ

ಬಳ್ಳಾರಿ ಜಿಲ್ಲೆಯ ಕುರುಗೋಡು ಸಮೀಪದ ಸಿರಿಗೇರಿ ಗ್ರಾಮದಲ್ಲಿ ಸಿಡಿಲು ಬಡಿದು ಜಮೀನಿನಲ್ಲಿದ್ದ ಎತ್ತು ಮೃತಪಟ್ಟಿದ್ದು, ರೈತ ಗಾಯಗೊಂಡಿರುವ ಘಟನೆ ಜರುಗಿದೆ‌.

VISTARANEWS.COM


on

Rain News Bull killed by lightning in Sirigeri village The farmer is sick
ಕುರುಗೋಡು ಸಮೀಪದ ಸಿರಿಗೇರಿ ಗ್ರಾಮ ಜಮೀನಿನಲ್ಲಿ ಸಿಡಿಲು ಬಡಿದು ಮೃತಪಟ್ಟಿರುವ ಎತ್ತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕುರುಗೋಡು (ಬಳ್ಳಾರಿ): ಸಿಡಿಲು (Lightning) ಬಡಿದು ಜಮೀನಿನಲ್ಲಿದ್ದ ಎತ್ತು ಮೃತಪಟ್ಟಿದ್ದು, ರೈತ ಗಾಯಗೊಂಡಿರುವ ಘಟನೆ ಸಮೀಪದ ಸಿರಿಗೇರಿ ಗ್ರಾಮದಲ್ಲಿ ಜರುಗಿದೆ‌.

ಗ್ರಾಮದ ಹೊರವಲಯದ ಜಮೀನಿನಲ್ಲಿ ರೈತ ಬಳ್ಳೊಳ್ಳಿ ಜಡೆಪ್ಪ ಕುಂಟೆ ಹೊಡೆಯುವಾಗ ಸಿಡಿಲು ಬಡಿದ ಎತ್ತು‌ ಸ್ಥಳದಲ್ಲಿಯೇ ಎತ್ತು ಮೃತಪಟ್ಟಿದೆ. ಸಣ್ಣ ಪುಟ್ಟ ಗಾಯವಾಗಿದ್ದ ಜಡೆಪ್ಪ ವಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಪೊಲೀಸ್ ಇಲಾಖೆ, ಸಂಬಂಧಪಟ್ಟ ಇಲಾಖೆಯವರು ಭೇಟಿ ನೀಡಿ‌ ಪರಿಶೀಲಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Maheshchandra Guru : ನಿವೃತ್ತ ಪ್ರಾಧ್ಯಾಪಕ, ಪ್ರಗತಿಪರ ಚಿಂತಕ ಮಹೇಶ್​ಚಂದ್ರ ಗುರು ನಿಧನ

Maheshchandra Guru : ಮಹೇಶ್​ಚಂದ್ರ ಅವರು ಆರಂಭದಲ್ಲಿ ಹೈದರಬಾದ್‌ ಕರ್ತವ್ಯ ನಿರ್ವಹಿಸಿದ್ದರು. ಅಲ್ಲಿ ಅವರು ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಹುದ್ದೆ ಆರಂಭಿಸಿದ್ದರು. ಅಲ್ಲಿಂದ ಅವರು ಮಂಗಳೂರು ವಿವಿಯಲ್ಲಿ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕ ಹುದ್ದೆಗೆ ನೇಮಕಗೊಂಡರು. ಅಲ್ಲಿಂದ ಮೈಸೂರು ವಿವಿಗೆ ವರ್ಗಾವಣೆಗೊಂಡು 2009ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು.

VISTARANEWS.COM


on

Maheshchandra Guru
Koo

ಮೈಸೂರು: ಮೈಸೂರು ವಿಶ್ವ ವಿದ್ಯಾಲಯದ ನಿವೃತ್ತ ಧ್ಯಾಪಕ ಹಾಗೂ ಪ್ರಗತಿಪರ ಚಿಂತಕರಾಗಿದ್ದ ಪ್ರೊ.ಮಹೇಶ್‌ ಚಂದ್ರ ಗುರು (Maheshchandra Guru) ನಿಧನ ಹೊಂದಿದ್ದಾರೆ. 68 ವರ್ಷದ ಅವರು ಅನಾರೋಗ್ಯಕ್ಕೆ ಒಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಹೇಶ್ ಚಂದ್ರ ಗುರು ಕಾಲಿನ ಗ್ಯಾಂಗ್ರಿನ್​​ಗೆ ಒಳಗಾಗಿದ್ದರು. ಹೀಗಾಗಿ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಇಂದು ರಾತ್ರಿ 7.30ಕ್ಕೆ ಹೃದಯಘಾತ ಸಂಭವಿಸಿ ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ.

ಮಹೇಶ್​ಚಂದ್ರ ಅವರು ಆರಂಭದಲ್ಲಿ ಹೈದರಬಾದ್‌ ಕರ್ತವ್ಯ ನಿರ್ವಹಿಸಿದ್ದರು. ಅಲ್ಲಿ ಅವರು ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಹುದ್ದೆ ಆರಂಭಿಸಿದ್ದರು. ಅಲ್ಲಿಂದ ಅವರು ಮಂಗಳೂರು ವಿವಿಯಲ್ಲಿ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕ ಹುದ್ದೆಗೆ ನೇಮಕಗೊಂಡರು. ಅಲ್ಲಿಂದ ಮೈಸೂರು ವಿವಿಗೆ ವರ್ಗಾವಣೆಗೊಂಡು 2009ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು.

ಇದನ್ನೂ ಓದಿ: CM siddaramaiah : ಕಾಂಗ್ರೆಸ್ ಪಕ್ಷ, ಸರ್ಕಾರ ಸಿದ್ದರಾಮಯ್ಯ ಬೆಂಬಲಕ್ಕಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ನಿವೃತ್ತಿ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಅವರು ಹೆಚ್ಚಾಗಿ ಕಾಣಿಸಿಕೊಂಡಿದ್ದರು. ಅವರು ಪ್ರಗತಿಪರ ಹಾಗೂ ವೈಚಾರಿಕ ಚಿಂತನೆಗಳನ್ನು ಬಿತ್ತುತ್ತಿದ್ದರು. ಮೈಸೂರಿನ ಐತಿಹಾಸಿಕ ದಸರಾ ವೇಳೆ ಮಹಿಷಾ ದಸರಾ ಆಚರಣೆಯನ್ನು ಆರಂಭಿಸಿದ್ದರು. ಪ್ರೊ.ಮಹೇಶ್‌ ಚಂದ್ರ ಗುರು ಅವರ ನಿಧನಕ್ಕೆ ನಾಡಿನ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ

ನನಗೆ ಆತ್ಮೀಯರಾಗಿದ್ದ ಮೈಸೂರಿನ ಪ್ರಗತಿಪರ ಚಿಂತಕ ಡಾ.ಮಹೇಶ್ ಚಂದ್ರಗುರು ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು ಅವರು ತರಗತಿಗಳಿಂದ ಹೊರಗೆ ಕೂಡಾ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು.

ಬುದ್ದ, ಬಸವ, ಅಂಬೇಡ್ಕರ್ ಚಿಂತನೆಗಳಿಂದ ಪ್ರಭಾವಿತರಾಗಿದ್ದ ಡಾ.ಮಹೇಶ್ ಚಂದ್ರ ಗುರು ಎಂದೂ ಮೌನಕ್ಕೆ ಮೊರೆಹೋಗದೆ ಮತ್ತು ಪರಿಣಾಮವನ್ನೂ ಲೆಕ್ಕಿಸದೆ ನೇರವಾಗಿ ಮತ್ತು ನಿಷ್ಠುರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು. ಡಾ.ಮಹೇಶ್ ಚಂದ್ರ ಗುರು ಅವರ ನಿಧನದಿಂದ ಸಮಾಜ ಒಬ್ಬ ಚಿಂತನಶೀಲ ಮಾರ್ಗದರ್ಶಕನನ್ನು ಕಳೆದುಕೊಂಡಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.

Continue Reading

ಪ್ರಮುಖ ಸುದ್ದಿ

CM siddaramaiah : ಕಾಂಗ್ರೆಸ್ ಪಕ್ಷ, ಸರ್ಕಾರ ಸಿದ್ದರಾಮಯ್ಯ ಬೆಂಬಲಕ್ಕಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

CM siddaramaiah : ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಕಚೇರಿಯಾಗಿ ಪರಿವರ್ತನೆ ಮಾಡಿಕೊಳ್ಳಲು ನಡೆಯುತ್ತಿರುವ ಹುನ್ನಾರದ ವಿರುದ್ಧ ಹೋರಾಟ ಮಾಡುತ್ತೇವೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆ ಮಾಡಬೇಕಿದೆ. ಮುಖ್ಯಮಂತ್ರಿಗಳ ವಿರುದ್ಧ ಕಾನೂನು ಬಾಹಿರವಾಗಿ ವಿಚಾರಣೆಗೆ ಅನುಮತಿ ನೀಡಲಾಗಿದೆ. ನಾವು ಕಾನೂನು ಗೌರವಿಸುತ್ತೇವೆ. ದೇಶದ ಕಾನೂನು ನಮಗೆ ರಕ್ಷಣೆ ನೀಡಲಿದೆ ಎಂಬ ವಿಶ್ವಾಸವಿದೆ. ನ್ಯಾಯ ಪೀಠದಿಂದ ಅನ್ಯಾಯ ಆಗುವುದಿಲ್ಲ ಎಂಬ ನಂಬಿಕೆ ಇದೆ. ಹೀಗಾಗಿ ಕಾನೂನು ಸಮರಕ್ಕೆ ನಾವು ಸಜ್ಜಾಗಿದ್ದೇವೆಎಂದು ತಿಳಿಸಿದರು.

VISTARANEWS.COM


on

cm siddaramaiah
Koo

ಬೆಂಗಳೂರು: ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (cm siddaramaiah) ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಖಡಕ್ಕಾಗಿ ತಿಳಿಸಿದರು.

ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವ ಬಗ್ಗೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸಂಪುಟ ಸಹೋದ್ಯೋಗಿಗಳ ಜತೆ ಶನಿವಾರ ಮಾಧ್ಯಮಗೋಷ್ಠಿ ನಡೆಸಿದರು.

“ಸಿದ್ದರಾಮಯ್ಯ ಅವರು ನಮ್ಮ ಮುಖ್ಯಮಂತ್ರಿಗಳು. ಅವರು ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಅವರು ನಮ್ಮ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದು, ನಾವು ಒಟ್ಟಾಗಿ ರಾಜ್ಯದ ಜನರ ಸೇವೆ ಮುಂದುವರಿಸುತ್ತೇವೆ. ಕೇವಲ ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಇಡೀ ಇಂಡಿಯಾ ಒಕ್ಕೂಟ ನಮ್ಮ ಮುಖ್ಯಮಂತ್ರಿಗಳ ಬೆನ್ನಿಗೆ ನಿಲ್ಲಲಿದೆ. ಮುಖ್ಯಮಂತ್ರಿಗಳ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಲಾಗಿದೆ. ಹೀಗಾಗಿ ಕಾನೂನು ಚೌಕಟ್ಟಿನಲ್ಲಿ ಹೋರಾಟ ಮುಂದುವರಿಸುತ್ತೇವೆ. ಇದರ ಜತೆಗೆ ರಾಜಕೀಯವಾಗಿಯೂ ಜನರ ಮಧ್ಯೆ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಕಚೇರಿಯಾಗಿ ಪರಿವರ್ತನೆ ಮಾಡಿಕೊಳ್ಳಲು ನಡೆಯುತ್ತಿರುವ ಹುನ್ನಾರದ ವಿರುದ್ಧ ಹೋರಾಟ ಮಾಡುತ್ತೇವೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆ ಮಾಡಬೇಕಿದೆ. ಮುಖ್ಯಮಂತ್ರಿಗಳ ವಿರುದ್ಧ ಕಾನೂನು ಬಾಹಿರವಾಗಿ ವಿಚಾರಣೆಗೆ ಅನುಮತಿ ನೀಡಲಾಗಿದೆ. ನಾವು ಕಾನೂನು ಗೌರವಿಸುತ್ತೇವೆ. ದೇಶದ ಕಾನೂನು ನಮಗೆ ರಕ್ಷಣೆ ನೀಡಲಿದೆ ಎಂಬ ವಿಶ್ವಾಸವಿದೆ. ನ್ಯಾಯ ಪೀಠದಿಂದ ಅನ್ಯಾಯ ಆಗುವುದಿಲ್ಲ ಎಂಬ ನಂಬಿಕೆ ಇದೆ. ಹೀಗಾಗಿ ಕಾನೂನು ಸಮರಕ್ಕೆ ನಾವು ಸಜ್ಜಾಗಿದ್ದೇವೆಎಂದು ತಿಳಿಸಿದರು.

ಹಿಂದುಳಿದ ವರ್ಗದ ನಾಯಕ ರಾಜ್ಯದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಬೆಳೆಯುತ್ತಿರುವುದನ್ನು ಸಹಿಸಲಾಗದೇ ಕೇಂದ್ರ ಬಿಜೆಪಿ ಸರ್ಕಾರ ದೊಡ್ಡ ಪಿತೂರಿ ನಡೆಸಿದೆ. ಇದನ್ನು ಧಿಕ್ಕರಿಸಿ ನಾವು ಹೋರಾಟ ಮಾಡುತ್ತೇವೆ. ರಾಜ್ಯಪಾಲರ ಕಚೇರಿ ಬಿಜೆಪಿ ಪಕ್ಷದ ಕೈಗೊಂಬೆಯಾಗಬಾರದು. ನಮ್ಮ ಸರ್ಕಾರ ಪ್ರತಿ ವರ್ಷ 56 ಸಾವಿರ ಕೋಟಿ ಹಣವನ್ನು ಬಡವರಿಗಾಗಿ ಹಂಚುತ್ತಿದೆ. ಇಂತಹ ಐತಿಹಾಸಿಕ ಯೋಜನೆಗಳನ್ನು ಜಾರಿಗೆ ತಂದಿರುವ ಸರ್ಕಾರದ ವಿರುದ್ಧ ಈ ಷಡ್ಯಂತ್ರ ನಡೆಸಲಾಗುತ್ತಿದೆ. ಈ ಸರ್ಕಾರ ತೆಗೆಯುವ ಹುನ್ನಾರ ನಡೆಯುತ್ತಿದ್ದು, ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ ಎಂದು ಅವರು ಕಿಡಿಕಾರಿದರು.

ಹಲವು ಬಾರಿ ಇಂತಹ ಪ್ರಕರಣಗಳಲ್ಲಿ ರಾಜ್ಯಪಾಲರು ಯಾವ ರೀತಿ ನಡೆದುಕೊಳ್ಳಬೇಕು ಎಂದು ನ್ಯಾಯಾಲಯಗಳಲ್ಲಿ ಮಾರ್ಗದರ್ಶನ ನೀಡಲಾಗಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಜಾರ್ಖಂಡ್, ತೆಲಂಗಾಣ, ಪಂಜಾಬ್ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿನ ಪ್ರಕರಣಗಳು ಇದಕ್ಕೆ ಉದಾಹರಣೆಗಳಾಗಿವೆ ಎಂದರು.

“ಇಂದು ಬೆಳಗ್ಗೆ ರಾಜ್ಯಪಾಲರು ಸಂವಿಧಾನ ವಿರೋಧಿ ಹಾಗೂ ಪ್ರಜಾಪ್ರಭುತ್ವಕ್ಕೆ ಮಾರಕವಾದಿ ತೀರ್ಮಾನ ಮಾಡಿದ್ದಾರೆ. 26-7-2024ರಂದು ರಾಜ್ಯಪಾಲರು ನೀಡಿದ ನೋಟೀಸ್ ಗೆ ನಾವು 1-8-2024 ರಂದು ವಿವರವಾದ ಉತ್ತರ ನೀಡಿದ್ದೆವು. ಅಲ್ಲದೆ ಸಚಿವ ಸಂಪುಟ ಸಭೆ ಮಾಡಿ ದ್ವೇಷದ ಪಿತೂರಿಯ ಈ ದೂರನ್ನು ತಿರಸ್ಕರಿಸುವಂತೆ ಮನವಿ ಮಾಡಿದ್ದೆವು. ಈ ಪ್ರಕರಣದ ಮೂರು ದೂರಿನಲ್ಲಿಯೂ ತಿರುಳಿಲ್ಲ. ಸಂವಿಧಾನ ಹಾಗೂ ಕಾನೂನಿನಲ್ಲಿರುವ ಅಂಶವನ್ನು ವಿವರಿಸಿ ಇದು ರಾಜಕೀಯ ಪ್ರೇರಿತ ದೂರು, ಇದನ್ನು ಪರಿಗಣಿಸಬೇಡಿ. ಜನರು ಆರಿಸಿರುವ ಸರ್ಕಾರಕ್ಕೆ ಮನ್ನಣೆ ಸಿಗಬೇಕು. ನಮ್ಮ ಮುಖ್ಯಮಂತ್ರಿಗಳು ಅಧಿಕಾರ ದುರುಪಯೋಗ ಮಾಡಿಲ್ಲ, ಯಾವುದೇ ಲೋಪದೋಷ ಆಗಿಲ್ಲ ಎಂದು ಸ್ಪಷ್ಟವಾಗಿ ರಾಜ್ಯಪಾಲರಿಗೆ ಹಾಗೂ ಜನರಿಗೆ ತಿಳಿಸಿದ್ದೇವೆ” ಎಂದು ತಿಳಿಸಿದರು.

ಪ್ರಾಥಮಿಕ ತನಿಖೆ ಇಲ್ಲದೇ ವಿಚಾರಣೆಗೆ ಅನುಮತಿ

ನಮ್ಮ ರಾಜಕೀಯ ಅನುಭವದಲ್ಲಿ ಯಾವುದಾದರೂ ತನಿಖೆಗೆ ಅನುಮತಿ ನೀಡಬೇಕಾದರೆ, ಯಾವುದಾದರೂ ತನಿಖಾ ಸಂಸ್ಥೆಯಿಂದ ಪ್ರಾಥಮಿಕ ತನಿಖೆ ನಡೆಸಿ ಆ ತನಿಖೆಯ ವರದಿಯಲ್ಲಿ ಮುಖ್ಯಮಂತ್ರಿ ಸ್ಥಾನದಲ್ಲಿರುವವರ ವಿಚಾರಣೆ ಅಗತ್ಯವಿದೆ ಎಂದು ಮನವರಿಕೆ ಮಾಡಿದ್ದರೆ ಆಗ ವಿಚಾರಣೆ ನಡೆಸಲು ಅನುಮತಿ ನೀಡಬಹುದು. ಆದರೆ ಇಲ್ಲಿ ಯಾವುದೇ ಕಾನೂನು ಪ್ರಕ್ರಿಯೆ ಪಾಲನೆ ಆಗಿಲ್ಲ. ಈ ಹಿಂದೆಯೂ ಬೇಕಾದಷ್ಟು ಘಟನೆಗಳಿವೆ ಎಂದರು.

“ರಾಜ್ಯದ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪ್ರಕರಣವನ್ನೇ ಉದಾಹರಣೆ ತೆಗೆದುಕೊಳ್ಳುವುದಾದರೆ, ಲೋಕಾಯುಕ್ತದಲ್ಲಿ ತನಿಖೆ ನಡೆದು ಈ ಸಂಸ್ಥೆ 23-11-2023ರಂದು ಕುಮಾರಸ್ವಾಮಿ ಅವರ ವಿಚಾರಣೆಗೆ ಅನುಮತಿ ನೀಡಿ ಎಂದು ರಾಜ್ಯಪಾಲರಿಗೆ ಮನವಿ ಮಾಡುತ್ತಾರೆ. 13-05-2024ರಂದು ಜನಾರ್ಧನ ರೆಡ್ಡಿ ಅವರ ವಿರುದ್ಧ ವಿಚಾರಣೆಗೆ ಅನುಮತಿ ನೀಡಿ ಎಂದು ಕಳುಹಿಸಿಕೊಟ್ಟಿದ್ದಾರೆ. 09-12-2021ರಂದು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಅವರ ವಿಚಾರಣೆಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಪತ್ರ ಬರೆಯಲಾಗಿದೆ. 9-12-2020ರಂದು ಮಾಜಿ ಸಚಿವ ಮುರುಗೇಶ ನಿರಾಣಿ ಅವರ ನಿರಾಣಿ ಅವರ ವಿರುದ್ಧ ವಿಚಾರಣೆಗೆ ಅನುಮತಿ ಕೋರಲಾಗಿದೆ. ಈ ಎಲ್ಲಾ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆ ವರದಿ ಇದ್ದು, ಅದರ ಆಧಾರದ ಮೇಲೆ ವಿಚಾರಣೆಗೆ ಅನುಮತಿ ಕೇಳಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: TJ Abraham : ಎಸ್ಎಂ ಕೃಷ್ಣರಿಂದ ಹಿಡಿದು ಸಿದ್ದರಾಮಯ್ಯವರೆಗೆ; ಕರ್ನಾಟಕ ರಾಜಕೀಯದ ದೊಡ್ಡ ಹುಲಿಗಳನ್ನೇ ಬೋನಿಗೆ ಬೀಳಿಸಿದ ಟಿ ಜೆ ಅಬ್ರಾಹಂ

ಈ ಷಡ್ಯಂತ್ರದಲ್ಲಿ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಕುಮಾರಸ್ವಾಮಿ ಅವರು ಮುಂದಿನ 8-10 ತಿಂಗಳಲ್ಲಿ ಈ ಸರ್ಕಾರವನ್ನು ಕಿತ್ತೊಗೆಯುತ್ತೇವೆ ಎಂದು ಹೇಳಿಕೆ ನೀಡಿದ್ದು, ಇದಕ್ಕೆ ಪೂರಕವಾಗಿ ಈ ಷಡ್ಯಂತ್ರ ನಡೆಯುತ್ತಿದೆ ಎಂದರು.

Continue Reading

ಕರ್ನಾಟಕ

Kundapura Kannada Habba: ನನ್ನ ಸಿನಿಮಾ ಕಥೆಗಳಿಗೆ ಊರು, ಯಕ್ಷಗಾನವೇ ಪ್ರೇರಣೆ; ರಿಷಬ್ ಶೆಟ್ಟಿ

ಎಲ್ಲಿಗೆ ಹೋದರೂ, ಏನೇ ಮಾಡಿದರೂ, ಎಲ್ಲಿಂದ ಬಂದಿದ್ದೇವೆ (Kundapura Kannada Habba) ಎನ್ನುವುದು ಮುಖ್ಯ. ಆ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ನನ್ನ ಸಿನಿಮಾದ ಎಲ್ಲ ಕಥೆಗಳಿಗೂ ಕುಂದಾಪುರದ ನನ್ನೂರು ಕೆರಾಡಿಯೇ ಕಾರಣ. ನಾನು ಬೆಳೆದ ಪರಿಸರವೇ ಪ್ರೇರಣೆ ಎಂದು ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಿಳಿಸಿದ್ದಾರೆ.

VISTARANEWS.COM


on

Kundapura Kannada Habba
Koo

ಬೆಂಗಳೂರು: ನನ್ನ ಸಿನಿಮಾದ ಕಥೆಗಳಿಗೆ ನನ್ನ ಊರು ಮತ್ತು ಯಕ್ಷಗಾನವೇ ಪ್ರೇರಣೆ ಎಂದು ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ (Kundapura Kannada Habba) ಹೇಳಿದರು. ‘ಕುಂದಾಪ್ರ ಕನ್ನಡ ಪ್ರತಿಷ್ಠಾನ’ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ‘ಕುಂದಾಪುರ ಕನ್ನಡ ಹಬ್ಬ-2024’ ದ ಮೊದಲ ದಿನವಾದ ಶನಿವಾರ ‘ಊರ ಗೌರವ’ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಎಲ್ಲಿಗೆ ಹೋದರೂ, ಏನೇ ಮಾಡಿದರೂ, ಎಲ್ಲಿಂದ ಬಂದಿದ್ದೇವೆ ಎನ್ನುವುದು ಮುಖ್ಯ. ಆ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ನನ್ನ ಸಿನಿಮಾದ ಎಲ್ಲ ಕಥೆಗಳಿಗೂ ಕುಂದಾಪುರದ ನನ್ನೂರು ಕೆರಾಡಿಯೇ ಕಾರಣ. ನಾನು ಬೆಳೆದ ಪರಿಸರವೇ ಪ್ರೇರಣೆ. ಅದರಲ್ಲೂ ಓದದೆಯೇ ರಾಮಾಯಣ-ಮಹಾಭಾರತದ ಸಾರ ತಿಳಿಯಲು ಯಕ್ಷಗಾನ ಕಾರಣ. ‘ಕಾಂತಾರ’ ಸಿನಿಮಾ ಚಿತ್ರೀಕರಣ ಕೂಡ ಕುಂದಾಪುರ ಪರಿಸರದಲ್ಲೇ ಆಗಿರುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ: 7th pay commission : 7ನೇ ವೇತನ ಆಯೋಗ ಜಾರಿ ಬಳಿಕ ನೌಕರರ ಸಂಬಳ ಏರಿಕೆ ಎಷ್ಟು? ಅಧಿಕೃತ ಪಟ್ಟಿ ಬಿಡುಗಡೆ

ನಮ್ಮ ಭಾಷೆ ಸಂಸ್ಕೃತಿ ಮಕ್ಕಳಿಗೆ ಗೊತ್ತಾಗಬೇಕು. ಅದಕ್ಕಾಗಿ ಇಂಥ ಹಬ್ಬಗಳು ಅತ್ಯಗತ್ಯ. ತುಳಸಿ ಕಟ್ಟೆಗಳು ಅಪರೂಪ ಆಗಿರುವ ಈ ಕಾಲದಲ್ಲಿ ಇಲ್ಲಿ ತುಳಸಿ ಕಟ್ಟೆ ಇಟ್ಟು ಉದ್ಘಾಟನೆ ನಡೆಸಿರುವುದು ಉತ್ತಮ ಸಂಗತಿ. ನಾನು‌ ಕೂಡ ನನ್ನ ಪ್ರತಿ ಸಿನಿಮಾದಲ್ಲೂ ಅಕ್ಕಿಮುಡಿ, ನೆಟ್ಟಿ ಮುಂತಾದವನ್ನು ತೋರಿಸುತ್ತಿರುತ್ತೇನೆ ಎಂದು ರಿಷಬ್ ಶೆಟ್ಟಿ ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಭಾಷೆಯ ಉಳಿವು ಬೆಳವಣಿಗೆ ದೃಷ್ಟಿಯಿಂದ ಈ ಕುಂದಾಪುರ ಕನ್ನಡ ಹಬ್ಬ ಉತ್ತಮ ಪ್ರಯೋಗ. ದಿನನಿತ್ಯದ ಬಳಕೆಯಲ್ಲಿ ಸಾಧ್ಯವಾದಷ್ಟೂ ಅಧಿಕ ಕುಂದಾಪುರ ಕನ್ನಡ ಬಳಕೆ ಆಗಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್‌ನ ಕೃಷ್ಣಮೂರ್ತಿ ಮಂಜ, ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ. ಎಂಡಿ ಕಿಶೋರ್ ಕುಮಾರ್ ಹೆಗ್ಡೆ, ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ, ಅಧ್ಯಕ್ಷ ಡಾ.ದೀಪಕ್ ಶೆಟ್ಟಿ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ ಮುಂತಾದವರು ಉಪಸ್ಥಿತರಿದ್ದರು.

ಹಬ್ಬಕ್ಕೆ ತಾರಾ ಮೆರುಗು

ಕುಂದಾಪುರ ಕನ್ನಡ ಹಬ್ಬದ ಭಾನುವಾರದ ಕಾರ್ಯಕ್ರಮಕ್ಕೆ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ, ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ, ಗೋಲ್ಡನ್ ಸ್ಟಾರ್ ಗಣೇಶ್, ನಟ-ನಿರ್ಮಾಪಕ ಪ್ರಮೋದ್ ಶೆಟ್ಟಿ ಆಗಮಿಸಲಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್‌ ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಅವರನ್ನೂ ಆಹ್ವಾನಿಸಲಾಗಿದ್ದು, ಅವರೂ ಬರುವ ನಿರೀಕ್ಷೆ ಇದೆ. ಅಲ್ಲದೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರು ಇದೇ ಮೊದಲು ಸಂಗೀತ ಸಂಜೆ ಕಾರ್ಯಕ್ರಮ ನೀಡುತ್ತಿದ್ದು, ಇದು ಭಾನುವಾರದ ಪ್ರಮುಖ ಆಕರ್ಷಣೆ ಆಗಿರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಇದನ್ನೂ ಓದಿ: Pralhad Joshi: ಸಿಎಂ ಮೇಲೆ ರಾಜ್ಯಪಾಲರ ಕ್ರಮ ಸರಿಯಾಗಿಯೇ ಇದೆ; ಪ್ರಲ್ಹಾದ್‌ ಜೋಶಿ ಸಮರ್ಥನೆ

ಕುಂದಾಪುರ ಕನ್ನಡ ಹಬ್ಬ ಆ.18 ರ ಕಾರ್ಯಕ್ರಮಗಳು

ಬೆಳಗ್ಗೆ 10 ಗಂಟೆಗೆ ಬಯಲಾಟ- ಗ್ರಾಮೀಣ ಉತ್ಸವ, ತಾರೆಯರ ಜತೆ ಮಾತುಕತೆ, ಕವಿತೆ., ಬೆಳಗ್ಗೆ 11 ಗಂಟೆಗೆ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ʼಡಾನ್ಸ್ ಕುಂದಾಪ್ರ ಡಾನ್ಸ್ʼ, ಬೆಳಗ್ಗೆ 11.15 ಕ್ಕೆ ಕುಂದಾಪುರ ಭಾಷೆ ಬದುಕು ಬರಹ ಕುರಿತ ನುಡಿಚಾವಡಿ, ಮಧ್ಯಾಹ್ನ 12 ಗಂಟೆಗೆ ಮನು ಹಂದಾಡಿ ಅವರಿಂದ ʼಹಂದಾಡ್ತಾ ನೆಗ್ಯಾಡಿʼ ಹಾಸ್ಯ ಕಾರ್ಯಕ್ರಮ., ಮಧ್ಯಾಹ್ನ 1.30 ಕ್ಕೆ ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ ʼಪೆಟ್ ಒಂದೇ, ಸ್ವರ ಬೇರೆʼ, ಮಧ್ಯಾಹ್ನ 2.30 ಕ್ಕೆ ಮಂದರ್ತಿ ಶ್ರೀ ದುರ್ಗಾಪರಮೇಶ್ವರಿಯ ನೃತ್ಯಗಾಥೆ ʼಮಂದಾರ್ತಿ ಮಾದೇವಿʼ, ಸಂಜೆ 4.30 ಕ್ಕೆ ರಥೋತ್ಸವ, ರಾತ್ರಿ 7.30 ಗಂಟೆಗೆ ʼರವಿ ಬಸ್ರೂರ್ ನೈಟ್ಸ್ʼ ವಿಶೇಷ ಸಂಗೀತ ಸಂಜೆ.

Continue Reading

ಕರ್ನಾಟಕ

NPS News: ಹೊಸ ಪಿಂಚಣಿ ರದ್ದುಗೊಳಿಸಲು ಸಮಿತಿ ಪುನರ್‌ ರಚನೆ; ಎನ್‌ಪಿಎಸ್‌ ನೌಕರರ ಸಂಘ ವಿರೋಧ

ಹೊಸ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್‌) ರದ್ದುಗೊಳಿಸುವ (NPS News) ಕುರಿತು ರಾಜ್ಯ ಸರ್ಕಾರವು ಮತ್ತೊಮ್ಮೆ ಸಮಿತಿಯನ್ನು ಪುನರ್‌ ರಚಿಸಿರುವ ಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘವು ವಿರೋಧಿಸಿದೆ. ಸಂಘವು ನಿರ್ಣಾಯಕ ಹೋರಾಟಕ್ಕೆ ಕರೆ ನೀಡುವ ಕುರಿತು ನಿರ್ಣಯ ಕೈಗೊಳ್ಳಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

NPS News
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ಹೊಸ ಪಿಂಚಣಿ ಯೋಜನೆಯನ್ನು (ಎನ್‌ಪಿಎಸ್‌) ರದ್ದುಗೊಳಿಸುವ ಕುರಿತು ರಾಜ್ಯ ಸರ್ಕಾರವು ಮತ್ತೊಮ್ಮೆ ಸಮಿತಿಯನ್ನು ಪುನರ್‌ ರಚಿಸಿರುವ ಕ್ರಮಕ್ಕೆ (NPS News) ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘವು ವಿರೋಧ ವ್ಯಕ್ತಪಡಿಸಿದೆ.

ಇದನ್ನೂ ಓದಿ: Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಾಜ್ಯ ಸರ್ಕಾರಿ ಎನ್‌ಪಿಎಸ್‌ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ಅವರು, ಸರ್ಕಾರವು ಎನ್‌ಪಿಎಸ್‌ ಯೋಜನೆಯನ್ನು ರದ್ದುಗೊಳಿಸುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ, ನಿರ್ಣಯ ಕೈಗೊಳ್ಳುವ ನಿರೀಕ್ಷೆಯಲ್ಲಿದ್ದ ನೌಕರರಿಗೆ ರಾಜ್ಯ ಸರ್ಕಾರವು ಮೂರನೇ ಬಾರಿಗೆ ಸಮಿತಿಯನ್ನು ರಚಿಸಿ, ವಿಳಂಬಗೊಳಿಸುತ್ತಿರುವ ಕ್ರಮವು ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೆ ತೀವ್ರ ನಿರಾಸೆ ಮೂಡಿಸಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Tungabhadra Dam: ಮುರಿದುಹೋದ 19ನೇ ಗೇಟ್‌ಗೆ ಸ್ಟಾಪ್‌ ಲಾಗ್‌ ಅಳವಡಿಕೆ ಯಶಸ್ವಿ, ಪೋಲಾಗುತ್ತಿದ್ದ ನೀರು ಬಂದ್!

ಎನ್‌ಪಿಎಸ್‌ ಯೋಜನೆಯನ್ನು ಈಗಾಗಲೇ ರದ್ದುಗೊಳಿಸಿರುವ ರಾಜಸ್ಥಾನ, ಛತ್ತೀಸ್‌ಗಡ, ಜಾರ್ಖಂಡ್‌ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳು ಯಾವುದೇ ಸಮಿತಿಯನ್ನು ರಚಿಸಿರುವುದಿಲ್ಲ. ಆದರೆ ರಾಜ್ಯ ಸರ್ಕಾರವು ಸಮಿತಿಯನ್ನು ಪುನರ್‌ ರಚಿಸಿ, ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ವಿಳಂಬ ಮಾಡುತ್ತಿರುವುದು ನಿರಾಸೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಎನ್‌ಪಿಎಸ್‌ ನೌಕರರ ಸಂಘವು ನಿರ್ಣಾಯಕ ಹೋರಾಟಕ್ಕೆ ಕರೆ ನೀಡುವ ಕುರಿತು ನಿರ್ಣಯ ಕೈಗೊಳ್ಳಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading
Advertisement
Sourav Ganguly
ಪ್ರಮುಖ ಸುದ್ದಿ15 mins ago

Sourav Ganguly : ಕೊಲೆಗಡುಕರಿಗೆ ಈ ರೀತಿ ಮಾಡಿ; ಕೋಲ್ಕೊತಾ ವೈದ್ಯೆಯ ಅತ್ಯಾಚಾರ, ಕೊಲೆ ಬಗ್ಗೆ ಸೌರವ್​ ಗಂಗೂಲಿ ಅಭಿಪ್ರಾಯ ಹೀಗಿತ್ತು

Power Banks
ಪ್ರಮುಖ ಸುದ್ದಿ36 mins ago

Power Banks : ಇನ್ನು ಮುಂದೆ ರೈಲಿನಲ್ಲಿ ಪ್ರಯಾಣಿಸುವಾಗ ಪವರ್​ ಬ್ಯಾಂಕ್​ಗಳನ್ನು ಬಾಡಿಗೆಗೆ ಪಡೆಯಬಹುದು!

Maheshchandra Guru
ಪ್ರಮುಖ ಸುದ್ದಿ1 hour ago

Maheshchandra Guru : ನಿವೃತ್ತ ಪ್ರಾಧ್ಯಾಪಕ, ಪ್ರಗತಿಪರ ಚಿಂತಕ ಮಹೇಶ್​ಚಂದ್ರ ಗುರು ನಿಧನ

cm siddaramaiah
ಪ್ರಮುಖ ಸುದ್ದಿ2 hours ago

CM siddaramaiah : ಕಾಂಗ್ರೆಸ್ ಪಕ್ಷ, ಸರ್ಕಾರ ಸಿದ್ದರಾಮಯ್ಯ ಬೆಂಬಲಕ್ಕಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

Kundapura Kannada Habba
ಕರ್ನಾಟಕ2 hours ago

Kundapura Kannada Habba: ನನ್ನ ಸಿನಿಮಾ ಕಥೆಗಳಿಗೆ ಊರು, ಯಕ್ಷಗಾನವೇ ಪ್ರೇರಣೆ; ರಿಷಬ್ ಶೆಟ್ಟಿ

NPS News
ಕರ್ನಾಟಕ2 hours ago

NPS News: ಹೊಸ ಪಿಂಚಣಿ ರದ್ದುಗೊಳಿಸಲು ಸಮಿತಿ ಪುನರ್‌ ರಚನೆ; ಎನ್‌ಪಿಎಸ್‌ ನೌಕರರ ಸಂಘ ವಿರೋಧ

ಪ್ರಮುಖ ಸುದ್ದಿ3 hours ago

7th pay commission : 7ನೇ ವೇತನ ಆಯೋಗ ಜಾರಿ ಬಳಿಕ ನೌಕರರ ಸಂಬಳ ಏರಿಕೆ ಎಷ್ಟು? ಅಧಿಕೃತ ಪಟ್ಟಿ ಬಿಡುಗಡೆ

Prabhas New Film
ಸಿನಿಮಾ3 hours ago

Prabhas New Film: ಹೊಸ ಯುದ್ಧ ಶುರು; ಪ್ರಭಾಸ್ ಅಭಿನಯದ ಮುಂದಿನ ಚಿತ್ರ ಸುಳಿವು!

NPS
ಬೆಂಗಳೂರು3 hours ago

Government Employee: ಹಳೇ ಪಿಂಚಣಿ ವ್ಯವಸ್ಥೆ (OPS) ಜಾರಿ ಸಾಧ್ಯತೆ ಪರಿಶೀಲನೆಗೆ ಸರ್ಕಾರದಿಂದ ಸಮಿತಿ ಪುನರ್‌ ರಚನೆ

TJ Abraham
ಪ್ರಮುಖ ಸುದ್ದಿ4 hours ago

TJ Abraham : ಎಸ್ಎಂ ಕೃಷ್ಣರಿಂದ ಹಿಡಿದು ಸಿದ್ದರಾಮಯ್ಯವರೆಗೆ; ಕರ್ನಾಟಕ ರಾಜಕೀಯದ ದೊಡ್ಡ ಹುಲಿಗಳನ್ನೇ ಬೋನಿಗೆ ಬೀಳಿಸಿದ ಟಿ ಜೆ ಅಬ್ರಾಹಂ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌