Site icon Vistara News

Rain News | ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ಮೂವರಿಗೆ ಗಾಯ

ಗಾಯಾಳು

ಶಿವಮೊಗ್ಗ: ಭಾರಿ ಮಳೆಗೆ (Rain News) ನಗರದ ಶಾಂತಿನಗರದ 4ನೇ ಕ್ರಾಸ್‌ನಲ್ಲಿ ಯತಿರಾಜ್ ಎಂಬುವವರ ಮನೆಯ ಗೋಡೆ ಕುಸಿದು ಶನಿವಾರ ಮೂವರು ಗಾಯಗೊಂಡಿದ್ದು, ಅವರನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಭೇಟಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹಾಗೂ ತಹಸೀಲ್ದಾರ್ ನಾಗರಾಜ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಗಾಯಾಳುಗಳ ಕುಟುಂಬಕ್ಕೆ ಪರಿಹಾರದ ಭರವಸೆ ನೀಡಿದರು. ಇನ್ನು ಮೆಗ್ಗಾನ್ ಆಸ್ಪತ್ರೆಗೆ ಬಿಜೆಪಿ ಮುಖಂಡ ಕೆ.ಇ.ಕಾಂತೇಶ್ ಭೇಟಿ ನೀಡಿ ಗಾಯಳುಗಳ ಆರೋಗ್ಯ ವಿಚಾರಿಸಿದರು. ಗಾಯಾಳುಗಳು ಜೀವಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ | Weather Report | ಬೆಳಗಾವಿ, ಹಾಸನ ಸೇರಿ ಕರಾವಳಿ ಭಾಗದಲ್ಲಿ ಭಾರಿ ಮಳೆ ಮುನ್ಸೂಚನೆ

Exit mobile version